నహూము 2 : 1 (ERVTE)
{#1ನಿನೆವೆಯು ನಾಶವಾಗುವದು } ವೈರಿಯು ನಿನ್ನ ಮೇಲೆ ಬರುವನು. ಆದ್ದರಿಂದ ನಿನ್ನ ಪಟ್ಟಣದ ಬುರುಜುಗಳನ್ನು ಕಾಯಿ. ಮಾರ್ಗದ ಮೇಲೆ ಕಣ್ಣಿಡು. ಯುದ್ಧಕ್ಕೆ ತಯಾರಾಗು. ರಣರಂಗಕ್ಕೆ ಹೋಗಲು ಸಿದ್ಧನಾಗು.
నహూము 2 : 2 (ERVTE)
ಹೌದು, ಯೆಹೋವನು ಯಾಕೋಬನ ವೈಭವವನ್ನು ಇಸ್ರೇಲಿನ ವೈಭವವಾಗಿ ಸ್ಥಾಪಿಸುವನು. ವೈರಿಯು ಅವರನ್ನು ನಾಶಮಾಡಿ ಅವರ ದ್ರಾಕ್ಷಿಬಳ್ಳಿಯನ್ನು ಹಾಳುಮಾಡಿದ್ದನು.
నహూము 2 : 3 (ERVTE)
ಆ ಸೈನಿಕರ ಗುರಾಣಿಗಳು ಕೆಂಪಗಿವೆ. ಅವರ ಸಮವಸ್ತ್ರಗಳು ಕೆಂಪುಬಣ್ಣದಿಂದ ಹೊಳೆಯುತ್ತಿವೆ. ಅವರ ರಥಗಳು ಯುದ್ಧಕ್ಕಾಗಿ ಸಾಲುಗಟ್ಟಿ ನಿಂತಿವೆ ಮತ್ತು ಬೆಂಕಿಯ ಜ್ವಾಲೆಯಂತೆ ಹೊಳೆಯುತ್ತಿವೆ. ಅವರ ಭರ್ಜಿಗಳು ಎತ್ತಲ್ಪಟ್ಟಿವೆ.
నహూము 2 : 4 (ERVTE)
ರಸ್ತೆಯ ಮೇಲೆ ರಥಗಳು ರಭಸದಿಂದ ಓಡುತ್ತಿವೆ. ನಗರದ ಚೌಕಕ್ಕೆ ಹಿಂದೆ ಮುಂದೆ ಓಡುತ್ತಿವೆ. ಅವು ಉರಿಯುವ ಪಂಜಿನೋಪಾದಿಯಲ್ಲಿವೆ, ಒಂದೆಡೆಯಿಂದ ಇನ್ನೊಂದೆಡೆಗೆ ಹಾರುವ ಮಿಂಚಿನಂತಿವೆ.
నహూము 2 : 5 (ERVTE)
ವೈರಿಗಳು ತಮ್ಮ ಶೂರ ಯೋಧರನ್ನು ಕರೆಯುತ್ತಿದ್ದಾರೆ. ಅವರು ಮುನ್ನುಗ್ಗುವಾಗ ಎಡವಿಬೀಳುವರು, ಗೋಡೆಗಳ ಕಡೆಗೆ ನುಗ್ಗಿ ತಮ್ಮ ಗುರಾಣಿಗಳನ್ನು ಇಡುವರು.
నహూము 2 : 6 (ERVTE)
ಆದರೆ ಹೊಳೆಯ ಕದಗಳು ತೆರೆಯಲ್ಪಟ್ಟಿವೆ. ಅದರ ಮೂಲಕ ವೈರಿಗಳು ಮುನ್ನುಗ್ಗುತ್ತಿದ್ದಾರೆ. ಅರಸನ ಮನೆಯನ್ನು ನಾಶಮಾಡುತ್ತಿದ್ದಾರೆ.
నహూము 2 : 7 (ERVTE)
ವೈರಿಗಳು ರಾಣಿಯನ್ನು ಎತ್ತಿಕೊಂಡು ಹೋಗುತ್ತಾರೆ. ಆಕೆಯ ಸೇವಕಿಯರು ಪಾರಿವಾಳಗಳಂತೆ ಗೋಳಾಡುತ್ತಿದ್ದಾರೆ. ತಮ್ಮ ದುಃಖವನ್ನು ಪ್ರದರ್ಶಿಸಲು ಎದೆಯನ್ನು ಬಡಕೊಳ್ಳುತ್ತಿದ್ದಾರೆ.
నహూము 2 : 8 (ERVTE)
ನಿನೆವೆಯು ನೀರು ಬತ್ತುತ್ತಿರುವ ಕೊಳದಂತಿದೆ. “ನಿಲ್ಲಿ, ನಿಲ್ಲಿ, ಓಡಿಹೋಗಬೇಡಿ” ಎಂದು ಜನರು ಬೊಬ್ಬಿಡುತ್ತಾರೆ. ಆದರೆ ಅದರಿಂದ ಪ್ರಯೋಜನವಿಲ್ಲ.
నహూము 2 : 9 (ERVTE)
ನಿನೆವೆಯನ್ನು ನಾಶಮಾಡುವ ಸೈನಿಕರೇ, ಬೆಳ್ಳಿಬಂಗಾರಗಳನ್ನು ತೆಗೆದುಕೊಳ್ಳಿರಿ. ತೆಗೆದುಕೊಳ್ಳಲು ಎಷ್ಟೋ ವಸ್ತುಗಳಿವೆ. ಎಷ್ಟೋ ನಿಕ್ಷೇಪಗಳಿವೆ.
నహూము 2 : 10 (ERVTE)
ಈಗ ನಿನೆವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆದುಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿದೆ. ಅವರ ದೇಹವು ಅಲ್ಲಾಡುತ್ತಿದೆ. ಭಯದಿಂದ ಅವರ ಮುಖವು ರಕ್ತಹೀನವಾಗಿದೆ.
నహూము 2 : 11 (ERVTE)
ಸಿಂಹದ ಗುಹೆಯಂತಿದ್ದ ನಿನೆವೆಯು ಎಲ್ಲಿ? ಗಂಡು ಹೆಣ್ಣು ಸಿಂಹಗಳು ಅದರೊಳಗೆ ವಾಸಿಸುತ್ತಿದ್ದವು. ಅದರ ಮರಿಗಳಿಗೆ ಭಯವಿಲ್ಲ.
నహూము 2 : 12 (ERVTE)
ನಿನೆವೆಯು (ಅರಸನಾದ ಸಿಂಹವು) ಜನರನ್ನು ಕೊಂದಿತು. ತನ್ನ ಮರಿಗಳಿಗೂ ಸಿಂಹಿಣಿಗೂ ಆಹಾರವನ್ನು ಕೊಟ್ಟಿತು. ತನ್ನ ಗುಹೆಯನ್ನು (ನಿನೆವೆ ರಾಜನು) ಮನುಷ್ಯರ ಶರೀರಗಳಿಂದಲೂ ತಾನು ಕೊಂದ ಹೆಂಗಸರಿಂದಲೂ ತುಂಬಿಸಿತು.
నహూము 2 : 13 (ERVTE)
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಸುಟ್ಟುಹಾಕುತ್ತೇನೆ. ನಿನ್ನ ಎಳೆ ಸಿಂಹಗಳನ್ನು ರಣರಂಗದಲ್ಲಿ ಸಾಯಿಸುತ್ತೇನೆ. ಈ ಭೂಮಿಯ ಮೇಲೆ ಇನ್ನು ಯಾರನ್ನೂ ಭೇಟಿ ಮಾಡದಿರುವೆ. ನಿನ್ನ ಸಂದೇಶವಾಹಕರಿಂದ ಕೆಟ್ಟ ಸಮಾಚಾರವನ್ನು ಜನರು ಇನ್ನು ಎಂದಿಗೂ ಕೇಳರು.”

1 2 3 4 5 6 7 8 9 10 11 12 13