ఫిలేమోనుకు 1 : 1 (ERVTE)
ಯೇಸು ಕ್ರಿಸ್ತನ ನಿಮಿತ್ತ ಸೆರೆಯಲ್ಲಿರುವ ಪೌಲನೂ ಸಹೋದರನಾದ ತಿಮೊಥೆಯನೂ ನಮಗೆ ಪ್ರಿಯನಾದ ಮತ್ತು ನಮ್ಮ ಜೊತೆಕೆಲಸದವನಾದ ಫಿಲೆಮೋನನಿಗೆ,
ఫిలేమోనుకు 1 : 2 (ERVTE)
ಸಹೋದರಿಯಾದ ಅಪ್ಫಿಯಳಿಗೆ, ನಮ್ಮ ಜೊತೆಸೈನಿಕನಾದ ಅರ್ಖಿಪ್ಪನಿಗೆ ಮತ್ತು ಫಿಲೆಮೋನನ ಮನೆಯಲ್ಲಿ ಸೇರಿಬರುವ ಸಭೆಯವರೆಲ್ಲರಿಗೆ ಬರೆಯುವ ಪತ್ರ.
ఫిలేమోనుకు 1 : 3 (ERVTE)
ఫిలేమోనుకు 1 : 4 (ERVTE)
ನಮ್ಮ ತಂದೆಯಾದ ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಕೃಪೆಯೂ ಶಾಂತಿಯೂ ನಿಮ್ಮೊಂದಿಗಿರಲಿ. {#1ಫಿಲೆಮೋನನ ಪ್ರೀತಿ ಮತ್ತು ನಂಬಿಕೆ } ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ನೆನಪು ಮಾಡಿಕೊಳ್ಳುತ್ತಿರುತ್ತೇನೆ. ಯಾವಾಗಲೂ ನಿನಗಾಗಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
ఫిలేమోనుకు 1 : 5 (ERVTE)
ದೇವರ ಪರಿಶುದ್ಧ ಜನರ ಮೇಲೆ ನಿನಗಿರುವ ಪ್ರೀತಿಯನ್ನು ಮತ್ತು ಪ್ರಭುವಾದ ಯೇಸುವಿನಲ್ಲಿ ನಿನಗಿರುವ ನಂಬಿಕೆಯನ್ನು ಕೇಳಿದ್ದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
ఫిలేమోనుకు 1 : 6 (ERVTE)
ನೀನು ನಿನ್ನ ನಂಬಿಕೆಯನ್ನು ಹಂಚಿಕೊಳ್ಳುವುದರಲ್ಲಿ ಕಾರ್ಯ ನಿರತನಾಗಿರುವುದರ ಮೂಲಕ ಕ್ರಿಸ್ತನಲ್ಲಿ ನಮಗಿರುವ ಎಲ್ಲಾ ಸುವರಗಳನ್ನು ಅರ್ಥಮಾಡಿಕೊಳ್ಳುವಂತಾಗಲೆಂದು ಪ್ರಾರ್ಥಿಸುತ್ತೇನೆ.
ఫిలేమోనుకు 1 : 7 (ERVTE)
ನನ್ನ ಸಹೋದರನೇ, ದೇವಜನರಿಗೆ ನೀನು ಪ್ರೀತಿಯನ್ನು ತೋರಿಸಿ ಅವರ ಹೃದಯಗಳನ್ನು ಸಂತೈಸಿರುವೆ. ಇದು ನನಗೆ ಹೆಚ್ಚಿನ ಸಂತಸವನ್ನೂ ನೆಮ್ಮದಿಯನ್ನೂ ತಂದುಕೊಟ್ಟಿದೆ.
ఫిలేమోనుకు 1 : 8 (ERVTE)
{#1ಒನೇಸಿಮನನ್ನು ಸಹೋದರನಂತೆ ಸೇರಿಸಿಕೊ } ನೀನು ಮಾಡಬೇಕಾದ ಕಾರ್ಯವೊಂದಿದೆ. ಅದನ್ನು ಮಾಡಬೇಕೆಂದು ಆಜ್ಞಾಪಿಸಲು ನನಗೆ ಕ್ರಿಸ್ತನಲ್ಲಿ ಅಧಿಕಾರವಿದೆ.
ఫిలేమోనుకు 1 : 9 (ERVTE)
ಆದರೆ ನಾನು ನಿನಗೆ ಆಜ್ಞಾಪಿಸದೆ ಪ್ರೀತಿಯಿಂದ ನಿನ್ನನ್ನು ಕೇಳಿಕೊಳ್ಳುತ್ತಿದ್ದೇನೆ. ಪೌಲನಾದ ನಾನು ಈಗ ವೃದ್ಧನಾಗಿದ್ದೇನೆ ಮತ್ತು ಕ್ರಿಸ್ತ ಯೇಸುವಿನ ನಿಮಿತ್ತ ಸೆರೆಯಲ್ಲಿದ್ದೇನೆ.
ఫిలేమోనుకు 1 : 10 (ERVTE)
ನನ್ನ ಮಗನಾದ ಒನೇಸಿಮನಿಗಾಗಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ನಾನು ಸೆರೆಮನೆಯಲ್ಲಿರುವಾಗ ಅವನು ನನ್ನ ಮಗನಾದನು.
ఫిలేమోనుకు 1 : 11 (ERVTE)
ಹಿಂದೆ ಅವನು ನಿನಗೆ ನಿಷ್ಪ್ರಯೋಜಕನಾಗಿದ್ದನು. ಆದರೆ ಈಗ ಅವನು ನಿನಗೂ ನನಗೂ ಪ್ರಯೋಜನ ಉಳ್ಳವನಾಗಿದ್ದಾನೆ.
ఫిలేమోనుకు 1 : 12 (ERVTE)
ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸುತ್ತಿದ್ದೇನೆ. ಅವನೊಂದಿಗೆ ನನ್ನ ಹೃದಯವನ್ನೇ ಕಳುಹಿಸುತ್ತಿದ್ದೇನೆ.
ఫిలేమోనుకు 1 : 13 (ERVTE)
ನಾನೀಗ ಸುವಾರ್ತೆಗೋಸ್ಕರ ಸೆರೆಯಲ್ಲಿರುವಾಗ ನನ್ನ ಸಹಾಯಕ್ಕೆ ಅವನನ್ನು ಇರಿಸಿಕೊಳ್ಳಬೇಕೆಂದಿದ್ದೆನು. ಇಲ್ಲಿ ಅವನು ನನಗೆ ಸಹಾಯ ಮಾಡುತ್ತಾ ನಿನ್ನ ಸೇವೆಯನ್ನೂ ಮಾಡಬಹುದಾಗಿತ್ತು.
ఫిలేమోనుకు 1 : 14 (ERVTE)
ಆದರೆ ಈ ವಿಷಯದಲ್ಲಿ ನಿನ್ನ ಒಪ್ಪಿಗೆ ಪಡೆಯದೆ ನಿರ್ಧಾರ ತೆಗೆದುಕೊಳ್ಳಲು ನನಗೆ ಇಷ್ಟವಿಲ್ಲ. ಏಕೆಂದರೆ ನೀನು ಮಾಡುವ ಒಳ್ಳೆಕಾರ್ಯವು ಮನಃ ಪೂರ್ವಕವಾಗಿರಬೇಕೇ ಹೊರತು ಬಲತ್ಕಾರದಿಂದಾಗಕೂಡದು.
ఫిలేమోనుకు 1 : 15 (ERVTE)
ಒನೇಸಿಮನು ಸ್ವಲ್ಪಕಾಲ ನಿನ್ನನ್ನು ಅಗಲಿದ್ದನು. ಬಹುಶಃ ಅವನು ಎಂದೆಂದಿಗೂ ನಿನ್ನವನಾಗಬೇಕೆಂದು ಹಾಗಾಯಿತೇನೊ!
ఫిలేమోనుకు 1 : 16 (ERVTE)
ಇನ್ನು ಮೇಲೆ ಅವನು ನಿನಗೆ ಕೇವಲ ಗುಲಾಮನಾಗಿರದೆ ಗುಲಾಮನಿಗಿಂತಲೂ ಹೆಚ್ಚಿನ ಪ್ರಿಯ ಸಹೋದರನಾಗಿದ್ದಾನೆ. ಅವನನ್ನು ಬಹಳವಾಗಿ ಪ್ರೀತಿಸುತ್ತೇನೆ. ಆದರೆ ನೀನು ಅವನನ್ನು ಮತ್ತಷ್ಟು ಹೆಚ್ಚಾಗಿ ಪ್ರೀತಿಸುವೆ. ನೀನು ಅವನನ್ನು ಮನುಷ್ಯನೆಂದು ಮತ್ತು ಪ್ರಭುವಿನಲ್ಲಿ ಒಬ್ಬ ಸಹೋದರನೆಂದು ಪ್ರೀತಿಸುವೆ.
ఫిలేమోనుకు 1 : 17 (ERVTE)
ನನ್ನನ್ನು ನಿನ್ನ ಸಹಭಾಗಿಯೆಂದು ನೀನು ಒಪ್ಪಿಕೊಳ್ಳುವುದಾದರೆ, ಒನೇಸಿಮನನ್ನು ಮತ್ತೆ ಸೇರಿಸಿಕೊ. ನೀನು ನನ್ನನ್ನು ಬರಮಾಡಿಕೊಂಡಂತೆ ಅವನನ್ನೂ ಬರಮಾಡಿಕೊ.
ఫిలేమోనుకు 1 : 18 (ERVTE)
ಅವನು ನಿನಗೇನಾದರೂ ತಪ್ಪು ಮಾಡಿದ್ದರೆ ಅದನ್ನು ನನ್ನ ಮೇಲೆ ಹೊರಿಸು; ನಿನಗೇನಾದರೂ ಕೊಡಬೇಕಿದ್ದರೆ, ಅದನ್ನು ನನ್ನ ಲೆಕ್ಕಕ್ಕೆ ಹಾಕು.
ఫిలేమోనుకు 1 : 19 (ERVTE)
ಪೌಲನಾದ ನಾನು ನನ್ನ ಸ್ವಂತ ಕೈಗಳಿಂದ ಇದನ್ನು ಬರೆಯುತ್ತಿದ್ದೇನೆ. ಒನೇಸಿಮನು ನಿನಗೆ ಏನಾದರೂ ಕೊಡಬೇಕಾಗಿದ್ದರೆ ನಾನು ಅದನ್ನು ಕೊಡುತ್ತೇನೆ. ನಿನ್ನ ಆತ್ಮಿಕ ಜೀವಿತದ ವಿಷಯದಲ್ಲಿ ನೀನು ನಿನಗೆ ನನಗೆಷ್ಟು ಋಣಿಯಾಗಿರುವೆ ಎಂದು ನಾನೇನೂ ಹೇಳುವುದಿಲ್ಲ.
ఫిలేమోనుకు 1 : 20 (ERVTE)
ನನ್ನ ಸಹೋದರನೇ, ಪ್ರಭುವಿನಲ್ಲಿ ನಾನು ನಿನ್ನಿಂದ ಒಂದು ಸಹಾಯವನ್ನು ಹೊಂದಿಕೊಳ್ಳಬಹುದೇ? ಅದೇನೆಂದರೆ ನೀನು ನನ್ನ ಹೃದಯವನ್ನು ಕ್ರಿಸ್ತನಲ್ಲಿ ಸಂತೈಸು.
ఫిలేమోనుకు 1 : 21 (ERVTE)
ನಾನು ಕೇಳಿಕೊಂಡದ್ದನ್ನು ನೀನು ಮಾಡುವೆ ಎಂದು ನನಗೆ ಗೊತ್ತಿರುವುದರಿಂದಲೇ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಿಗೆ ನೀನು ಮಾಡುವೆ ಎಂದು ನನಗೆ ತಿಳಿದಿದೆ.
ఫిలేమోనుకు 1 : 22 (ERVTE)
ఫిలేమోనుకు 1 : 23 (ERVTE)
ನಾನು ಇಳಿದುಕೊಳ್ಳಲು ಒಂದು ಕೊಠಡಿಯನ್ನು ದಯವಿಟ್ಟು ಸಿದ್ಧಗೊಳಿಸು. ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿ ನನ್ನನ್ನು ನಿಮ್ಮ ಬಳಿಗೆ ಬರಲು ಅವಕಾಶ ನೀಡುವನೆಂಬ ಭರವಸೆ ನನಗಿದೆ. {#1ಅಂತಿಮ ವಂದನೆಗಳು } ಕ್ರಿಸ್ತಯೇಸುವಿನ ನಿಮಿತ್ತ ನನ್ನೊಂದಿಗೆ ಸೆರೆಮನೆಯಲ್ಲಿರುವ ಎಪಫ್ರನು ವಂದನೆ ತಿಳಿಸಿದ್ದಾನೆ.
ఫిలేమోనుకు 1 : 24 (ERVTE)
ಮಾರ್ಕ, ಆರಿಸ್ತಾರ್ಕ, ದೇಮ, ಲೂಕ ಇವರುಗಳು ನಿನಗೆ ವಂದನೆ ತಿಳಿಸಿದ್ದಾರೆ. ಇವರೆಲ್ಲರೂ ನನ್ನ ಜೊತೆಕೆಲಸಗಾರರಾಗಿದ್ದಾರೆ.
ఫిలేమోనుకు 1 : 25 (ERVTE)
ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25