మత్తయి సువార్త 13 : 1 (ERVTE)
{#1ಬಿತ್ತನೆಯನ್ನು ಉದಾಹರಿಸಿ ಯೇಸು ಹೇಳಿದ ಬೋಧನೆ
(ಮಾರ್ಕ 4:1-9; ಲೂಕ 8:4-8) } ಅದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸರೋವರದ ತೀರದಲ್ಲಿ ಕುಳಿತುಕೊಂಡನು.
మత్తయి సువార్త 13 : 2 (ERVTE)
ಅನೇಕ ಜನರು ಯೇಸುವಿನ ಸುತ್ತಲೂ ನೆರೆದರು. ಆಗ ಯೇಸು ದೋಣಿಯೊಳಕ್ಕೆ ಹೋಗಿ ಕುಳಿತುಕೊಂಡನು. ಜನರೆಲ್ಲರೂ ದಡದಲ್ಲಿ ನಿಂತಿದ್ದರು.
మత్తయి సువార్త 13 : 3 (ERVTE)
ಆಗ ಯೇಸು ಸಾಮ್ಯಗಳ ಮೂಲಕ ಅನೇಕ ವಿಷಯಗಳನ್ನು ಅವರಿಗೆ ಬೋಧಿಸಿದನು. ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೋದನು.
మత్తయి సువార్త 13 : 4 (ERVTE)
ಅವನು ಬೀಜ ಬಿತ್ತುವಾಗ ಕೆಲವು ಬೀಜಗಳು ರಸ್ತೆಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಬೀಜಗಳನ್ನೆಲ್ಲ ತಿಂದುಬಿಟ್ಟವು.
మత్తయి సువార్త 13 : 5 (ERVTE)
ಕೆಲವು ಬೀಜಗಳು ಬಂಡೆಯ ನೆಲದಲ್ಲಿ ಬಿದ್ದವು. ಅಲ್ಲಿಯ ನೆಲದಲ್ಲಿ ಸಾಕಷ್ಟು ಮಣ್ಣಿಲ್ಲದಿದ್ದುದರಿಂದ ಬೀಜಗಳು ಬೇಗ ಮೊಳೆತವು.
మత్తయి సువార్త 13 : 6 (ERVTE)
ಆದರೆ ಬಿಸಿಲೇರಿದಾಗ ಆ ಮೊಳಕೆಗಳು ಒಣಗಿಹೋದವು. ಏಕೆಂದರೆ ಅವುಗಳಿಗೆ ಆಳವಾದ ಬೇರಿರಲಿಲ್ಲ.
మత్తయి సువార్త 13 : 7 (ERVTE)
ಬೇರೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಒಳ್ಳೆಯ ಗಿಡಗಳು ಬೆಳೆಯುವುದನ್ನು ತಡೆದುಬಿಟ್ಟವು.
మత్తయి సువార్త 13 : 8 (ERVTE)
ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಅವು ಬೆಳೆದು ಕಾಳುಬಿಟ್ಟವು. ಕೆಲವು ಗಿಡಗಳು ನೂರರಷ್ಟು, ಕೆಲವು ಗಿಡಗಳು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಕಾಳುಬಿಟ್ಟವು.
మత్తయి సువార్త 13 : 9 (ERVTE)
ನನಗೆ ಕಿವಿಗೊಡುವ ಜನರೇ, ಲಾಲಿಸಿರಿ!”
మత్తయి సువార్త 13 : 10 (ERVTE)
{#1ಯೇಸು ಸಾಮ್ಯಗಳನ್ನು ಏಕೆ ಬಳಸಿದನು?
(ಮಾರ್ಕ 4:10-12; ಲೂಕ 8:9-10) }
మత్తయి సువార్త 13 : 11 (ERVTE)
ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀನು ಸಾಮ್ಯಗಳ ಮೂಲಕ ಜನರಿಗೆ ಉಪದೇಶಿಸುವುದೇಕೆ?” ಎಂದು ಕೇಳಿದರು. ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು.
మత్తయి సువార్త 13 : 12 (ERVTE)
ಸ್ವಲ್ಪ ಜ್ಞಾನವನ್ನು ಹೊಂದಿರುವವನು ಇನ್ನೂ ಹೆಚ್ಚು ಜ್ಞಾನವನ್ನು ಪಡೆದುಕೊಂಡು ಸಾಕಷ್ಟು ಜ್ಞಾನವಂತನಾಗುವನು. ಆದರೆ ಜ್ಞಾನವನ್ನು ಹೊಂದಿಲ್ಲದವನು ತನಗಿರುವ ಸ್ವಲ್ಪ ಜ್ಞಾನವನ್ನೂ ಕಳೆದುಕೊಳ್ಳುವನು.
మత్తయి సువార్త 13 : 13 (ERVTE)
ಈ ಕಾರಣದಿಂದಲೇ ನಾನು ಈ ಸಾಮ್ಯಗಳ ಮೂಲಕ ಇವರಿಗೆ ಬೋಧಿಸುತ್ತೇನೆ. ಈ ಜನರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸುವುದಿಲ್ಲ.
మత్తయి సువార్త 13 : 14 (ERVTE)
ಇಂಥವರ ಬಗ್ಗೆ ಯೆಶಾಯನು ಹೇಳಿದ್ದೇನೆಂದರೆ: ‘ನೀವು ಆಲಿಸುತ್ತೀರಿ, ಕೇಳುತ್ತೀರಿ, ಆದರೆ ನಿಮಗೆ ಅರ್ಥವಾಗುವುದಿಲ್ಲ. ನೀವು ದೃಷ್ಟಿಸಿ ನೋಡುತ್ತೀರಿ, ಆದರೆ ನಿಮಗೆ ಕಾಣುವುದನ್ನು ಅರ್ಥಮಾಡಿಕೊಳ್ಳುವುದಿಲ್ಲ.
మత్తయి సువార్త 13 : 15 (ERVTE)
ಹೌದು, ಇವರ ಮನಸ್ಸುಗಳು ಕಠಿಣವಾಗಿವೆ. ಕಿವಿ ಮಂದವಾಗಿವೆ, ಕಣ್ಣು ಮಬ್ಬಾಗಿವೆ. ಅವರು ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆಯೂ ನನ್ನ ಕಡೆಗೆ ತಿರುಗಿಕೊಳ್ಳದಂತೆಯೂ ನನ್ನಿಂದ ಗುಣಹೊಂದದಂತೆಯೂ ಹೀಗಾಯಿತು.’ --ಯೆಶಾಯ 6:9-10--
మత్తయి సువార్త 13 : 16 (ERVTE)
16 ನೀವಾದರೋ ಧನ್ಯರು. ನಿಮಗೆ ಕಾಣುವ ಸಂಗತಿಗಳನ್ನೂ ನಿಮಗೆ ಹೇಳುವ ವಿಷಯಗಳನ್ನೂ ಅರ್ಥಮಾಡಿಕೊಳ್ಳಬಲ್ಲಿರಿ.
మత్తయి సువార్త 13 : 17 (ERVTE)
ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಈಗ ನೋಡುವ ಸಂಗತಿಗಳನ್ನು ನೋಡಲು ಮತ್ತು ಈಗ ನೀವು ಕೇಳುವ ಸಂಗತಿಗಳನ್ನು ಕೇಳಲು ಅನೇಕ ಪ್ರವಾದಿಗಳು ಮತ್ತು ಒಳ್ಳೆಯ ಜನರು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ.
మత్తయి సువార్త 13 : 18 (ERVTE)
{#1ಬಿತ್ತನೆಯ ಕುರಿತು ಯೇಸುವಿನ ವಿವರಣೆ
(ಮಾರ್ಕ 4:13-20; ಲೂಕ 8:11-15) }
మత్తయి సువార్త 13 : 19 (ERVTE)
“ಹೀಗಿರಲು ಒಕ್ಕಲಿಗನ ಕುರಿತಾದ ಸಾಮ್ಯದ ಅರ್ಥವನ್ನು ಲಾಲಿಸಿರಿ.
మత్తయి సువార్త 13 : 20 (ERVTE)
“ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ. “ಬಂಡೆನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಅಂಗೀಕರಿಸುವ ಮನುಷ್ಯನೇ ಬೀಜ ಬಿದ್ದ ಬಂಡೆನೆಲವಾಗಿರುವನು.
మత్తయి సువార్త 13 : 21 (ERVTE)
ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.
మత్తయి సువార్త 13 : 22 (ERVTE)
మత్తయి సువార్త 13 : 23 (ERVTE)
“ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.
మత్తయి సువార్త 13 : 24 (ERVTE)
“ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು. {#1ಗೋಧಿ ಮತ್ತು ಹಣಜಿ ಸಾಮ್ಯ } ಬಳಿಕ ಯೇಸು ಅವರಿಗೆ ಇನ್ನೊಂದು ಸಾಮ್ಯದ ಮೂಲಕ ಬೋಧಿಸಿದನು. ಅದೇನೆಂದರೆ: “ಪರಲೋಕರಾಜ್ಯ ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ರೈತನಂತಿದೆ.
మత్తయి సువార్త 13 : 25 (ERVTE)
ಆ ರಾತ್ರಿ ಜನರೆಲ್ಲರೂ ನಿದ್ರಿಸುತ್ತಿದ್ದಾಗ ಅವನ ವೈರಿ ಬಂದು ಗೋಧಿಯ ನಡುವೆ ಹಣಜಿಯನ್ನು ಬಿತ್ತಿ ಹೊರಟುಹೋದನು.
మత్తయి సువార్త 13 : 26 (ERVTE)
ಬಳಿಕ ಗೋಧಿ ಬೆಳೆದು ತೆನೆಬಿಟ್ಟಿತು. ಅದರೊಡನೆ ಹಣಜಿ ಸಹ ಬೆಳೆಯಿತು.
మత్తయి సువార్త 13 : 27 (ERVTE)
ಆಗ ಆ ರೈತನ ಸೇವಕರು ಅವನ ಬಳಿಗೆ ಬಂದು, ‘ನಿನ್ನ ಹೊಲದಲ್ಲಿ ನೀನು ಒಳ್ಳೆಯ ಬೀಜ ಬಿತ್ತಿದೆ. ಹಣಜಿ ಎಲ್ಲಿಂದ ಬಂತು?’ ಎಂದು ಕೇಳಿದರು.
మత్తయి సువార్త 13 : 28 (ERVTE)
మత్తయి సువార్త 13 : 29 (ERVTE)
“ಆ ಮನುಷ್ಯನು, ‘ಒಬ್ಬ ವೈರಿ ಹಣಜಿಯನ್ನು ಬಿತ್ತಿದ್ದಾನೆ’ ಎಂದು ಉತ್ತರಕೊಟ್ಟನು. “ಆ ಸೇವಕರು ‘ನಾವು ಹೋಗಿ ಹಣಜಿಗಳನ್ನು ಕೀಳಬೇಕೆ?’ ಎಂದು ಕೇಳಿದರು. “ಆ ಮನುಷ್ಯನು, ‘ಬೇಡ, ಏಕೆಂದರೆ ನೀವು ಹಣಜಿಗಳನ್ನು ಕೀಳುವಾಗ ಗೋಧಿಯನ್ನು ಸಹ ಕೀಳಬಹುದು.
మత్తయి సువార్త 13 : 30 (ERVTE)
ಸುಗ್ಗಿಕಾಲದವರೆಗೆ ಹಣಜಿಯೂ ಗೋಧಿಯೂ ಒಟ್ಟಿಗೆ ಬೆಳೆಯಲಿ. ಸುಗ್ಗಿಕಾಲದ ಸಮಯದಲ್ಲಿ ನಾನು ಕೆಲಸದವರಿಗೆ, ಮೊದಲು ಹಣಜಿಗಳನ್ನು ಕೂಡಿಸಿ ಅದನ್ನು ಸುಡುವುದಕ್ಕಾಗಿ ಹೊರೆ ಕಟ್ಟಿ, ನಂತರ ಗೋಧಿಯನ್ನು ಕೂಡಿಸಿ ಅದನ್ನು ನನ್ನ ಕಣಜಕ್ಕೆ ತನ್ನಿರಿ ಎಂದು ಹೇಳುವೆನು’ ಎಂದು ಉತ್ತರಕೊಟ್ಟನು.”
మత్తయి సువార్త 13 : 31 (ERVTE)
{#1ಅನೇಕ ಸಾಮ್ಯಗಳ ಮೂಲಕ ಯೇಸುವಿನ ಉಪದೇಶ
(ಮಾರ್ಕ 4:30-34; ಲೂಕ 13:18-21) } ನಂತರ ಯೇಸು ಜನರಿಗೆ ಮತ್ತೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯ ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ತನ್ನ ಹೊಲದಲ್ಲಿ ಬಿತ್ತಿದನು.
మత్తయి సువార్త 13 : 32 (ERVTE)
ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣ ಬೀಜವಾಗಿದೆ. ಆದರೆ ಅದು ಬೆಳೆದಾಗ ತೋಟದ ಗಿಡಗಳಿಗಿಂತಲೂ ದೊಡ್ಡದಾಗಿರುವುದು. ಅದು ಮರವಾದಾಗ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಮಾಡಿಕೊಳ್ಳುವಷ್ಟು ದೊಡ್ಡದಾಗಿರುತ್ತದೆ.”
మత్తయి సువార్త 13 : 33 (ERVTE)
మత్తయి సువార్త 13 : 34 (ERVTE)
ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಆ ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.” ಯೇಸು ಇವುಗಳನ್ನೆಲ್ಲ ಸಾಮ್ಯಗಳ ಮೂಲಕ ಹೇಳಿದನು. ಆತನು ಉಪದೇಶಿಸುವಾಗಲೆಲ್ಲಾ ಸಾಮ್ಯಗಳನ್ನು ಉಪಯೋಗಿಸುತ್ತಿದ್ದನು.
మత్తయి సువార్త 13 : 35 (ERVTE)
ಪ್ರವಾದಿ ಹೇಳಿದ್ದ ಈ ಮಾತು ಇದರಿಂದ ನೆರವೇರಿತು: “ನಾನು ಸಾಮ್ಯಗಳ ಮೂಲಕ ಉಪದೇಶಿಸುತ್ತೇನೆ. ಲೋಕ ಉಂಟಾದಂದಿನಿಂದ ಮರೆಯಾಗಿದ್ದ ಸಂಗತಿಗಳನ್ನು ನಾನು ಹೇಳುತ್ತೇನೆ.” --ಕೀರ್ತನೆ. 78:2--
మత్తయి సువార్త 13 : 36 (ERVTE)
{#1ಕಠಿಣವಾದ ಸಾಮ್ಯಕ್ಕೆ ಯೇಸುವಿನ ವಿವರಣೆ }
మత్తయి సువార్త 13 : 37 (ERVTE)
ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು. ಯೇಸು ಹೀಗೆ ಉತ್ತರಿಸಿದನು: “ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತುವವನೇ ಮನುಷ್ಯಕುಮಾರನು.
మత్తయి సువార్త 13 : 38 (ERVTE)
ಆ ಹೊಲ ಈ ಲೋಕವಾಗಿದೆ. ಒಳ್ಳೆಯ ಕಾಳುಗಳೇ ಪರಲೋಕರಾಜ್ಯಕ್ಕೆ ಸೇರಿದ ದೇವರ ಮಕ್ಕಳು. ಕೆಡುಕನಿಗೆ ಸಂಬಂಧಪಟ್ಟವರೇ ಹಣಜಿಗಳು.
మత్తయి సువార్త 13 : 39 (ERVTE)
ಹಣಜಿಯನ್ನು ಬಿತ್ತಿದ ವೈರಿಯೇ ಸೈತಾನ. ಸುಗ್ಗಿಕಾಲ ಅಂದರೆ ಲೋಕದ ಅಂತ್ಯಕಾಲ. ಕೂಡಿಸುವ ಕೆಲಸಗಾರರೇ ದೇವದೂತರು.
మత్తయి సువార్త 13 : 40 (ERVTE)
“ಹಣಜಿಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ಈ ಲೋಕದ ಅಂತ್ಯದಲ್ಲಿ ಆಗುವಂಥದ್ದು ಇದೇ.
మత్తయి సువార్త 13 : 41 (ERVTE)
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಆತನ ದೂತರು ಪಾಪಕ್ಕೆ ಕಾರಣರಾದ ಮತ್ತು ಕೇಡುಮಾಡುವ ಜನರನ್ನೆಲ್ಲ ಕೂಡಿಸುವರು; ಅವರನ್ನು ಆತನ ರಾಜ್ಯದಿಂದ ಹೊರಗೆ ಹಾಕಿ
మత్తయి సువార్త 13 : 42 (ERVTE)
ಬೆಂಕಿಯ ಸ್ಥಳಕ್ಕೆ ಎಸೆದುಬಿಡುವರು. ಅಲ್ಲಿ ಅವರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.
మత్తయి సువార్త 13 : 43 (ERVTE)
ಒಳ್ಳೆಯವರಾದರೋ ಸೂರ್ಯನಂತೆ ಪ್ರಕಾಶಿಸುತ್ತಾ ತಮ್ಮ ತಂದೆಯ ರಾಜ್ಯದಲ್ಲಿರುವರು. ನನಗೆ ಕಿವಿಗೊಡುವ ಜನರೇ, ಆಲಿಸಿರಿ!
మత్తయి సువార్త 13 : 44 (ERVTE)
{#1ನಿಧಿ ಮತ್ತು ಮುತ್ತಿನ ಸಾಮ್ಯಗಳು }
మత్తయి సువార్త 13 : 45 (ERVTE)
“ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು. “ಪರಲೋಕರಾಜ್ಯವು ಶ್ರೇಷ್ಠವಾದ ಮುತ್ತುಗಳನ್ನು ಹುಡುಕುವ ಒಬ್ಬ ವ್ಯಾಪಾರಿಯಂತಿದೆ.
మత్తయి సువార్త 13 : 46 (ERVTE)
ಒಂದು ದಿನ ಆ ವ್ಯಾಪಾರಿಗೆ ಬಹು ಅಮೂಲ್ಯವಾದ ಒಂದು ಮುತ್ತು ಸಿಕ್ಕಿತು. ಆಗ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಮುತ್ತನ್ನು ಕೊಂಡುಕೊಂಡನು.
మత్తయి సువార్త 13 : 47 (ERVTE)
{#1ಮೀನಿನ ಬಲೆಯ ಕುರಿತಾದ ಸಾಮ್ಯ } “ಪರಲೋಕರಾಜ್ಯವು ಸರೋವರದೊಳಗೆ ಬೀಸಿದ ಬಲೆಯಂತಿದೆ. ಆ ಬಲೆಗೆ ಅನೇಕ ಜಾತಿಯ ಮೀನುಗಳು ಸಿಕ್ಕಿಕೊಂಡವು.
మత్తయి సువార్త 13 : 48 (ERVTE)
ಆಗ ಆ ಬಲೆಯು ತುಂಬಿಹೋಯಿತು. ಬೆಸ್ತರು ಆ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದು ಒಳ್ಳೆಯ ಮೀನುಗಳನ್ನೆಲ್ಲಾ ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿದರು.
మత్తయి సువార్త 13 : 49 (ERVTE)
ಈ ಪ್ರಪಂಚದ ಅಂತ್ಯದಲ್ಲಿ ಅದೇ ರೀತಿ ಆಗುವುದು. ದೇವದೂತರು ಬಂದು ಒಳ್ಳೆಯ ಜನರಿಂದ ಕೆಟ್ಟಜನರನ್ನು ಬೇರೆ ಮಾಡುವರು.
మత్తయి సువార్త 13 : 50 (ERVTE)
ದೇವದೂತರು ಕೆಟ್ಟಜನರನ್ನು ಬೆಂಕಿಯ ಸ್ಥಳದೊಳಕ್ಕೆ ಎಸೆಯುವರು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.”
మత్తయి సువార్త 13 : 51 (ERVTE)
మత్తయి సువార్త 13 : 52 (ERVTE)
ಯೇಸು ತನ್ನ ಶಿಷ್ಯರಿಗೆ, “ನೀವು ಈ ವಿಷಯಗಳನ್ನೆಲ್ಲಾ ಅರ್ಥಮಾಡಿಕೊಂಡಿರೋ?” ಎಂದು ಕೇಳಿದನು. ಅದಕ್ಕೆ ಶಿಷ್ಯರು, “ನಾವು ಅರ್ಥಮಾಡಿಕೊಂಡೆವು” ಎಂದು ಉತ್ತರಕೊಟ್ಟರು.
మత్తయి సువార్త 13 : 53 (ERVTE)
ಆಗ ಯೇಸು ತನ್ನ ಶಿಷ್ಯರಿಗೆ, “ಹೀಗಿರಲಾಗಿ ಪರಲೋಕರಾಜ್ಯದ ವಿಷಯವಾಗಿ ಬೋಧಿಸಿದಂಥ ಪ್ರತಿಯೊಬ್ಬ ಧರ್ಮೋಪದೇಶಕನು ಒಂದು ಮನೆಯ ಯಜಮಾನನಂತಿದ್ದಾನೆ. ಆ ಮನುಷ್ಯನು ಹೊಸ ವಸ್ತುಗಳನ್ನೂ ಹಳೆಯ ವಸ್ತುಗಳನ್ನೂ ಆ ಮನೆಯಲ್ಲಿ ಶೇಖರಿಸಿಕೊಂಡು ಅವುಗಳನ್ನು ಹೊರಗೆ ತರುವನು” ಎಂದನು. {#1ಸ್ವಂತ ಊರಿಗೆ ಯೇಸುವಿನ ಪ್ರಯಾಣ
(ಮಾರ್ಕ 6:1-6; ಲೂಕ 4:16-30) } ಯೇಸು ಈ ಸಾಮ್ಯಗಳ ಮೂಲಕ ಬೋಧಿಸಿದ ನಂತರ ಅಲ್ಲಿಂದ ತನ್ನ ಸ್ವಂತ ಊರಿಗೆ ಹೋದನು.
మత్తయి సువార్త 13 : 54 (ERVTE)
ಯೇಸು ಸಭಾಮಂದಿರದಲ್ಲಿ ಬೋಧಿಸಿದಾಗ ಜನರು ಬೆರಗಾಗಿ, “ಈ ಜ್ಞಾನವನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವ ಈ ಶಕ್ತಿಯನ್ನು ಎಲ್ಲಿಂದ ಪಡೆದುಕೊಂಡನು?
మత్తయి సువార్త 13 : 55 (ERVTE)
ಇವನು ಕೇವಲ ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳು. ಯಾಕೋಬ, ಯೋಸೇಫ, ಸಿಮೋನ ಮತ್ತು ಯೂದ ಇವನ ಸಹೋದರರು.
మత్తయి సువార్త 13 : 56 (ERVTE)
ಅವನ ಸಹೋದರಿಯರೆಲ್ಲರೂ ನಮ್ಮಲ್ಲಿ ಇದ್ದಾರೆ. ಹೀಗಿರಲು ಇವನು ಈ ಜ್ಞಾನವನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವ ಈ ಶಕ್ತಿಯನ್ನು ಎಲ್ಲಿಂದ ಪಡೆದುಕೊಂಡನು?” ಎಂದು ಮಾತಾಡಿಕೊಂಡು,
మత్తయి సువార్త 13 : 57 (ERVTE)
ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ. ಯೇಸು ಅವರಿಗೆ, “ಪ್ರವಾದಿಗೆ ಪರಜನರು ಮರ್ಯಾದೆ ಸಲ್ಲಿಸುತ್ತಾರೆ; ಆದರೆ ಸ್ವಂತ ಊರಿನವರಾಗಲಿ ಸ್ವಂತ ಮನೆಯವರಾಗಲಿ ಮರ್ಯಾದೆ ಕೊಡುವುದಿಲ್ಲ” ಎಂದು ಹೇಳಿದನು.
మత్తయి సువార్త 13 : 58 (ERVTE)
ಆ ಜನರ ಅವಿಶ್ವಾಸದ ಕಾರಣ ಆತನು ಅಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲಿಲ್ಲ.
❮
❯