మత్తయి సువార్త 10 : 1 (ERVTE)
{#1ಯೇಸು ಅಪೊಸ್ತಲರಿಗೆ ಕೊಟ್ಟ ಆದೇಶ
(ಮಾರ್ಕ 3:13-19; 6:7-13; ಲೂಕ 6:12-16; 9:1-6) } ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
మత్తయి సువార్త 10 : 2 (ERVTE)
ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ,
మత్తయి సువార్త 10 : 3 (ERVTE)
ಫಿಲಿಪ್ಪ ಮತ್ತು ಬಾರ್ತೊಲೊಮಾಯ, ತೋಮ, ಸುಂಕವಸೂಲಿಗಾರನಾಗಿದ್ದ ಮತ್ತಾಯ, ಅಲ್ಛಾಯನ ಮಗನಾದ ಯಾಕೋಬ, ತದ್ದಾಯ,
మత్తయి సువార్త 10 : 4 (ERVTE)
ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದ ಸಿಮೋನ ಮತ್ತು ಯೇಸುವನ್ನು ಶತ್ರುಗಳಿಗೆ ಒಪ್ಪಿಸಿದ ಇಸ್ಕರಿಯೋತ ಯೂದ.
మత్తయి సువార్త 10 : 5 (ERVTE)
ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ.
మత్తయి సువార్త 10 : 6 (ERVTE)
ಆದರೆ ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಹೋಗಿ,
మత్తయి సువార్త 10 : 7 (ERVTE)
ಪರಲೋಕರಾಜ್ಯವು ಬೇಗನೆ ಬರುತ್ತದೆ ಎಂದು ಬೋಧಿಸಿ.
మత్తయి సువార్త 10 : 8 (ERVTE)
ರೋಗಿಗಳನ್ನು ವಾಸಿಮಾಡಿರಿ. ಸತ್ತವರನ್ನು ಬದುಕಿಸಿರಿ. ಕುಷ್ಠರೋಗಿಗಳನ್ನು ವಾಸಿಮಾಡಿರಿ. ಜನರನ್ನು ದೆವ್ವಗಳಿಂದ ಬಿಡಿಸಿರಿ. ನಾನು ನಿಮಗೆ ಈ ಅಧಿಕಾರಗಳನ್ನು ಉಚಿತವಾಗಿ ಕೊಡುತ್ತೇನೆ. ಆದ್ದರಿಂದ ಬೇರೆಯವರಿಗೆ ಉಚಿತವಾಗಿ ಸಹಾಯಮಾಡಿ.
మత్తయి సువార్త 10 : 9 (ERVTE)
ನಿಮ್ಮೊಂದಿಗೆ ಹಣವನ್ನಾಗಲಿ ತಾಮ್ರ, ಬೆಳ್ಳಿಬಂಗಾರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ.
మత్తయి సువార్త 10 : 10 (ERVTE)
ಚೀಲವನ್ನಾಗಲಿ ಹೆಚ್ಚಿನ ಬಟ್ಟೆಗಳನ್ನಾಗಲಿ ಪಾದರಕ್ಷೆಗಳನ್ನಾಗಲಿ ಊರುಗೋಲುಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಕೆಲಸಗಾರನಿಗೆ ಅಗತ್ಯವಾದವುಗಳನ್ನು ಒದಗಿಸಲಾಗುವುದು.
మత్తయి సువార్త 10 : 11 (ERVTE)
“ನೀವು ಯಾವುದೇ ಊರಿನೊಳಕ್ಕೆ ಅಥವಾ ನಗರಕ್ಕೆ ಪ್ರವೇಶಿಸಿದಾಗ ಅಲ್ಲಿರುವ ಉತ್ತಮ ವ್ಯಕ್ತಿಯನ್ನು ಗುರುತಿಸಿ, ನೀವು ಆ ಊರನ್ನು ಬಿಡುವ ತನಕ ಅವನ ಮನೆಯಲ್ಲೇ ತಂಗಿರಿ.
మత్తయి సువార్త 10 : 12 (ERVTE)
ಆ ಮನೆಗೆ ನೀವು ಪ್ರವೇಶಿಸಿದಾಗ, ‘ನಿಮಗೆ ಶುಭವಾಗಲಿ’ ಎಂದು ಹೇಳಿರಿ.
మత్తయి సువార్త 10 : 13 (ERVTE)
ಆ ಮನೆಯಲ್ಲಿರುವ ಜನರು ನಿಮ್ಮನ್ನು ಸ್ವಾಗತಿಸಿದರೆ ನಿಮ್ಮ ಆಶೀರ್ವಾದಕ್ಕೆ ಅವರು ಯೋಗ್ಯರಾಗಿರುವುದರಿಂದ ಆ ಆಶೀರ್ವಾದವು ಅವರಿಗೆ ದೊರೆಯಲಿ. ಅವರು ನಿಮ್ಮನ್ನು ಸ್ವಾಗತಿಸದಿದ್ದರೆ, ನಿಮ್ಮ ಆಶೀರ್ವಾದವು ನಿಮಗೇ ಹಿಂತಿರುಗಿಬರಲಿ.
మత్తయి సువార్త 10 : 14 (ERVTE)
ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
మత్తయి సువార్త 10 : 15 (ERVTE)
ನ್ಯಾಯವಿಚಾರಣೆಯ ದಿನದಲ್ಲಿ ಈ ಊರಿನ ಗತಿಯು ಸೊದೋಮ್ ಮತ್ತು ಗೊಮೋರಗಳಿಗಿಂತ ಬಹಳ ಕೆಟ್ಟದ್ದಾಗಿರುವುದು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
మత్తయి సువార్త 10 : 16 (ERVTE)
{#1ಹಿಂಸೆಯ ಕುರಿತು ಯೇಸುವಿನ ಎಚ್ಚರಿಕೆ
(ಮಾರ್ಕ 13:9-13; ಲೂಕ 21:12-17) } “ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.
మత్తయి సువార్త 10 : 17 (ERVTE)
ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.
మత్తయి సువార్త 10 : 18 (ERVTE)
ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ.
మత్తయి సువార్త 10 : 19 (ERVTE)
ನಿಮ್ಮನ್ನು ಬಂಧಿಸಿದಾಗ ನೀವು ಏನು ಮಾತಾಡಬೇಕು, ಹೇಗೆ ಮಾತಾಡಬೇಕು ಎಂದು ಚಿಂತಿಸಬೇಡಿ. ನೀವು ಹೇಳಬೇಕಾದುವುಗಳನ್ನು ಆ ಸಮಯದಲ್ಲಿ ನಿಮಗೆ ಅನುಗ್ರಹಿಸಲಾಗುವುದು.
మత్తయి సువార్త 10 : 20 (ERVTE)
ಮಾತಾಡುವವರು ನಿಜವಾಗಿಯೂ ನೀವಲ್ಲ. ನಿಮ್ಮ ತಂದೆಯ ಆತ್ಮನೇ ನಿಮ್ಮ ಮೂಲಕ ಮಾತನಾಡುತ್ತಾನೆ.
మత్తయి సువార్త 10 : 21 (ERVTE)
“ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.
మత్తయి సువార్త 10 : 22 (ERVTE)
ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು.
మత్తయి సువార్త 10 : 23 (ERVTE)
ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
మత్తయి సువార్త 10 : 24 (ERVTE)
“ಶಿಷ್ಯನು ಗುರುವಿಗಿಂತ ಉತ್ತಮನಲ್ಲ. ಆಳು ತನ್ನ ದಣಿಗಿಂತ ಉತ್ತಮನಲ್ಲ.
మత్తయి సువార్త 10 : 25 (ERVTE)
ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ?
మత్తయి సువార్త 10 : 26 (ERVTE)
{#1ಭಯಪಡಬೇಕಾದದ್ದು ದೇವರಿಗೆ, ಮನುಷ್ಯರಿಗಲ್ಲ
(ಲೂಕ 12:2-7) } “ಆದಕಾರಣ ಆ ಜನರಿಗೆ ಹೆದರಬೇಡಿ. ಮರೆಯಾಗಿರುವ ಪ್ರತಿಯೊಂದೂ ಬಹಿರಂಗವಾಗುವುದು. ಗುಪ್ತವಾಗಿರುವ ಪ್ರತಿ ಸಂಗತಿಯು ಬಯಲಾಗುವುದು.
మత్తయి సువార్త 10 : 27 (ERVTE)
ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.
మత్తయి సువార్త 10 : 28 (ERVTE)
“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.
మత్తయి సువార్త 10 : 29 (ERVTE)
ಮಾರುಕಟ್ಟೆಯಲ್ಲಿ ಎರಡು ಗುಬ್ಬಚ್ಚಿಗಳನ್ನು ಒಂದು ನಾಣ್ಯಕ್ಕೆ[* ನಾಣ್ಯ. ತಾಮ್ರದ ನಾಣ್ಯ. ದಿನಾರಿಯಲ್ಲಿ ಹದಿನಾರನೇ ಒಂದು ಭಾಗ. ] ಮಾರುತ್ತಾರೆ. ಆದರೆ ನಿಮ್ಮ ತಂದೆಯು ಅಪ್ಪಣೆ ಕೊಡದ ಹೊರತು ಅವುಗಳಲ್ಲಿ ಒಂದಾದರೂ ಸಾಯುವುದಿಲ್ಲ.
మత్తయి సువార్త 10 : 30 (ERVTE)
ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳು ಇವೆ ಎಂಬುದು ಸಹ ದೇವರಿಗೆ ತಿಳಿದಿದೆ.
మత్తయి సువార్త 10 : 31 (ERVTE)
ಆದಕಾರಣ ಹೆದರಬೇಡಿ. ನೀವು ಅನೇಕ ಗುಬ್ಬಚ್ಚಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
మత్తయి సువార్త 10 : 32 (ERVTE)
{#1ನಿಮ್ಮ ನಂಬಿಕೆಯ ಕುರಿತು ಬಹಿರಂಗ ಸಾಕ್ಷಿ
(ಲೂಕ 12:8-9) } “ಒಬ್ಬನು ಬೇರೆಯವರ ಮುಂದೆ, ತಾನು ನನ್ನವನೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ನನ್ನವನೆಂದು ಹೇಳುತ್ತೇನೆ.
మత్తయి సువార్త 10 : 33 (ERVTE)
ಆದರೆ ಒಬ್ಬನು ಜನರ ಮುಂದೆ, ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನು ನನ್ನವನಲ್ಲವೆಂದು ಹೇಳುತ್ತೇನೆ.
మత్తయి సువార్త 10 : 34 (ERVTE)
{#1ಯೇಸುವನ್ನು ಹಿಂಬಾಲಿಸುವವರಿಗೆ ಬರುವ ತೊಂದರೆಗಳು
(ಲೂಕ 12:51-53; 14:26-27) } “ಭೂಲೋಕದಲ್ಲಿ ಶಾಂತಿಯನ್ನು ಉಂಟುಮಾಡಲು ನಾನು ಬಂದಿದ್ದೇನೆಂದು ಯೋಚಿಸಬೇಡಿ. ನಾನು ಶಾಂತಿಯನ್ನು ಉಂಟುಮಾಡಲು ಬರಲಿಲ್ಲ, ಖಡ್ಗ ಹಾಕಲು ಬಂದಿದ್ದೇನೆ.
మత్తయి సువార్త 10 : 35 (ERVTE)
(35-36)ಈ ಪ್ರವಾದನೆ ನೆರವೇರುವಂತೆ ಮಾಡಲು ನಾನು ಬಂದಿದ್ದೇನೆ: ‘ಒಬ್ಬನಿಗೆ ಅವನ ಮನೆಯವರೇ ವೈರಿಗಳಾಗುವರು. ಮಗನು ತಂದೆಗೆ, ಮಗಳು ತಾಯಿಗೆ, ಸೊಸೆಯು ಅತ್ತೆಗೆ ವೈರಿಗಳಾಗುವರು.’ --ಮೀಕ 7:6--
మత్తయి సువార్త 10 : 36 (ERVTE)
మత్తయి సువార్త 10 : 37 (ERVTE)
“ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.
మత్తయి సువార్త 10 : 38 (ERVTE)
ಯಾವನಾದರೂ ನನ್ನನ್ನು ಹಿಂಬಾಲಿಸುವಾಗ ಅವನಿಗೆ ಕೊಡುವಂಥ ಶಿಲುಬೆಯನ್ನು (ಸಂಕಟವನ್ನು) ಅಂಗೀಕರಿಸದಿದ್ದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.
మత్తయి సువార్త 10 : 39 (ERVTE)
ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಪಡೆದುಕೊಳ್ಳುವನು.
మత్తయి సువార్త 10 : 40 (ERVTE)
{#1ದೇವಜನರನ್ನು ಸ್ವಾಗತಿಸುವವನಿಗೆ ಆಶೀರ್ವಾದ
(ಮಾರ್ಕ 9:41) } “ನಿಮ್ಮನ್ನು ಅಂಗೀಕರಿಸುವವನು ನನ್ನನ್ನು ಸಹ ಅಂಗೀಕರಿಸುವನು. ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿದಾತನನ್ನು (ದೇವರನ್ನು) ಸಹ ಅಂಗೀಕರಿಸುವನು.
మత్తయి సువార్త 10 : 41 (ERVTE)
ಪ್ರವಾದಿಯನ್ನು ಪ್ರವಾದಿಯೆಂದು ಸಂಧಿಸಿ ಸ್ವಾಗತಿಸುವವನು ಆ ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಆ ಸತ್ಪುರುಷನಿಗೆ ಬರತಕ್ಕ ಪ್ರತಿಫಲವನ್ನು ಪಡೆಯುವನು.
మత్తయి సువార్త 10 : 42 (ERVTE)
ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.”
❮
❯