సంఖ్యాకాండము 35 : 1 (ERVTE)
{#1ಲೇವಿಯರ ಪಟ್ಟಣಗಳು } [PS]ಜೆರಿಕೊ ಪಟ್ಟಣದ ಆಚೆಕಡೆಯಲ್ಲಿ ಜೋರ್ಡನ್ ನದಿಯ ತೀರದ ಬಳಿಯಿಂದ ಮೋವಾಬ್ಯರ ಬಯಲಿನಲ್ಲಿ ಯೆಹೋವನು ಮೋಶೆಯೊಡನೆ ಮಾತಾಡಿ ಹೇಳಿದ್ದೇನೆಂದರೆ:
సంఖ్యాకాండము 35 : 2 (ERVTE)
“ಇಸ್ರೇಲರು ತಾವು ಹೊಂದುವ ಸ್ವಾಸ್ತ್ಯದಲ್ಲಿ ಕೆಲವು ಊರುಗಳನ್ನೂ ಆ ಊರುಗಳ ಸುತ್ತಲಿರುವ ಭೂಮಿಯನ್ನೂ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸು.
సంఖ్యాకాండము 35 : 3 (ERVTE)
ಅವರು ಆ ಪಟ್ಟಣಗಳಲ್ಲಿ ವಾಸಿಸುವರು. ಆ ಊರುಗಳು ಲೇವಿಯರ ನಿವಾಸಕ್ಕಾಗಿ, ಸುತ್ತಲಿರುವ ಭೂಮಿಗಳು ಅವರ ಪಶುಗಳಿಗಾಗಿ ಮತ್ತು ಇತರ ಪ್ರಾಣಿಗಳಿಗಾಗಿ ಇರುವವು.
సంఖ్యాకాండము 35 : 4 (ERVTE)
ನೀವು ಲೇವಿಯರಿಗೆ ಕೊಡುವ ಹುಲ್ಲುಗಾವಲುಗಳು ಅಂದರೆ ಪಟ್ಟಣಗಳ ಸುತ್ತಲೂ ಇರುವ ಹುಲ್ಲುಗಾವಲುಗಳು ಪಟ್ಟಣದ ಗೋಡೆಯ ಹೊರಗೆ ಎಲ್ಲಾ ದಿಕ್ಕಿನಲ್ಲೂ ಒಂದು ಸಾವಿರ ಮೊಳ ವಿಸ್ತರಿಸಬೇಕು.
సంఖ్యాకాండము 35 : 5 (ERVTE)
ಪಟ್ಟಣದ ಹೊರಗೆ ಪ್ರತಿಯೊಂದು ದಿಕ್ಕಿನಲ್ಲಿ ಎರಡು ಸಾವಿರ ಮೊಳಗಳನ್ನು ಅಳೆದು ಪಟ್ಟಣಕ್ಕೆ ಗಡಿಯನ್ನು ಗೊತ್ತುಪಡಿಸಬೇಕು; ಪೂರ್ವದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ದಕ್ಷಿಣದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ಪಶ್ಚಿಮದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು ಮತ್ತು ಉತ್ತರದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು. ಇವುಗಳ ಮಧ್ಯದಲ್ಲಿ ಪಟ್ಟಣವಿರಬೇಕು. ಅದು ಅವರ ಪಟ್ಟಣಗಳಿಗೆ ಹುಲ್ಲುಗಾವಲುಗಳಾಗಿರುವುದು.
సంఖ్యాకాండము 35 : 6 (ERVTE)
ನೀವು ಲೇವಿಯರಿಗೆ ಕೊಡುವ ಆರು ಪಟ್ಟಣಗಳು ಆಶ್ರಯ ನಗರಗಳಾಗಿರುತ್ತವೆ. ಬೇರೊಬ್ಬನನ್ನು ಕೊಂದು ಸಂರಕ್ಷಣೆಗಾಗಿ ಓಡಿಹೋಗುವವರು ಈ ಪಟ್ಟಣಗಳಿಗೆ ಬಂದು ಸಂರಕ್ಷಣೆ ಪಡೆಯಲು ನೀವು ಅವಕಾಶ ಕೊಡಬೇಕು. ಇದಲ್ಲದೆ ಇತರ ನಲವತ್ತೆರಡು ಪಟ್ಟಣಗಳನ್ನು ನೀವು ಲೇವಿಯರಿಗೆ ಕೊಡಬೇಕು.
సంఖ్యాకాండము 35 : 7 (ERVTE)
ಅಂದರೆ ನೀವು ಲೇವಿಯರಿಗೆ ಒಟ್ಟು ನಲವತ್ತೆಂಟು ಪಟ್ಟಣಗಳನ್ನು ಅವುಗಳ ಸುತ್ತಲಿರುವ ಹುಲ್ಲುಗಾವಲಿನ ಸಮೇತವಾಗಿ ಕೊಡುತ್ತೀರಿ.
సంఖ్యాకాండము 35 : 8 (ERVTE)
ನೀವು ಇತರ ಇಸ್ರೇಲರ ಆಸ್ತಿಯಿಂದ ಲೇವಿಯರಿಗೆ ಪಟ್ಟಣಗಳನ್ನು ಕೊಡುವಾಗ, ಪ್ರತಿಯೊಂದು ಕುಲವು ಹೊಂದಿರುವ ಭೂಮಿಗನುಸಾರವಾಗಿ ಕೊಡಬೇಕು. ದೊಡ್ಡಕುಲಗಳಿಂದ ಹೆಚ್ಚು ಪಟ್ಟಣಗಳನ್ನೂ ಚಿಕ್ಕಕುಲಗಳಿಂದ ಕೆಲವು ಪಟ್ಟಣಗಳನ್ನೂ ತೆಗೆದುಕೊಳ್ಳಿ.” [PE]
సంఖ్యాకాండము 35 : 9 (ERVTE)
[PS]ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
సంఖ్యాకాండము 35 : 10 (ERVTE)
“ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ
సంఖ్యాకాండము 35 : 11 (ERVTE)
ಆಶ್ರಯ ಸ್ಥಳಗಳಾಗುವುದಕ್ಕೆ ಪಟ್ಟಣಗಳನ್ನು ಆರಿಸಿಕೊಳ್ಳಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.
సంఖ్యాకాండము 35 : 12 (ERVTE)
ಕೊಂದವನು ನ್ಯಾಯ ವಿಚಾರಣಾಸಭೆಯ ಮುಂದೆ ನಿಂತುಕೊಳ್ಳುವುದಕ್ಕಿಂತ ಮೊದಲೇ ಕೊಲ್ಲಲ್ಪಟ್ಟವನ ಸಂಬಂಧಿಕನಿಂದ ಕೊಲ್ಲಲ್ಪಡದೆ ಸುರಕ್ಷಿತನಾಗಿರಲು ಆ ಆಶ್ರಯ ಸ್ಥಳಗಳು ನಿಮ್ಮ ಮಧ್ಯದಲ್ಲಿ ಇರಲೇಬೇಕು.
సంఖ్యాకాండము 35 : 13 (ERVTE)
(13-14)ಹೀಗೆ ಆಶ್ರಯ ಸ್ಥಳಗಳಾಗಿರುವುದಕ್ಕೆ ನೀವು ಜೋರ್ಡನ್ ನದಿಯ ಈಚೆ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು, ಹೀಗೆ ಒಟ್ಟು ಆರು ಪಟ್ಟಣಗಳನ್ನು ನೇಮಿಸಬೇಕು.
సంఖ్యాకాండము 35 : 14 (ERVTE)
సంఖ్యాకాండము 35 : 15 (ERVTE)
ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರೇಲನಾಗಲಿ ಪರದೇಶದವನಾಗಲಿ ನಿಮ್ಮಲ್ಲಿ ಇಳಿದುಕೊಂಡವನಾಗಲಿ, ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯ ಹೊಂದಬಹುದು. [PE]
సంఖ్యాకాండము 35 : 16 (ERVTE)
[PS]“ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನನ್ನು ಕೊಲೆಗಾರನೆಂದು ನೀವು ತೀರ್ಮಾನಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.
సంఖ్యాకాండము 35 : 17 (ERVTE)
ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ನರಹತ್ಯ ಮಾಡಿದವನಾಗಿದ್ದಾನೆ. ಅವನಿಗೆ ಮರಣಶಿಕ್ಷೆಯಾಗಬೇಕು.
సంఖ్యాకాండము 35 : 18 (ERVTE)
ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ವಸ್ತುವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ಕೊಲೆಗಾರ. ಅವನಿಗೆ ಮರಣಶಿಕ್ಷೆಯಾಗಬೇಕು. ಲೇವಿಯರ ಪಟ್ಟಣಗಳು
సంఖ్యాకాండము 35 : 19 (ERVTE)
ಕೊಲ್ಲಲ್ಪಟ್ಟವನ ಸಮೀಪ ಬಂಧುವು ಕೊಲೆಗಾರನನ್ನು ಮರಣಕ್ಕೀಡುಮಾಡಬೇಕು. ಅವನು ಕೊಲೆಗಾರನನ್ನು ಯಾವಾಗ ಕಂಡರೂ ಅವನನ್ನು ಕೊಲ್ಲಬೇಕು. [PE]
సంఖ్యాకాండము 35 : 20 (ERVTE)
[PS]“ಯಾವನಾದರೂ ಮತ್ತೊಬ್ಬನನ್ನು ದ್ವೇಷಿಸಿ ನೂಕುವುದರಿಂದಾಗಲಿ ಉದ್ದೇಶಪೂರ್ವಕವಾಗಿ ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ
సంఖ్యాకాండము 35 : 21 (ERVTE)
ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ, ಅವನು ನರಹತ್ಯ ಮಾಡಿದವನೇ. ಅವನಿಗೆ ಮರಣ ಶಿಕ್ಷೆಯಾಗಬೇಕು. ಹತನಾದವನ ಸಮೀಪ ಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ. [PE]
సంఖ్యాకాండము 35 : 22 (ERVTE)
[PS]“ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ನಿರುದ್ದೇಶದಿಂದ ಎಸೆದ ಯಾವುದೋ ವಸ್ತುವಿನಿಂದ ಒಬ್ಬನನ್ನು ಕೊಂದರೆ,
సంఖ్యాకాండము 35 : 23 (ERVTE)
ಅಥವಾ ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸಿದ್ದರಿಂದ ಮತ್ತೊಬ್ಬನು ಸತ್ತರೆ, ಅವನು ಕೊಲ್ಲಲ್ಪಟ್ಟವನ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಉದ್ದೇಶವಿಲ್ಲದೆಯೂ ಇದ್ದ ಪಕ್ಷಕ್ಕೆ
సంఖ్యాకాండము 35 : 24 (ERVTE)
ಸಭೆಯವರು ಕೊಂದವನಿಗೂ ಕೊಲ್ಲಲ್ಪಟ್ಟವನಿಗೂ ಈ ನಿಯಮಗಳಿಗನುಸಾರವಾಗಿ ನ್ಯಾಯತೀರ್ಪು ನೀಡಬೇಕು.
సంఖ్యాకాండము 35 : 25 (ERVTE)
ಕೊಂದವನು ಓಡಿಹೋಗಿದ್ದ ಆಶ್ರಯ ನಗರಕ್ಕೆ ಸಭೆಯವರು ಅವನನ್ನು ಮತ್ತೆ ಕರೆದುಕೊಂಡು ಹೋಗಿ ಕೊಲ್ಲಲ್ಪಟ್ಟವನ ಸಮೀಪಬಂಧುವಿನಿಂದ ರಕ್ಷಿಸಬೇಕು. ಅಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು. [PE]
సంఖ్యాకాండము 35 : 26 (ERVTE)
[PS](26-27)“ಆ ವ್ಯಕ್ತಿಯು ತನ್ನ ಆಶ್ರಯನಗರದ ಮೇರೆಯನ್ನು ಎಂದಿಗೂ ದಾಟಿ ಹೊರಗೆ ಹೋಗಬಾರದು. ಆ ಮೇರೆಗಳನ್ನು ದಾಟಿ ಹೊರಗೆ ಹೋದರೆ, ಹತವಾದವನ ಸಮೀಪಬಂಧುವು ಅವನನ್ನು ಕಂಡು ಕೊಂದುಹಾಕಿದರೆ, ಆಗ ಆ ಸಮೀಪ ಬಂಧುವು ನರಹತ್ಯ ಮಾಡಿದ ದೋಷಿಯಾಗುವುದಿಲ್ಲ.
సంఖ్యాకాండము 35 : 27 (ERVTE)
సంఖ్యాకాండము 35 : 28 (ERVTE)
ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೆ ಇರಬೇಕು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.
సంఖ్యాకాండము 35 : 29 (ERVTE)
ನೀವೂ ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಈ ಕಟ್ಟಳೆಗೆ ಅನುಸಾರವಾಗಿ ನ್ಯಾಯತೀರಿಸಬೇಕು. [PE]
సంఖ్యాకాండము 35 : 30 (ERVTE)
సంఖ్యాకాండము 35 : 31 (ERVTE)
[PS]“ಯಾವನಾದರೂ ಮತ್ತೊಬ್ಬನನ್ನು ಕೊಂದರೆ, ಸಾಕ್ಷ್ಯಾಧಾರಗಳು ಇದ್ದರೆ ಮಾತ್ರ ಕೊಂದವನು ಕೊಲ್ಲಲ್ಪಡಬೇಕು. [PE]
సంఖ్యాకాండము 35 : 32 (ERVTE)
[PS]“ಮರಣಶಿಕ್ಷೆಗೆ ಒಳಗಾಗಿರುವ ಕೊಲೆಪಾತಕನನ್ನು ಉಳಿಸಲು ನೀವು ಯಾವ ಈಡನ್ನೂ ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆಯೇ ಆಗಬೇಕು. [PE]
సంఖ్యాకాండము 35 : 33 (ERVTE)
[PS]“ಆಶ್ರಯನಗರಕ್ಕೆ ಓಡಿಹೋದವನಿಂದ ಹಣವನ್ನು ಈಡಾಗಿ ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ತನ್ನ ಸ್ವಂತ ಸ್ಥಳಕ್ಕೆ ಹೋಗಿ ವಾಸಿಸಲು ನೀವು ಅವಕಾಶ ಕೊಡಕೂಡದು. [PE][PS]“ನೀವು ವಾಸವಾಗಿರುವ ದೇಶವನ್ನು ಕೆಡಿಸಬಾರದು. ಕೊಲೆಯು ದೇಶವನ್ನು ಕೆಡಿಸುತ್ತದೆ. ಕೊಲೆಯು ನಡೆಯಲ್ಪಟ್ಟಿರುವ ದೇಶಕ್ಕೆ ಕೊಲೆಗಾರನ ರಕ್ತವೇ ಹೊರತು ಬೇರೆ ಯಾವ ಈಡೂ ಇಲ್ಲ.
సంఖ్యాకాండము 35 : 34 (ERVTE)
ನಾನು ವಾಸಿಸುವ ದೇಶವನ್ನು ನೀವು ಅಶುದ್ಧಮಾಡಬಾರದು, ಯಾಕೆಂದರೆ ಯೆಹೋವನಾದ ನಾನೇ ಇಸ್ರೇಲರೊಂದಿಗೆ ವಾಸಿಸುತ್ತೇನೆ.” [PE]
❮
❯