నెహెమ్యా 8 : 1 (ERVTE)
{#1ಎಜ್ರನ ಧರ್ಮಶಾಸ್ತ್ರ ಪಠಣ } ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ಒಂದೇ ಮನಸ್ಸುಳ್ಳವರಾಗಿ ಕೂಡಿಬಂದರು. ಅವರು ಬುಗ್ಗೆ ಬಾಗಿಲಿನ ಮುಂದಿದ್ದ ಜಾಗದಲ್ಲಿ ಸೇರಿಬಂದರು. ಇಸ್ರೇಲರಿಗೆ ಮೋಶೆಯ ಮೂಲಕವಾಗಿ ಯೆಹೋವನು ಕೊಟ್ಟಿದ್ದ [BKS]ಧರ್ಮಶಾಸ್ತ್ರವನ್ನು[BKE] ಓದಲು ಜನರು ಎಜ್ರನನ್ನು ಕೇಳಿಕೊಂಡರು.
నెహెమ్యా 8 : 2 (ERVTE)
ಹೀಗೆ ಆ ವರ್ಷದ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಎಜ್ರನು [BKS]ಧರ್ಮಶಾಸ್ತ್ರವನ್ನು[BKE] ಆ ಜನರ ಮುಂದೆ ತಂದನು. ಆ ಜನಸಮೂಹದಲ್ಲಿ [BKS]ಧರ್ಮಶಾಸ್ತ್ರಕ್ಕೆ[BKE] ಕಿವಿಗೊಟ್ಟು ಗ್ರಹಿಸಿಕೊಳ್ಳಬಲ್ಲ ಸ್ತ್ರೀಪುರುಷರಿದ್ದರು.
నెహెమ్యా 8 : 3 (ERVTE)
ಎಜ್ರನು ಮುಂಜಾನೆಯಿಂದ ಹಿಡಿದು ಮಧ್ಯಾಹ್ನದವರೆಗೆ ಬುಗ್ಗೆಬಾಗಿಲಿನ ಮುಂದೆ ಇರುವ ಮೈದಾನದಲ್ಲಿ ಸೇರಿ ಬಂದಿದ್ದ ಜನರೆದುರಾಗಿ ನಿಂತು ಗಟ್ಟಿಯಾಗಿ [BKS]ಧರ್ಮಶಾಸ್ತ್ರವನ್ನು[BKE] ಓದಿದನು. ಎಲ್ಲಾ ಜನರು ಎಚ್ಚರಿಕೆಯಿಂದ ಕೇಳಿ [BKS]ಧರ್ಮಶಾಸ್ತ್ರವನ್ನು[BKE] ಗ್ರಹಿಸಿಕೊಂಡರು.
నెహెమ్యా 8 : 5 (ERVTE)
ಆ ಸಮಯಕ್ಕೋಸ್ಕರವೇ ಕಟ್ಟಿದ ಮರದ ವೇದಿಕೆಯ ಮೇಲೆ ಎಜ್ರನು ನಿಂತಿದ್ದನು. ಅವನ ಬಲಬದಿಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ ಮತ್ತು ಮಾಸೇಯ; ಎಡಬದಿಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ ಮತ್ತು ಮೆಷುಲ್ಲಾಮ್ ನಿಂತಿದ್ದರು. ಎಜ್ರನು ಎತ್ತರವಾದ ವೇದಿಕೆಯ ಮೇಲೆ ನಿಂತಿದ್ದರಿಂದ ಎಲ್ಲರೂ ಅವನನ್ನು ನೋಡಲು ಸಾಧ್ಯವಾಯಿತು. ಎಜ್ರನು [BKS]ಧರ್ಮಶಾಸ್ತ್ರವನ್ನು[BKE] ತೆರೆಯುವಾಗ ಎಲ್ಲಾ ಜನರು ನಿಂತರು.
నెహెమ్యా 8 : 6 (ERVTE)
ಎಜ್ರನು ಮಹೋನ್ನತ ದೇವರಾದ ಯೆಹೋವನನ್ನು ಸ್ತುತಿಸಿದನು. ಆಗ ಜನರೆಲ್ಲರೂ ಕೈಗಳನ್ನೆತ್ತಿ, “ಆಮೆನ್! ಆಮೆನ್!” ಎಂದು ಹೇಳಿದರು; ತಲೆಬಾಗಿ ಯೆಹೋವನನ್ನು ಆರಾಧಿಸಿದರು.
నెహెమ్యా 8 : 7 (ERVTE)
ಅವರೆಲ್ಲಾ ನಿಂತಿರುವಾಗ ಲೇವಿಯರು [BKS]ಧರ್ಮಶಾಸ್ತ್ರವನ್ನು[BKE] ಅವರಿಗೆ ಓದಿತಿಳಿಸಿದರು. ಅವರು ಯಾರೆಂದರೆ: ಯೇಷೂವ, ಬಾನೀ, ಶೇರಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್ ಮತ್ತು ಪೆಲಾಯ.
నెహెమ్యా 8 : 8 (ERVTE)
ಈ ಲೇವಿಯರು ಜನರಿಗೆ ಅರ್ಥವಾಗುವ ರೀತಿಯಲ್ಲಿ [BKS]ದೇವರ ಧರ್ಮಶಾಸ್ತ್ರವನ್ನು[BKE] ವಿವರಿಸಿ ಹೇಳಿದರು.
నెహెమ్యా 8 : 10 (ERVTE)
ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದ್ದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.
నెహెమ్యా 8 : 11 (ERVTE)
“ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.
నెహెమ్యా 8 : 12 (ERVTE)
ಲೇವಿಯರು ಜನರಿಗೆ, “ದುಃಖಿಸಬೇಡಿರಿ, ಈ ದಿನ ವಿಶೇಷ ದಿನ. ಸಮಾಧಾನ ಮಾಡಿಕೊಳ್ಳಿ” ಎಂದು ಹೇಳಿದರು.
నెహెమ్యా 8 : 13 (ERVTE)
ಅನಂತರ ಎಲ್ಲರೂ ವಿಶೇಷ ಊಟಕ್ಕೆ ಹೋದರು, ಅವರು ತಮ್ಮ ಆಹಾರವನ್ನು ಮತ್ತು ಪಾನೀಯವನ್ನು ಹಂಚಿಕೊಂಡರು. ಅವರೆಲ್ಲರೂ ಸಂತೋಷದಿಂದ ಆ ವಿಶೇಷ ದಿನವನ್ನು ಆಚರಿಸಿದರು, ಧರ್ಮೋಪದೇಶಕರು ಉಪದೇಶಿಸಿದ ಯೆಹೋವನ ಕಟ್ಟಳೆಗಳನ್ನು ಅವರು ಅರ್ಥಮಾಡಿಕೊಂಡರು.
నెహెమ్యా 8 : 14 (ERVTE)
ಆ ತಿಂಗಳ ಎರಡನೆಯ ದಿನದಲ್ಲಿ ಗೋತ್ರಪ್ರಧಾನರೂ ಯಾಜಕರೂ ಲೇವಿಯರೂ ಧರ್ಮಶಾಸ್ತ್ರವನ್ನು ಅಭ್ಯಾಸಿಸಲು ಉಪದೇಶಕನಾದ ಎಜ್ರನ ಸುತ್ತಲೂ ಸೇರಿಬಂದರು.
నెహెమ్యా 8 : 15 (ERVTE)
(14-15)ಅವರು ಅಭ್ಯಾಸಿಸಿದಾಗ ಧರ್ಮಶಾಸ್ತ್ರದಲ್ಲಿ ಈ ಆಜ್ಞೆಗಳನ್ನು ಕಂಡುಕೊಂಡರು: ಏಳನೆಯ ತಿಂಗಳಲ್ಲಿ ಯೆಹೋವನ ಆಜ್ಞೆಗನುಸಾರವಾಗಿ ವಿಶೇಷ ಹಬ್ಬವನ್ನು ಆಚರಿಸಲು ಜೆರುಸಲೇಮಿನಲ್ಲಿ ಸೇರಿಬಂದು ತಾತ್ಕಾಲಿಕವಾದ ಬಿಡಾರಗಳಲ್ಲಿ ವಾಸಿಸಬೇಕು. ಅವರು ತಮ್ಮ ಊರುಗಳ ಮತ್ತು ಜೆರುಸಲೇಮಿನ, “ಬೆಟ್ಟಪ್ರದೇಶಗಳಿಗೆ ಹೋಗಿ ಆಲೀವ್, ಖರ್ಜೂರ, ಕಾಡು ಆಲೀವ್, ಸುಗಂಧ ಮುಂತಾದ ಮರಗಳ ರೆಂಬೆಗಳನ್ನು ತೆಗೆದುಕೊಂಡು ಬಂದು ಅವುಗಳಿಂದ ಆ ಬಿಡಾರಗಳನ್ನು ಮಾಡಬೇಕು” ಎಂಬುದಾಗಿ ಯೆಹೋವನು ಮೋಶೆಗೆ ಕೊಟ್ಟಿದ್ದ ಆಜ್ಞೆಗಳೇ ಅವು.
నెహెమ్యా 8 : 16 (ERVTE)
ಜನರು ಹೋಗಿ ರೆಂಬೆಗಳನ್ನು ತಂದು ತಮಗಾಗಿ ತಾತ್ಕಾಲಿಕ ಬಿಡಾರಗಳನ್ನು ಮಾಡಿಕೊಂಡರು. ಅವರು ಈ ಬಿಡಾರಗಳನ್ನು ತಮ್ಮ ಮನೆಯ ಮೇಲ್ಛಾವಣಿಗೆಯಲ್ಲೂ ಮನೆಯ ಅಂಗಳಗಳಲ್ಲಿಯೂ, ದೇವಾಲಯದ ಅಂಗಳದಲ್ಲಿಯೂ “ಬುಗ್ಗೆ” ಮತ್ತು “ಎಫ್ರಾಯೀಮ್” ಎಂಬ ದ್ವಾರಗಳ ಸಮೀಪದಲ್ಲಿದ್ದ ಬಯಲುಗಳಲ್ಲಿಯೂ ಹಾಕಿಕೊಂಡರು.
నెహెమ్యా 8 : 17 (ERVTE)
ಸೆರೆವಾಸದಿಂದ ಮರಳಿಬಂದ ಇಸ್ರೇಲರು ಬಿಡಾರಗಳನ್ನು ಹಾಕಿಕೊಂಡು ಅವುಗಳಲ್ಲಿ ವಾಸಿಸಿದರು. ನೂನನ ಮಗನಾದ ಯೆಹೋಶುವನ ಕಾಲದಿಂದ ಇಂದಿನವರೆಗೂ ಇಸ್ರೇಲರು ಇಂಥ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲಿಲ್ಲ. ಪ್ರತಿಯೊಬ್ಬರೂ ಬಹು ಸಂತೋಷಗೊಂಡಿದ್ದರು.
నెహెమ్యా 8 : 18 (ERVTE)
ಆ ಹಬ್ಬದ ದಿನಗಳ ಪ್ರತಿಯೊಂದು ದಿನದಲ್ಲಿ ಎಜ್ರನು [BKS]ಧರ್ಮಶಾಸ್ತ್ರ[BKE] ಪಾರಾಯಣ ಮಾಡಿದನು. ಮೊದಲನೆ ದಿನದಿಂದ ಪ್ರಾರಂಭಿಸಿ ಕಡೆಯ ದಿನದ ತನಕ ಇಸ್ರೇಲರೆಲ್ಲರೂ ಈ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು. ಎಂಟನೆಯ ದಿನದಲ್ಲಿ ಧರ್ಮಶಾಸ್ತ್ರದ ಪ್ರಕಾರ ವಿಶೇಷಕೂಟಗಳಿಗಾಗಿ ಜನರು ಒಟ್ಟಾಗಿ ಸೇರಿಬಂದರು.
❮
❯
1
2
3
4
5
6
7
8
9
10
11
12
13
14
15
16
17
18