సంఖ్యాకాండము 24 : 1 (ERVTE)
{#1ಬಿಳಾಮನ ಮೂರನೆಯ ಸಂದೇಶ } ಇಸ್ರೇಲರನ್ನು ಆಶೀರ್ವದಿಸುವುದೇ ಯೆಹೋವನ ಆಸೆಯೆಂದು ಬಿಳಾಮನು ತಿಳಿದುಕೊಂಡನು. ಆದ್ದರಿಂದ ಬಿಳಾಮನು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಮರುಭೂಮಿಯ ಕಡೆಗೆ ಮುಖವನ್ನು ತಿರುಗಿಸಿಕೊಂಡನು.
సంఖ్యాకాండము 24 : 2 (ERVTE)
ಬಿಳಾಮನು ಕಣ್ಣೆತ್ತಿ ನೋಡಿದಾಗ ಇಸ್ರೇಲರೆಲ್ಲರನ್ನು ಕಂಡನು. ಅವರು ತಮ್ಮ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದರು.
సంఖ్యాకాండము 24 : 3 (ERVTE)
ಆಗ ಅವನು ದೇವರಾತ್ಮ ಪ್ರೇರಿತನಾಗಿ ಹೀಗೆಂದನು: “ಬೆಯೋರನ ಮಗನಾದ ಬಿಳಾಮನ ಸಂದೇಶವಿದು. ನನ್ನ ಕಣ್ಣುಗಳು ತೆರೆಯಲ್ಪಟ್ಟಿವೆ. ನಾನು ನೋಡುವುದನ್ನೇ ಹೇಳುತ್ತೇನೆ.
సంఖ్యాకాండము 24 : 4 (ERVTE)
ನಾನು ಈ ಸಂದೇಶವನ್ನು ದೇವರಿಂದ ಕೇಳಿದೆನು. ಸರ್ವಶಕ್ತನಾದ ದೇವರು ತೋರಿಸಿದವುಗಳನ್ನು ನೋಡಿದೆನು. ನಾನು ಸ್ಪಷ್ಟವಾಗಿ ನೋಡುವುದನ್ನು ದೀನತೆಯಿಂದ ತಿಳಿಸುತ್ತೇನೆ.
సంఖ్యాకాండము 24 : 5 (ERVTE)
“ಯಾಕೋಬ್ಯರೇ, ನಿಮ್ಮ ಡೇರೆಗಳು ಬಹಳ ಸುಂದರವಾಗಿವೆ! ಇಸ್ರೇಲರೇ, ನೀವು ವಾಸಿಸುವ ಸ್ಥಳಗಳು ಬಹಳ ರಮ್ಯವಾಗಿವೆ!
సంఖ్యాకాండము 24 : 6 (ERVTE)
ನಿಮ್ಮ ಗುಡಾರಗಳು ಕಣಿವೆಗಳಂತೆ ಹರಡಿಕೊಂಡಿವೆ. ನಿಮ್ಮ ಗುಡಾರಗಳು ನದಿಯ ಬಳಿಯಿರುವ ತೋಟಗಳಂತಿವೆ. ನಿಮ್ಮ ಗುಡಾರಗಳು ಯೆಹೋವನು ನೆಟ್ಟ ಸುವಾಸನೆಯ ಪೊದೆಗಳಂತೆಯೂ ನೀರಿನ ಬಳಿಯಿರುವ ದೇವದಾರಿನ ಮರಗಳಂತೆಯೂ ಇವೆ.
సంఖ్యాకాండము 24 : 7 (ERVTE)
ನಿಮಗೆ ಯಾವಾಗಲೂ ಬೇಕಾದಷ್ಟು ನೀರು ಇರುವುದು; ನೀವು ಬಿತ್ತಿದ ಬೀಜಗಳು ಬೆಳೆಯಲು ಸಾಕಷ್ಟು ನೀರು ಇರುವುದು. ನಿಮ್ಮ ಅರಸನು ಆಗಾಗ್ ಎಂಬವನಿಗಿಂತಲೂ ದೊಡ್ಡವನಾಗಿದ್ದಾನೆ. ನಿಮ್ಮ ರಾಜ್ಯವು ಬಹಳ ಬಲಿಷ್ಠವಾಗಿರುವುದು.
సంఖ్యాకాండము 24 : 8 (ERVTE)
“ದೇವರು ಆ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಂತೆ ಬಲಿಷ್ಠರಾಗಿದ್ದಾರೆ. ಅವರು ತಮ್ಮೆಲ್ಲಾ ಶತ್ರುಗಳನ್ನು ಸೋಲಿಸುವರು. ಅವರು ತಮ್ಮ ವೈರಿಗಳ ಮೂಳೆಗಳನ್ನು ಮುರಿದುಹಾಕುವರು. ಅವರ ಬಾಣಗಳು ಅವರ ವೈರಿಗಳನ್ನು ಕೊಲ್ಲುವವು.
సంఖ్యాకాండము 24 : 9 (ERVTE)
ಅವರು ಅಡಗಿಕೊಂಡಿರುವರು; ಇಸ್ರೇಲರು ಸಿಂಹದಂತೆಯೂ ಹೆಣ್ಣು ಸಿಂಹದಂತೆಯೂ ವಿಶ್ರಮಿಸುವರು. ಅದನ್ನು ಎಬ್ಬಿಸಲು ಯಾರಿಗೆ ಧೈರ್ಯವಿದೆ? ನಿಮ್ಮನ್ನು ಆಶೀರ್ವದಿಸುವವನು ಆಶೀರ್ವದಿಸಲ್ಪಡುವನು. ನಿಮ್ಮನ್ನು ಶಪಿಸುವವನು ಶಪಿಸಲ್ಪಡುವನು.”
సంఖ్యాకాండము 24 : 10 (ERVTE)
ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
సంఖ్యాకాండము 24 : 11 (ERVTE)
ಆದ್ದರಿಂದ ನೀನೀಗ ನೇರವಾಗಿ ಮನೆಗೆ ಹೋಗಿಬಿಡು. ನಿನಗೆ ಹೆಚ್ಚು ಹಣ ಕೊಡುವುದಾಗಿ ಆಲೋಚಿಸಿದ್ದೆನು. ಆದರೆ ನೀನು ನಿನ್ನ ಬಹುಮಾನವನ್ನು ಕಳೆದುಕೊಳ್ಳುವಂತೆ ಯೆಹೋವನು ಮಾಡಿದನು” ಎಂದು ಹೇಳಿದನು.
సంఖ్యాకాండము 24 : 12 (ERVTE)
(12-13)ಅದಕ್ಕೆ ಬಿಳಾಮನು ಬಾಲಾಕನಿಗೆ, “ಬಾಲಾಕನು, ಬೆಳ್ಳಿಬಂಗಾರಗಳಿಂದ ತುಂಬಿದ ತನ್ನ ಅರಮನೆಯನ್ನು ಕೊಟ್ಟರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನಗೆ ಇಷ್ಟಬಂದಂತೆ ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ನಾನು ಮಾಡಲಾರೆನು; ಆದರೆ ಯೆಹೋವನು ಆಜ್ಞಾಪಿಸುವುದನ್ನೇ ಮಾತಾಡುವೆನೆಂದು ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ ಹೇಳಲಿಲ್ಲವೇ?
సంఖ్యాకాండము 24 : 13 (ERVTE)
సంఖ్యాకాండము 24 : 14 (ERVTE)
ಆಗಲಿ, ನಾನು ನನ್ನ ಸ್ವಜನರ ಬಳಿಗೆ ಹೋಗುತ್ತೇನೆ. ಆದರೆ ಮುಂದೆ ಆ ಜನರು ನಿನ್ನ ಜನರಿಗೆ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ, ಕೇಳು” ಎಂದು ಹೇಳಿದನು.
సంఖ్యాకాండము 24 : 15 (ERVTE)
{#1ಬಿಳಾಮನ ಕೊನೆಯ ಸಂದೇಶ } ಆಗ ಬಿಳಾಮನು ಹೀಗೆಂದನು: “ಬೆಯೋರನ ಮಗನಾದ ಬಿಳಾಮನ ಸಂದೇಶವಿದು: ನಾನು ಸ್ಪಷ್ಟವಾಗಿ ನೋಡುತ್ತಿರುವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೇನೆ.
సంఖ్యాకాండము 24 : 16 (ERVTE)
ನಾನು ದೇವರ ಮುಂದೆ ಅಡ್ಡಬೀಳುತ್ತೇನೆ, ಆದರೆ ನನ್ನ ಕಣ್ಣುಗಳು ಮುಚ್ಚಲ್ಪಟ್ಟಿಲ್ಲ. ನಾನು ದೇವರ ವಾಕ್ಯಗಳನ್ನು ಕೇಳುತ್ತಿದ್ದೇನೆ. ನಾನು ಮಹೋನ್ನತನಾದ ದೇವರಿಂದ ಜ್ಞಾನವನ್ನು ಹೊಂದಿಕೊಳ್ಳುತ್ತಿದ್ದೇನೆ. ಸರ್ವಶಕ್ತನಾದ ದೇವರು ತೋರಿಸುವ ಸಂಗತಿಗಳನ್ನು ನಾನು ನೋಡುತ್ತಿದ್ದೇನೆ.
సంఖ్యాకాండము 24 : 17 (ERVTE)
“ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ. ಆದರೆ ಈಗಲ್ಲ. ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ, ಆದರೆ ಬೇಗನೆ ಅಲ್ಲ. ಯಾಕೋಬನ ವಂಶದಿಂದ ನಕ್ಷತ್ರವೊಂದು ಬರುವುದು. ಇಸ್ರೇಲರಿಂದ ಅರಸನೊಬ್ಬನು ಬರುವನು. ಅವನು ಮೋವಾಬ್ಯರ ತಲೆಯನ್ನು ಜಜ್ಜುವನು. ಆ ಅರಸನು ಶೇತನ ಪುತ್ರರೆಲ್ಲರ ತಲೆಗಳನ್ನು ಜಜ್ಜುವನು.
సంఖ్యాకాండము 24 : 18 (ERVTE)
ಇಸ್ರೇಲರು ಬಲಿಷ್ಠರಾಗುವರು. ಅವರು ಎದೋಮ್ ದೇಶವನ್ನು ಪಡೆಯುವರು. ಅವರು ತಮ್ಮ ವೈರಿಯಾದ ಸೇಯೀರನ ದೇಶವನ್ನು ಪಡೆಯುವರು.
సంఖ్యాకాండము 24 : 19 (ERVTE)
“ಯಾಕೋಬನ ವಂಶದಿಂದ ಹೊಸ ಅರಸನೊಬ್ಬನು ಬರುವನು. ಆ ಅರಸನು ಆ ಪಟ್ಟಣದಲ್ಲಿ ಉಳಿದವರನ್ನು ನಾಶಮಾಡುವನು.”
సంఖ్యాకాండము 24 : 20 (ERVTE)
“ತರುವಾಯ ಬಿಳಾಮನು ಅಮಾಲೇಕ್ಯರನ್ನು ನೋಡಿ ಹೀಗೆಂದನು: “ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಬಲಿಷ್ಠರು; ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಮೊದಲನೆಯವರು; ಆದರೆ ಕೊನೆಯಲ್ಲಿ ಅವರು ನಾಶವಾಗುವರು.”
సంఖ్యాకాండము 24 : 21 (ERVTE)
ಆಗ ಬಿಳಾಮನು ಕೇನ್ಯರನ್ನು ನೋಡಿ ಹೀಗೆಂದನು: “ನಿಮ್ಮ ಮನೆಯು ಬೆಟ್ಟದ ತುದಿಯಲ್ಲಿರುವ ಪಕ್ಷಿಯ ಗೂಡಿನಂತೆ[* ಗೂಡು ಹೀಬ್ರೂ ಭಾಷೆಯಲ್ಲಿ ಈ ಪದವು “ಕೇನ್ಯರು” ಎಂಬ ಉಚ್ಛಾರಣೆಯನ್ನು ಹೊಂದಿದೆ. ] ಸುರಕ್ಷಿತವಾಗಿದೆಯೆಂದು ನೀವು ನಂಬುತ್ತೀರಿ.
సంఖ్యాకాండము 24 : 22 (ERVTE)
ಆದರೆ ಕೇನ್ಯರೇ, ಅಶ್ಶೂರ್ಯವು ನಿಮ್ಮನ್ನು ಸೆರೆ ಒಯ್ಯುವಾಗ ಅದು ನಾಶವಾಗುವುದು.”
సంఖ్యాకాండము 24 : 23 (ERVTE)
ಆಗ ಬಿಳಾಮನು ಹೀಗೆಂದನು: “ದೇವರು ಇದನ್ನು ಮಾಡುವಾಗ ಯಾರೂ ಉಳಿಯರು.
సంఖ్యాకాండము 24 : 24 (ERVTE)
ಸೈಪ್ರಸ್‌ನ ತೀರಗಳಿಂದ ಹಡಗುಗಳು ಬರುವವು. ಅವರು ಅಶ್ಶೂರ್ಯವನ್ನೂ ಏಬೆರವನ್ನೂ ಸೋಲಿಸುವರು; ಆದರೆ ಅವರು ಸಹ ನಾಶವಾಗುವರು.”
సంఖ్యాకాండము 24 : 25 (ERVTE)
ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು. ಬಾಲಾಕನೂ ಸಹ ಹೊರಟುಹೋದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25