నెహెమ్యా 2 : 1 (ERVTE)
{#1ನೆಹೆಮೀಯನನ್ನು ಅರ್ತಷಸ್ತನು ಜೆರುಸಲೇಮಿಗೆ ಕಳುಹಿಸಿದ್ದು } ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ನಿಸ್ಸಾನ್ ತಿಂಗಳಲ್ಲಿ ರಾಜನಿಗೆ ದ್ರಾಕ್ಷಾರಸವನ್ನು ನಾನು ಕೊಟ್ಟೆನು. ನಾನೆಂದೂ ರಾಜನ ಮುಂದೆ ದುಃಖಿತನಾಗಿರಲಿಲ್ಲ. ಆದರೆ ಈ ಸಮಯದಲ್ಲಿ ನನ್ನ ಮುಖವು ಕಳೆಗುಂದಿದ್ದರಿಂದ,
నెహెమ్యా 2 : 2 (ERVTE)
“ನೀನು ಕ್ಷೇಮವೋ?” ಎಂದು ಅರಸನು ವಿಚಾರಿಸಿದನು, “ನೀನು ದುಃಖಿತನಾಗಿರುವುದೇಕೆ? ನಿನ್ನ ಹೃದಯವು ವೇದನೆಯಿಂದ ತುಂಬಿರುವ ಹಾಗಿದೆಯಲ್ಲ?” ಅರಸನ ಈ ಪ್ರಶ್ನೆಗೆ ನಾನು ಭಯಪಟ್ಟೆನು.
నెహెమ్యా 2 : 3 (ERVTE)
ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳುದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು.
నెహెమ్యా 2 : 5 (ERVTE)
ಆಗ ಅರಸನು, “ನಾನು ನಿನಗೆ ಏನುಮಾಡಬೇಕೆಂದು ಅಪೇಕ್ಷಿಸುವೆ?” ಎಂದು ಕೇಳಿದಾಗ ಅವನಿಗೆ ಉತ್ತರಿಸುವ ಮೊದಲು ನಾನು ಪರಲೋಕದ ದೇವರಿಗೆ ಪ್ರಾರ್ಥಿಸಿದೆನು.
నెహెమ్యా 2 : 6 (ERVTE)
ಅನಂತರ ಅರಸನಿಗೆ, “ನಾನು ನಿನಗೆ ಮೆಚ್ಚಿಕೆಯಾಗಿದ್ದಲ್ಲಿ ಮತ್ತು ನಿನಗೆ ಈ ವಿಷಯ ಸರಿಕಂಡಲ್ಲಿ ದಯಮಾಡಿ ಯೆಹೂದ ಪ್ರಾಂತ್ಯದಲ್ಲಿ ನನ್ನ ಪೂರ್ವಿಕರ ಸಮಾಧಿಗಳಿರುವ ಜೆರುಸಲೇಮಿಗೆ ನನ್ನನ್ನು ಕಳುಹಿಸು. ನಾನು ಅಲ್ಲಿಗೆ ಹೋಗಿ ಜೆರುಸಲೇಮನ್ನು ಮತ್ತೆ ಕಟ್ಟಬೇಕು” ಎಂದೆನು. ರಾಣಿಯು ರಾಜನ ಪಕ್ಕದಲ್ಲಿ ಕುಳಿತಿದ್ದಳು. ರಾಜನೂ ರಾಣಿಯೂ, “ನಿನಗೆ ಹೋಗಿ ಬರಲು ಎಷ್ಟು ಸಮಯ ಬೇಕಾಗುವುದು? ನೀನು ಹಿಂದಕ್ಕೆ ಯಾವಾಗ ಬರುವಿ?” ಎಂದು ವಿಚಾರಿಸಿದರು. ನನ್ನನ್ನು ಕಳುಹಿಸಲು ರಾಜನಿಗೆ ಸಂತೋಷವಿದ್ದುದರಿಂದ ನಾನೊಂದು ಸಮಯವನ್ನು ಸೂಚಿಸಿದೆನು.
నెహెమ్యా 2 : 7 (ERVTE)
ಆಮೇಲೆ “ರಾಜನೇ, ನನಗೆ ಸಹಾಯವನ್ನು ಮಾಡಲು ನೀನು ಇಚ್ಫಿಸುವುದಾದರೆ ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲರಿಗೆ ಪತ್ರಗಳನ್ನು ಬರೆದುಕೊಟ್ಟರೆ ನಾನು ಯೆಹೂದಕ್ಕೆ ಅವರ ಪ್ರಾಂತ್ಯಗಳ ಮೂಲಕವಾಗಿ ಸುರಕ್ಷಿತವಾಗಿ ಹೋಗಲು ಸಾಧ್ಯವಾಗುವುದು.
నెహెమ్యా 2 : 8 (ERVTE)
ಅಲ್ಲದೆ ಬಾಗಿಲುಗಳಿಗೆ, ಗೋಡೆಗಳಿಗೆ, ದೇವಾಲಯದ ಆವರಣದ ಗೋಡೆಗಳಿಗೆ ಮತ್ತು ನನ್ನ ಮನೆಗೆ ಮರದ ತೊಲೆಗಳು ಬೇಕಾಗಿವೆ. ಆದ್ದರಿಂದ ನಿಮ್ಮ ಅರಣ್ಯಗಳ ಮುಖ್ಯಾಧಿಕಾರಿಯಾದ ಆಸಾಫನಿಗೂ ಪತ್ರವನ್ನು ಕೊಡಬೇಕು” ಎಂದು ವಿನಂತಿಸಿದೆನು.
నెహెమ్యా 2 : 9 (ERVTE)
ಅರಸನು ಪತ್ರಗಳನ್ನು ಮತ್ತು ನಾನು ಕೇಳಿದ್ದೆಲ್ಲವನ್ನು ನನಗೆ ಕೊಟ್ಟನು. ದೇವರು ನನ್ನನ್ನು ಕರುಣಿಸಿರುವುದರಿಂದ ರಾಜನು ನನಗೆ ಹಾಗೆ ಮಾಡಿದನು. ಯೂಫ್ರೇಟೀಸ್ ನದಿಯ ಪಶ್ಚಿಮದಲ್ಲಿರುವ ರಾಜ್ಯಪಾಲರಿಗೆ ಅರಸನು ಕೊಟ್ಟ ಪತ್ರವನ್ನು ಕೊಟ್ಟೆನು. ರಾಜನು ನನ್ನೊಂದಿಗೆ ಸಿಪಾಯಿಗಳನ್ನೂ ಸೈನ್ಯಾಧಿಪತಿಗಳನ್ನೂ ಅಶ್ವ ಸೈನಿಕರನ್ನೂ ಕಳುಹಿಸಿದ್ದನು.
నెహెమ్యా 2 : 10 (ERVTE)
ನಾನು ಏನು ಮಾಡುತ್ತಿದ್ದೇನೆಂದು ಸನ್ಬಲ್ಲಟ್ ಮತ್ತು ಟೋಬೀಯ ಎಂಬವರಿಬ್ಬರು ಕೇಳಿಸಿಕೊಂಡರು. ಇಸ್ರೇಲ್ ಜನರಿಗೆ ಸಹಾಯ ಮಾಡಲು ಬರುತ್ತಿದ್ದಾರೆಂಬ ವಿಷಯವು ಅವರನ್ನು ತಳಮಳಗೊಳಿಸಿತು ಮತ್ತು ಅವರಿಗೆ ಸಿಟ್ಟೂ ಬಂದಿತು. ಸನ್ಬಲ್ಲಟನು ಹೋರೋನಿನವನು ಮತ್ತು ಟೋಬೀಯನು ಅಮ್ಮೋನಿಯ ಅಧಿಕಾರಿಯಾಗಿದ್ದನು.
నెహెమ్యా 2 : 11 (ERVTE)
{#1ನೆಹೆಮೀಯನಿಂದ ಜೆರುಸಲೇಮಿನ ಗೋಡೆಗಳ ಪರೀಕ್ಷೆ } (11-12)ನಾನು ಜೆರುಸಲೇಮ್ ಸೇರಿದ ನಂತರ ಮೂರು ದಿವಸ ಅಲ್ಲಿಯೇ ಉಳಿದೆನು. ಜೆರುಸಲೇಮಿಗೋಸ್ಕರ ಮಾಡತಕ್ಕ ಕಾರ್ಯದ ಬಗ್ಗೆ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಸಿದ್ದಾನೆಂದು ನಾನು ಯಾರಿಗೂ ತಿಳಿಸದೆ ನನ್ನೊಂದಿಗಿದ್ದ ಕೆಲವು ಜನರೊಂದಿಗೆ ರಾತ್ರಿಯಲ್ಲಿ ಹೊರಟೆನು. ನಾನು ಸವಾರಿಮಾಡಿಕೊಂಡು ಬಂದಿದ್ದ ಕುದುರೆಯೊಂದಲ್ಲದೆ ಬೇರೆ ಯಾವ ಕುದುರೆಯೂ ಅಲ್ಲಿರಲಿಲ್ಲ.
నెహెమ్యా 2 : 13 (ERVTE)
ಕತ್ತಲೆಯಲ್ಲಿಯೇ ಕಣಿವೆಯ ಬಾಗಿಲಿನ ಮೂಲಕ ಹೊರಟು ಕೆಡವಲ್ಪಟ್ಟಿದ್ದ ಜೆರುಸಲೇಮಿನ ಗೋಡೆಗಳನ್ನು, ಸುಟ್ಟುಹೋಗಿರುವ ಅದರ ಬಾಗಿಲುಗಳನ್ನು ನೋಡುತ್ತಾ ಹೆಬ್ಬಾವು ಬಾವಿಯ ಬಳಿಗೂ ತಿಪ್ಪೆಬಾಗಿಲಿನ ಬಳಿಗೂ ಸವಾರಿಮಾಡಿಕೊಂಡು ಬಂದೆನು.
నెహెమ్యా 2 : 14 (ERVTE)
ಅಲ್ಲಿಂದ ಬುಗ್ಗೆಬಾಗಿಲಿಗೂ ಅರಸನ ಕೊಳಕ್ಕೂ ಬಂದೆನು. ಇಲ್ಲಿಂದ ಮುಂದಕ್ಕೆ ಹೋಗಲು ನನ್ನ ಕುದುರೆಗೆ ಸಾಧ್ಯಾವಾಗಲಿಲ್ಲ;
నెహెమ్యా 2 : 15 (ERVTE)
ಆದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಗಳನ್ನು ಪರೀಕ್ಷಿಸಿ ಕೊನೆಗೆ ಹಿಂದಿರುಗಿ ಕಣಿವೆ ಬಾಗಿಲ ಮೂಲಕ ಮನೆ ಸೇರಿದೆನು.
నెహెమ్యా 2 : 16 (ERVTE)
ಇಸ್ರೇಲಿನ ನಾಯಕರಿಗೂ ಅಧಿಕಾರಿಗಳಿಗೂ ನಾನು ಎಲ್ಲಿಗೆ ಹೋದೆನೆಂದು ತಿಳಿದಿರಲಿಲ್ಲ; ನಾನು ಏನು ಮಾಡುತ್ತಿದ್ದೇನೆಂದೂ ಅವರಿಗೆ ಗೊತ್ತಿರಲಿಲ್ಲ. ಯೆಹೂದ್ಯರಿಗಾಗಲಿ ಅಧಿಕಾರಿಗಳಿಗಾಗಲಿ ರಾಜನಿಂದ ನೇಮಕಗೊಂಡ ಕೆಲಸವರ್ಗದವರಿಗಾಗಲಿ ನಾನು ಇನ್ನೂ ಯಾವ ವಿಷಯವನ್ನೂ ಹೇಳಿರಲಿಲ್ಲ.
నెహెమ్యా 2 : 18 (ERVTE)
ಆಮೇಲೆ ನಾನು ಎಲ್ಲಾ ಜನರಿಗೆ, “ನಮ್ಮ ದುರವಸ್ಥೆಯನ್ನು ನೀವು ನೋಡುತ್ತಿದ್ದೀರಿ. ಜೆರುಸಲೇಮ್ ಒಂದು ಹಾಳು ದಿಬ್ಬವಾಗಿದೆ; ಅದರ ಬಾಗಿಲುಗಳು ಸುಟ್ಟು ಬೂದಿಯಾಗಿವೆ. ಬನ್ನಿರಿ, ನಾವು ಜೆರುಸಲೇಮಿನ ಪೌಳಿಗೋಡೆಗಳನ್ನು ತಿರುಗಿ ಕಟ್ಟೋಣ. ಆಗ ನಾವು ಇನ್ನೆಂದಿಗೂ ನಾಚಿಕೆಗೆ ಗುರಿಯಾಗುವುದಿಲ್ಲ” ಎಂದು ಹೇಳಿದೆನು. ನಾನು ಅವರಿಗೆ ದೇವರು ನನಗೆ ಕರುಣೆಯನ್ನು ತೋರಿಸಿದ್ದನ್ನು ಮತ್ತು ರಾಜನು ಹೇಳಿದ ವಿಷಯಗಳನ್ನು ತಿಳಿಸಿದೆನು. ಆಗ ಅವರು, “ನಾವು ಈಗಲೇ ಕೆಲಸ ಪ್ರಾರಂಭಿಸೋಣ” ಎಂದು ಹೇಳಿದರು. ಹೀಗೆ ನಾವು ಈ ಒಳ್ಳೆಯ ಕಾರ್ಯವನ್ನು ಪ್ರಾರಂಭಿಸಿದೆವು.
నెహెమ్యా 2 : 19 (ERVTE)
ಆದರೆ ಹೋರೋಬಿನ ಸನ್ಬಲ್ಲಟನು, ಅಮ್ಮೋನಿಯ ಅಧಿಕಾರಿಯಾದ ಟೋಬೀಯ ಮತ್ತು ಅರಬಿಯವನಾದ ಗೆಷೆಮ್ ಇವರುಗಳು ನಾವು ಪೌಳಿ ಗೋಡೆಯನ್ನು ಕಟ್ಟುತ್ತೇವೆಂಬ ಸುದ್ಧಿಯನ್ನು ಕೇಳಿ ಅಸಹ್ಯವಾಗಿ ಗೇಲಿಮಾಡಿ, “ನೀವು ಮಾಡುತ್ತಿರುವುದೇನು? ರಾಜನಿಗೆ ವಿರುದ್ಧವಾಗಿ ದಂಗೆ ಏಳುತ್ತಿರುವಿರೋ?” ಎಂದು ಕೇಳಿದರು.
నెహెమ్యా 2 : 20 (ERVTE)
ನಾನು ಅವರಿಗೆ, “ಪರಲೋಕದ ದೇವರು ನಮ್ಮ ಕಾರ್ಯವನ್ನು ಸಫಲಪಡಿಸುವನು. ನಾವು ಆತನ ಸೇವಕರು ಮತ್ತು ನಾವು ಈ ಪಟ್ಟಣವನ್ನು ತಿರಿಗಿ ಕಟ್ಟುತ್ತೇವೆ. ನೀವು ನಮ್ಮ ಸಹಾಯಕ್ಕಾಗಿ ಬರುವುದು ಬೇಡ. ನಿಮ್ಮಲ್ಲಿ ಯಾರ ಕುಟುಂಬಗಳವರೂ ಈ ಜೆರುಸಲೇಮಿನಲ್ಲಿ ವಾಸಿಸಲಿಲ್ಲ ಮತ್ತು ಈ ಪ್ರಾಂತ್ಯದಲ್ಲಿ ನಿಮಗೆ ಸ್ವಂತ ಭೂಮಿಯೂ ಇಲ್ಲ. ಆದ್ದರಿಂದ ನಿಮಗೆ ಈ ಪ್ರಾಂತ್ಯದಲ್ಲಿ ಯಾವ ಹಕ್ಕೂ ಇಲ್ಲ” ಎಂದು ಹೇಳಿದೆನು.
❮
❯
1
2
3
4
5
6
7
8
9
10
11
12
13
14
15
16
17
18
19
20