సంఖ్యాకాండము 6 : 1 (ERVTE)
{#1ನಾಜೀರವ್ರತ } ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
సంఖ్యాకాండము 6 : 2 (ERVTE)
“ಈ ಸಂಗತಿಗಳನ್ನು ಇಸ್ರೇಲರಿಗೆ ಹೇಳು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರವ್ರತವನ್ನು ಮಾಡುವುದರ ಮೂಲಕ ತನ್ನನ್ನು ಪ್ರತಿಷ್ಠಿಸಿಕೊಂಡರೆ, ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡರೆ,
సంఖ్యాకాండము 6 : 3 (ERVTE)
ಆ ಸಮಯದಲ್ಲಿ ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು; ದ್ರಾಕ್ಷಿಯ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿ ಅಥವಾ ಒಣ ದ್ರಾಕ್ಷಿಯನ್ನು ಸಹ ತಿನ್ನಬಾರದು;
సంఖ్యాకాండము 6 : 4 (ERVTE)
ಅವನು ಹರಕೆ ಮಾಡಿಕೊಂಡಿರುವ ದಿನಗಳಲ್ಲಿ ದ್ರಾಕ್ಷಾಲತೆಯಿಂದ ಉತ್ಪನ್ನವಾಗುವ ಯಾವದನ್ನೂ ತಿನ್ನಬಾರದು. ಅವನು ದ್ರಾಕ್ಷಿಯ ಬೀಜವನ್ನಾಗಲಿ ಸಿಪ್ಪೆಯನ್ನಾಗಲಿ ತಿನ್ನಬಾರದು.
సంఖ్యాకాండము 6 : 5 (ERVTE)
సంఖ్యాకాండము 6 : 6 (ERVTE)
“ಅವನ ವ್ರತದ ಕಾಲದಲ್ಲಿ ಕ್ಷೌರದ ಕತ್ತಿಯು ಅವನ ತಲೆಯನ್ನು ಸೋಂಕಬಾರದು. ಯೆಹೋವನಿಗೋಸ್ಕರ ಪ್ರತಿಷ್ಠಿತವಾದ ತನ್ನ ಕಾಲವನ್ನು ಪೂರ್ಣಗೊಳಿಸುವ ತನಕ ಅವನು ಪರಿಶುದ್ಧನಾಗಿರಬೇಕು. ತನ್ನ ವ್ರತದ ದಿನಗಳು ಮುಗಿಯುವ ತನಕ ಅವನು ಕೂದಲನ್ನು ಬೆಳೆಸಿಕೊಳ್ಳಬೇಕು.[* ಬೆಳೆಸಿಕೊಳ್ಳಬೇಕು ವ್ರತದ ದಿನಗಳು ಮುಗಿದ ಮೇಲೆ ನಾಜೀರನು ತನ್ನ ಕೂದಲನ್ನು ಕತ್ತರಿಸಿ ಅದನ್ನು ದೇವರಿಗೆ ಕಾಣಿಕೆಯಾಗಿ ಕೊಡುವನು. ] “ಅವನು ಯೆಹೋವನಿಗೋಸ್ಕರ ಹರಕೆ ಮಾಡಿಕೊಂಡ ಕಾಲವೆಲ್ಲಾ, ಯಾವ ಶವದ ಬಳಿಗೆ ಹೋಗಕೂಡದು.
సంఖ్యాకాండము 6 : 7 (ERVTE)
ಅವನ ತಂದೆ, ತಾಯಿ, ಸಹೋದರ, ಸಹೋದರಿ ಸತ್ತರೂ ಅವನು ಅವರ ಹೆಣವನ್ನು ಮುಟ್ಟಬಾರದು. ಮುಟ್ಟಿದರೆ ಅವನು ಅಶುದ್ಧನಾಗುವನು. ದೇವರಿಗೋಸ್ಕರ ಮೀಸಲಾಗಿರುವ ಅವನ ಕೂದಲು ಅವನ ತಲೆಯನ್ನು ಮುಚ್ಚಿಕೊಂಡಿರುತ್ತದೆ; ಆದ್ದರಿಂದ ಅವನು ಪರಿಶುದ್ಧನಾಗಿರಬೇಕು.
సంఖ్యాకాండము 6 : 8 (ERVTE)
ಅವನು ತನ್ನನ್ನು ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ಅವನು ಯೆಹೋವನಿಗೆ ಪವಿತ್ರನಾಗಿರಬೇಕು.
సంఖ్యాకాండము 6 : 9 (ERVTE)
ಯಾವನಾದರೂ ಇದ್ದಕ್ಕಿದ್ದಂತೆ ಅವನ ಬಳಿಯಲ್ಲೇ ಸತ್ತದ್ದರಿಂದ ತಾನು ಪ್ರತಿಷ್ಠಿಸಿಕೊಂಡ ತಲೆಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ತಲೆಯನ್ನು ಕ್ಷೌರ ಮಾಡಿಸಿಕೊಳ್ಳಬೇಕು.
సంఖ్యాకాండము 6 : 10 (ERVTE)
ಬಳಿಕ ಎಂಟನೆಯ ದಿನದಲ್ಲಿ ಅವನು ಎರಡು ಕಾಡು ಪಾರಿವಾಳವನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಯಿರುವ ಯಾಜಕನಿಗೆ ತಂದುಕೊಡಬೇಕು.
సంఖ్యాకాండము 6 : 11 (ERVTE)
ಆಗ ಯಾಜಕನು ಒಂದನ್ನು ದೋಷಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಅವನಿಗೆ ಹೆಣವು ಸೋಂಕಿ ಅವನು ಅಶುದ್ಧನಾದದ್ದರಿಂದ ಈ ಸರ್ವಾಂಗಹೋಮವು ಅವನಿಗೆ ಪ್ರಾಯಶ್ಚಿತ್ತ ಯಜ್ಞವಾಗಿದೆ. ಆ ಸಮಯದಲ್ಲಿ, ಅವನು ತನ್ನ ತಲೆಯ ಕೂದಲನ್ನು ಯೆಹೋವನಿಗೆ ಕಾಣಿಕೆಯಾಗಿ ಮತ್ತೆ ಹರಕೆ ಮಾಡುವನು.
సంఖ్యాకాండము 6 : 12 (ERVTE)
ಅವನು ಮತ್ತೊಮ್ಮೆ ನಿರ್ದಿಷ್ಟ ಕಾಲದವರೆಗೆ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕೆಂಬುದೇ ಇದರರ್ಥ. ಅವನು ಒಂದು ವರ್ಷದ ಕುರಿಮರಿಯನ್ನು ತಂದು ಅದನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡಬೇಕು. ಶವವು ಅವನನ್ನು ಅಶುದ್ಧನನ್ನಾಗಿ ಮಾಡಿದ್ದರಿಂದ ಮೊದಲಿನ ದಿನಗಳು ಲೆಕ್ಕಿಸಲ್ಪಡುವುದಿಲ್ಲ. ಅವನು ಮತ್ತೊಮ್ಮೆ ಪ್ರತಿಷ್ಠೆಯನ್ನು ಹೊಸದಾಗಿ ಆರಂಭಿಸಬೇಕು.
సంఖ్యాకాండము 6 : 13 (ERVTE)
“ನಾಜೀರನು ತನ್ನ ವ್ರತದ ದಿನಗಳು ಮುಗಿದ ನಂತರ, ಮಾಡಬೇಕಾದ ಕ್ರಮ: ಅವನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಬಂದು
సంఖ్యాకాండము 6 : 14 (ERVTE)
ಯೆಹೋವನಿಗೆ ತನ್ನ ಸಮರ್ಪಣೆಯನ್ನು ಮಾಡಬೇಕು. ಅವನು ಸಮರ್ಪಿಸಬೇಕಾದದು ಯಾವುವೆಂದರೆ, ಸರ್ವಾಂಗಹೋಮಕ್ಕೆ ದೋಷವಿಲ್ಲದ ಒಂದು ವರ್ಷದ ಗಂಡು ಕುರಿಮರಿ, ದೋಷಪರಿಹಾರ ಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ವರ್ಷದ ಹೆಣ್ಣು ಕುರಿಮರಿ, ಸಮಾಧಾನಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ಟಗರು ಇವೇ.
సంఖ్యాకాండము 6 : 15 (ERVTE)
ಶುದ್ಧವಾದ ಹಿಟ್ಟಿನಿಂದ ಮತ್ತು ಎಣ್ಣೆಯಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆಹಾಕಿ ಮಾಡಿದ ಹುಳಿಯಿಲ್ಲದ ತೆಳುವಾದ ರೊಟ್ಟಿಗಳನ್ನೂ ಒಂದು ಪುಟ್ಟಿತುಂಬಾ ಸಮರ್ಪಿಸಬೇಕು; ಅಲ್ಲದೆ ಮೇಲೆ ವಿವರಿಸಿದ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಗಳನ್ನೂ ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
సంఖ్యాకాండము 6 : 16 (ERVTE)
“ಬಳಿಕ ಯಾಜಕನು ಇವುಗಳನ್ನು ಯೆಹೋವನ ಬಳಿಗೆ ತಂದು ದೋಷಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಮಾಡುವನು.
సంఖ్యాకాండము 6 : 17 (ERVTE)
ಯಾಜಕನು ಹುಳಿಯಿಲ್ಲದ ರೊಟ್ಟಿಯಿರುವ ಪುಟ್ಟಿಯನ್ನು ಯೆಹೋವನಿಗೆ ಸಮರ್ಪಿಸುವನು. ಬಳಿಕ ಅವನು ಟಗರನ್ನು ವಧಿಸಿ ಸಮಾಧಾನಯಜ್ಞವಾಗಿ ಅರ್ಪಿಸುವನು. ಅವನು ಅದನ್ನು ಧಾನ್ಯಸಮರ್ಪಣೆ ಮತ್ತು ಪಾನದ್ರವ್ಯ ಸಮರ್ಪಣೆಯೊಂದಿಗೆ ಅರ್ಪಿಸುವನು.
సంఖ్యాకాండము 6 : 18 (ERVTE)
సంఖ్యాకాండము 6 : 19 (ERVTE)
“ನಾಜೀರವ್ರತವನ್ನು ಆಚರಿಸುತ್ತಿರುವವನು ಯೆಹೋವನಿಗಾಗಿ ಪ್ರತಿಷ್ಠಿಸಿದ್ದ ತಲೆಯ ಕೂದಲನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿ ಕ್ಷೌರಮಾಡಿಸಿಕೊಳ್ಳಬೇಕು. ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು. “ನಾಜೀರನು ತನ್ನ ತಲೆಕೂದಲನ್ನು ಕ್ಷೌರಮಾಡಿಸಿಕೊಂಡ ನಂತರ, ಯಾಜಕನು ಅವನಿಗೆ ಆ ಟಗರಿನ ಬೆಂದ ಮುಂದೊಡೆಯನ್ನೂ ಪುಟ್ಟಿಯಲ್ಲಿನ ಒಂದು ಹುಳಿಯಿಲ್ಲದ ಸಿಹಿರೊಟ್ಟಿಯನ್ನೂ ಒಂದು ಹುಳಿಯಿಲ್ಲದ ತೆಳುವಾದ ರೊಟ್ಟಿಯನ್ನೂ ಅವನ ಕೈಯಲ್ಲಿ ಇಡಬೇಕು.
సంఖ్యాకాండము 6 : 20 (ERVTE)
ನೈವೇದ್ಯವಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ವಿಶೇಷ ಕಾಣಿಕೆಯಾಗಿ ನಿವಾಳಿಸಬೇಕು. ಇವುಗಳು ಪವಿತ್ರವಾಗಿದ್ದು ಯಾಜಕರ ಪಾಲಾಗುತ್ತವೆ. ಅಲ್ಲದೆ ಮೀಸಲಾಗಿಟ್ಟಿರುವ ನಿವಾಳಿಸಲ್ಪಟ್ಟ ಕಾಣಿಕೆಯ ಎದೆಯ ಭಾಗ ಮತ್ತು ತೊಡೆಯ ಭಾಗ ಸಹ ಯಾಜಕನ ಭಾಗವಾಗಿರುತ್ತದೆ. ಇದರ ನಂತರ ನಾಜೀರನು ದ್ರಾಕ್ಷಾರಸವನ್ನು ಕುಡಿಯಬಹುದು.
సంఖ్యాకాండము 6 : 21 (ERVTE)
సంఖ్యాకాండము 6 : 22 (ERVTE)
“ಇದೇ ನಾಜೀರರ ವ್ರತವಿಧಿ. ಅವರು ತಮ್ಮ ವ್ರತ ಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಮೀರಿ ಕೊಡಬಹುದು. ಆದರೆ ತಾವು ಕೊಡುತ್ತೇವೆಂದು ಹರಕೆ ಮಾಡಿದಷ್ಟನ್ನು ವ್ರತವಿಧಿಗನುಸಾರವಾಗಿ ಕೊಡಲೇಬೇಕು.” {#1ಯಾಜಕರು ಹೇಳಬೇಕಾದ ಆಶೀರ್ವಚನವು } ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
సంఖ్యాకాండము 6 : 23 (ERVTE)
“ನೀನು ಆರೋನನಿಗೂ ಅವನ ಪುತ್ರರಿಗೂ ಹೀಗೆ ಆಜ್ಞಾಪಿಸು: ನೀವು ಇಸ್ರೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಹೇಳಬೇಕು:
సంఖ్యాకాండము 6 : 24 (ERVTE)
‘ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ.
సంఖ్యాకాండము 6 : 25 (ERVTE)
ಯೆಹೋವನು ನಿಮ್ಮನ್ನು ಕನಿಕರದಿಂದ ನೋಡಿ ನಿಮ್ಮ ಮೇಲೆ ದಯವಿಡಲಿ.
సంఖ్యాకాండము 6 : 26 (ERVTE)
ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ.’
సంఖ్యాకాండము 6 : 27 (ERVTE)
27 ಬಳಿಕ ಯೆಹೋವನು, “ಹೀಗೆ ಆರೋನನೂ ಅವನ ಪುತ್ರರೂ ಇಸ್ರೇಲರನ್ನು ನನ್ನ ಹೆಸರಿನಿಂದ ಆಶೀರ್ವದಿಸುವುದರಿಂದ ನಾನು ಅವರನ್ನು ಆಶೀರ್ವದಿಸುವೆನು” ಎಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27