మత్తయి సువార్త 24 : 1 (ERVTE)
{#1ನೆಲಸಮವಾಗಲಿರುವ ಮಹಾದೇವಾಲಯ
(ಮಾರ್ಕ 13:1-31; ಲೂಕ 21:5-33) } ಯೇಸು ದೇವಾಲಯದಿಂದ ಹೋಗುತ್ತಿದ್ದಾಗ ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸಲು ಆತನ ಬಳಿಗೆ ಬಂದರು.
మత్తయి సువార్త 24 : 2 (ERVTE)
ಆಗ ಯೇಸು “ಈ ಕಟ್ಟಡಗಳನ್ನೆಲ್ಲ ನೋಡುತ್ತಿದ್ದೀರಾ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇವುಗಳೆಲ್ಲಾ ನಾಶವಾಗುತ್ತವೆ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದಂತೆ ಎಲ್ಲಾ ಕಲ್ಲುಗಳು ಕೆಡವಲ್ಪಡುತ್ತವೆ” ಎಂದು ಹೇಳಿದನು.
మత్తయి సువార్త 24 : 3 (ERVTE)
మత్తయి సువార్త 24 : 4 (ERVTE)
ಬಳಿಕ ಯೇಸು ಆಲಿವ್ ಗುಡ್ಡದ ಮೇಲೆ ಕುಳಿತುಕೊಂಡಿದ್ದಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ! ನೀನು ಈ ಲೋಕಕ್ಕೆ ಮತ್ತೊಮ್ಮೆ ಬರುವಾಗ ಮತ್ತು ಲೋಕದ ಸಮಾಪ್ತಿಯ ಸಮಯ ಬಂದಾಗ ಸೂಚನೆಗಾಗಿ ಏನು ಸಂಭವಿಸುವುದು? ನಮಗೆ ತಿಳಿಸು!” ಎಂದು ಕೇಳಿದರು. ಯೇಸು ಅವರಿಗೆ ಕೊಟ್ಟ ಉತ್ತರವಿದು: “ಎಚ್ಚರವಾಗಿರಿ! ನಿಮ್ಮನ್ನು ಮೋಸಗೊಳಿಸಲು ಯಾರಿಗೂ ಅವಕಾಶ ಕೊಡಬೇಡಿ.
మత్తయి సువార్త 24 : 5 (ERVTE)
ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಪಡಿಸುವರು.
మత్తయి సువార్త 24 : 6 (ERVTE)
ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.
మత్తయి సువార్త 24 : 7 (ERVTE)
ಜನಾಂಗಗಳು ಬೇರೆ ಜನಾಂಗಗಳಿಗೆ ವಿರೋಧವಾಗಿ ಯುದ್ದ ಮಾಡುತ್ತವೆ. ರಾಜ್ಯಗಳು ಬೇರೆಬೇರೆ ರಾಜ್ಯಗಳಿಗೆ ವಿರೋಧವಾಗಿ ಯುದ್ಧ ಮಾಡುತ್ತವೆ. ಬರಗಾಲಗಳು ಬರುತ್ತವೆ. ಬೇರೆಬೇರೆ ಸ್ಥಳಗಳಲ್ಲಿ ಭೂಕಂಪಗಳು ಆಗುತ್ತವೆ.
మత్తయి సువార్త 24 : 8 (ERVTE)
ಇವೆಲ್ಲಾ ಪ್ರಸವವೇದನೆಯ ಆರಂಭವಷ್ಟೇ.
మత్తయి సువార్త 24 : 9 (ERVTE)
“ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು.
మత్తయి సువార్త 24 : 10 (ERVTE)
ಆ ಸಮಯದಲ್ಲಿ ಅನೇಕ ವಿಶ್ವಾಸಿಗಳು ತಮ್ಮ ನಂಬಿಕೆಯನ್ನು ಕಳೆದುಕೊಳ್ಳುವರು. ಅವರು ಒಬ್ಬರಿಗೊಬ್ಬರಿಗೆ ವಿರೋಧವಾಗಿ ತಿರುಗಿಕೊಂಡು ಒಬ್ಬರನ್ನೊಬ್ಬರು ದ್ವೇಷಿಸುವರು.
మత్తయి సువార్త 24 : 11 (ERVTE)
ಅನೇಕ ಸುಳ್ಳುಪ್ರವಾದಿಗಳು ಬಂದು ಎಷ್ಟೋ ಜನರನ್ನು ವಂಚಿಸುವರು.
మత్తయి సువార్త 24 : 12 (ERVTE)
ಲೋಕದಲ್ಲಿ ದುಷ್ಟತನವು ಹೆಚ್ಚಾಗಿ ಬಹುಜನ ವಿಶ್ವಾಸಿಗಳ ಪ್ರೀತಿಯು ಅಡಗಿಹೋಗುವುದು.
మత్తయి సువార్త 24 : 13 (ERVTE)
ಆದರೆ ಕಡೆಯವರೆಗೂ ದೃಢವಾಗಿರುವವನು ರಕ್ಷಣೆಹೊಂದುತ್ತಾನೆ.
మత్తయి సువార్త 24 : 14 (ERVTE)
ದೇವರ ರಾಜ್ಯದ ಶುಭವಾರ್ತೆಯನ್ನು ಲೋಕದಲ್ಲೆಲ್ಲಾ ಪ್ರತಿ ಜನಾಂಗಕ್ಕೂ ಸಾರಲಾಗುವುದು. ಆಗ ಅಂತ್ಯವು ಬರುತ್ತದೆ.
మత్తయి సువార్త 24 : 15 (ERVTE)
“ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು[* ಭಯಂಕರವಾದ … ವಸ್ತುವೊಂದನ್ನು ನೋಡಿರಿ: ದಾನಿಯೇಲ 9:27; 12: 11 ] ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)
మత్తయి సువార్త 24 : 16 (ERVTE)
ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ.
మత్తయి సువార్త 24 : 17 (ERVTE)
ಮಾಳಿಗೆಯ ಮೇಲಿರುವವನು ಇಳಿದು ತನ್ನ ವಸ್ತುಗಳನ್ನು ಮನೆಯಿಂದ ತೆಗೆದುಕೊಳ್ಳದೆ ಓಡಿಹೋಗಲಿ.
మత్తయి సువార్త 24 : 18 (ERVTE)
ಹೊಲದಲ್ಲಿರುವವನು ತನ್ನ ಮೇಲಂಗಿಯನ್ನು ತೆಗೆದುಕೊಳ್ಳುವುದಕ್ಕಾಗಿ ಮನೆಗೆ ಹಿಂತಿರುಗದಿರಲಿ.
మత్తయి సువార్త 24 : 19 (ERVTE)
“ಆ ಸಮಯದಲ್ಲಿ ಗರ್ಭಿಣಿಯರಿಗೂ ಮೊಲೆಕೂಸುಗಳಿರುವ ಸ್ತ್ರೀಯರಿಗೂ ಎಂಥಾ ಗೋಳಾಟ!
మత్తయి సువార్త 24 : 20 (ERVTE)
ನೀವು ಓಡಿಹೋಗಬೇಕಾದ ಈ ಸಮಯವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಾಗಲಿ ಬರದಂತೆ ಪ್ರಾರ್ಥಿಸಿರಿ.
మత్తయి సువార్త 24 : 21 (ERVTE)
ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.
మత్తయి సువార్త 24 : 22 (ERVTE)
మత్తయి సువార్త 24 : 23 (ERVTE)
“ದೇವರು ಭಯಂಕರವಾದ ಆ ಸಮಯವನ್ನು ಕಡಿಮೆಗೊಳಿಸಲು ತೀರ್ಮಾನಿಸಿದ್ದಾನೆ. ಇಲ್ಲವಾದರೆ, ಜೀವದಿಂದ ಉಳಿಯಲು ಯಾರಿಗೂ ಸಾಧ್ಯವಿಲ್ಲ. ತಾನು ಆರಿಸಿಕೊಂಡ ಜನರ ನಿಮಿತ್ತ ದೇವರು ಆ ಸಮಯವನ್ನು ಕಡಿಮೆ ಮಾಡಿದ್ದಾನೆ. “ಆ ಸಮಯದಲ್ಲಿ ಕೆಲವರು ನಿಮಗೆ, ‘ನೋಡಿ, ಕ್ರಿಸ್ತನು ಅಲ್ಲಿದ್ದಾನೆ!’ ಎಂದು ಹೇಳಬಹುದು. ಇಲ್ಲವೆ ಬೇರೊಬ್ಬನು, ‘ಆತನು ಇಲ್ಲಿದ್ದಾನೆ!’ ಎಂದು ಹೇಳಬಹುದು. ಆದರೆ ಅವರನ್ನು ನಂಬಬೇಡಿ.
మత్తయి సువార్త 24 : 24 (ERVTE)
ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.
మత్తయి సువార్త 24 : 25 (ERVTE)
ಅದು ಸಂಭವಿಸುವುದಕ್ಕೆ ಮುಂಚೆಯೇ ನಾನು ಅದರ ವಿಷಯವಾಗಿ ನಿಮಗೆ ಎಚ್ಚರಿಕೆ ಕೊಟ್ಟಿದ್ದೇನೆ.
మత్తయి సువార్త 24 : 26 (ERVTE)
“ ‘ಕ್ರಿಸ್ತನು ಅಡವಿಯಲ್ಲಿದ್ದಾನೆ!’ ಎಂದು ಕೆಲವರು ಹೇಳಿದರೆ ಅಡವಿಗೆ ಹೋಗಬೇಡಿ. ‘ಕ್ರಿಸ್ತನು ಆ ಕೋಣೆ ಒಳಗೆ ಇದ್ದಾನೆ!’ ಎಂದು ಹೇಳಿದರೆ ಅದನ್ನು ನಂಬಬೇಡಿ.
మత్తయి సువార్త 24 : 27 (ERVTE)
ಮನುಷ್ಯಕುಮಾರನು ಜನರಿಗೆಲ್ಲ ಕಾಣಿಸುವಂತೆ ಬರುತ್ತಾನೆ. ಮನುಷ್ಯಕುಮಾರನ ಪ್ರತ್ಯಕ್ಷತೆಯು ಆಕಾಶದಲ್ಲಿ ಮಿಂಚು ಹೊಳೆಯುವಂತೆ ಪ್ರಕಾಶಿಸುತ್ತಾ ಲೋಕದ ಎಲ್ಲಾ ಕಡೆಗಳಲ್ಲೂ ಕಾಣಿಸುವುದು.
మత్తయి సువార్త 24 : 28 (ERVTE)
ಹದ್ದುಗಳು ಎಲ್ಲಿ ಕೂಡಿಬರುತ್ತವೆಯೋ ಅಲ್ಲಿ ಹೆಣವಿರುತ್ತದೆ ಎಂಬುದು ನಿಮಗೆ ಗೊತ್ತೇ ಇದೆ. ಅದೇ ರೀತಿ ನನ್ನ ಬರುವಿಕೆಯೂ ಸ್ಪಷ್ಟವಾಗಿರುವುದು.
మత్తయి సువార్త 24 : 29 (ERVTE)
“ಆ ದಿನಗಳ ಸಂಕಟವು ತೀರಿದ ಕೂಡಲೇ, ‘ಸೂರ್ಯನು ಕತ್ತಲಾಗುವನು. ಚಂದ್ರನು ಕಾಂತಿಹೀನನಾಗುವನು. ನಕ್ಷತ್ರಗಳು ಆಕಾಶದಿಂದ ಕಳಚಿಬೀಳುವವು. ಆಕಾಶಮಂಡಲವು ಕಂಪಿಸುವುದು.’ --ಯೆಶಾಯ 13:10; 34:45--
మత్తయి సువార్త 24 : 30 (ERVTE)
“ಆಗ ಮನುಷ್ಯಕುಮಾರನ ಆಗಮನದ ಸೂಚನೆಯು ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಲೋಕದ ಜನರೆಲ್ಲಾ ಗೋಳಾಡುವರು. ಆಕಾಶದಲ್ಲಿ ಮೇಘಗಳ ಮೇಲೆ ಆತನು ಬರುವುದನ್ನು ಜನರೆಲ್ಲರೂ ನೋಡುವರು. ಆತನು ಶಕ್ತಿಸಾಮರ್ಥ್ಯದಿಂದಲೂ ಮಹಿಮೆಯಿಂದಲೂ ಬರುವನು.
మత్తయి సువార్త 24 : 31 (ERVTE)
ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.
మత్తయి సువార్త 24 : 32 (ERVTE)
“ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸುರಾಗಿ ಎಳೆಯದಾಗಿದ್ದು ಹೊಸ ಎಲೆಗಳು ಬೆಳೆಯುವುದಕ್ಕೆ ಪ್ರಾರಂಭಿಸಿದಾಗ, ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.
మత్తయి సువార్త 24 : 33 (ERVTE)
ನಾನು ನಿಮಗೆ ಹೇಳಿದ ಈ ಸಂಗತಿಗಳಿಗೂ ಅದು ಅನ್ವಯಿಸುತ್ತದೆ. ಈ ಸಂಗತಿಗಳೆಲ್ಲಾ ಸಂಭವಿಸುತ್ತಿರುವುದನ್ನು ನೀವು ನೋಡುವಾಗ ಆ ಸಮಯ ಹತ್ತಿರವಾಯಿತೆಂದೂ ಬರುವುದಕ್ಕೆ ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳುವಿರಿ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ.
మత్తయి సువార్త 24 : 34 (ERVTE)
ಇಂದಿನ ಜನರು ಇನ್ನೂ ಜೀವಿಸಿರುವಾಗಲೇ ಈ ಎಲ್ಲಾ ಸಂಗತಿಗಳು ಸಂಭವಿಸುತ್ತವೆ!
మత్తయి సువార్త 24 : 35 (ERVTE)
ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!
మత్తయి సువార్త 24 : 36 (ERVTE)
{#1ಆ ಸಮಯ ದೇವರೊಬ್ಬನಿಗೆ ಗೊತ್ತಿದೆ
(ಮಾರ್ಕ 13:32-37; ಲೂಕ 17:26-30; 34-36) }
మత్తయి సువార్త 24 : 37 (ERVTE)
“ಆ ದಿನವು ಇಲ್ಲವೆ ಆ ಸಮಯವು ಯಾವಾಗ ಬರುತ್ತದೆ ಎಂಬುದು ಯಾರಿಗೂ ತಿಳಿಯದು. ಮಗನಿಗೂ ಮತ್ತು ಪರಲೋಕದಲ್ಲಿರುವ ದೇವದೂತರಿಗೂ ಆ ದಿನವು ಅಥವಾ ಆ ಸಮಯವು ಯಾವಾಗ ಬರುತ್ತದೆ ಎಂಬುದು ತಿಳಿಯದು. ತಂದೆಗೆ ಮಾತ್ರ ಗೊತ್ತಿದೆ. “ನೋಹನ ಕಾಲದಲ್ಲಿ ಸಂಭವಿಸಿದಂತೆಯೇ ಮನುಷ್ಯಕುಮಾರನು ಬರುವಾಗಲೂ ಸಂಭವಿಸುತ್ತದೆ.
మత్తయి సువార్త 24 : 38 (ERVTE)
ಜಲಪ್ರಳಯಕ್ಕಿಂತ ಮುಂಚೆ ಜನರು ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಮದುವೆಯಾಗುತ್ತಿದ್ದರು ಮತ್ತು ತಮ್ಮ ಮಕ್ಕಳಿಗೂ ಮದುವೆ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯೊಳಗೆ ಹೋಗುವ ತನಕ ಜನರು ಅವುಗಳನ್ನು ಮಾಡುತ್ತಲೇ ಇದ್ದರು.
మత్తయి సువార్త 24 : 39 (ERVTE)
ಏನು ಸಂಭವಿಸುತ್ತಿದೆ ಎಂಬುದು ಅವರಿಗೆ ತಿಳಿದಿರಲಿಲ್ಲ. ಆಗ ಜಲಪ್ರಳಯವು ಬಂದು ಆ ಜನರನ್ನೆಲ್ಲಾ ನಾಶಮಾಡಿತು. “ಮನುಷ್ಯಕುಮಾರನು ಬರುವಾಗಲೂ ಅದೇ ರೀತಿಯಾಗುವುದು.
మత్తయి సువార్త 24 : 40 (ERVTE)
ಹೊಲದಲ್ಲಿ ಇಬ್ಬರು ಒಟ್ಟಿಗೆ ಕೆಲಸ ಮಾಡುತ್ತಿದ್ದರೆ ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.
మత్తయి సువార్త 24 : 41 (ERVTE)
ಇಬ್ಬರು ಹೆಂಗಸರು ಬೀಸುವ ಕಲ್ಲಿನಲ್ಲಿ ಧಾನ್ಯ ಬೀಸುತ್ತಿದ್ದರೆ ಅವರಲ್ಲಿ ಒಬ್ಬಳನ್ನು ತೆಗೆದುಕೊಳ್ಳಲಾಗುವುದು ಮತ್ತೊಬ್ಬಳನ್ನು ಬಿಡಲಾಗುವುದು.
మత్తయి సువార్త 24 : 42 (ERVTE)
“ಆದ್ದರಿಂದ ಯಾವಾಗಲೂ ಸಿದ್ಧವಾಗಿರಿ. ನಿಮ್ಮ ಪ್ರಭು ಬರುವ ದಿನ ನಿಮಗೆ ತಿಳಿಯದು.
మత్తయి సువార్త 24 : 43 (ERVTE)
ಇದನ್ನು ಜ್ಞಾಪಿಸಿಕೊಳ್ಳಿ. ಕಳ್ಳನು ಯಾವಾಗ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ಕಳ್ಳನನ್ನು ಮನೆಯೊಳಗೆ ಬರಗೊಡಿಸುತ್ತಿರಲಿಲ್ಲ.
మత్తయి సువార్త 24 : 44 (ERVTE)
ಆದ್ದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಸಮಯದಲ್ಲಿ ಮನುಷ್ಯಕುಮಾರನು ಬರುತ್ತಾನೆ.
మత్తయి సువార్త 24 : 45 (ERVTE)
{#1ಒಳ್ಳೆಯ ಸೇವಕ ಮತ್ತು ದುಷ್ಟ ಸೇವಕ
(ಲೂಕ 12:41-48; 34-36) } “ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ.
మత్తయి సువార్త 24 : 46 (ERVTE)
ತನಗೆ ಕೊಟ್ಟ ಕೆಲಸವನ್ನು ಮಾಡುತ್ತಿರುವಾಗ ಯಜಮಾನನು ಬಂದರೆ ಆ ಸೇವಕನಿಗೆ ಬಹಳ ಸಂತೋಷವಾಗುತ್ತದೆ.
మత్తయి సువార్త 24 : 47 (ERVTE)
ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಆ ಯಜಮಾನನು ತನ್ನ ಆಸ್ತಿಗೆಲ್ಲಾ ಆ ಸೇವಕನನ್ನು ಮೇಲ್ವಿಚಾರಕನನ್ನಾಗಿ ನೇಮಿಸುವನು.
మత్తయి సువార్త 24 : 48 (ERVTE)
“ಆದರೆ ಸೇವಕನು ದುಷ್ಟನಾಗಿದ್ದರೆ ಮತ್ತು ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದು ನೆನಸಿಕೊಂಡಿದ್ದರೆ ಅವನಿಗೆ ಏನು ಸಂಭವಿಸುತ್ತದೆ?
మత్తయి సువార్త 24 : 49 (ERVTE)
ಆ ಸೇವಕನು ಇತರ ಸೇವಕರನ್ನು ಹೊಡೆಯುತ್ತಾ ತನ್ನಂಥ ಜನರೊಂದಿಗೆ ಸೇರಿಕೊಂಡು ತಿನ್ನುತ್ತಾ ಕುಡಿಯುತ್ತಾ ಇರುವನು.
మత్తయి సువార్త 24 : 50 (ERVTE)
ಹೀಗೆ ಅವನಿನ್ನೂ ಸಿದ್ಧನಾಗಿಲ್ಲದಿರುವಾಗ ಯಜಮಾನನು ಅನಿರೀಕ್ಷಿತವಾಗಿ ಬಂದು
మత్తయి సువార్త 24 : 51 (ERVTE)
ಅವನನ್ನು ಶಿಕ್ಷಿಸಿ ಕಪಟಿಗಳಿರುವ ಸ್ಥಳಕ್ಕೆ ನೂಕಿಸುವನು. ಆ ಸ್ಥಳದಲ್ಲಿ ಜನರು ಬಾಧೆಯಿಂದ ಗೋಳಾಡುತ್ತಾ ತಮ್ಮ ಹಲ್ಲುಗಳನ್ನು ಕಡಿಯುತ್ತಾ ಇರುವರು.
❮
❯