సంఖ్యాకాండము 25 : 1 (ERVTE)
{#1ಪೆಯೋರಿನಲ್ಲಿ ಇಸ್ರೇಲರು } ಇಸ್ರೇಲರು ಅಖಾಸಿಯದ ಸಮೀಪದಲ್ಲಿ ಇಳಿದುಕೊಂಡಿದ್ದರು. ಅವರು ಅಲ್ಲಿದ್ದಾಗ ಮೋವಾಬ್ ಸ್ತ್ರೀಯರೊಡನೆ ಲೈಂಗಿಕ ಪಾಪಗಳನ್ನು ಮಾಡತೊಡಗಿದರು.
సంఖ్యాకాండము 25 : 2 (ERVTE)
(2-3)ಮೋವಾಬ್ ಸ್ತ್ರೀಯರು ತಮ್ಮ ಸುಳ್ಳುದೇವರಿಗೆ ಮಾಡಿದ ಔತಣಯಜ್ಞಗಳಿಗೆ ಅವರನ್ನು ಆಮಂತ್ರಿಸಿದರು. ಆದ್ದರಿಂದ ಇಸ್ರೇಲರು ಅವರ ಯಜ್ಞಗಳ ಆಹಾರವನ್ನು ತಿಂದರು ಮತ್ತು ಅವರ ದೇವರನ್ನು ಪೂಜಿಸಿದರು. ಈ ರೀತಿ ಇಸ್ರೇಲರು ಸುಳ್ಳುದೇವರಾದ ಪೆಗೋರ್ ಬಾಳನ ಭಕ್ತರಾದರು. ಹೀಗಾಗಿ ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡನು.
సంఖ్యాకాండము 25 : 3 (ERVTE)
సంఖ్యాకాండము 25 : 4 (ERVTE)
సంఖ్యాకాండము 25 : 5 (ERVTE)
ಯೆಹೋವನು ಮೋಶೆಗೆ, “ನೀನು ಜನರ ನಾಯಕರನ್ನೆಲ್ಲ ಬಂಧಿಸಿ ಯೆಹೋವನ ಮುಂದೆ ಬಹಿರಂಗವಾಗಿ ಅವರನ್ನು ನೇಣುಗಂಬಕ್ಕೆ ಏರಿಸು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರೇಲರಿಂದ ತೊಲಗಿಸಬೇಕು” ಎಂದು ಹೇಳಿದನು.
సంఖ్యాకాండము 25 : 6 (ERVTE)
ಆದಕಾರಣ ಮೋಶೆ ಇಸ್ರೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನು, ಸುಳ್ಳುದೇವರಾದ ಪೆಗೋರದ ಬಾಳನನ್ನು ಆರಾಧಿಸುವಂತೆ ಜನರನ್ನೂ ಪ್ರೋತ್ಸಾಹಿಸಿದವರನ್ನು ಕಂಡುಹಿಡಿದು ನೀವು ಅವರನ್ನು ಕೊಲ್ಲಬೇಕು” ಎಂದು ಆಜ್ಞಾಪಿಸಿದನು. ಆಗ ಮೋಶೆ ಮತ್ತು ಇಡೀ ಇಸ್ರೇಲ್ ಸಮುದಾಯವು ಒಟ್ಟಾಗಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಅಳುತ್ತಿದ್ದರು. ಅಷ್ಟರಲ್ಲಿ ಇಸ್ರೇಲ್ ಮನುಷ್ಯನೊಬ್ಬನು ಮಿದ್ಯಾನ್ ಸ್ತ್ರೀಯೊಬ್ಬಳನ್ನು ತನ್ನ ಸಂಬಂಧಿಕರ ಬಳಿಗೆ ಕರೆದುಕೊಂಡು ಬಂದನು. ಮೋಶೆಯ ಮತ್ತು ಎಲ್ಲಾ ಜನರ ಕಣ್ಣೆದುರಿನಲ್ಲೇ ಅವನು ಹೀಗೆ ಮಾಡಿದನು.
సంఖ్యాకాండము 25 : 7 (ERVTE)
ಕೂಡಲೇ ಯಾಜಕನಾಗಿದ್ದ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ತೆಗೆದುಕೊಂಡು
సంఖ్యాకాండము 25 : 8 (ERVTE)
ಆ ಇಸ್ರೇಲನನ್ನು ಹಿಂಬಾಲಿಸಿ ಮಲಗುವ ಕೋಣೆಯೊಳಗೆ ಹೋಗಿ ಅವನನ್ನೂ ಆ ಮಿದ್ಯಾನ್ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರೇಲರಿಗುಂಟಾದ ವ್ಯಾಧಿ ನಿಂತುಹೋಯಿತು.
సంఖ్యాకాండము 25 : 9 (ERVTE)
ಆ ವ್ಯಾಧಿಯಿಂದ ಒಟ್ಟು 24,000 ಜನರು ಸತ್ತುಹೋದರು.
సంఖ్యాకాండము 25 : 10 (ERVTE)
(10-11)ಆಗ ಯೆಹೋವನು ಮೋಶೆಗೆ, “ನಾನೇ ನನ್ನ ಗೌರವವನ್ನು ಕಾಪಾಡಿಕೊಳ್ಳುವ ಮೇರೆಗೆ ಯಾಜಕನಾಗಿದ್ದ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆಗಿರುವ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿ ಇಸ್ರೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರೇಲರನ್ನು ನಿರ್ಮೂಲ ಮಾಡುವ ಅಗತ್ಯವಿಲ್ಲ.
సంఖ్యాకాండము 25 : 11 (ERVTE)
సంఖ్యాకాండము 25 : 12 (ERVTE)
ಆದಕಾರಣ ನಾನು ಅವನ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆಂದು ಎಲ್ಲರಿಗೂ ತಿಳಿಸು;
సంఖ్యాకాండము 25 : 13 (ERVTE)
ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.
సంఖ్యాకాండము 25 : 14 (ERVTE)
ಆ ಮಿದ್ಯಾನ್ ಸ್ತ್ರೀಯೊಡನೆ ಕೊಲ್ಲಲ್ಪಟ್ಟವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾಗಿದ್ದ ಜಿಮ್ರೀ. ಇವನು ಸಾಲೂ ಎಂಬವನ ಮಗ.
సంఖ్యాకాండము 25 : 15 (ERVTE)
ಹತಳಾದ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ. ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಜೂರ್ ಎಂಬವನ ಮಗಳು.
సంఖ్యాకాండము 25 : 16 (ERVTE)
ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
సంఖ్యాకాండము 25 : 17 (ERVTE)
“ನೀನು ಮಿದ್ಯಾನ್ಯರನ್ನು ವೈರಿಗಳೆಂದು ಪರಿಗಣಿಸಿರುವುದರಿಂದ ಅವರನ್ನು ಸಂಹರಿಸಬೇಕು.
సంఖ్యాకాండము 25 : 18 (ERVTE)
ಯಾಕೆಂದರೆ ಅವರು ನಿಮ್ಮನ್ನು ವೈರಿಗಳೆಂದು ಪರಿಗಣಿಸಿ ಪೆಗೋರನ ಘಟನೆಯಲ್ಲಿ ನಿಮ್ಮನ್ನು ಮೋಸಗೊಳಿಸಿದರು. ಮಿದ್ಯಾನಿನ ನಾಯಕನೊಬ್ಬನ ಮಗಳೂ ತಮ್ಮ ರಕ್ತಸಂಬಂಧಿಯೂ ಆಗಿದ್ದ ಕೊಜ್ಬೀಯ ವಿಷಯದಲ್ಲಿಯೂ ಅವರು ನಿಮ್ಮನ್ನು ಮೋಸಗೊಳಿಸಿದರು. ಪೆಗೋರಿನ ಘಟನೆಯಿಂದ ಇಸ್ರೇಲರಿಗೆ ಕಾಯಿಲೆ ಉಂಟಾದಾಗ ಆ ಸ್ತ್ರೀಯೂ ಸತ್ತಳು.”
❮
❯
1
2
3
4
5
6
7
8
9
10
11
12
13
14
15
16
17
18