సంఖ్యాకాండము 18 : 1 (ERVTE)
{#1ಯಾಜಕರ ಮತ್ತು ಲೇವಿಯರ ಕಾರ್ಯಗಳು } ಆಗ ಯೆಹೋವನು ಆರೋನನಿಗೆ, “ಪವಿತ್ರ ವಸ್ತುಗಳ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನೂ ನಿನ್ನ ಗಂಡುಮಕ್ಕಳೂ ನಿನ್ನ ತಂದೆಯ ಕುಟುಂಬದವರೂ ಅದರ ಅಪರಾಧದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಏನಾದರೂ ಹೊಲಸುತನ ನಡೆದರೆ, ನೀನು ಮತ್ತು ನಿನ್ನ ಗಂಡುಮಕ್ಕಳು ಮಾತ್ರ ಅದರ ಅಪರಾಧದ ಫಲವನ್ನು ಅನುಭವಿಸಬೇಕು.
సంఖ్యాకాండము 18 : 2 (ERVTE)
ನಿನ್ನ ತಂದೆಯ ಕುಲದವರೂ ನಿನ್ನ ರಕ್ತಸಂಬಂಧಿಗಳೂ ಆಗಿರುವ ಲೇವಿಕುಲದವರನ್ನು ನಿನ್ನೊಡನೆ ಸೇರಿಸಿಕೊ; ನೀನು ಮತ್ತು ನಿನ್ನ ಗಂಡುಮಕ್ಕಳು ಒಡಂಬಡಿಕೆಯ ಮುಂದೆ ಇರುವಾಗ ಅವರು ನಿನ್ನೊಂದಿಗಿದ್ದು ನಿನಗೆ ಸಹಾಯ ಮಾಡುವರು.
సంఖ్యాకాండము 18 : 3 (ERVTE)
ಆ ಲೇವಿಯರು ನಿನಗೆ ಕಾವಲುಗಾರರಾಗಿರಬೇಕು ಅಂದರೆ ಇಡೀ ಗುಡಾರವನ್ನು ಕಾಯಬೇಕು. ಆದರೆ ಅವರು ಪವಿತ್ರವಾದ ಪಾತ್ರೆಯನ್ನಾಗಲಿ ಯಜ್ಞವೇದಿಕೆಯನ್ನಾಗಲಿ ಮುಟ್ಟಬಾರದು; ಮುಟ್ಟಿದರೆ ಅವರೂ ಸಾಯುವರು ಮತ್ತು ನೀವೂ ಸಾಯುವಿರಿ.
సంఖ్యాకాండము 18 : 4 (ERVTE)
ಅವರು ದೇವದರ್ಶನಗುಡಾರವನ್ನು ಕಾಯಬೇಕು ಮತ್ತು ಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸವನ್ನು ಮಾಡಬೇಕು. ಬೇರೆ ಯಾರೂ ನಿನ್ನೊಂದಿಗೆ ಭಾಗಿಗಳಾಗಿರಬಾರದು.
సంఖ్యాకాండము 18 : 5 (ERVTE)
“ನಾನು ಮತ್ತೆ ಕೋಪಗೊಂಡು ಇಸ್ರೇಲರನ್ನು ದಂಡಿಸದಂತೆ ನೀವು ಪವಿತ್ರಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕಾಯಬೇಕು.
సంఖ్యాకాండము 18 : 6 (ERVTE)
ಎಲ್ಲಾ ಇಸ್ರೇಲರಿಂದ ನಾನೇ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ನಿನಗೆ ಕೊಡಲ್ಪಟ್ಟ ಬಹುಮಾನವಾಗಿದ್ದಾರೆ. ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸವನ್ನು ಮಾಡಲು ಅವರು ಯೆಹೋವನಿಗೆ ಪ್ರತಿಷ್ಠಿತರಾಗಿದ್ದಾರೆ.
సంఖ్యాకాండము 18 : 7 (ERVTE)
ದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲಿ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”
సంఖ్యాకాండము 18 : 8 (ERVTE)
ಆಗ ಯೆಹೋವನು ಆರೋನನಿಗೆ ಹೀಗೆ ಹೇಳಿದನು: “ನನಗೆ ಬರಬೇಕಾಗಿರುವ ಕೊಡುಗೆಗಳನ್ನು ಮತ್ತು ಇಸ್ರೇಲರ ಪವಿತ್ರವಾದ ಎಲ್ಲಾ ಕಾಣಿಕೆಗಳನ್ನು ಕಾಯುವ ಜವಾಬ್ದಾರಿಕೆಯನ್ನು ನಾನೇ ನಿನಗೆ ವಹಿಸಿದ್ದೇನೆ. ಅವುಗಳನ್ನು ನಿನಗೂ ನಿನ್ನ ಸಂತತಿಯವರಿಗೂ ಪಾಲಾಗಿ ಕೊಟ್ಟಿದ್ದೇನೆ. ಅವು ಯಾವಾಗಲೂ ನಿಮ್ಮವೇ.
సంఖ్యాకాండము 18 : 9 (ERVTE)
ಯಜ್ಞವೇದಿಕೆಯ ಬೆಂಕಿಯಲ್ಲಿ ಹೋಮಮಾಡದೆ ಉಳಿಸಿರುವ ಮಹಾಪರಿಶುದ್ಧ ಪದಾರ್ಥಗಳಲ್ಲಿ ನಿಮಗೆ ದೊರೆಯಬೇಕಾದವುಗಳು ಯಾವುವೆಂದರೆ: ಅವರು ನನಗೆ ಕೊಡಲಿರುವ ಯಜ್ಞಗಳು, ಧಾನ್ಯಾರ್ಪಣೆಗಳು, ಪಾಪಪರಿಹಾರಕ ಯಜ್ಞಗಳು, ದೋಷಪರಿಹಾರಕ ಯಜ್ಞಗಳು ಮತ್ತು ಅಂತಹ ಪ್ರತಿಯೊಂದು ಅರ್ಪಣೆಗಳು ನಿನಗೂ ನಿನ್ನ ಗಂಡುಮಕ್ಕಳಿಗೂ ಮಹಾಪವಿತ್ರವಾಗಿವೆ.
సంఖ్యాకాండము 18 : 10 (ERVTE)
ನೀವು ಮಹಾ ಪವಿತ್ರವಾದ ಸ್ಥಳದಲ್ಲಿ ಅದನ್ನು ಊಟಮಾಡಬೇಕು. ನಿಮ್ಮಲ್ಲಿರುವ ಪುರುಷರೆಲ್ಲರೂ ಅವುಗಳನ್ನು ತಿನ್ನಬಹುದು; ಅವು ಮಹಾ ಪವಿತ್ರವಾದವುಗಳೆಂದು ನೀವು ಪರಿಗಣಿಸಬೇಕು.
సంఖ్యాకాండము 18 : 11 (ERVTE)
సంఖ్యాకాండము 18 : 12 (ERVTE)
“ಅದಲ್ಲದೆ, ಅವರ ಪ್ರತಿಷ್ಠಿತಾ ಕಾಣಿಕೆಗಳು ಮತ್ತು ಇಸ್ರೇಲರ ನಿವಾಳಿಸಲ್ಪಟ್ಟ ಕಾಣಿಕೆಗಳು ನಿಮಗೆ ಸೇರಿವೆ. ಅವುಗಳನ್ನು ನಾನು ನಿನಗೂ ನಿನ್ನ ಗಂಡುಮಕ್ಕಳಿಗೂ ಹೆಣ್ಣುಮಕ್ಕಳಿಗೂ ಶಾಶ್ವತವಾದ ಪಾಲಾಗಿ ಕೊಡುವೆನು. “ಇದಲ್ಲದೆ, ಇಸ್ರೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲದ ಪದಾರ್ಥಗಳಲ್ಲಿ ಅಂದರೆ ಉತ್ತಮವಾದ ಎಣ್ಣೆ, ಹೊಸ ದ್ರಾಕ್ಷಾರಸ, ಧಾನ್ಯ ಇವುಗಳನ್ನೆಲ್ಲ ನಾನು ನಿಮಗೆ ಕೊಡುತ್ತೇನೆ.
సంఖ్యాకాండము 18 : 13 (ERVTE)
ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲವು ನಿಮಗೆ ಸಲ್ಲಬೇಕು. ನಿಮ್ಮ ಕುಟುಂಬಗಳಲ್ಲಿ ಶುದ್ಧರಾಗಿರುವವರೆಲ್ಲರೂ ಅವುಗಳನ್ನು ಊಟಮಾಡಬಹುದು.
సంఖ్యాకాండము 18 : 14 (ERVTE)
సంఖ్యాకాండము 18 : 15 (ERVTE)
“ಇಸ್ರೇಲರು ಯೆಹೋವನಿಗೆ ಹರಕೆ ಹೊತ್ತುಕೊಂಡು ಕೊಡುವ ಪ್ರತಿಯೊಂದೂ ನಿಮ್ಮದಾಗಿದೆ. “ಮನುಷ್ಯರಲ್ಲಾಗಲಿ ಪ್ರಾಣಿಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲು ಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಳ್ಳಬೇಕು.
సంఖ్యాకాండము 18 : 16 (ERVTE)
ಒಂದು ತಿಂಗಳಿನ ಪ್ರಾಯಕ್ಕೆ ಬಂದಿರುವ ಎಲ್ಲರಿಂದಲೂ ನಿಗದಿಪಡಿಸಿದ ಐದು ಶೆಕೆಲ್‌ಗಳನ್ನು ಈಡಾಗಿ ತೆಗೆದುಕೊಳ್ಳಬೇಕು.
సంఖ్యాకాండము 18 : 17 (ERVTE)
“ಆದರೆ ಚೊಚ್ಚಲು ಆಕಳಿಗಾಗಲಿ ಕುರಿಗಾಗಲಿ ಆಡಿಗಾಗಲಿ ಈಡನ್ನು ಕೊಡಕೂಡದು. ಆ ಪಶುಗಳು ಪವಿತ್ರವಾಗಿವೆ. ಅವುಗಳ ರಕ್ತವನ್ನು ವೇದಿಕೆಯ ಮೇಲೆ ಚೆಲ್ಲಿ ಅವುಗಳ ಕೊಬ್ಬನ್ನು ಯೆಹೋವನಿಗೆ ಮೆಚ್ಚಿಗೆಕರವಾದ ಸುಗಂಧ ವಾಸನೆಯ ತ್ಯಾಗಮಯವಾದ ಕಾಣಿಕೆಯನ್ನಾಗಿ ಹೋಮಮಾಡಿರಿ.
సంఖ్యాకాండము 18 : 18 (ERVTE)
ಆದರೆ ಅವುಗಳ ಮಾಂಸದಲ್ಲಿ ನಿವಾಳಿಸಲ್ಪಡುವ ಕಾಣಿಕೆಯಂತೆ ಎದೆಯ ಭಾಗ ಮತ್ತು ಬಲತೊಡೆ ನಿಮ್ಮದಾಗಿವೆ.
సంఖ్యాకాండము 18 : 19 (ERVTE)
ಇಸ್ರೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲವನ್ನು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತವಾದ ಪಾಲಾಗಿ ಅನುಗ್ರಹಿಸಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ ನಿನ್ನ ನಂತರದ ಸಂತತಿಯವರೊಡನೆಯೂ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.”
సంఖ్యాకాండము 18 : 20 (ERVTE)
సంఖ్యాకాండము 18 : 21 (ERVTE)
ಇದಲ್ಲದೆ ಯೆಹೋವನು ಆರೋನನಿಗೆ, “ಅವರ ಭೂಮಿಯಲ್ಲಿ ನಿನಗೆ ಯಾವ ಪಾಲೂ ದೊರೆಯುವುದಿಲ್ಲ. ಅವರ ಮಧ್ಯದಲ್ಲಿ ನೀನು ಭೂಮಿಯ ಯಾವ ಭಾಗವನ್ನೂ ಹೊಂದಿರುವುದಿಲ್ಲ. ಇಸ್ರೇಲರ ಮಧ್ಯದಲ್ಲಿ ಯೆಹೋವನಾದ ನಾನೇ ನಿನ್ನ ಪಾಲೂ ಭಾಗವೂ ಆಗಿದ್ದೇನೆ. “ಲೇವಿಯರು ದೇವದರ್ಶನಗುಡಾರಕ್ಕೋಸ್ಕರ ಮಾಡುವ ಭಾರವಾದ ಕೆಲಸಕ್ಕೆ ಪ್ರತಿಫಲವಾಗಿ ಪ್ರತಿಯೊಬ್ಬ ಇಸ್ರೇಲನ ದಶಾಂಶವನ್ನು ನಾನು ಲೇವಿಯರಿಗೆ ಅವರ ಪಾಲಾಗಿ ಕೊಡುತ್ತಿದ್ದೇನೆ.
సంఖ్యాకాండము 18 : 22 (ERVTE)
ಈಗಿನಿಂದ ಇಸ್ರೇಲರು ದೇವದರ್ಶನಗುಡಾರದೊಳಗೆ ಅತಿಕ್ರಮಿಸಿ ಬರಕೂಡದು; ಬಂದರೆ ತಮ್ಮ ಮೇಲೆ ದಂಡನೆಯನ್ನು ಬರಮಾಡಿಕೊಂಡು ಸಾಯುವರು.
సంఖ్యాకాండము 18 : 23 (ERVTE)
ದೇವದರ್ಶನಗುಡಾರಕ್ಕೋಸ್ಕರ ಲೇವಿಯರು ಮಾತ್ರ ಕೆಲಸ ಮಾಡಬೇಕು. ದೇವದರ್ಶನಗುಡಾರದಲ್ಲಿ ಏನಾದರೂ ಅತಿಕ್ರಮಣ ನಡೆದರೆ ಇಸ್ರೇಲರ ದಂಡನೆಯನ್ನು ಅವರೇ ಪಡೆಯುವರು. ಈಗಿನಿಂದ ಇದೇ ಶಾಶ್ವತ ಕಟ್ಟಳೆ. ಇತರ ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ಭೂಮಿಯಲ್ಲಿ ಲೇವಿಯರಿಗೆ ಯಾವ ಪಾಲೂ ದೊರೆಯುವುದಿಲ್ಲ.
సంఖ్యాకాండము 18 : 24 (ERVTE)
ಇಸ್ರೇಲರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನು ಲೇವಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ. ಇವರಿಗೆ ಇಸ್ರೇಲರೊಂದಿಗೆ ಪಾಲು ದೊರೆಯುವುದಿಲ್ಲವೆಂದು ನಾನು ಲೇವಿಯರ ಕುರಿತು ಹೇಳಿದ ಮಾತಿಗೆ ಇದೇ ಕಾರಣ” ಎಂದು ಹೇಳಿದನು.
సంఖ్యాకాండము 18 : 25 (ERVTE)
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
సంఖ్యాకాండము 18 : 26 (ERVTE)
“ನೀನು ಲೇವಿಯರಿಗೆ ಇದನ್ನು ತಿಳಿಸಬೇಕು: ಇಸ್ರೇಲರು ತಮ್ಮ ಆದಾಯದಲ್ಲಿ ಕೊಡುವ ದಶಾಂಶವನ್ನು ನಿಮ್ಮ ಪಾಲೆಂದು ನಾನು ನಿಗದಿಪಡಿಸಿದ್ದೇನೆ. ಇಸ್ರೇಲರು ದಶಾಂಶ ಕೊಟ್ಟಾಗ ನೀವು ಆ ದಶಾಂಶದಲ್ಲಿ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಸಲ್ಲಿಸಬೇಕು.
సంఖ్యాకాండము 18 : 27 (ERVTE)
ನೀವು ಹೀಗೆ ಸಮರ್ಪಿಸಿದ ಹತ್ತನೆಯ ಪಾಲು ಕಣದಲ್ಲಿನ ದವಸವನ್ನು, ದ್ರಾಕ್ಷಿಆಲೆಯಿಂದ ರಸವನ್ನು ಕೊಟ್ಟಂತೆ ನಿಮ್ಮ ಲೆಕ್ಕದಲ್ಲಿ ಎಣಿಸಲ್ಪಡುವುದು.
సంఖ్యాకాండము 18 : 28 (ERVTE)
ಇಸ್ರೇಲರಿಂದ ನಿಮಗೆ ಸಲ್ಲುವ ಹತ್ತನೆಯ ಪಾಲಿನಲ್ಲಿ ನೀವು ಯೆಹೋವನಿಗೋಸ್ಕರ ಹತ್ತನೆಯ ಭಾಗವನ್ನು ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.
సంఖ్యాకాండము 18 : 29 (ERVTE)
ಇಸ್ರೇಲರು ನಿಮಗೆ ಕೊಡುವ ಸಕಲ ಪದಾರ್ಥಗಳಿಂದ ನೀವು ಯೆಹೋವನಿಗೆ ಕೊಡಬೇಕಾಗಿರುವ ಪಾಲನ್ನು ಮತ್ತು ಪ್ರತಿಷ್ಠಿಸಲ್ಪಟ್ಟಿರುವ ಉತ್ತಮ ಭಾಗವನ್ನು ನೀವು ಪ್ರತ್ಯೇಕವಾಗಿಡಬೇಕು.
సంఖ్యాకాండము 18 : 30 (ERVTE)
“ಮೋಶೆಯೇ, ಲೇವಿಯರಿಗೆ ಹೀಗೆ ಹೇಳು: ಆ ಕಾಣಿಕೆಗಳಲ್ಲಿ ಉತ್ತಮವಾದ ಭಾಗವನ್ನು ನೀವು ಯೆಹೋವನಿಗೆ ಕೊಡುವಾಗ, ಲೇವಿಯರಾದ ನಿಮಗೆ ಅದು ಕಣದ ಉತ್ಪಾದನೆಯಂತೆಯೂ ದ್ರಾಕ್ಷಿಆಲೆಯ ಉತ್ಪಾದನೆಯಂತೆಯೂ ಪರಿಗಣಿಸಲ್ಪಡುವುದು.
సంఖ్యాకాండము 18 : 31 (ERVTE)
ಉಳಿದದ್ದನ್ನು ನೀವು ಮತ್ತು ನಿಮ್ಮ ಕುಟುಂಬದವರು ಎಲ್ಲಿ ಬೇಕಾದರೂ ತಿನ್ನಬಹುದು. ನೀವು ದೇವದರ್ಶನಗುಡಾರದಲ್ಲಿ ಮಾಡುವ ಕೆಲಸಕ್ಕೆ ಇದು ನಿಮಗೆ ಪ್ರತಿಫಲವಾಗಿದೆ.
సంఖ్యాకాండము 18 : 32 (ERVTE)
ನೀವು ಯಾವಾಗಲೂ ಉತ್ತಮ ಭಾಗವನ್ನು ಯೆಹೋವನಿಗೆ ಕೊಟ್ಟರೆ, ಸಂಕಟದ ದಂಡನೆಯಿಂದ ತಪ್ಪಿಸಿಕೊಳ್ಳುವಿರಿ. ಇಸ್ರೇಲರು ಕೊಟ್ಟ ಪವಿತ್ರವಾದ ಕಾಣಿಕೆಗಳಿಗೆ ನೀವು ಅಪಮಾನ ಮಾಡುವುದಿಲ್ಲ ಮತ್ತು ನೀವು ಸಾಯುವುದಿಲ್ಲ.”
❮
❯