మార్కు సువార్త 4 : 1 (ERVTE)
{#1ಬೀಜ ಬಿತ್ತುವ ರೈತನ ಸಾಮ್ಯ
(ಮತ್ತಾಯ 13:1-9; 8:4-8) } ಮತ್ತೊಂದು ಸಮಯದಲ್ಲಿ ಯೇಸು ಸರೋವರದ ತೀರದಲ್ಲಿ ಉಪದೇಶಿಸಲಾರಂಭಿಸಿದನು. ಅನೇಕಾನೇಕ ಜನರು ಆತನ ಸುತ್ತಲೂ ಸೇರಿದರು. ಯೇಸು ಒಂದು ದೋಣಿಯೊಳಕ್ಕೆ ಹೋಗಿ ಕುಳಿತು ಸರೋವರದ ದಡದಿಂದ ಸ್ವಲ್ಪದೂರ ಹೋದನು. ಜನರೆಲ್ಲರೂ ಸರೋವರದ ದಡದ ಮೇಲಿದ್ದರು.
మార్కు సువార్త 4 : 2 (ERVTE)
ಯೇಸು ದೋಣಿಯಲ್ಲಿ ಕುಳಿತುಕೊಂಡು ಅವರಿಗೆ ಅನೇಕ ಸಾಮ್ಯಗಳ ಮೂಲಕ ಉಪದೇಶಿಸಿದನು. ಆತನು ಹೇಳಿದ್ದೇನೆಂದರೆ:
మార్కు సువార్త 4 : 3 (ERVTE)
“ಕೇಳಿರಿ! ಒಬ್ಬ ರೈತನು ಬೀಜ ಬಿತ್ತಲು ಹೊಲಕ್ಕೆ ಹೋದನು.
మార్కు సువార్త 4 : 4 (ERVTE)
ಬಿತ್ತುವಾಗ ಕೆಲವು ಬೀಜಗಳು ರಸ್ತೆಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಆ ಬೀಜಗಳನ್ನೆಲ್ಲ ತಿಂದುಬಿಟ್ಟವು.
మార్కు సువార్త 4 : 5 (ERVTE)
ಕೆಲವು ಬೀಜಗಳು ಬಂಡೆಯ ನೆಲದ ಮೇಲೆ ಬಿದ್ದವು. ಆ ನೆಲದಲ್ಲಿ ಸಾಕಷ್ಟು ಮಣ್ಣಿರಲಿಲ್ಲ. ನೆಲವು ಆಳವಾಗಿಲ್ಲದಿದ್ದ ಕಾರಣ ಬೀಜಗಳು ಬಹಳ ಬೇಗನೆ ಮೊಳೆತವು.
మార్కు సువార్త 4 : 6 (ERVTE)
ಆದರೆ ಸೂರ್ಯನು ಮೇಲೇರಿದಾಗ, ಆಳವಾದ ಬೇರಿಲ್ಲದ ಕಾರಣ ಆ ಸಸಿಗಳು ಒಣಗಿಹೋದವು.
మార్కు సువార్త 4 : 7 (ERVTE)
ಬೇರೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು, ಒಳ್ಳೆಯ ಗಿಡಗಳನ್ನು ಬೆಳೆಯದಂತೆ ತಡೆದವು. ಆದ್ದರಿಂದ ಆ ಗಿಡಗಳು ಫಲ ಕೊಡಲಿಲ್ಲ.
మార్కు సువార్త 4 : 8 (ERVTE)
ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಆ ಬೀಜಗಳು ಮೊಳೆತು, ಬೆಳೆದು, ಫಲಬಿಟ್ಟವು. ಕೆಲವು ಗಿಡಗಳು ಮೂವತ್ತರಷ್ಟು ಹೆಚ್ಟಾಗಿ, ಇನ್ನು ಕೆಲವು ಗಿಡಗಳು ಅರವತ್ತರಷ್ಟು ಹೆಚ್ಚಾಗಿ ಮತ್ತು ಬೇರೆ ಕೆಲವು ಗಿಡಗಳು ನೂರರಷ್ಟು ಹೆಚ್ಚಾಗಿ ಫಲಕೊಟ್ಟವು.”
మార్కు సువార్త 4 : 9 (ERVTE)
మార్కు సువార్త 4 : 10 (ERVTE)
ನಂತರ ಯೇಸು, “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!” ಎಂದು ಹೇಳಿದನು. {#1ಯೇಸು ಸಾಮ್ಯಗಳನ್ನು ಬಳಸಲು ಕಾರಣವೇನು?
(ಮತ್ತಾಯ 13:10-17; ಲೂಕ 8:9-10) }
మార్కు సువార్త 4 : 11 (ERVTE)
ತರುವಾಯ, ಯೇಸು ಒಬ್ಬನೇ ಇದ್ದಾಗ ಹನ್ನೆರಡು ಮಂದಿ ಅಪೊಸ್ತಲರು ಮತ್ತು ಯೇಸುವಿನ ಇತರ ಶಿಷ್ಯರು ಆ ಸಾಮ್ಯಗಳ ಕುರಿತು ಆತನನ್ನು ಕೇಳಿದರು. ಯೇಸು, “ದೇವರ ರಾಜ್ಯದ ಸತ್ಯದ ಗುಟ್ಟನ್ನು ನೀವು ಮಾತ್ರ ತಿಳಿದುಕೊಳ್ಳತಕ್ಕದ್ದು. ಆದರೆ ಇತರ ಎಲ್ಲಾ ಜನರಿಗೆ ನಾನು ಸಾಮ್ಯಗಳ ಮೂಲಕವಾಗಿ ಎಲ್ಲವನ್ನೂ ಹೇಳುತ್ತೇನೆ.
మార్కు సువార్త 4 : 12 (ERVTE)
ಏಕೆಂದರೆ: ‘ಅವರು ಕಣ್ಣಾರೆ ನೋಡಿಯೂ ಕಾಣರು. ಕಿವಿಯಾರೆ ಕೇಳಿಯೂ ಗ್ರಹಿಸರು. ಅವರು ನೋಡಿ ಗ್ರಹಿಸಿಕೊಂಡರೆ, ಪರಿವರ್ತನೆಗೊಂಡು ಪಾಪಕ್ಷಮೆ ಹೊಂದಿಯಾರು’ ” ಎಂದನು. --ಯೆಶಾಯ 6:9-10--
మార్కు సువార్త 4 : 13 (ERVTE)
{#1ಬಿತ್ತಲ್ಪಟ್ಟ ಬೀಜದ ಕುರಿತು ಯೇಸು ಕೊಟ್ಟ ವಿವರಣೆ
(ಮತ್ತಾಯ 13:18-23; ಲೂಕ 8:11-15) } ನಂತರ ಯೇಸು ತನ್ನ ಶಿಷ್ಯರಿಗೆ, “ನಿಮಗೆ ಈ ಸಾಮ್ಯ ಅರ್ಥವಾಯಿತೇ? ನೀವು ಇದನ್ನೇ ಅರ್ಥಮಾಡಿಕೊಳ್ಳದಿದ್ದರೆ ಬೇರೆ ಯಾವ ಸಾಮ್ಯವನ್ನು ಅರ್ಥಮಾಡಿಕೊಳ್ಳುವಿರಿ?
మార్కు సువార్త 4 : 14 (ERVTE)
ರೈತನು ದೇವರ ವಾಕ್ಯವನ್ನು ಬಿತ್ತುವವನಿಗೆ ಹೋಲಿಕೆಯಾಗಿದ್ದಾನೆ.
మార్కు సువార్త 4 : 15 (ERVTE)
ಕೆಲವು ಜನರು ದೇವರ ವಾಕ್ಯವನ್ನು ಕೇಳುತ್ತಾರೆ. ಆದರೆ ಅವರಲ್ಲಿ ಬಿತ್ತಿದ ವಾಕ್ಯವನ್ನು ಸೈತಾನನು ಬಂದು ತೆಗೆದುಬಿಡುತ್ತಾನೆ. ಈ ಜನರೇ ದಾರಿಯ ಮಗ್ಗುಲಾಗಿದ್ದಾರೆ.
మార్కు సువార్త 4 : 16 (ERVTE)
“ಇನ್ನು ಕೆಲವರು ದೇವರ ವಾಕ್ಯವನ್ನು ಕೇಳುತ್ತಾರೆ ಮತ್ತು ಸಂತೋಷದಿಂದ ಅದನ್ನು ಬೇಗನೆ ಸ್ವೀಕರಿಸಿಕೊಳ್ಳುತ್ತಾರೆ.
మార్కు సువార్త 4 : 17 (ERVTE)
ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ.
మార్కు సువార్త 4 : 18 (ERVTE)
“ಇನ್ನು ಕೆಲವರು ಮುಳ್ಳಿನ ಗಿಡಗಳ ನೆಲದಂತಿರುವರು. ಈ ಜನರು ವಾಕ್ಯವನ್ನು ಕೇಳುತ್ತಾರೆ.
మార్కు సువార్త 4 : 19 (ERVTE)
ಆದರೆ ಈ ಜೀವಿತದ ಚಿಂತೆಗಳು, ಹಣದ ಮೇಲಿನ ವ್ಯಾಮೋಹ ಮತ್ತು ಇತರ ಎಲ್ಲಾ ವಿಧವಾದ ಆಸೆಗಳು ಅವರಲ್ಲಿ ಬಿದ್ದ ವಾಕ್ಯಕ್ಕೆ ಬೆಳೆಯಲು ಅವಕಾಶ ಕೊಡುವುದಿಲ್ಲ. ಆದ್ದರಿಂದ ಅವರ ಜೀವಿತದಲ್ಲಿ ವಾಕ್ಯವು ಫಲ ಫಲಿಸುವುದಿಲ್ಲ.
మార్కు సువార్త 4 : 20 (ERVTE)
మార్కు సువార్త 4 : 21 (ERVTE)
“ಇನ್ನು ಕೆಲವರು ಬೀಜಬಿದ್ದ ಒಳ್ಳೆಯ ನೆಲದಂತಿದ್ದಾರೆ. ಅವರು ವಾಕ್ಯವನ್ನು ಸ್ವೀಕರಿಸಿಕೊಂಡು ಫಲವನ್ನು ಫಲಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ಮೂವತ್ತರಷ್ಟು ಹೆಚ್ಚಾಗಿ, ಇನ್ನು ಕೆಲವು ಸಂದರ್ಭಗಳಲ್ಲಿ ಅರವತ್ತರಷ್ಟು ಹೆಚ್ಚಾಗಿ, ಮತ್ತೆ ಕೆಲವು ಸಂಧರ್ಭಗಳಲ್ಲಿ ನೂರರಷ್ಟು ಹೆಚ್ಚಾಗಿ ಫಲ ಫಲಿಸುತ್ತಾರೆ” ಎಂದು ಹೇಳಿದನು. {#1ಉರಿಯುವ ದೀಪದಂತಿರಿ
(ಲೂಕ 8:16-18) } ನಂತರ ಯೇಸು ಅವರಿಗೆ, “ನೀವು ಉರಿಯುತ್ತಿರುವ ದೀಪವನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಇಡುತ್ತೀರಾ? ಇಲ್ಲ! ದೀಪವನ್ನು ದೀಪಸ್ತಂಭದ ಮೇಲೆ ಇಡುವಿರಿ.
మార్కు సువార్త 4 : 22 (ERVTE)
ಆಗ ಪ್ರತಿಯೊಂದೂ ಸ್ಪಷ್ಟವಾಗಿ ಗೋಚರವಾಗುವುದು. ರಹಸ್ಯವಾದ ಪ್ರತಿಯೊಂದೂ ಬಟ್ಟಬಯಲಾಗುವುದು.
మార్కు సువార్త 4 : 23 (ERVTE)
ನನ್ನ ಮಾತುಗಳನ್ನು ಕೇಳುತ್ತಿರುವ ಜನರೇ, ಆಲಿಸಿರಿ!
మార్కు సువార్త 4 : 24 (ERVTE)
ನೀವು ಕೇಳುತ್ತಿರುವ ಪ್ರತಿಯೊಂದು ವಿಷಯವನ್ನು ಎಚ್ಚರಿಕೆಯಿಂದ ಆಲೋಚಿಸಿರಿ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ನೀವು ಕೊಟ್ಟದ್ದಕ್ಕಿಂತ ಹೆಚ್ಚಾಗಿ ಕೊಡುವರು.
మార్కు సువార్త 4 : 25 (ERVTE)
ಯಾವನಲ್ಲಿ ಹೆಚ್ಚಾಗಿರುತ್ತದೆಯೋ ಅವನಿಗೆ ಇನ್ನೂ ಕೊಡಲಾಗುವುದು. ಯಾವನಲ್ಲಿ ಇರುವುದಿಲ್ಲವೋ ಅವನಿಂದ ಇದ್ದದ್ದನ್ನೂ ತೆಗೆದುಕೊಳ್ಳಲಾಗುವುದು” ಎಂದು ಹೇಳಿದನು.
మార్కు సువార్త 4 : 26 (ERVTE)
{#1ಬಿತ್ತಲ್ಪಟ್ಟ ಬೀಜವನ್ನು ಕುರಿತು ಯೇಸು ಹೇಳಿದ ಸಾಮ್ಯ } ನಂತರ ಯೇಸು, “ದೇವರ ರಾಜ್ಯವು ಭೂಮಿಯಲ್ಲಿ ಬೀಜ ಬಿತ್ತಿದ ಮನುಷ್ಯನಂತಿದೆ.
మార్కు సువార్త 4 : 27 (ERVTE)
ಬೀಜವು ಹಗಲಿರುಳು ಬೆಳೆಯುತ್ತದೆ. ರೈತನು ಮಲಗಿರುವಾಗಲೂ ಎಚ್ಚರದಿಂದಿರುವಾಗಲೂ ಬೀಜ ಬೆಳೆಯುತ್ತಲೇ ಇರುವುದು. ಬೀಜ ಹೇಗೆ ಬೆಳೆಯುತ್ತದೆಂಬುದು ರೈತನಿಗೆ ತಿಳಿಯುವುದಿಲ್ಲ.
మార్కు సువార్త 4 : 28 (ERVTE)
ಭೂಮಿಯು ಮೊದಲು ಸಸಿಯನ್ನೂ ಅನಂತರ ಹೊಡೆಯನ್ನೂ ತರುವಾಯ ತೆನೆತುಂಬ ಕಾಳನ್ನೂ ತನ್ನಷ್ಟಕ್ಕೇ ತಾನೇ ಉತ್ಪತ್ತಿಮಾಡುತ್ತದೆ.
మార్కు సువార్త 4 : 29 (ERVTE)
ತೆನೆಯು ಬಲಿತಾಗ ರೈತನು ಗಿಡವನ್ನು ಕೊಯ್ಯುವನು. ಇದನ್ನೇ ಸುಗ್ಗಿಕಾಲ ಎನ್ನುವರು” ಎಂದು ಹೇಳಿದನು.
మార్కు సువార్త 4 : 30 (ERVTE)
{#1ದೇವರ ರಾಜ್ಯವು ಸಾಸಿವೆ ಕಾಳಿನಂತಿದೆ
(ಮತ್ತಾಯ 13:31-32, 34-35; ಲೂಕ 13:18-19) } ನಂತರ ಯೇಸು, “ದೇವರ ರಾಜ್ಯದ ಬಗ್ಗೆ ವಿವರಿಸಲು ನಾನು ನಿಮಗೆ ಯಾವ ಸಾಮ್ಯವನ್ನು ಹೇಳಲಿ?
మార్కు సువార్త 4 : 31 (ERVTE)
ದೇವರ ರಾಜ್ಯವು ಸಾಸಿವೆ ಕಾಳಿನಂತಿರುತ್ತದೆ. ನೀವು ಭೂಮಿಯಲ್ಲಿ ಬಿತ್ತುವ ಕಾಳುಗಳಲ್ಲಿ ಸಾಸಿವೆ ಕಾಳು ಅತ್ಯಂತ ಸಣ್ಣದಾಗಿದೆ.
మార్కు సువార్త 4 : 32 (ERVTE)
ಆದರೆ ನೀವು ಈ ಕಾಳನ್ನು ಬಿತ್ತಿದಾಗ, ಅದು ಬೆಳೆದು, ನಿಮ್ಮ ತೋಟದ ಇತರ ಗಿಡಗಳಿಗಿಂತ ಅತಿ ದೊಡ್ಡದಾಗುತ್ತದೆ. ಅದಕ್ಕೆ ದೊಡ್ಡದೊಡ್ಡ ರೆಂಬೆಗಳಿರುತ್ತವೆ. ಕಾಡಿನ ಹಕ್ಕಿಗಳು ಬಂದು, ಅಲ್ಲಿ ಗೂಡುಗಳನ್ನು ಕಟ್ಟಿಕೊಂಡು ಸೂರ್ಯನ ತಾಪದಿಂದ ತಪ್ಪಿಸಿಕೊಳ್ಳುತ್ತವೆ” ಎಂದು ಹೇಳಿದನು.
మార్కు సువార్త 4 : 33 (ERVTE)
ಯೇಸು ಇಂಥ ಅನೇಕ ಸಾಮ್ಯಗಳ ಮೂಲಕ ಜನರಿಗೆ ಅರ್ಥವಾಗುವಂತೆ ಉಪದೇಶಿಸಿದನು.
మార్కు సువార్త 4 : 34 (ERVTE)
ಯೇಸುವು ಜನರಿಗೆ ಯಾವಾಗಲೂ ಸಾಮ್ಯಗಳ ಮೂಲಕ ಉಪದೇಶಿಸಿದನು. ಆದರೆ ತನ್ನ ಶಿಷ್ಯರು ಮಾತ್ರ ಇರುವಾಗ ಎಲ್ಲವನ್ನೂ ಅವರಿಗೆ ವಿವರಿಸಿ ತಿಳಿಸುತ್ತಿದ್ದನು.
మార్కు సువార్త 4 : 35 (ERVTE)
{#1ಯೇಸುವಿನ ಆಜ್ಞೆಗೆ ಬಿರುಗಾಳಿಯ ವಿಧೇಯತೆ
(ಮತ್ತಾಯ 8:23-27; ಲೂಕ 8:22-25) } ಆ ದಿನ ಸಂಜೆ, ಯೇಸು ತನ್ನ ಶಿಷ್ಯರಿಗೆ “ನನ್ನೊಂದಿಗೆ ಬನ್ನಿ, ಸರೋವರದ ಆಚೆದಡಕ್ಕೆ ಹೋಗೋಣ” ಎಂದು ಹೇಳಿದನು.
మార్కు సువార్త 4 : 36 (ERVTE)
ಯೇಸು ಮತ್ತು ಆತನ ಶಿಷ್ಯರು ಅಲ್ಲಿದ್ದ ಜನರನ್ನು ಅಲ್ಲಿಯೇ ಬಿಟ್ಟುಹೋದರು. ಯೇಸು ಕುಳಿತುಕೊಂಡು ಉಪದೇಶಿಸುತ್ತಿದ್ದ ದೋಣಿಯಲ್ಲಿಯೇ ಅವರು ಹೋದರು. ಅವರೊಂದಿಗೆ ಬೇರೆ ದೋಣಿಗಳೂ ಇದ್ದವು.
మార్కు సువార్త 4 : 37 (ERVTE)
ಅವರು ಹೋಗುತ್ತಿರಲು ಸರೋವರದ ಮೇಲೆ ಬಿರುಗಾಳಿ ಬೀಸಿತು. ಎತ್ತರವಾದ ಅಲೆಗಳು ದೋಣಿಗೆ ಅಪ್ಪಳಿಸತೊಡಗಿದ್ದರಿಂದ ದೋಣಿಯು ನೀರಿನಿಂದ ತುಂಬಿಹೋಯಿತು.
మార్కు సువార్త 4 : 38 (ERVTE)
ಯೇಸುವು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ತಲೆಯನ್ನಿಟ್ಟು ನಿದ್ರಿಸುತ್ತಿದ್ದನು. ಶಿಷ್ಯರು ಆತನ ಬಳಿಗೆ ಹೋಗಿ, ಆತನನ್ನು ಎಬ್ಬಿಸಿ, “ಗುರುವೇ, ನೀನು ನಮ್ಮ ಬಗ್ಗೆ ಚಿಂತಿಸುವುದಿಲ್ಲವೆ? ನಾವು ಮುಳುಗಿಹೋಗುತ್ತಿದ್ದೇವೆ!” ಎಂದರು.
మార్కు సువార్త 4 : 39 (ERVTE)
మార్కు సువార్త 4 : 40 (ERVTE)
ಯೇಸು ಎಚ್ಚೆತ್ತು ಬಿರುಗಾಳಿ ಮತ್ತು ಅಲೆಗಳಿಗೆ, “ಪ್ರಶಾಂತವಾಗಿರಿ! ಮೊರೆಯದಿರಿ!” ಎಂದು ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತುಹೋಯಿತು ಮತ್ತು ಸರೋವರವು ಪ್ರಶಾಂತವಾಯಿತು.
మార్కు సువార్త 4 : 41 (ERVTE)
ಯೇಸು ತನ್ನ ಶಿಷ್ಯರಿಗೆ, “ನೀವೇಕೆ ಹೆದರುತ್ತೀರಿ? ನಿಮ್ಮಲ್ಲಿ ಇನ್ನೂ ನಂಬಿಕೆಯಿಲ್ಲವೇ?” ಎಂದು ಕೇಳಿದನು. ಶಿಷ್ಯರು ಬಹಳ ಭಯಪಟ್ಟು, “ಈತನು ಯಾರಿರಬಹುದು? ಗಾಳಿ ಮತ್ತು ನೀರು ಸಹ ಈತನ ಮಾತನ್ನು ಕೇಳುತ್ತವೆಯಲ್ಲಾ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41