మార్కు సువార్త 11 : 1 (ERVTE)
{#1ರಾಜನಂತೆ ಜೆರುಸಲೇಮಿಗೆ ಪ್ರವೇಶ
(ಮತ್ತಾಯ 21:1-11; ಲೂಕ 19:28-40; ಯೋಹಾನ 12:12-19) } ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನ ಸಮೀಪಕ್ಕೆ ಬಂದಿದ್ದರು. ಅವರು ಆಲಿವ್ ಗುಡ್ಡದ ಬಳಿಯಿರುವ ಬೆತ್ಛಗೆ ಹಾಗೂ ಬೆಥಾನಿ ಎಂಬ ಊರುಗಳಿಗೆ ಬಂದಾಗ ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು,
మార్కు సువార్త 11 : 2 (ERVTE)
“ಅಲ್ಲಿ ಕಾಣುತ್ತಿರುವ ಊರಿಗೆ ಹೋಗಿರಿ. ನೀವು ಅದನ್ನು ಪ್ರವೇಶಿಸಿದಾಗ, ಯಾರೂ ಸವಾರಿ ಮಾಡಿಲ್ಲದ ಒಂದು ಕತ್ತೆ ಮರಿಯನ್ನು ಅಲ್ಲಿ ಕಟ್ಟಿರುವುದನ್ನು ಕಾಣುವಿರಿ. ಆ ಕತ್ತೆಯನ್ನು ಬಿಚ್ಚಿಕೊಂಡು, ನನ್ನ ಬಳಿಗೆ ತನ್ನಿರಿ.
మార్కు సువార్త 11 : 3 (ERVTE)
ಯಾವನಾದರೂ ‘ಆ ಕತ್ತೆಯನ್ನು ಏಕೆ ತೆಗೆದುಕೊಂಡು ಹೋಗುತ್ತಿದ್ದೀರಿ’ ಎಂದು ನಿಮ್ಮನ್ನು ಕೇಳಿದರೆ, ‘ಒಡೆಯನಿಗೆ ಈ ಕತ್ತೆ ಬೇಕಾಗಿದೆ. ಆತನು ಇದನ್ನು ಬೇಗನೆ ಕಳುಹಿಸಿಕೊಡುವನು’ ಎಂದು ಅವನಿಗೆ ಹೇಳಿರಿ” ಎಂದನು.
మార్కు సువార్త 11 : 4 (ERVTE)
ಶಿಷ್ಯರು ಊರಿನೊಳಗೆ ಹೋದಾಗ ರಸ್ತೆಯಲ್ಲಿನ ಒಂದು ಮನೆಯ ಬಾಗಿಲಿನ ಪಕ್ಕದಲ್ಲಿ ಕಟ್ಟಿಹಾಕಿದ್ದ ಕತ್ತೆಮರಿಯೊಂದನ್ನು ಕಂಡರು. ಶಿಷ್ಯರು ಹೋಗಿ ಆ ಕತ್ತೆಯನ್ನು ಬಿಚ್ಚಿದಾಗ,
మార్కు సువార్త 11 : 5 (ERVTE)
ಅಲ್ಲಿ ನಿಂತಿದ್ದ ಕೆಲವು ಜನರು, “ನೀವು ಮಾಡುತ್ತಿರುವುದೇನು? ಆ ಕತ್ತೆಯನ್ನು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದರು.
మార్కు సువార్త 11 : 6 (ERVTE)
ಯೇಸು ತಮಗೆ ಹೇಳಿದ ರೀತಿಯಲ್ಲಿಯೇ ಶಿಷ್ಯರು ಉತ್ತರಿಸಿದರು. ಆಗ ಜನರು ಆ ಕತ್ತೆಯನ್ನು ಶಿಷ್ಯರಿಗೆ ಬಿಟ್ಟುಕೊಟ್ಟರು.
మార్కు సువార్త 11 : 7 (ERVTE)
ಶಿಷ್ಯರು ಕತ್ತೆಯನ್ನು ಯೇಸುವಿನ ಬಳಿಗೆ ತಂದು ತಮ್ಮ ಹೊದಿಕೆಗಳನ್ನು ಅದರ ಮೇಲೆ ಹಾಸಿದರು. ಆಗ ಯೇಸು ಅದರ ಮೇಲೆ ಕುಳಿತನು.
మార్కు సువార్త 11 : 8 (ERVTE)
ಅನೇಕ ಜನರು ಯೇಸುವಿಗಾಗಿ ರಸ್ತೆಯ ಮೇಲೆ ತಮ್ಮ ಹೊದಿಕೆಗಳನ್ನು ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಲೆಗಳನ್ನು ಕೊಯ್ದುತಂದು ರಸ್ತೆಯ ಮೇಲೆ ಹರಡಿದರು.
మార్కు సువార్త 11 : 9 (ERVTE)
ಕೆಲವು ಜನರು ಯೇಸುವಿನ ಮುಂದೆ ಹೋಗುತ್ತಿದ್ದರು. ಇತರ ಜನರು ಆತನ ಹಿಂದೆ ಹೋಗುತ್ತಿದ್ದರು. ಜನರೆಲ್ಲರೂ, “ ‘ಆತನನ್ನು ಕೊಂಡಾಡಿರಿ![* ಕೊಂಡಾಡಿರಿ ಮೂಲಗ್ರಂಥದಲ್ಲಿ ಹೊಸನ್ನ ಎಂಬ ಹೀಬ್ರೂ ಪದವನ್ನು ಬಳಸಲಾಗಿದೆ. ಈ ಪದದ ಅರ್ಥ “ರಕ್ಷಿಸು.” ಇದನ್ನು “ಕೊಂಡಾಡಿರಿ” ಎಂಬರ್ಥದಲ್ಲಿ ಬಳಸಲಾಗುತ್ತಿತ್ತು. ] ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದವಾಗಲಿ.’ --ಕೀರ್ತನೆ 118:25, 26--
మార్కు సువార్త 11 : 10 (ERVTE)
“ನಮ್ಮ ಪಿತೃವಾದ ದಾವೀದನ ರಾಜ್ಯವು ಬರಲಿ! ಮೇಲೋಕಗಳಲ್ಲಿ ದೇವರಿಗೆ ಜಯವಾಗಲಿ” ಎಂದು ಕೂಗಿದರು.
మార్కు సువార్త 11 : 11 (ERVTE)
మార్కు సువార్త 11 : 12 (ERVTE)
ಯೇಸು ಜೆರುಸಲೇಮನ್ನು ತಲುಪಿದಾಗ, ದೇವಾಲಯಕ್ಕೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನೂ ನೋಡಿದನು. ಆದರೆ ಆಗಲೇ ತಡವಾಗಿತ್ತು. ಆದ್ದರಿಂದ ಯೇಸು ಹನ್ನೆರಡು ಜನ ಅಪೊಸ್ತಲರೊಂದಿಗೆ ಬೆಥಾನಿಯಕ್ಕೆ ಹೋದನು. {#1ಒಣಗಿಹೋದ ಅಂಜೂರ ಮರ
(ಮತ್ತಾಯ 21:18-19) } ಮರುದಿನ, ಯೇಸು ಬೆಥಾನಿಯದಿಂದ ಹೋಗುತ್ತಿರಲು ಆತನಿಗೆ ಹಸಿವಾಗಿತ್ತು.
మార్కు సువార్త 11 : 13 (ERVTE)
ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ನೋಡಿದನು. ಆದ್ದರಿಂದ ಆ ಮರದಲ್ಲಿ ಅಂಜೂರದ ಹಣ್ಣೇನಾದರೂ ಸಿಕ್ಕಬಹುದೆಂದು ಅದರ ಬಳಿಗೆ ಹೋದನು. ಆದರೆ ಆತನು ಆ ಮರದಲ್ಲಿ ಅಂಜೂರದ ಹಣ್ಣುಗಳನ್ನು ಕಾಣಲಿಲ್ಲ. ಅಲ್ಲಿ ಎಲೆಗಳು ಮಾತ್ರ ಇದ್ದವು. ಏಕೆಂದರೆ ಅದು ಅಂಜೂರ ಹಣ್ಣಿನ ಕಾಲವಾಗಿರಲಿಲ್ಲ.
మార్కు సువార్త 11 : 14 (ERVTE)
ಆದ್ದರಿಂದ ಯೇಸು ಆ ಮರಕ್ಕೆ, “ಇನ್ನು ಮೇಲೆ ನಿನ್ನ ಹಣ್ಣನ್ನು ಯಾರೂ ತಿನ್ನದಂತಾಗಲಿ” ಎಂದನು. ಯೇಸುವಿನ ಶಿಷ್ಯರಿಗೂ ಈ ಮಾತು ಕೇಳಿಸಿತು.
మార్కు సువార్త 11 : 15 (ERVTE)
{#1ದೇವಾಲಯವೇ ಪ್ರಾರ್ಥನಾಲಯ
(ಮತ್ತಾಯ 21:12-17; ಲೂಕ 19:45-48; ಯೋಹಾನ 2:13-22) } ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮನ್ನು ಪ್ರವೇಶಿಸಿದರು. ಅವರು ದೇವಾಲಯದೊಳಗೆ ಬಂದಾಗ ಅಲ್ಲಿ ವಸ್ತುಗಳನ್ನು ಮಾರುತ್ತಿದ್ದ ಮತ್ತು ಕೊಳ್ಳುತ್ತಿದ್ದ ಜನರನ್ನು ಆತನು ಅಲ್ಲಿಂದ ಹೊರಡಿಸತೊಡಗಿದನು; ಹಣ ವಿನಿಮಯಮಾಡಿಕೊಳ್ಳುತ್ತಿದ್ದ ವ್ಯಾಪಾರಿಗಳ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.
మార్కు సువార్త 11 : 16 (ERVTE)
ಹೊರೆಹೊತ್ತುಕೊಂಡು ದೇವಾಲಯದ ಮೂಲಕ ಹಾದುಹೋಗುತ್ತಿದ್ದವರನ್ನು ಆತನು ತಡೆದನು.
మార్కు సువార్త 11 : 17 (ERVTE)
ನಂತರ ಯೇಸು ಜನರಿಗೆ ಉಪದೇಶಿಸಿ, “ ‘ನನ್ನ ಆಲಯವು ಎಲ್ಲಾ ಜನರಿಗೂ ಪ್ರಾರ್ಥನೆಯ ಆಲಯವೆನಿಸಿಕೊಳ್ಳುವುದು’[✡ ಉಲ್ಲೇಖನ: ಯೆಶಾಯ 56: 7 ] ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರು ಅಡಗಿಕೊಳ್ಳುವ ಸ್ಥಳವನ್ನಾಗಿ ಮಾಡಿದ್ದೀರಿ’ ” [✡ ಉಲ್ಲೇಖನ: ಯೆರೆಮೀಯ 7: 11. ] ಎಂದು ಹೇಳಿದನು.
మార్కు సువార్త 11 : 18 (ERVTE)
ಮಹಾಯಾಜಕರು ಹಾಗೂ ಧರ್ಮೋಪದೇಶಕರು ಈ ಸಂಗತಿಗಳನ್ನು ಕೇಳಿ ಯೇಸುವನ್ನು ಕೊಲ್ಲಿಸಲು ತಕ್ಕ ಮಾರ್ಗವನ್ನು ಕಂಡುಹಿಡಿಯಲು ಪ್ರಯತ್ನಿಸತೊಡಗಿದರು. ಜನರೆಲ್ಲರೂ ಯೇಸುವಿನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಯೇಸುವಿಗೆ ಭಯಪಟ್ಟರು.
మార్కు సువార్త 11 : 19 (ERVTE)
ಆ ರಾತ್ರಿ ಯೇಸು ಮತ್ತು ಆತನ ಶಿಷ್ಯರು ಪಟ್ಟಣವನ್ನು ಬಿಟ್ಟುಹೋದರು.
మార్కు సువార్త 11 : 20 (ERVTE)
{#1ನಂಬಿಕೆಯ ಶಕ್ತಿ
(ಮತ್ತಾಯ 21:20-22) } ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರೊಂದಿಗೆ ಹೋಗುತ್ತಿದ್ದನು. ಹಿಂದಿನ ದಿನ ಯೇಸು ಶಪಿಸಿದ ಅಂಜೂರದ ಮರವನ್ನು ಶಿಷ್ಯರು ನೋಡಿದರು. ಅಂಜೂರದ ಮರವು ಬೇರುಸಹಿತ ಒಣಗಿಹೋಗಿತ್ತು.
మార్కు సువార్త 11 : 21 (ERVTE)
ಪೇತ್ರನು ಆ ಮರವನ್ನು ಜ್ಞಾಪಿಸಿಕೊಂಡು, ಯೇಸುವಿಗೆ, “ಗುರುವೇ, ನೋಡು! ನಿನ್ನೆ ನೀನು ಶಪಿಸಿದ ಅಂಜೂರದ ಮರ ಒಣಗಿಹೋಗಿದೆ!” ಎಂದನು.
మార్కు సువార్త 11 : 22 (ERVTE)
ಯೇಸು, “ದೇವರಲ್ಲಿ ನಂಬಿಕೆ ಇಡಿರಿ.
మార్కు సువార్త 11 : 23 (ERVTE)
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದೊಳಗೆ ಬೀಳು’ ಎಂದು ಹೇಳಿ, ಸಂಶಯವನ್ನೇಪಡದೆ, ನೀವು ಹೇಳಿದ್ದು ಖಂಡಿತವಾಗಿ ನೆರವೇರುತ್ತದೆ ಎಂದು ನಂಬಿದರೆ, ದೇವರು ಅದನ್ನು ನಿಮಗಾಗಿ ಮಾಡುತ್ತಾನೆ.
మార్కు సువార్త 11 : 24 (ERVTE)
ಆದ್ದರಿಂದ ನೀವು ಪ್ರಾರ್ಥನೆಯಲ್ಲಿ ಬೇಡಿಕೊಂಡು, ಅದನ್ನೆಲ್ಲಾ ಹೊಂದಿಕೊಂಡಾಯಿತೆಂದು ನಂಬಿದರೆ, ಅದೆಲ್ಲಾ ನಿಮ್ಮದಾಗುತ್ತವೆ ಎಂದು ನಾನು ನಿಮಗೆ ಹೇಳುತ್ತೇನೆ.
మార్కు సువార్త 11 : 25 (ERVTE)
ನೀವು ಪ್ರಾರ್ಥಿಸಲು ಸಿದ್ಧರಾಗಿರುವಾಗ, ನೀವು ಇನ್ನೊಬ್ಬನ ವಿಷಯದಲ್ಲಿ ಯಾವುದೇ ಕಾರಣದಿಂದಾಗಲಿ ಕೋಪದಿಂದಿರುವುದು ನಿಮ್ಮ ನೆನಪಿಗೆ ಬಂದರೆ, ಅವನನ್ನು ಕ್ಷಮಿಸಿಬಿಡಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವನು” ಎಂದು ಉತ್ತರಿಸಿದನು.
మార్కు సువార్త 11 : 26 (ERVTE)
[† ಕೆಲವು ಗ್ರೀಕ್ ಪ್ರತಿಗಳಲ್ಲಿ 26ನೇ ವಚನ ಸೇರಿಸಲಾಗಿದೆ: “ನೀವು ಇತರ ಜನರನ್ನು ಕ್ಷಮಿಸದಿದ್ದರೆ, ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವುದಿಲ್ಲ.” ]
మార్కు సువార్త 11 : 27 (ERVTE)
{#1ಯೇಸುವಿನ ಅಧಿಕಾರವನ್ನು ಕುರಿತು ಯೆಹೂದ್ಯ ನಾಯಕರ ಸಂಶಯ
(ಮತ್ತಾಯ 21:23-27; ಲೂಕ 20:1-8) } ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿಗೆ ಮತ್ತೆ ಹೋದರು. ಯೇಸು ದೇವಾಲಯದಲ್ಲಿ ತಿರುಗಾಡುತ್ತಿದ್ದಾಗ, ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯನಾಯಕರು ಆತನ ಬಳಿಗೆ ಬಂದು,
మార్కు సువార్త 11 : 28 (ERVTE)
“ಇವುಗಳನ್ನೆಲ್ಲ ಮಾಡಲು ನಿನಗೆ ಯಾವ ಅಧಿಕಾರವಿದೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು? ನಮಗೆ ತಿಳಿಸು!” ಎಂದರು.
మార్కు సువార్త 11 : 29 (ERVTE)
ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನ್ನ ಪ್ರಶ್ನೆಗೆ ಉತ್ತರಿಸಿದರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆ ಎಂಬುದನ್ನು ನಿಮಗೆ ತಿಳಿಸುತ್ತೇನೆ.
మార్కు సువార్త 11 : 30 (ERVTE)
ಯೋಹಾನನು ಜನರಿಗೆ ದೀಕ್ಷಾಸ್ನಾನ ಮಾಡಿಸಿದ್ದು ದೇವರಿಂದ ಬಂದ ಅಧಿಕಾರದಿಂದಲೋ ಅಥವಾ ಮನುಷ್ಯರಿಂದ ಬಂದ ಅಧಿಕಾರದಿಂದಲೋ? ನನಗೆ ತಿಳಿಸಿ!” ಎಂದನು.
మార్కు సువార్త 11 : 31 (ERVTE)
ಯೆಹೂದ್ಯನಾಯಕರು ಈ ಪ್ರಶ್ನೆಯ ಬಗ್ಗೆ ಚರ್ಚಿಸಿ ಒಬ್ಬರಿಗೊಬ್ಬರು, “ ‘ಯೋಹಾನನು ದೀಕ್ಷಾಸ್ನಾನ ಕೊಟ್ಟದ್ದು ದೇವರಿಂದ ಬಂದ ಅಧಿಕಾರದಿಂದ’ ಎಂದು ನಾವು ಉತ್ತರಿಸಿದರೆ, ಆಗ ‘ಮತ್ತೆ ನೀವು ಏಕೆ ಯೋಹಾನನನ್ನು ನಂಬಲಿಲ್ಲ?’ ಎಂದು ಯೇಸು ಕೇಳುತ್ತಾನೆ.
మార్కు సువార్త 11 : 32 (ERVTE)
ಆದರೆ ‘ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮನುಷ್ಯನಿಂದ ಬಂದ ಅಧಿಕಾರದಿಂದ’ ಎಂದು ಹೇಳಿದರೆ, ಆಗ ಜನರು ನಮ್ಮ ಮೇಲೆ ಕೋಪಗೊಳ್ಳುತ್ತಾರೆ” ಎಂದು ಮಾತಾಡಿಕೊಂಡರು. ಜನರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರಿಂದ ಅವರು ಜನರಿಗೆ ಭಯಪಟ್ಟರು.
మార్కు సువార్త 11 : 33 (ERVTE)
ಆದಕಾರಣ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದು ಉತ್ತರಿಸಿದರು. ಯೇಸು ಅವರಿಗೆ, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತಿದ್ದೇನೆಂದು ನಿಮಗೆ ಹೇಳುವುದಿಲ್ಲ” ಎಂದನು.
❮
❯