మీకా 1 : 1 (ERVTE)
{#1ಇಸ್ರೇಲ್ ಮತ್ತು ಸಮಾರ್ಯವು ಶಿಕ್ಷಿಸಲ್ಪಡಬೇಕು } ಯೆಹೋವನ ಮಾತುಗಳು ಮೀಕನಿಗೆ ಬಂದವು. ಅರಸರಾದ ಯೋಥಾಮ, ಅಹಾಜ ಮತ್ತು ಹಿಜ್ಕೀಯರ ಆಳ್ವಿಕೆಯ ಸಮಯದಲ್ಲಿ ಇದು ನಡೆಯಿತು. ಇವರು ಯೆಹೂದ ರಾಜ್ಯದ ಅರಸರು. ಮೀಕನು ಮೋರೆಷೆತ್‌ನವನು. ಇವನು ಸಮಾರ್ಯ ಮತ್ತು ಜೆರುಸಲೇಮಿನ ವಿಷಯವಾಗಿ ದೇವದರ್ಶನವನ್ನು ಹೊಂದಿದನು.
మీకా 1 : 2 (ERVTE)
ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.
మీకా 1 : 3 (ERVTE)
ಯೆಹೋವನು ತನ್ನ ಸ್ಥಳದಿಂದ ಹೊರಟು ಬರುವುದನ್ನು ನೋಡಿರಿ. ಆತನು ಲೋಕದ ಬೆಟ್ಟಗಳ ಮೇಲೆ ನಡೆಯಲು ಬರುತ್ತಿದ್ದಾನೆ.
మీకా 1 : 4 (ERVTE)
ಬೆಂಕಿಯಲ್ಲಿ ಮೇಣವು ಕರಗುವಂತೆ ಬೆಟ್ಟಗಳು ಆತನ ಪಾದದಡಿಯಿಂದ ಕರಗಿಹೋಗುತ್ತವೆ. ತಗ್ಗುಗಳು ಇಬ್ಭಾಗವಾಗಿ ನೀರಿನಂತೆ ಕಡಿದಾದ ಸ್ಥಳದಿಂದ ಹರಿದುಹೋಗುತ್ತವೆ.
మీకా 1 : 5 (ERVTE)
ಇದಕ್ಕೆಲ್ಲಾ ಕಾರಣ ಯಾಕೋಬನ ಪಾಪಗಳೇ, ಇಸ್ರೇಲರ ದ್ರೋಹಗಳೇ! {#1ಪಾಪಕ್ಕೆ ಕಾರಣ ಸಮಾರ್ಯವೇ } ಯಾಕೋಬು ಪಾಪಮಾಡಿದ್ದಕ್ಕೆ ಕಾರಣವೇನು? ಸಮಾರ್ಯವೇ ಕಾರಣ. ಯೆಹೂದದ ಎತ್ತರವಾದ ಸ್ಥಳ ಯಾವುದು?[* ಎತ್ತರವಾದ ಸ್ಥಳ ಪೂಜಾಸ್ಥಳ. ] ಅದೇ ಜೆರುಸಲೇಮ್.
మీకా 1 : 6 (ERVTE)
ಆದ್ದರಿಂದ ನಾನು ಸಮಾರ್ಯವನ್ನು ಕಲ್ಲಿನ ರಾಶಿಯನ್ನಾಗಿ ಮಾಡುವೆನು. ಅದು ದ್ರಾಕ್ಷಿಬಳ್ಳಿ ನೆಡಲು ಸಿದ್ಧವಾಗುವುದು. ಸಮಾರ್ಯದ ಕಲ್ಲುಗಳನ್ನೆಲ್ಲಾ ತಗ್ಗಿಗೆ ನೂಕಿಬಿಡುವೆನು; ಆಗ ಅಲ್ಲಿ ಕೇವಲ ಅಸ್ತಿವಾರಗಳು ಕಾಣುವವು.
మీకా 1 : 7 (ERVTE)
ಆಕೆಯ ವಿಗ್ರಹಗಳೆಲ್ಲಾ ಒಡೆದು ಪುಡಿಮಾಡಲ್ಪಡುವವು. ಆಕೆಯ ಸೂಳೆತನದ ಹಣವು ಬೆಂಕಿಯಲ್ಲಿ ಸುಡಲ್ಪಡುವುದು. ಆಕೆಯ ಸುಳ್ಳುದೇವರ ವಿಗ್ರಹಗಳನ್ನೆಲ್ಲಾ ನಾಶಮಾಡುವೆನು. ಯಾಕೆಂದರೆ ಸಮಾರ್ಯ ನನಗೆ ಅಪನಂಬಿಗಸ್ತಳಾಗಿ ಧನಿಕಳಾದಳು. ನನಗೆ ನಂಬಿಗಸ್ತರಲ್ಲದವರು ಆಕೆಯಿಂದ ಅದನ್ನು ಕಸಿದುಕೊಳ್ಳುವರು.
మీకా 1 : 8 (ERVTE)
{#1ಮೀಕನ ಮಹಾ ದುಃಖ } ಮುಂದೆ ಸಂಭವಿಸುವ ಘಟನೆಗಳ ಬಗ್ಗೆ ನಾನು ಬಹಳ ದುಃಖಿತನಾಗಿದ್ದೇನೆ. ನಾನು ಬಟ್ಟೆಯನ್ನಾಗಲಿ ಚಪ್ಪಲಿಯನ್ನಾಗಲಿ ಹಾಕಿಕೊಳ್ಳದೇ ಹೋಗುವೆನು. ನಾಯಿಯಂತೆ ಅಳುವೆನು, ಪಕ್ಷಿಯಂತೆ ಗೋಳಾಡುವೆನು.
మీకా 1 : 9 (ERVTE)
ಸಮಾರ್ಯದ ಗಾಯವು ವಾಸಿಯಾಗದು. ಆಕೆಯ ರೋಗವು (ಪಾಪ) ಯೆಹೂದಕ್ಕೆ ಹಬ್ಬಿಯದೆ. ಅದು ನನ್ನ ಜನರ ಪಟ್ಟಣದ ಹೆಬ್ಬಾಗಿಲಿನವರೆಗೆ ಹೋಗಿದೆ. ಜೆರುಸಲೇಮಿನ ತನಕ ಪಸರಿಸಿಯದೆ.
మీకా 1 : 10 (ERVTE)
ಇದನ್ನು ಗತ್‌ನಲ್ಲಿ ತಿಳಿಸಬೇಡಿ. ಅಕ್ಕೊದಲ್ಲಿ ಅಳಬೇಡಿರಿ. ಬೆತ್ ಒಫ್ರದ ಧೂಳಿನಲ್ಲಿ ಹೊರಳಾಡಿರಿ.
మీకా 1 : 11 (ERVTE)
ಶಾಫೀರ್‌ನಲ್ಲಿ ವಾಸಿಸುವವರೇ, ಬೆತ್ತಲೆಯಾಗಿ ನಾಚಿಕೆಯಿಂದ ನಡೆಯಿರಿ. ಚಾನಾನ್‌ನಲ್ಲಿ ವಾಸಿಸುವವರು ಹೊರಗೆ ಬರುವದಿಲ್ಲ. ಬೇತೇಚೆಲಿನ ಜನರು ಅಳುವರು, ನಿಮಗೆ ಅವರು ನೀಡುತ್ತಿದ್ದ ಬೆಂಬಲವನ್ನು ಹಿಂತೆಗೆದುಕೊಳ್ಳುವರು.
మీకా 1 : 12 (ERVTE)
ಮಾರೊತ್‌ನಲ್ಲಿ ವಾಸಿಸುವ ಜನರು ಬಲಹೀನರಾಗಿದ್ದಾರೆ. ಅವರು ಶುಭವಾರ್ತೆಗಾಗಿ ಕಾಯುತ್ತಿದ್ದಾರೆ. ಯಾಕೆಂದರೆ ಜೆರುಸಲೇಮಿನ ನಗರ ದ್ವಾರದ ಬಳಿಗೆ ಯೆಹೋವನಿಂದ ಆಪತ್ತು ಬಂದಿದೆ.
మీకా 1 : 13 (ERVTE)
ಲಾಕೀಷಿನ ಸ್ತ್ರೀಯೇ, ವೇಗವಾಗಿ ಓಡುವ ಕುದುರೆಯನ್ನು ನಿನ್ನ ಬಂಡಿಗೆ ಬಿಗಿ. ಚೀಯೋನಿನ ಪಾಪವು ಲಾಕೀಷಿನಲ್ಲಿ ಪ್ರಾರಂಭವಾಯಿತು. ಯಾಕೆಂದರೆ ನೀನು ಇಸ್ರೇಲಿನ ಪಾಪವನ್ನು ಅನುಸರಿಸಿದಿ.
మీకా 1 : 14 (ERVTE)
ಆದ್ದರಿಂದ ಗತ್‌ನಲ್ಲಿರುವ ಮೋರೆಷತ್‌ಗೆ ಬೀಳ್ಕೊಡುವ ಕಾಣಿಕೆಗಳನ್ನು ಕೊಡು. ಅಕ್ಜೀಬಿನ ಕುಟುಂಬಗಳು ಇಸ್ರೇಲ್ ಅರಸರನ್ನು ಮೋಸಪಡಿಸುವವು.
మీకా 1 : 15 (ERVTE)
ಮಾರೇಷದಲ್ಲಿ ವಾಸಿಸುವ ಜನರೇ, ನಿಮಗೆ ವಿರುದ್ಧವಾಗಿ ನಾನು ಒಬ್ಬ ವ್ಯಕ್ತಿಯನ್ನು ಕರೆತರುವೆನು. ಅವನು ನಿಮ್ಮ ಬಳಿಯಲ್ಲಿರುವ ವಸ್ತುಗಳನ್ನು ಕಿತ್ತುಕೊಳ್ಳುವನು. ಇಸ್ರೇಲಿನ ಮಹಿಮೆಯು (ದೇವರ) ಅದುಲ್ಲಾಮಿಗೆ ಬರುವದು.
మీకా 1 : 16 (ERVTE)
ನಿನ್ನ ಕೂದಲನ್ನು ಬೋಳಿಸು; ಯಾಕೆಂದರೆ ನೀನು ಪ್ರೀತಿಸುವ ಮಕ್ಕಳಿಗಾಗಿ ನೀನು ಅಳುವೆ. ಗಿಡುಗನಂತೆ ನಿನ್ನ ತಲೆ ಬೋಳಾಗಲಿ. ನಿನ್ನ ದುಃಖವನ್ನು ಪ್ರದರ್ಶಿಸು. ಯಾಕೆಂದರೆ ನಿನ್ನ ಮಕ್ಕಳು ನಿನ್ನಿಂದ ತೆಗೆಯಲ್ಪಡುವರು.
❮
❯
1
2
3
4
5
6
7
8
9
10
11
12
13
14
15
16