మీకా 7 : 1 (ERVTE)
{#1ಜನರ ದುಷ್ಟತನವನ್ನು ನೋಡಿ ಮೀಕನಿಗಾದ ಬೇಸರ } ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷಿಹಣ್ಣಿನಂತಿದ್ದೇನೆ. ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.
మీకా 7 : 2 (ERVTE)
ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.
మీకా 7 : 3 (ERVTE)
ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.
మీకా 7 : 4 (ERVTE)
ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. {#1ಶಿಕ್ಷೆಯ ದಿನ ಬರುತ್ತಿದೆ } ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವೆ. ನೀನು ಈಗ ಗಲಿಬಿಲಿಗೆ ಒಳಗಾಗುವೆ!
మీకా 7 : 5 (ERVTE)
ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ! ನಿನ್ನ ಸ್ನೇಹಿತನ ಮೇಲೆ ಭರವಸವಿಡಬೇಡ! ನಿನ್ನ ಹೆಂಡತಿಯೊಂದಿಗೂ ನಿನ್ನ ಮನಸ್ಸಿನಲ್ಲಿರುವ ವಿಷಯವನ್ನು ತಿಳಿಸಬೇಡ.
మీకా 7 : 6 (ERVTE)
ಒಬ್ಬನ ವೈರಿಯು ಅವನ ಮನೆಯವರೇ ಆಗಿರುತ್ತಾರೆ. ಮಗನು ತಂದೆಗೆ ಗೌರವವನ್ನು ಕೊಡುವದಿಲ್ಲ. ಮಗಳು ತಾಯಿಗೆ ವಿರುದ್ಧವಾಗಿ ನಡೆಯುವಳು. ಸೊಸೆಯು ಅತ್ತೆಗೆ ವಿರುದ್ಧವಾಗಿ ನಡೆಯುವಳು.
మీకా 7 : 7 (ERVTE)
{#1ಯೆಹೋವನೇ ರಕ್ಷಕನು } ನಾನು ಸಹಾಯಕ್ಕಾಗಿ ಯೆಹೋವನ ಕಡೆಗೆ ನೋಡುತ್ತೇನೆ. ದೇವರ ರಕ್ಷಣೆಗಾಗಿ ನಿರೀಕ್ಷಿಸುತ್ತೇನೆ. ನನ್ನ ದೇವರು ನನಗೆ ಕಿವಿಗೊಡುತ್ತಾನೆ.
మీకా 7 : 8 (ERVTE)
ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! ನಾನು ತಿರುಗಿ ಏಳುತ್ತೇನೆ; ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.
మీకా 7 : 9 (ERVTE)
{#1ಯೆಹೋವನು ಕ್ಷಮಿಸುತ್ತಾನೆ } ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ. ಆದ್ದರಿಂದ ಆತನು ನನ್ನ ಮೇಲೆ ಕೋಪಿಸಿಕೊಂಡಿದ್ದಾನೆ. ಆದರೆ ನನ್ನ ಪರವಾಗಿ ಆತನು ವಾದಿಸುತ್ತಾನೆ. ನನಗೆ ಒಳ್ಳೆಯದನ್ನೇ ಆತನು ಮಾಡುತ್ತಾನೆ. ಆ ಬಳಿಕ ನನ್ನನ್ನು ಹೊರಗೆ ಬೆಳಕಿಗೆ ತರುವನು. ಆತನು ನೀತಿವಂತನೆಂಬುದು ಆಗ ನನಗೆ ತಿಳಿಯುವುದು.
మీకా 7 : 10 (ERVTE)
“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.
మీకా 7 : 11 (ERVTE)
{#1ಯೆಹೂದ್ಯರು ಮರಳಿ ಬರುವರು } ನಿನ್ನ ನಗರದ ಗೋಡೆಗಳು ತಿರುಗಿ ಕಟ್ಟಲ್ಪಡುವ ದಿನಗಳು ಬರುತ್ತವೆ. ಆಗ ದೇಶವು ಬೆಳೆಯುವುದು.
మీకా 7 : 12 (ERVTE)
ನಿನ್ನ ಜನರು ದೇಶಕ್ಕೆ ಹಿಂತಿರುಗುವರು. ಅವರು ಅಶ್ಶೂರದಿಂದಲೂ ಈಜಿಪ್ಟ್ ನಗರಗಳಿಂದಲೂ ಹಿಂದೆ ಬರುವರು. ನಿನ್ನ ಜನರು ಈಜಿಪ್ಟಿನಿಂದಲೂ ಯೂಫ್ರೇಟೀಸ್ ನದಿಯ ಆಚೆಕಡೆಯಿಂದಲೂ ಬರುವರು. ಪಶ್ಟಿಮದ ಸಮುದ್ರದ ಕಡೆಯಿಂದ ಬರುವರು. ಪೂರ್ವದ ಪರ್ವತಗಳ ಕಡೆಯಿಂದ ಬರುವರು.
మీకా 7 : 13 (ERVTE)
ದೇಶದಲ್ಲಿ ವಾಸಿಸಿದ್ದ ಜನರಿಂದಲೂ ಅವರು ಮಾಡಿದ್ದ ಕೆಲಸಗಳಿಂದಲೂ ದೇಶವು ಹಾಳಾಗಿಹೋಗಿತ್ತು.
మీకా 7 : 14 (ERVTE)
ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.
మీకా 7 : 15 (ERVTE)
{#1ಇಸ್ರೇಲ್ ತನ್ನ ವೈರಿಗಳನ್ನು ಸೋಲಿಸುವುದು } ನಿನ್ನನ್ನು ಈಜಿಪ್ಟಿನಿಂದ ಬರಮಾಡಿದಾಗ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಇನ್ನೂ ಅನೇಕ ಅದ್ಭುತಗಳನ್ನು ನೀನು ನೋಡುವಂತೆ ಮಾಡುವೆನು.
మీకా 7 : 16 (ERVTE)
ಜನಾಂಗಗಳು ಆ ಅದ್ಭುತವನ್ನು ನೋಡಿ ನಾಚಿಕೆಗೊಳ್ಳುವರು. ನನ್ನ ಶಕ್ತಿಯ ಎದುರು ಅವರ ಬಲವು ಏನೂ ಅಲ್ಲವೆಂದು ತಿಳಿಯುವರು. ಅವರು ಆಶ್ಚರ್ಯಚಕಿತರಾಗಿ ತಮ್ಮ ಬಾಯಿಗಳ ಮೇಲೆ ಕೈಗಳನ್ನಿಡುವರು. ತಮ್ಮ ಕಿವಿಗಳನ್ನು ಮುಚ್ಚಿ ವಾರ್ತೆ ಕೇಳಲು ನಿರಾಕರಿಸುವರು.
మీకా 7 : 17 (ERVTE)
ಅವರು ಹಾವಿನಂತೆ ಧೂಳಿನ ಮೇಲೆ ಹರಿದಾಡುವರು. ಭಯದಿಂದ ನಡುಗುವರು. ಅವರು ನೆಲದ ಮೇಲಿನ ಬಿಲಗಳಿಂದ ಹರಿದುಕೊಂಡು ಬರುವ ಹುಳಗಳಂತಿರುವರು. ಅವರು ನಮ್ಮ ದೇವರಾದ ಯೆಹೋವನ ಬಳಿಗೆ ಬಂದು ನಿಮ್ಮನ್ನು ಭಯದಿಂದ ನೋಡುವರು.
మీకా 7 : 18 (ERVTE)
{#1ಯೆಹೋವನಿಗೆ ಸ್ತೋತ್ರ } ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.
మీకా 7 : 19 (ERVTE)
ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.
మీకా 7 : 20 (ERVTE)
ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.
❮
❯
1
2
3
4
5
6
7
8
9
10
11
12
13
14
15
16
17
18
19
20