మత్తయి సువార్త 28 : 1 (ERVTE)
{#1ಯೇಸುವಿನ ಪುನರುತ್ಥಾನ
(ಮಾರ್ಕ 16:1-8; ಲೂಕ 24:1-12; ಯೋಹಾನ 20:1-10) }
మత్తయి సువార్త 28 : 2 (ERVTE)
ಸಬ್ಬತ್ ದಿನ ಕಳೆದಿತ್ತು. ಭಾನುವಾರ ಬೆಳಗಾಗುವುದರಲ್ಲಿತ್ತು. ಮಗ್ಧಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಹೋದರು. ಆಗ ಭೀಕರ ಭೂಕಂಪವಾಯಿತು. ಪ್ರಭುವಿನ ದೂತನೊಬ್ಬನು ಆಕಾಶದಿಂದ ಇಳಿದುಬಂದನು. ಆ ದೇವದೂತನು ಸಮಾಧಿಯ ಬಳಿಗೆ ಹೋಗಿ, ಸಮಾಧಿಯ ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಆ ಬಂಡೆಯ ಮೇಲೆ ಕುಳಿತುಕೊಂಡನು.
మత్తయి సువార్త 28 : 3 (ERVTE)
ದೇವದೂತನು ಮಿಂಚಿನಂತೆ ಪ್ರಕಾಶಿಸುತ್ತಿದ್ದನು. ಅವನ ಬಟ್ಟೆಗಳು ಮಂಜಿನಂತೆ ಬಿಳುಪಾಗಿದ್ದವು.
మత్తయి సువార్త 28 : 4 (ERVTE)
ಸಮಾಧಿಯನ್ನು ಕಾಯುತ್ತಿದ್ದ ಸೈನಿಕರು ದೇವದೂತನನ್ನು ಕಂಡು ಬಹಳವಾಗಿ ಹೆದರಿ ಭಯದಿಂದ ನಡುಗುತ್ತಾ ಸತ್ತಂತಾದರು.
మత్తయి సువార్త 28 : 5 (ERVTE)
ದೇವದೂತನು ಆ ಸ್ತ್ರೀಯರಿಗೆ, “ಹೆದರಬೇಡಿ, ಶಿಲುಬೆಗೇರಿಸಲ್ಪಟ್ಟ ಯೇಸುವನ್ನು ನೀವು ಹುಡುಕುತ್ತಿದ್ದೀರೆಂಬುದು ನನಗೆ ತಿಳಿದಿದೆ.
మత్తయి సువార్త 28 : 6 (ERVTE)
ಆದರೆ ಯೇಸು ಇಲ್ಲಿಲ್ಲ. ಆತನು ತಾನು ತಿಳಿಸಿದ್ದಂತೆಯೇ ಪುನರುತ್ಥಾನ ಹೊಂದಿದ್ದಾನೆ. ಬನ್ನಿ, ಆತನ ದೇಹವಿದ್ದ ಸ್ಥಳವನ್ನು ನೋಡಿ.
మత్తయి సువార్త 28 : 7 (ERVTE)
ಬೇಗನೆ ಹೋಗಿ ಆತನ ಶಿಷ್ಯರಿಗೆ, ‘ಯೇಸು ಪುನರುತ್ಥಾನ ಹೊಂದಿದ್ದಾನೆ. ಆತನು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ನಿಮಗಿಂತ ಮುಂಚೆಯೇ ಆತನು ಅಲ್ಲಿರುತ್ತಾನೆ. ನೀವು ಆತನನ್ನು ಅಲ್ಲಿ ನೋಡುತ್ತೀರಿ’ ಎಂದು ಹೇಳಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ” ಎಂದನು.
మత్తయి సువార్త 28 : 8 (ERVTE)
ಕೂಡಲೇ ಆ ಸ್ತ್ರೀಯರು ಭಯದಿಂದಲೂ ಸಂತೋಷದಿಂದಲೂ ಸಮಾಧಿಯಿಂದ ಹೊರಟರು. ನಡೆದ ಸಂಗತಿಯನ್ನು ಶಿಷ್ಯರಿಗೆ ತಿಳಿಸಲು ಅವರು ಓಡಿಹೋಗುತ್ತಿರಲು,
మత్తయి సువార్త 28 : 9 (ERVTE)
ಯೇಸು ಅವರ ಮುಂದೆ ಪ್ರತ್ಯಕ್ಷನಾಗಿ, “ನಿಮಗೆ ಶುಭವಾಗಲಿ” ಎಂದನು. ಆ ಸ್ತ್ರೀಯರು ಯೇಸುವಿನ ಬಳಿಗೆ ಹೋಗಿ, ಆತನ ಪಾದಗಳನ್ನು ಹಿಡಿದುಕೊಂಡು ಆತನನ್ನು ಆರಾಧಿಸಿದರು.
మత్తయి సువార్త 28 : 10 (ERVTE)
ಯೇಸು ಆ ಸ್ತ್ರೀಯರಿಗೆ, “ಹೆದರಬೇಡಿ, ನನ್ನ ಸಹೋದರರ ಬಳಿಗೆ ಹೋಗಿ ಗಲಿಲಾಯಕ್ಕೆ ಬರಲು ತಿಳಿಸಿರಿ. ಅವರು ನನ್ನನ್ನು ಅಲ್ಲಿ ಕಾಣುವರು” ಎಂದು ಹೇಳಿದನು.
మత్తయి సువార్త 28 : 11 (ERVTE)
{#1ಯೆಹೂದ್ಯ ನಾಯಕರಿಗೆ ಬಂದ ವರದಿ } ಆ ಸ್ತ್ರೀಯರು ಶಿಷ್ಯರಿಗೆ ತಿಳಿಸಲು ಹೋದರು. ಇತ್ತ ಸಮಾಧಿಯನ್ನು ಕಾಯುತ್ತಿದ್ದ ಕೆಲವು ಸೈನಿಕರು ನಗರದೊಳಕ್ಕೆ ಹೋಗಿ ನಡೆದ ಸಂಗತಿಯನ್ನೆಲ್ಲಾ ಮಹಾಯಾಜಕರಿಗೆ ತಿಳಿಸಿದರು.
మత్తయి సువార్త 28 : 12 (ERVTE)
ಆಗ ಮಹಾಯಾಜಕರು ಹಿರಿಯ ಯೆಹೂದ್ಯರನ್ನು ಭೇಟಿಮಾಡಿ ಚರ್ಚಿಸಿದರು ಮತ್ತು ಸೈನಿಕರಿಗೆ ಹೆಚ್ಚು ಹಣಕೊಟ್ಟು ಅವರಿಂದ ಸುಳ್ಳು ಹೇಳಿಸುವ ಉಪಾಯವನ್ನು ಮಾಡಿದರು.
మత్తయి సువార్త 28 : 13 (ERVTE)
ಅವರು ಸೈನಿಕರಿಗೆ, “ರಾತ್ರಿ ವೇಳೆಯಲ್ಲಿ ನಾವು ನಿದ್ರಿಸುತ್ತಿದ್ದಾಗ ಯೇಸುವಿನ ಶಿಷ್ಯರು ಬಂದು ಅವನ ದೇಹವನ್ನು ಕದ್ದೊಯ್ದರೆಂದು ಜನರಿಗೆ ತಿಳಿಸಿರಿ.
మత్తయి సువార్త 28 : 14 (ERVTE)
ಇದು ರಾಜ್ಯಪಾಲನಿಗೆ ಗೊತ್ತಾದರೂ ನಾವು ಅವನನ್ನು ಸಮಾಧಾನಪಡಿಸುತ್ತೇವೆ ಮತ್ತು ನಿಮಗೇನೂ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಹೇಳಿದರು.
మత్తయి సువార్త 28 : 15 (ERVTE)
ಸೈನಿಕರು ಹಣವನ್ನು ತೆಗೆದುಕೊಂಡು, ಅವರು ಹೇಳಿದಂತೆಯೇ ಮಾಡಿದರು. ಈ ಕಥೆಯು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿಕೊಂಡಿದೆ.
మత్తయి సువార్త 28 : 16 (ERVTE)
{#1ಯೇಸು ತನ್ನ ಶಿಷ್ಯರಿಗೆ ಹೇಳಿದ ಕಡೆಯ ಮಾತುಗಳು
(ಮಾರ್ಕ 16:14-18; ಲೂಕ 24:36-49; ಯೋಹಾನ 20:19-23; ಅಪೊ. ಕಾರ್ಯ. 1:6-8) } ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೊರಟು ಯೇಸು ತಿಳಿಸಿದ್ದ ಬೆಟ್ಟಕ್ಕೆ ಬಂದರು.
మత్తయి సువార్త 28 : 17 (ERVTE)
ಶಿಷ್ಯರು ಬೆಟ್ಟದ ಮೇಲೆ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು. ಆದರೆ ಕೆಲವು ಶಿಷ್ಯರು ಆತನೇ ನಿಜವಾದ ಯೇಸು ಎಂಬುದನ್ನು ನಂಬಲಿಲ್ಲ.
మత్తయి సువార్త 28 : 18 (ERVTE)
ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.
మత్తయి సువార్త 28 : 19 (ERVTE)
ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ.
మత్తయి సువార్త 28 : 20 (ERVTE)
ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20