నెహెమ్యా 6 : 1 (ERVTE)
{#1ವಿರೋಧಿಗಳ ಕುಯುಕ್ತಿ } [PS]ಸನ್ಬಲ್ಲಟನಿಗೆ, ಟೋಬೀಯನಿಗೆ ಮತ್ತು ಅರಬಿಯವನಾದ ಗೆಷೆಮನಿಗೆ ಮತ್ತು ಇನ್ನಿತರ ವೈರಿಗಳಿಗೆ ನಾವು ಗೋಡೆಯನ್ನು ಕಟ್ಟಿ ಮುಗಿಸಿದ್ದು ಗೊತ್ತಾಯಿತು. ಗೋಡೆಯಲ್ಲಿದ್ದ ಎಲ್ಲಾ ಕಿಂಡಿಗಳನ್ನು ನಾವು ಮುಚ್ಚಿದೆವು. ಆದರೆ ಗೋಡೆಯಲ್ಲಿನ ದ್ವಾರಗಳಿಗೆ ಇನ್ನೂ ಬಾಗಿಲುಗಳನ್ನು ಇಟ್ಟಿರಲಿಲ್ಲ.
నెహెమ్యా 6 : 2 (ERVTE)
ಸನ್ಬಲ್ಲಟನು ಮತ್ತು ಗೆಷೆಮನು ನನಗೆ ಒಂದು ಸಂದೇಶವನ್ನು ಕಳುಹಿಸಿ, “ನೆಹಮೀಯನೇ, ನಾವು ಓನೋ ಬಯಲಿನಲ್ಲಿರುವ ಹಕ್ಕೆಫಿರೀಮ್ ಎಂಬ ಪಟ್ಟಣದಲ್ಲಿ ಭೇಟಿಯಾಗೋಣ” ಎಂದು ಬರೆದಿದ್ದರು. ಓನೋ ಬಯಲಿನಲ್ಲಿ ನನಗೆ ಅವರು ಕೇಡು ಮಾಡಬೇಕೆಂದಿದ್ದರು. [PE]
నెహెమ్యా 6 : 4 (ERVTE)
[PS]ನಾನು ಅವರಿಗೆ ಸೇವಕರ ಮುಖಾಂತರ ಈ ಉತ್ತರವನ್ನು ಕಳುಹಿಸಿದೆನು: “ನಾನು ಬಹಳ ವಿಶೇಷವಾದ ಕೆಲಸ ಮಾಡಿಸುತ್ತಿದ್ದೇನೆ. ಆದ್ದರಿಂದ ನನಗೆ ಬರಲು ಸಾಧ್ಯವಿಲ್ಲ. ನನ್ನ ಬರುವಿಕೆಯಿಂದಾಗಿ ಈ ಕೆಲಸವು ನಿಂತು ಹೋಗಬಾರದು.” [PE][PS]ಸನ್ಬಲ್ಲಟನೂ ಗೆಷೆಮನೂ ಅದೇ ಸಂದೇಶವನ್ನು ನಾಲ್ಕು ಸಲ ಕಳುಹಿಸಿದರು. ಪ್ರತಿ ಸಾರಿಯೂ ಅದೇ ಉತ್ತರವನ್ನು ನಾನು ಅವರಿಗೆ ಕಳುಹಿಸಿದೆನು.
నెహెమ్యా 6 : 5 (ERVTE)
ಐದನೆಯ ಸಾರಿ ಸನ್ಬಲ್ಲಟನು ತನ್ನ ಸೇವಕನೊಂದಿಗೆ ಮುದ್ರೆಯಿಂದ ಮುಚ್ಚಲ್ಪಡದ ಪತ್ರವನ್ನು ಕಳುಹಿಸಿಕೊಟ್ಟನು.
నెహెమ్యా 6 : 6 (ERVTE)
ಅದರಲ್ಲಿ, [PE][PBR] [PIS]“ಒಂದು ಸುದ್ದಿಯು ಹರಡುತ್ತಲಿದೆ. ಎಲ್ಲಾ ಕಡೆಗಳಲ್ಲಿ ಜನರು ಅದರ ವಿಷಯವಾಗಿ ಮಾತಾಡುತ್ತಿದ್ದಾರೆ. ಆ ಸುದ್ದಿಯು ಸತ್ಯವೆಂದು ಗೆಷೆಮನು ನನಗೆ ಹೇಳಿದನು. ನೀನು ಮತ್ತು ಯೆಹೂದ್ಯರು ಅರಸನಿಗೆ ವಿರುದ್ಧವಾಗಿ ದಂಗೆ ಏಳಲು ಯೋಚಿಸುತ್ತಿದ್ದೀರೆಂಬ ವದಂತಿ ಇದೆ. ಅದಕ್ಕೋಸ್ಕರವಾಗಿಯೇ ನೀವು ಕೋಟೆಗೋಡೆಯನ್ನು ಕಟ್ಟುತ್ತಿದ್ದೀರಿ. ನೀನು ಯೆಹೂದ್ಯರ ಅರಸನಾಗುವೆ ಎಂದೂ ಜನರಲ್ಲಿ ಸುದ್ದಿ ಹಬ್ಬಿದೆ.
నెహెమ్యా 6 : 7 (ERVTE)
ಮಾತ್ರವಲ್ಲದೆ ನಿನ್ನನ್ನು ಯೆಹೂದ ಪ್ರಾಂತ್ಯದ ಅರಸನೆಂದು ಪ್ರಕಟಿಸಲಿಕ್ಕೆ ಪ್ರವಾದಿಗಳನ್ನು ಆರಿಸಿಕೊಂಡಿರುವೆ ಎಂಬ ಸುದ್ದಿಯೂ ಇದೆ. ರಾಜನಾದ ಅರ್ತಷಸ್ತನು ಇದರ ಬಗ್ಗೆ ಕೇಳುವುದಕ್ಕಿಂತ ಮೊದಲೇ ನಾವು ಕುಳಿತುಕೊಂಡು ಮಾತನಾಡೋಣ” ಎಂದು ಬರೆಯಲಾಗಿತ್ತು. [PIE][PBR]
నెహెమ్యా 6 : 9 (ERVTE)
[PS]ನಾನು ಆ ಕಾಗದವನ್ನು ಹಾಗೆಯೇ ಹಿಂದಕ್ಕೆ ಕಳುಹಿಸಿದೆನು. ಅಲ್ಲದೆ, “ನೀನು ಹೇಳುವಂಥದ್ದೇನೂ ಆಗಲಿಲ್ಲ. ಇದು ಕೇವಲ ನಿನ್ನ ಊಹೆಯಷ್ಟೇ!” ಎಂದು ಹೇಳಿ ಕಳುಹಿಸಿದೆನು. [PE]
నెహెమ్యా 6 : 10 (ERVTE)
[PS]ನಾವು ಹೆದರಿಹೋಗಬೇಕೆಂದು ನಮ್ಮ ವೈರಿಗಳ ಕುತಂತ್ರವಿದೆ. “ಯೆಹೂದ್ಯರು ಭಯಗೊಂಡು ಬಲಹೀನರಾಗುವುದರಿಂದ ಅವರ ಕೆಲಸವನ್ನು ಮುಂದುವರಿಸಲು ಆಗುವುದಿಲ್ಲ, ಗೋಡೆಯೂ ಪೂರ್ಣಗೊಳ್ಳುವುದಿಲ್ಲ” ಎಂದು ಅವರು ಯೋಚಿಸಿಕೊಂಡಿದ್ದಾರೆ. [PE][PS]ಆದರೆ ನಾನು, “ದೇವರೇ, ನನ್ನನ್ನು ಬಲಗೊಳಿಸು” ಎಂದು ಪ್ರಾರ್ಥಿಸಿದೆನು. [PE]
నెహెమ్యా 6 : 11 (ERVTE)
[PS]ಒಂದು ದಿನ ನಾನು ದೆಲಾಯನ ಮಗನಾದ ಶೆಮಾಯನ ಮನೆಗೆ ಹೋದೆನು. ದೆಲಾಯನು ಮೆಹೇಟಬೇಲನ ಮಗ. ಆಗ ಶೆಮಾಯನು ಮನೆಯಲ್ಲಿದ್ದನು. ಅವನು, “ನೆಹೆಮೀಯನೇ, ನಾವು ದೇವಾಲಯದಲ್ಲಿ ಭೇಟಿಯಾಗೋಣ. ನಾವು ಅದರ ಒಳಗೆ ಹೋಗಿ ಕದಗಳನ್ನು ಮುಚ್ಚಿಕೊಳ್ಳೋಣ. ಯಾಕೆಂದರೆ ನಿನ್ನನ್ನು ಕೊಲ್ಲಲು ಈ ರಾತ್ರಿ ಜನರು ಬರುತ್ತಾರೆ” ಎಂದು ಹೇಳಿದನು. [PE]
నెహెమ్యా 6 : 12 (ERVTE)
[PS]ಆದರೆ ನಾನು ಶೆಮಾಯನಿಗೆ, “ನನ್ನಂಥ ಪುರುಷನು ಓಡಿಹೋಗಬೇಕೆ? ನನ್ನಂಥ ಸಾಮಾನ್ಯ ವ್ಯಕ್ತಿ ದೇವಾಲಯಕ್ಕೆ ಹೋಗಿ ಅವಿತುಕೊಳ್ಳಬಾರದು. ನಾನು ಬರುವುದಿಲ್ಲ” ಎಂದು ಹೇಳಿದೆನು. [PE][PS]ಶೆಮಾಯನನ್ನು ದೇವರು ಕಳುಹಿಸಿಲ್ಲವೆಂದು ನನಗೆ ಚೆನ್ನಾಗಿ ಗೊತ್ತಿತ್ತು. ಟೋಬೀಯ ಮತ್ತು ಸನ್ಬಲ್ಲಟ್ ಅವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದ್ದರು.
నెహెమ్యా 6 : 13 (ERVTE)
ನಾನು ಭಯಗೊಂಡು [+ ದೇವಾಲಯದೊಳಗೆ ಓಡಿಹೋಗಿ] ದೋಷಿಯಾಗುವಂತೆಯೂ ನನ್ನ ಮೇಲೆ ಹಾಗೆ ಅಪರಾಧ ಹೊರಿಸಲು ತಮಗೆ ಕಾರಣ ದೊರೆಯುವಂತೆಯೂ ಅವರು ಶೆಮಾಯನನ್ನು ಉಪಯೋಗಿಸಿಕೊಂಡರು. [PE]
నెహెమ్యా 6 : 15 (ERVTE)
[PS]ದೇವರೇ, ಟೋಬೀಯ ಮತ್ತ ಸನ್ಬಲ್ಲಟನ ವಿಚಾರವಾಗಿ ನಿನ್ನ ಜ್ಞಾಪಕದಲ್ಲಿರಿಸು. ಅವರು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿನಲ್ಲಿಡು. ಅದೇ ಸಮಯದಲ್ಲಿ ಪ್ರವಾದಿನಿಯಾದ ನೋವದ್ಯಳನ್ನು, ಇತರ ಪ್ರವಾದಿಗಳನ್ನು, ನನ್ನನ್ನು ಹೆದರಿಸುವವರನ್ನು ನೆನಪು ಮಾಡಿಕೊ. [PE]{#1ಗೋಡೆಯ ಕೆಲಸ ಮುಕ್ತಾಯವಾಯಿತು } [PS]ಏಲೂಲ್ ತಿಂಗಳ ಇಪ್ಪತ್ತೈದನೆಯ ದಿನದಲ್ಲಿ ಜೆರುಸಲೇಮಿನ ಪೌಳಿಗೋಡೆಗಳ ಕೆಲಸ ಮುಕ್ತಾಯವಾಯಿತು. ಅದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.
నెహెమ్యా 6 : 16 (ERVTE)
ನಮ್ಮ ವೈರಿಗಳೆಲ್ಲಾ ಕೆಲಸ ಸಂಪೂರ್ಣವಾದದ್ದನ್ನು ಕೇಳಿದರು. ನಮ್ಮ ಸುತ್ತುಮುತ್ತಲಿನ ಪ್ರಾಂತ್ಯಗಳವರಿಗೂ ದೇಶಗಳವರಿಗೂ ಈ ಸುದ್ದಿಮುಟ್ಟಿತು. ಆಗ ಅವರ ಧೈರ್ಯವು ಕುಗ್ಗಿತು. ಯಾಕೆಂದರೆ ಈ ಮಹಾಕಾರ್ಯವನ್ನು ನಮ್ಮ ದೇವರ ಸಹಾಯದಿಂದಲೇ ನಾವು ಮಾಡಿದ್ದೇವೆಂದು ಅವರಿಗೆ ಅರ್ಥವಾಯಿತು. [PE]
నెహెమ్యా 6 : 17 (ERVTE)
[PS]ಅದೇ ಸಮಯದಲ್ಲಿ ಗೋಡೆಯ ಕೆಲಸ ಮುಗಿದ ಬಳಿಕ ಯೆಹೂದ ಪ್ರಾಂತ್ಯದ ಧನಿಕರು ಟೋಬೀಯನಿಗೆ ಆಗಾಗ್ಗೆ ಅನೇಕ ಪತ್ರ ಬರೆಯುತ್ತಿದ್ದರು.
నెహెమ్యా 6 : 18 (ERVTE)
ಟೋಬೀಯನೂ ಅವರಿಗೆ ಉತ್ತರಿಸುತ್ತಿದ್ದನು. ಅವರು ಆ ಪತ್ರಗಳನ್ನು ಕಳುಹಿಸಲು ಕಾರಣವೇನೆಂದರೆ ಯೆಹೂದ್ಯರಲ್ಲಿ ಅನೇಕ ಜನರು ಅವನಿಗೆ ನಂಬಿಗಸ್ತರಾಗಿರುವುದಾಗಿ ವಾಗ್ದಾನ ಮಾಡಿದ್ದರು. ಟೋಬೀಯನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದುದೇ ಇದಕ್ಕೆ ಕಾರಣ. ಟೋಬೀಯನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳೊಂದಿಗೆ ಲಗ್ನವಾಗಿದ್ದನು.
నెహెమ్యా 6 : 19 (ERVTE)
ಹಿಂದಿನ ಕಾಲದಲ್ಲಿ ಆ ಜನರು ಟೋಬೀಯನಿಗೆ ಒಂದು ವಿಶೇಷ ವಾಗ್ದಾನ ಮಾಡಿದ್ದರು. ಆದ್ದರಿಂದ ಟೋಬೀಯನು ಎಷ್ಟು ಒಳ್ಳೆಯವನೆಂದು ನನ್ನೊಂದಿಗೆ ಹೇಳುತ್ತಿದ್ದರು; ನಾನು ಮಾಡುತ್ತಿರುವ ಕಾರ್ಯಗಳ ಬಗ್ಗೆಯೂ ಅವರು ಟೋಬೀಯನಿಗೆ ವರದಿ ಮಾಡುತ್ತಿದ್ದರು. ಟೋಬೀಯನು ನನ್ನನ್ನು ಬೆದರಿಸುವುದಕ್ಕೋಸ್ಕರ ನನಗೆ ಪದೇಪದೇ ಪತ್ರ ಬರೆಯುತ್ತಿದ್ದನು. [PE]
❮
❯