సంఖ్యాకాండము 29 : 1 (ERVTE)
{#1ತುತ್ತೂರಿಗಳ ಹಬ್ಬ } “ಏಳನೆಯ ತಿಂಗಳಿನ ಮೊದಲನೆ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಅದು ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ದಿನವಾಗಿದೆ.
సంఖ్యాకాండము 29 : 2 (ERVTE)
ಅದರಲ್ಲಿ ನೀವು ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ ಸಮರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
సంఖ్యాకాండము 29 : 3 (ERVTE)
ಇವುಗಳೊಡನೆ ಧಾನ್ಯಸಮರ್ಪಣೆಗಾಗಿ ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು ಮತ್ತು
సంఖ్యాకాండము 29 : 4 (ERVTE)
ಪ್ರತಿಯೊಂದು ಕುರಿಮರಿಗೆ ಮೂರು ಸೇರು, ಈ ಮೇರೆಗೆ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಸಮರ್ಪಿಸಬೇಕು.
సంఖ్యాకాండము 29 : 5 (ERVTE)
ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಅರ್ಪಿಸಬೇಕು.
సంఖ్యాకాండము 29 : 6 (ERVTE)
ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ.
సంఖ్యాకాండము 29 : 7 (ERVTE)
{#1ದೋಷಪರಿಹಾರಕ ದಿನ } “ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಉಪವಾಸ ಮಾಡಬೇಕು; ಯಾವ ಕೆಲಸವನ್ನೂ ಮಾಡಬಾರದು.
సంఖ్యాకాండము 29 : 8 (ERVTE)
ನೀವು ಯೆಹೋವನಿಗೆ ಸುಗಂಧಕರವಾಗಿರುವ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನೂ ಅರ್ಪಿಸಬೇಕು. ಇವು ಪೂರ್ಣಾಂಗವಾದವುಗಳಾಗಿರಬೇಕು.
సంఖ్యాకాండము 29 : 9 (ERVTE)
ಇವುಗಳೊಡನೆ, ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಒಂದು ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು
సంఖ్యాకాండము 29 : 10 (ERVTE)
ಮತ್ತು ಒಂದು ಕುರಿಮರಿಗೆ ಮೂರು ಸೇರು ಸಮರ್ಪಿಸಬೇಕು.
సంఖ్యాకాండము 29 : 11 (ERVTE)
ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ದೋಷಪರಿಹಾರಕ ದಿನಕ್ಕೋಸ್ಕರ ಅರ್ಪಿಸುವ ಪಾಪಪರಿಹಾರಕ ಯಜ್ಞ, ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರ ಧಾನ್ಯಾರ್ಪಣೆ ಮತ್ತು ಇವುಗಳೊಡನೆ ಅರ್ಪಿಸುವ ದ್ರವ್ಯಾರ್ಪಣೆ ಇವುಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು. ಇವು ಯೆಹೋವನಿಗೆ ಸುಗಂಧಕರವಾಗಿವೆ.
సంఖ్యాకాండము 29 : 12 (ERVTE)
{#1ಪರ್ಣಶಾಲೆಗಳ ಹಬ್ಬ } “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಇದು ಪರ್ಣಶಾಲೆಗಳ ಹಬ್ಬವಾಗಿದೆ. ಆ ದಿವಸ ನೀವು ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು. ಯೆಹೋವನಿಗೆ ಗೌರವಾರ್ಥವಾಗಿ “ಪರ್ಣಶಾಲೆಗಳ ಹಬ್ಬ” ವನ್ನು ನೀವು ಏಳು ದಿನಗಳವರೆಗೆ ಆಚರಿಸಬೇಕು.
సంఖ్యాకాండము 29 : 13 (ERVTE)
ನೀವು ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಬೇಕು. ಅದರ ಸುವಾಸನೆಯು ಯೆಹೋವನಿಗೆ ಮೆಚ್ಚಿಗೆಕರವಾಗಿದೆ. ಸರ್ವಾಂಗಹೋಮವಾಗಿ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು.
సంఖ్యాకాండము 29 : 14 (ERVTE)
ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಅರ್ಪಿಸಬೇಕು. ಅಂದರೆ ಪ್ರತಿಯೊಂದು ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು
సంఖ్యాకాండము 29 : 15 (ERVTE)
ಮತ್ತು ಒಂದು ಕುರಿಮರಿಗೆ ಮೂರು ಸೇರು ಸಮರ್ಪಿಸಬೇಕು.
సంఖ్యాకాండము 29 : 16 (ERVTE)
ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
సంఖ్యాకాండము 29 : 17 (ERVTE)
“ಆ ಉತ್ಸವದ ಎರಡನೆಯ ದಿನದಲ್ಲಿ ನೀವು ಹನ್ನೆರಡು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
సంఖ్యాకాండము 29 : 18 (ERVTE)
ಅಲ್ಲದೆ ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕಗೊಂಡ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
సంఖ్యాకాండము 29 : 19 (ERVTE)
ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.
సంఖ్యాకాండము 29 : 20 (ERVTE)
“ಈ ಉತ್ಸವದ ಮೂರನೆಯ ದಿನದಲ್ಲಿ ನೀವು ಹನ್ನೊಂದು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳು ಪೂರ್ಣಾಂಗವಾದವುಗಳಾಗಿರಬೇಕು.
సంఖ్యాకాండము 29 : 21 (ERVTE)
ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕವಾಗಿರುವ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
సంఖ్యాకాండము 29 : 22 (ERVTE)
ದೋಷಪರಿಹಾರಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮಾನುಸಾರವಾದ ದೈನಂದಿನ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲ್ಕಂಡವುಗಳನ್ನು ಅರ್ಪಿಸಬೇಕು.
సంఖ్యాకాండము 29 : 23 (ERVTE)
“ಈ ಉತ್ಸವದ ನಾಲ್ಕನೆಯ ದಿನದಲ್ಲಿ ನೀವು ಹತ್ತು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವು ಪೂರ್ಣಾಂಗವುಳ್ಳವುಗಳಾಗಿರಬೇಕು.
సంఖ్యాకాండము 29 : 24 (ERVTE)
ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
సంఖ్యాకాండము 29 : 25 (ERVTE)
ಪಾಪಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.
సంఖ్యాకాండము 29 : 26 (ERVTE)
“ಈ ಉತ್ಸವದ ಐದನೆಯ ದಿನದಲ್ಲಿ ನೀವು ಒಂಭತ್ತು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು.
సంఖ్యాకాండము 29 : 27 (ERVTE)
ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕಗೊಂಡ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
సంఖ్యాకాండము 29 : 28 (ERVTE)
ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾದ ದೈನಂದಿನ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸಬೇಕಾದ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.
సంఖ్యాకాండము 29 : 29 (ERVTE)
“ಈ ಉತ್ಸವದ ಆರನೆಯ ದಿನದಲ್ಲಿ ನೀವು ಎಂಟು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವುಳ್ಳವುಗಳಾಗಿರಬೇಕು.
సంఖ్యాకాండము 29 : 30 (ERVTE)
ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಯನ್ನೂ ಪಾನದ್ರವ್ಯಾರ್ಪಣೆಯನ್ನೂ ಸರಿಯಾದ ಪ್ರಮಾಣದಲ್ಲಿ ಮಾಡಬೇಕು.
సంఖ్యాకాండము 29 : 31 (ERVTE)
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.
సంఖ్యాకాండము 29 : 32 (ERVTE)
“ಈ ಉತ್ಸವದ ಏಳನೆಯ ದಿನದಲ್ಲಿ ನೀವು ಏಳು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಅವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
సంఖ్యాకాండము 29 : 33 (ERVTE)
ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಗಳನ್ನು ಮತ್ತು ಪಾನದ್ರವ್ಯಾರ್ಪಣೆಗಳನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
సంఖ్యాకాండము 29 : 34 (ERVTE)
ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.
సంఖ్యాకాండము 29 : 35 (ERVTE)
“ಎಂಟನೆಯ ದಿನದಲ್ಲಿ ಮುಕ್ತಾಯ ಸಭಾಕೂಟವಿರುವುದು. ಆ ದಿನದಲ್ಲಿ ಯಾವ ಪ್ರಯಾಸದ ಕೆಲಸವನ್ನೂ ಮಾಡಬಾರದು.
సంఖ్యాకాండము 29 : 36 (ERVTE)
ನೀವು ಈ ಕೆಳಕಂಡವುಗಳನ್ನು ಯೆಹೋವನಿಗೆ ಸುಗಂಧಕರವಾದ ತ್ಯಾಗಮಯವಾದ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನೂ ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
సంఖ్యాకాండము 29 : 37 (ERVTE)
ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯಾರ್ಪಣೆಗಳನ್ನು ಮತ್ತು ಪಾನದ್ರವ್ಯಾರ್ಪಣೆಗಳನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.
సంఖ్యాకాండము 29 : 38 (ERVTE)
ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.
సంఖ్యాకాండము 29 : 39 (ERVTE)
సంఖ్యాకాండము 29 : 40 (ERVTE)
“ಮೇಲೆ ತಿಳಿಸಿರುವ ಸಾರ್ವಜನಿಕ ಯಜ್ಞಗಳನ್ನು ಇಡೀ ಸಮುದಾಯಕ್ಕೋಸ್ಕರ ಹಬ್ಬದ ದಿನಗಳಲ್ಲಿ ನಿಮ್ಮ ಸರ್ವಾಂಗಹೋಮಗಳನ್ನಾಗಿಯೂ ಧಾನ್ಯಾರ್ಪಣೆಗಳನ್ನಾಗಿಯೂ ಪಾನದ್ರವ್ಯಾರ್ಪಣೆಗಳನ್ನಾಗಿಯೂ ಮತ್ತು ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಬೇಕು. ನಿಮ್ಮ ವೈಯಕ್ತಿಕ ಹರಕೆಯ ಅರ್ಪಣೆ ಮತ್ತು ಸ್ವಯಿಚ್ಛಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.” ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರೇಲರಿಗೆ ತಿಳಿಸಿದನು.
❮
❯