మార్కు సువార్త 9 : 1 (ERVTE)
మార్కు సువార్త 9 : 2 (ERVTE)
ಆಮೇಲೆ ಯೇಸು ಜನರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ನಿಮ್ಮಲ್ಲಿ ಕೆಲವು ಜನರು ತಾವು ಸಾಯುವುದಕ್ಕೆ ಮುಂಚೆ ದೇವರ ರಾಜ್ಯವು ಅಧಿಕಾರದೊಡನೆ ಬರುವುದನ್ನು ನೋಡುತ್ತಾರೆ” ಎಂದು ಹೇಳಿದನು. {#1ಮೋಶೆ ಮತ್ತು ಎಲೀಯರೊಡನೆ ಯೇಸು
(ಮತ್ತಾಯ 17:1-13; ಲೂಕ 9:28-36) } ಆರು ದಿನಗಳ ನಂತರ ಪೇತ್ರ, ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಯೇಸು ಎತ್ತರವಾದ ಬೆಟ್ಟದ ಮೇಲೆ ಹೋದನು. ಅಲ್ಲಿ ಅವರು ಮಾತ್ರ ಇದ್ದರು. ಈ ಶಿಷ್ಯರು ಯೇಸುವನ್ನು ನೋಡುತ್ತಿರಲು, ಇದ್ದಕ್ಕಿದ್ದಂತೆ ಆತನು ರೂಪಾಂತರ ಹೊಂದಿದನು.
మార్కు సువార్త 9 : 3 (ERVTE)
ಯೇಸುವಿನ ಬಟ್ಟೆಗಳು ಬಿಳುಪಾಗಿ ಹೊಳೆಯುತ್ತಿದ್ದವು. ಅಷ್ಟು ಬಿಳುಪಾದ ಬಟ್ಟೆಗಳನ್ನು ತಯಾರಿಸಲು ಸಾಧ್ಯವಿರಲಿಲ್ಲ.
మార్కు సువార్త 9 : 4 (ERVTE)
ಆಗ ಮೋಶೆ ಮತ್ತು ಎಲೀಯ ಅಲ್ಲಿ ಪ್ರತ್ಯಕ್ಷರಾಗಿ ಯೇಸುವಿನೊಂದಿಗೆ ಮಾತಾಡುತ್ತಿದ್ದರು.
మార్కు సువార్త 9 : 5 (ERVTE)
ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ನಾವು ಇಲ್ಲಿ ಮೂರು ಗುಡಾರಗಳನ್ನು ಹಾಕುತ್ತೇವೆ. ಒಂದು ನಿನಗೆ, ಒಂದು ಮೋಶೆಗೆ ಮತ್ತೊಂದು ಎಲೀಯನಿಗೆ” ಎಂದು ಹೇಳಿದನು.
మార్కు సువార్త 9 : 6 (ERVTE)
ಪೇತ್ರನಿಗೆ ಏನು ಹೇಳಬೇಕೋ ತಿಳಿಯಲಿಲ್ಲ. ಏಕೆಂದರೆ ಅವನು ಮತ್ತು ಉಳಿದ ಇನ್ನಿಬ್ಬರು ಶಿಷ್ಯರು ಬಹಳ ಭಯಗೊಂಡಿದ್ದರು.
మార్కు సువార్త 9 : 7 (ERVTE)
మార్కు సువార్త 9 : 8 (ERVTE)
ಆಗ ಮೋಡವು ಬಂದು, ಅವರನ್ನು ಮುಸುಕಿತು. ಆ ಮೋಡದ ಒಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ಈತನಿಗೆ ವಿಧೇಯರಾಗಿ” ಎಂದು ಹೇಳಿತು.
మార్కు సువార్త 9 : 9 (ERVTE)
ಆಗ ಪೇತ್ರ, ಯಾಕೋಬ ಮತ್ತು ಯೋಹಾನರು ಕಣ್ಣೆತ್ತಿ ನೋಡಿದಾಗ ಯೇಸು ಒಬ್ಬನೇ ಅಲ್ಲಿದ್ದನು.
మార్కు సువార్త 9 : 10 (ERVTE)
ಯೇಸು ಮತ್ತು ಆ ಶಿಷ್ಯರು ಹಿಂತಿರುಗಿ ಬೆಟ್ಟದಿಂದ ಕೆಳಗಿಳಿದು ಬರುತ್ತಿರುವಾಗ, ಆತನು ಅವರಿಗೆ, “ನೀವು ಬೆಟ್ಟದ ಮೇಲೆ ನೋಡಿದ ಸಂಗತಿಗಳ ಬಗ್ಗೆ ಯಾರಿಗೂ ಹೇಳಬೇಡಿ. ಮನುಷ್ಯಕುಮಾರನು ಸತ್ತು ಜೀವಂತವಾಗಿ ಎದ್ದುಬರುವವರೆಗೆ ಕಾದುಕೊಂಡಿರಿ” ಎಂದು ಆಜ್ಞಾಪಿಸಿದನು. ಆದ್ದರಿಂದ ಆ ಶಿಷ್ಯರು ಈ ಸಂಗತಿಗಳನ್ನು ಯಾರಿಗೂ ತಿಳಿಸಲಿಲ್ಲ. ಆದರೆ “ಸತ್ತು ಜೀವಂತವಾಗಿ ಎದ್ದುಬರುವುದು” ಎಂದರೇನು? ಎಂದು ತಮ್ಮತಮ್ಮಲ್ಲಿಯೇ ಚರ್ಚಿಸಿದರು.
మార్కు సువార్త 9 : 11 (ERVTE)
ಶಿಷ್ಯರು ಯೇಸುವಿಗೆ, “ಎಲೀಯನೇ ಮೊದಲು ಬರಬೇಕೆಂದು ಧರ್ಮೋಪದೇಶಕರು ಹೇಳಲು ಕಾರಣವೇನು?” ಎಂದು ಕೇಳಿದರು.
మార్కు సువార్త 9 : 12 (ERVTE)
ಯೇಸು ಅವರಿಗೆ, “ಎಲೀಯನೇ ಮೊದಲು ಬರಬೇಕೆಂದು ಅವರು ಹೇಳುವುದು ಸರಿ. ಎಲೀಯನು ಎಲ್ಲವನ್ನು ಸರಿಪಡಿಸುತ್ತಾನೆ. ಆದರೆ ಮನುಷ್ಯಕುಮಾರನು ಬಹಳ ಸಂಕಟವನ್ನು ಅನುಭವಿಸುವನೆಂತಲೂ ಜನರು ಆತನನ್ನು ಹೀನೈಸುವರೆಂತಲೂ ಪವಿತ್ರಗ್ರಂಥವು ಏಕೆ ಹೇಳುತ್ತದೆ?
మార్కు సువార్త 9 : 13 (ERVTE)
ಎಲೀಯನು ಈಗಾಗಲೇ ಬಂದಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ ಮತ್ತು ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಕೇಡನ್ನು ಮಾಡಿದರು. ಅವನಿಗೆ ಹೀಗಾಗುವುದೆಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆದಿತ್ತು” ಎಂದು ಉತ್ತರಿಸಿದನು.
మార్కు సువార్త 9 : 14 (ERVTE)
{#1ಯೇಸುವಿನಿಂದ ಕಾಯಿಲೆ ಹುಡುಗನಿಗೆ ಸ್ವಸ್ಥತೆ
(ಮತ್ತಾಯ 17:14-20; ಲೂಕ 9:37-43) } ನಂತರ ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಇತರ ಶಿಷ್ಯರ ಬಳಿಗೆ ಹೋದರು. ಆ ಶಿಷ್ಯರ ಸುತ್ತಲೂ ಅನೇಕ ಜನರು ನೆರೆದಿದ್ದರು. ಧರ್ಮೋಪದೇಶಕರು ಅವರೊಡನೆ ವಾದ ಮಾಡುತ್ತಾ ಇದ್ದರು.
మార్కు సువార్త 9 : 15 (ERVTE)
ಆ ಜನರು ಯೇಸುವನ್ನು ನೋಡಿದಾಗ ಬಹಳ ಆಶ್ಚರ್ಯಪಟ್ಟು ಆತನನ್ನು ಸ್ವಾಗತಿಸಲು ಆತನ ಬಳಿಗೆ ಬಂದರು.
మార్కు సువార్త 9 : 16 (ERVTE)
మార్కు సువార్త 9 : 17 (ERVTE)
ಯೇಸು, “ನೀವು ಯಾವುದರ ಬಗ್ಗೆ ವಾದಿಸುತ್ತಿದ್ದೀರಿ?” ಎಂದು ಕೇಳಿದನು. ಒಬ್ಬನು, “ಗುರುವೇ, ನನ್ನ ಮಗನಿಗೆ ದೆವ್ವ ಹಿಡಿದಿದ್ದ ಕಾರಣ ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ತಂದೆನು. ಅವನು ಮಾತಾಡಲಾರ.
మార్కు సువార్త 9 : 18 (ERVTE)
ಆ ದೆವ್ವವು ಅವನ ಮೇಲೆ ಆಕ್ರಮಣ ಮಾಡಿದಾಗಲೆಲ್ಲಾ ಅವನನ್ನು ನೆಲಕ್ಕೆ ಕೆಡವುತ್ತದೆ. ನನ್ನ ಮಗನು ಬಾಯಿಂದ ನೊರೆ ಸುರಿಸುತ್ತಾ ಹಲ್ಲುಗಳನ್ನು ಕಟಕಟನೆ ಕಡಿಯುತ್ತಾನೆ ಮತ್ತು ಬಹಳ ಬಿರುಸಾಗುತ್ತಾನೆ. ಅವನನ್ನು ಆ ದೆವ್ವದಿಂದ ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಕೇಳಿಕೊಂಡೆನು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದು ಹೇಳಿದನು.
మార్కు సువార్త 9 : 19 (ERVTE)
మార్కు సువార్త 9 : 20 (ERVTE)
ಯೇಸು, “ವಿಶ್ವಾಸವಿಲ್ಲದ ಸಂತಾನವೇ, ನಾನು ನಿಮ್ಮೊಡನೆ ಇನ್ನೆಷ್ಟು ಕಾಲ ಇರಲಿ? ಇನ್ನೆಷ್ಟು ಕಾಲ ಸಹಿಸಿಕೊಳ್ಳಲಿ? ಆ ಹುಡುಗನನ್ನು ನನ್ನ ಬಳಿಗೆ ತನ್ನಿರಿ!” ಎಂದು ಉತ್ತರಿಸಿದನು.
మార్కు సువార్త 9 : 21 (ERVTE)
ಆಗ ಶಿಷ್ಯರು ಆ ಹುಡುಗನನ್ನು ಯೇಸುವಿನ ಬಳಿಗೆ ತಂದರು. ಆ ದೆವ್ವವು ಯೇಸುವನ್ನು ನೋಡಿದ ಕೂಡಲೇ ಆ ಹುಡುಗನ ಮೇಲೆ ಆಕ್ರಮಣ ಮಾಡಿತು. ಆ ಹುಡುಗನು ಕೆಳಗೆ ಬಿದ್ದು, ಬಾಯಿಂದ ನೊರೆಯನ್ನು ಸುರಿಸುತ್ತಾ ಒದ್ದಾಡತೊಡಗಿದನು. ಯೇಸು, “ಎಷ್ಟು ಕಾಲದಿಂದ ಹೀಗಾಗುತ್ತಿದೆ?” ಎಂದು ಆ ಹುಡುಗನ ತಂದೆಯನ್ನು ಕೇಳಿದನು. ಅದಕ್ಕೆ ತಂದೆಯು, “ಬಾಲ್ಯದಿಂದಲೇ ಹೀಗಾಗುತ್ತಿದೆ.
మార్కు సువార్త 9 : 22 (ERVTE)
ಆಗಿಂದಾಗ್ಗೆ ದೆವ್ವವು ಅವನನ್ನು ಕೊಲ್ಲಲು ಬೆಂಕಿಯೊಳಗೆ ಅಥವಾ ನೀರಿನೊಳಗೆ ಎಸೆಯುತ್ತದೆ. ನಿನಗೆ ಸಾಧ್ಯವಿರುವುದಾದರೆ, ದಯವಿಟ್ಟು ನಮ್ಮ ಮೇಲೆ ಕರುಣೆಯಿಟ್ಟು ಸಹಾಯಮಾಡು” ಎಂದು ಉತ್ತರಿಸಿದನು.
మార్కు సువార్త 9 : 23 (ERVTE)
మార్కు సువార్త 9 : 24 (ERVTE)
ಅದಕ್ಕೆ ಯೇಸು, “ ‘ನಿನಗೆ ಸಾಧ್ಯವಿರುವುದಾದರೆ’ ಎಂದು ನೀನು ಹೇಳುವುದೇಕೆ? ನಂಬಿಕೆಯಿಡುವ ವ್ಯಕ್ತಿಗೆ ಎಲ್ಲವೂ ಸಾಧ್ಯ” ಎಂದು ಹೇಳಿದನು.
మార్కు సువార్త 9 : 25 (ERVTE)
ಆ ಹುಡುಗನ ತಂದೆಯು ಸಂತೋಷದಿಂದ, “ನಾನು ನಂಬುತ್ತೇನೆ. ಇನ್ನೂ ಹೆಚ್ಚಾಗಿ ನಂಬಲು ನನಗೆ ಸಹಾಯ ಮಾಡು” ಎಂದನು.
మార్కు సువార్త 9 : 26 (ERVTE)
ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ, “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು. ಆ ದೆವ್ವವು ಅರಚಿತು. ಅದು ಆ ಹುಡುಗನನ್ನು ಮತ್ತೆ ನೆಲದ ಮೇಲೆ ಬೀಳಿಸಿ, ಒದ್ದಾಡಿಸಿ ಹೊರಬಂದಿತು. ಆ ಹುಡುಗನು ಸತ್ತವನಂತೆ ಬಿದ್ದಿದ್ದನು. ಅನೇಕ ಜನರು, “ಅವನು ಸತ್ತುಹೋದನು” ಎಂದರು.
మార్కు సువార్త 9 : 27 (ERVTE)
ಆದರೆ ಯೇಸು ಆ ಹುಡುಗನ ಕೈ ಹಿಡಿದೆತ್ತಿ, ಎದ್ದುನಿಲ್ಲಲು ಅವನಿಗೆ ಸಹಾಯಮಾಡಿದನು.
మార్కు సువార్త 9 : 28 (ERVTE)
మార్కు సువార్త 9 : 29 (ERVTE)
ಯೇಸು ಮನೆಯೊಳಗೆ ಹೋದ ಮೇಲೆ ಆತನ ಶಿಷ್ಯರು ಪ್ರತ್ಯೇಕವಾದ ಸ್ಥಳದಲ್ಲಿ ಆತನಿಗೆ, “ಆ ದೆವ್ವವನ್ನು ಬಿಡಿಸಲು ನಮಗೆ ಏಕೆ ಸಾಧ್ಯವಾಗಲಿಲ್ಲ?” ಎಂದು ಕೇಳಿದರು.
మార్కు సువార్త 9 : 30 (ERVTE)
ಯೇಸು, “ಈ ಬಗೆಯ ದೆವ್ವವನ್ನು ಪ್ರಾರ್ಥನೆಯಿಂದ ಮಾತ್ರ ಬಿಡಿಸಲು ಸಾಧ್ಯ” ಎಂದು ಉತ್ತರಿಸಿದನು. {#1ತನ್ನ ಮರಣದ ಬಗ್ಗೆ ಯೇಸುವಿನ ಪ್ರಕಟನೆ
(ಮತ್ತಾಯ 17:22-23; ಲೂಕ 9:43-45) } ನಂತರ ಯೇಸು ಮತ್ತು ಆತನ ಶಿಷ್ಯರು ಆ ಸ್ಥಳದಿಂದ ಹೊರಟು ಗಲಿಲಾಯದ ಮೂಲಕ ಪ್ರಯಾಣ ಮಾಡಿದರು. ತಾವು ಎಲ್ಲಿದ್ದೇವೆಂಬುದು ಜನರಿಗೆ ತಿಳಿಯಬಾರದೆಂಬುದು ಯೇಸುವಿನ ಉದ್ದೇಶವಾಗಿತ್ತು.
మార్కు సువార్త 9 : 31 (ERVTE)
ಏಕೆಂದರೆ ಆತನು ತನ್ನ ಶಿಷ್ಯರಿಗೆ ಏಕಾಂತವಾಗಿ ಉಪದೇಶಿಸಬೇಕೆಂದಿದ್ದನು. ಯೇಸು ಅವರಿಗೆ, “ಮನುಷ್ಯಕುಮಾರನನ್ನು ಜನರ ವಶಕ್ಕೆ ಕೊಡುವರು. ಜನರು ಆತನನ್ನು ಕೊಲ್ಲುವರು. ಕೊಲ್ಲಲ್ಪಟ್ಟ ಮೂರನೆಯ ದಿನದಲ್ಲಿ ಆತನು ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.
మార్కు సువార్త 9 : 32 (ERVTE)
ಆದರೆ ಯೇಸು ಹೇಳಿದ್ದು ಶಿಷ್ಯರಿಗೆ ಅರ್ಥವಾಗಲಿಲ್ಲ. ಮತ್ತು ಅದರ ಅರ್ಥವನ್ನು ಕೇಳುವುದಕ್ಕೂ ಅವರು ಭಯಪಟ್ಟರು.
మార్కు సువార్త 9 : 33 (ERVTE)
{#1ಯಾರು ಅತ್ಯಂತ ದೊಡ್ಡವರು?
(ಮತ್ತಾಯ 18:1-5; ಲೂಕ 9:46-48) } ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಅವರು ಒಂದು ಮನೆಯೊಳಗಿದ್ದಾಗ ಆತನು ತನ್ನ ಶಿಷ್ಯರಿಗೆ, “ಈ ದಿನ ನೀವು ದಾರಿಯಲ್ಲಿ ವಾದಮಾಡುತ್ತಿದ್ದುದ್ದನ್ನು ಕೇಳಿಸಿಕೊಂಡೆ. ನೀವು ಯಾವುದರ ಬಗ್ಗೆ ವಾದಮಾಡುತ್ತಿದ್ದಿರಿ?” ಎಂದನು.
మార్కు సువార్త 9 : 34 (ERVTE)
ಆದರೆ ಶಿಷ್ಯರು ಉತ್ತರಿಸಲಿಲ್ಲ. ಏಕೆಂದರೆ ತಮ್ಮಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರೆಂಬುದರ ಕುರಿತು ಅವರು ವಾಗ್ವಾದ ಮಾಡಿದ್ದರು.
మార్కు సువార్త 9 : 35 (ERVTE)
మార్కు సువార్త 9 : 36 (ERVTE)
ಯೇಸು ಕುಳಿತುಕೊಂಡು, ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು ಅವರಿಗೆ, “ನಿಮ್ಮಲ್ಲಿ ಅತ್ಯಂತ ಪ್ರಮುಖ ವ್ಯಕ್ತಿಯಾಗಬೇಕೆಂದು ಬಯಸುವವನು ಉಳಿದ ಎಲ್ಲರನ್ನು ತನಗಿಂತಲೂ ಹೆಚ್ಚು ಪ್ರಮುಖರೆಂದು ಭಾವಿಸಿಕೊಂಡು ಎಲ್ಲರ ಸೇವೆಮಾಡಬೇಕು” ಎಂದು ಹೇಳಿದನು. ನಂತರ ಯೇಸು ಒಂದು ಚಿಕ್ಕ ಮಗುವನ್ನು ಕರೆದು, ಆ ಮಗುವನ್ನು ಶಿಷ್ಯರ ಮುಂದೆ ನಿಲ್ಲಿಸಿ, ಅದನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ಅವರಿಗೆ,
మార్కు సువార్త 9 : 37 (ERVTE)
“ನನ್ನ ಹೆಸರಿನಲ್ಲಿ ಇಂಥ ಮಕ್ಕಳನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ನನ್ನನ್ನು ಸ್ವೀಕರಿಸಿಕೊಳ್ಳುವವನು, ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಂಡಂತಾಯಿತು” ಎಂದು ಹೇಳಿದನು.
మార్కు సువార్త 9 : 38 (ERVTE)
{#1ನಮ್ಮ ವೈರಿಯಲ್ಲದವನು ನಮ್ಮ ಮಿತ್ರನೇ
(ಲೂಕ 9:49-50) }
మార్కు సువార్త 9 : 39 (ERVTE)
ಆಗ ಯೋಹಾನನು, “ಗುರುವೇ, ಯಾರೋ ಒಬ್ಬನು ನಿನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುತ್ತಿರುವುದನ್ನು ನಾವು ನೋಡಿದೆವು. ಅವನು ನಮ್ಮವನಲ್ಲ. ಆದ್ದರಿಂದ ನಿನ್ನ ಹೆಸರನ್ನು ಹೇಳಕೂಡದೆಂದು ಅವನಿಗೆ ಹೇಳಿದೆವು” ಎಂದನು. ಯೇಸು ಅವರಿಗೆ, “ಅವನನ್ನು ತಡೆಯಬೇಡಿ. ನನ್ನ ಹೆಸರಿನ ಮೂಲಕ ಅದ್ಭುತಕಾರ್ಯಗಳನ್ನು ಮಾಡುವವನು ಆ ಕೂಡಲೇ ನನ್ನ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳಲು ಸಾಧ್ಯವಿಲ್ಲ.
మార్కు సువార్త 9 : 40 (ERVTE)
ನಮ್ಮ ವೈರಿಯಲ್ಲದವನು ನಮ್ಮ ಮಿತ್ರನೇ ಸರಿ.
మార్కు సువార్త 9 : 41 (ERVTE)
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.
మార్కు సువార్త 9 : 42 (ERVTE)
{#1ಇತರರನ್ನು ಪಾಪಕ್ಕೆ ನಡೆಸುವುದರ ಬಗ್ಗೆ ಯೇಸುವಿನ ಎಚ್ಚರಿಕೆ
(ಮತ್ತಾಯ 18:6-9; ಲೂಕ 17:1-2) } “ನನ್ನಲ್ಲಿ ನಂಬಿಕೆಯಿಟ್ಟಿರುವ ಈ ಚಿಕ್ಕ ಮಕ್ಕಳಲ್ಲಿ ಒಬ್ಬನನ್ನು ಪಾಪಕ್ಕೆ ನಡೆಸುವ ವ್ಯಕ್ತಿಯು ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಸಮುದ್ರದಲ್ಲಿ ಮುಳುಗುವುದೇ ಒಳ್ಳೆಯದು.
మార్కు సువార్త 9 : 43 (ERVTE)
ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ ಅದನ್ನು ಕತ್ತರಿಸಿಬಿಡು. ಎರಡು ಕೈಗಳನ್ನು ಇಟ್ಟುಕೊಂಡು, ನಂದಿಹೋಗದ ಬೆಂಕಿಯಿರುವ ನರಕಕ್ಕೆ ಹೋಗುವುದಕ್ಕಿಂತ ಅಂಗವಿಕಲನಾಗಿದ್ದು ನಿತ್ಯಜೀವವನ್ನು ಪಡೆಯುವುದೇ ಮೇಲು. ಆ ಸ್ಥಳದಲ್ಲಿ ಬೆಂಕಿ ಆರಿಹೋಗುವುದೇ ಇಲ್ಲ.
మార్కు సువార్త 9 : 44 (ERVTE)
[* ಕೆಲವು ಗ್ರೀಕ್ ಪ್ರತಿಗಳು 44ನೇ ವಚನವನ್ನು ಹೊಂದಿವೆ. ಈ ವಚನವು 48ನೇ ವಚನವೇ ಆಗಿದೆ. ]
మార్కు సువార్త 9 : 45 (ERVTE)
ನಿನ್ನ ಕಾಲು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ, ಅದನ್ನು ಕತ್ತರಿಸಿಬಿಡು. ಎರಡು ಕಾಲುಗಳನ್ನು ಇಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಕುಂಟನಾಗಿರುವುದೇ ಮೇಲು.
మార్కు సువార్త 9 : 46 (ERVTE)
[† ಕೆಲವು ಗ್ರೀಕ್ ಪ್ರತಿಗಳು 46ನೇ ವಚನವನ್ನು ಹೊಂದಿವೆ. ಈ ವಚನವು 48ನೇ ವಚನವೇ ಆಗಿದೆ. ]
మార్కు సువార్త 9 : 47 (ERVTE)
ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ, ಅದನ್ನು ಕಿತ್ತುಬಿಡು. ಎರಡು ಕಣ್ಣುಗಳನ್ನಿಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವವನ್ನು ಹೊಂದಿಕೊಳ್ಳುವುದೇ ಮೇಲು.
మార్కు సువార్త 9 : 48 (ERVTE)
ನರಕದಲ್ಲಿ ಮನುಷ್ಯರನ್ನು ತಿನ್ನುವ ಹುಳಗಳು ಸಾಯುವುದೇ ಇಲ್ಲ ಮತ್ತು ಬೆಂಕಿಯು ಆರುವುದೇ ಇಲ್ಲ.
మార్కు సువార్త 9 : 49 (ERVTE)
మార్కు సువార్త 9 : 50 (ERVTE)
“ಪ್ರತಿಯೊಬ್ಬನನ್ನೂ ಬೆಂಕಿಯಿಂದ ಶಿಕ್ಷಿಸಲಾಗುತ್ತದೆ. “ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ[‡ ಒಳ್ಳೆಯತನ ಅಕ್ಷರಶಃ, “ನಿಮ್ಮಲ್ಲಿ ಉಪ್ಪನ್ನು ಹೊಂದಿರಿ.” ] ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.
❮
❯