సంఖ్యాకాండము 36 : 1 (ERVTE)
{#1ಚಲ್ಪಹಾದನ ಹೆಣ್ಣುಮಕ್ಕಳ ಭೂಮಿ } ಒಂದು ದಿನ ಗಿಲ್ಯಾದ್ ಕುಲದ ಕುಟುಂಬಗಳ ನಾಯಕರು ಮೋಶೆಯೊಡನೆಯೂ ಇತರ ಇಸ್ರೇಲರ ಕುಟುಂಬಗಳ ನಾಯಕರೊಡನೆಯೂ ಮಾತಾಡುವುದಕ್ಕೆ ಬಂದರು. (ಗಿಲ್ಯಾದನು ಮಾಕೀರನ ಮಗ; ಮಾಕೀರನು ಮನಸ್ಸೆಯ ಮಗ; ಮನಸ್ಸೆಯು ಯೋಸೇಫನ ಮಗ.)
సంఖ్యాకాండము 36 : 2 (ERVTE)
ಅವರು, “ಸ್ವಾಮೀ, ಚೀಟುಹಾಕಿ ಇಸ್ರೇಲರಿಗೆ ದೇಶವನ್ನು ಹಂಚಿಕೊಡಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ್ದಾನೆ. ಅದಲ್ಲದೆ ನಮ್ಮ ಸಂಬಂಧಿಕನಾದ ಚಲ್ಪಹಾದನ ಭೂಮಿಯನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
సంఖ్యాకాండము 36 : 3 (ERVTE)
ಹೀಗಿರಲು ಅವರು ಇಸ್ರೇಲರ ಬೇರೆ ಯಾವ ಕುಲದವರನ್ನಾದರೂ ಮದುವೆಯಾದರೆ ಅವರ ಸ್ವಾಸ್ತ್ಯವು ನಮ್ಮ ಪೂರ್ವಿಕರ ಕುಲದಿಂದ ತೆಗೆಯಲ್ಪಟ್ಟು, ಅವರು ಮದುವೆಯ ಮೂಲಕ ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಇದರಿಂದ ನಮ್ಮ ಸ್ವಾಸ್ತ್ಯಕ್ಕೆ ನಷ್ಟವುಂಟಾಗುವುದು.
సంఖ్యాకాండము 36 : 4 (ERVTE)
ಇಸ್ರೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವಾಸ್ತ್ಯವು ಅವರು ಸೇರಿಕೊಳ್ಳುವ ಕುಲದ ಸ್ವಾಸ್ತ್ಯಕ್ಕೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.
సంఖ్యాకాండము 36 : 5 (ERVTE)
ಆಗ ಮೋಶೆಯು ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರೇಲರಿಗೆ, “ಯೋಸೇಫನ ಸಂತತಿಯವರು ಹೇಳುವುದು ನ್ಯಾಯ.
సంఖ్యాకాండము 36 : 6 (ERVTE)
ಆದಕಾರಣ ಚಲ್ಫಹಾದನ ಹೆಣ್ಣುಮಕ್ಕಳು ಮದುವೆಯಾಗುವುದಾದರೆ ತಮ್ಮ ತಂದೆಯ ಗೋತ್ರಕ್ಕೆ ಸಂಬಂಧಿಸಿದ ಯಾರನ್ನು ಬೇಕಾದರೂ ಮದುವೆಯಾಗಬಹುದೆಂದು ಯೆಹೋವನು ಆಜ್ಞಾಪಿಸಿದ್ದಾನೆ.
సంఖ్యాకాండము 36 : 7 (ERVTE)
ಇಸ್ರೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರೇಲರೆಲ್ಲರೂ ತಮ್ಮ ಪೂರ್ವಿಕರಿಂದ ಸ್ವಾಸ್ತ್ಯವಾಗಿ ಪಡೆದುಕೊಂಡ ತಮ್ಮ ಗೋತ್ರದ ಭೂಮಿಯನ್ನು ತಮ್ಮ ಸ್ವಾಧೀನದಲ್ಲೇ ಇಟ್ಟುಕೊಂಡಿರಬೇಕು.
సంఖ్యాకాండము 36 : 8 (ERVTE)
ಆದ್ದರಿಂದ ಇಸ್ರೇಲರ ಕುಲಗಳಲ್ಲಿ ಭೂಮಿಯನ್ನು ಸ್ವಾಸ್ತ್ಯವಾಗಿ ಹೊಂದುವ ಪ್ರತಿಯೊಬ್ಬ ಮಗಳು, ತನ್ನ ತಂದೆಯ ಗೋತ್ರದವನನ್ನೇ ಮದುವೆಯಾಗಬೇಕು.
సంఖ్యాకాండము 36 : 9 (ERVTE)
ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರೇಲರ ಪ್ರತಿಯೊಂದು ಕುಲವೂ ತನ್ನ ಸ್ವಾಸ್ತ್ಯವನ್ನು ಹೊಂದಿಕೊಂಡೇ ಇರುವುದು” ಎಂದು ಹೇಳಿದನು.
సంఖ్యాకాండము 36 : 10 (ERVTE)
ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಚಲ್ಪಹಾದನ ಹೆಣ್ಣುಮಕ್ಕಳು ವಿಧೇಯರಾದರು.
సంఖ్యాకాండము 36 : 11 (ERVTE)
ದ್ದರಿಂದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ಯೆಹೋವನ ಆಜ್ಞಾನುಸಾರವಾಗಿ ನಡೆದು ತಂದೆಯ ಅಣ್ಣತಮ್ಮಂದಿರ ಗಂಡುಮಕ್ಕಳನ್ನು ಮದುವೆಯಾದರು.
సంఖ్యాకాండము 36 : 12 (ERVTE)
ಅವರು ಯೋಸೇಫನ ಮಗನಾದ ಮನಸ್ಸೆಯ ಕುಲದವರನ್ನೇ ಮದುವೆಯಾದದ್ದರಿಂದ ಅವರ ಸ್ವಾಸ್ತ್ಯವು ತಂದೆಯ ಕುಲದಲ್ಲಿಯೇ ನಿಂತಿತು.
సంఖ్యాకాండము 36 : 13 (ERVTE)
ಜೆರಿಕೊ ಪಟ್ಟಣದ ಎದುರಾಗಿರುವ ಜೋರ್ಡನ್ ನದಿಯ ಬಳಿಯಲ್ಲಿರುವ ಮೋವಾಬಿನ ಬಯಲಿನಲ್ಲಿ ಯೆಹೋವನು ಇಸ್ರೇಲರಿಗೆ ಮೋಶೆಯ ಮೂಲಕ ಕೊಟ್ಟ ಆಜ್ಞೆಗಳೂ ವಿಧಿಗಳೂ ಇವೇ.
❮
❯
1
2
3
4
5
6
7
8
9
10
11
12
13