ఫిలిప్పీయులకు 2 : 1 (ERVTE)
{#1ಐಕ್ಯಮತದಿಂದಿದ್ದು ಒಬ್ಬರನ್ನೊಬ್ಬರು ಪರಾಂಬರಿಸಿರಿ } ನಿಮ್ಮಲ್ಲಿ ಕ್ರಿಸ್ತನಿಂದಾದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯ ದಯಾರಸಗಳು ಇವೆಯೋ?
ఫిలిప్పీయులకు 2 : 2 (ERVTE)
ನಿಮ್ಮಲ್ಲಿ ಇವುಗಳು ಇರುವುದಾದರೆ, ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ. ಆಗ ನನ್ನ ಸಂತೋಷವು ಪರಿಪೂರ್ಣವಾಗುವುದು. ಒಬ್ಬರಿಗೊಬ್ಬರು ಒಂದೇ ಪ್ರೀತಿ ಉಳ್ಳವರಾಗಿರಿ. ಅನ್ಯೋನ್ಯಭಾವವುಳ್ಳವರಾಗಿದ್ದು ಒಂದೇ ಗುರಿಯಿಂದ ಜೀವಿಸಿರಿ.
ఫిలిప్పీయులకు 2 : 3 (ERVTE)
ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.
ఫిలిప్పీయులకు 2 : 4 (ERVTE)
ನಿಮ್ಮ ಅಭಿಲಾಷೆಗಳ ಬಗ್ಗೆ ಮಾತ್ರ ಚಿಂತಿಸದೆ ಇತರರ ಜೀವಿತದ ಬಗ್ಗೆಯೂ ಚಿಂತಿಸಿರಿ.
ఫిలిప్పీయులకు 2 : 5 (ERVTE)
{#1ನಿಸ್ವಾರ್ಥರಾಗಿರುವುದನ್ನು ಕ್ರಿಸ್ತನಿಂದ ಕಲಿತುಕೊಳ್ಳಿರಿ } ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.
ఫిలిప్పీయులకు 2 : 6 (ERVTE)
ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮನಾಗಿದ್ದರೂ ಆ ಪದವಿಯನ್ನು ಬಿಡಲಾರೆ ಎನ್ನಲಿಲ್ಲ.
ఫిలిప్పీయులకు 2 : 7 (ERVTE)
ಆ ಪದವಿಯನ್ನು ಆತನು ಬಿಟ್ಟುಕೊಟ್ಟು ಸೇವಕನ ಸ್ವಭಾವವನ್ನು ಧರಿಸಿಕೊಂಡು ಮಾನವ ರೂಪದಲ್ಲಿ ಬಂದನು.
ఫిలిప్పీయులకు 2 : 8 (ERVTE)
ಆತನು ಮನುಷ್ಯನಾಗಿ ಜೀವಿಸುತ್ತಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನೂ ಕಡೆಗಣಿಸಿ ದೇವರಿಗೆ ಸಂಪೂರ್ಣ ವಿಧೇಯನಾಗಿ, ಶಿಲುಬೆಯ ಮೇಲೆ ಪ್ರಾಣವನ್ನೇ ಕೊಟ್ಟನು.
ఫిలిప్పీయులకు 2 : 9 (ERVTE)
ಆದ್ದರಿಂದ ದೇವರು ಆತನನ್ನು ಅತ್ಯುನ್ನತವಾದ ಸ್ಥಾನಕ್ಕೇರಿಸಿ ಉಳಿದೆಲ್ಲ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ఫిలిప్పీయులకు 2 : 10 (ERVTE)
ಆದ್ದರಿಂದ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಪಾತಾಳದಲ್ಲಿಯೂ ಇರುವ ಪ್ರತಿಯೊಬ್ಬರು ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು,
ఫిలిప్పీయులకు 2 : 11 (ERVTE)
“ಯೇಸು ಕ್ರಿಸ್ತನೇ ಪ್ರಭು”ವೆಂದು ಹೇಳುವರು. ಇದರಿಂದ ತಂದೆಯಾದ ದೇವರಿಗೆ ಮಹಿಮೆ ಉಂಟಾಗುವುದು.
ఫిలిప్పీయులకు 2 : 12 (ERVTE)
{#1ದೇವರ ಇಷ್ಟಕ್ಕನುಸಾರವಾದ ಜನರಾಗಿರಿ } ನನ್ನ ಪ್ರಿಯ ಸ್ನೇಹಿತರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ ನಾನು ದೂರವಿರುವಾಗಲೂ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿರಿ. ನೀವು ದೇವರಿಗೆ ಭಯಭಕ್ತಿಯಿಂದಿದ್ದು ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
ఫిలిప్పీయులకు 2 : 13 (ERVTE)
ಹೌದು, ಆತನಿಗೆ ಮೆಚ್ಚಿಕೆಕರವಾದ ಕಾರ್ಯಗಳನ್ನು ಮಾಡಬೇಕೆಂಬ ಅಪೇಕ್ಷೆಯನ್ನು ಆತನೇ ನಿಮ್ಮಲ್ಲಿ ಹುಟ್ಟಿಸುತ್ತಾನೆ ಅಲ್ಲದೆ ಅವುಗಳನ್ನು ಮಾಡಲು ಆತನೇ ನಿಮಗೆ ಶಕ್ತಿಯನ್ನು ಕೊಡುತ್ತಾನೆ.
ఫిలిప్పీయులకు 2 : 14 (ERVTE)
ನೀವು ಮಾಡುವ ಪ್ರತಿಯೊಂದನ್ನು ಗುಣಗುಟ್ಟದೆಯೂ ವಿವಾದವಿಲ್ಲದೆಯೂ ಮಾಡಿರಿ.
ఫిలిప్పీయులకు 2 : 15 (ERVTE)
ಆಗ ಮುಗ್ಧರೂ ಪರಿಶುದ್ಧರೂ ಆಗಿದ್ದು ಕಳಂಕರಹಿತವಾದ ದೇವಮಕ್ಕಳಾಗಿರುತ್ತೀರಿ. ದುಷ್ಟಜನರ ಮಧ್ಯದಲ್ಲಿ ವಾಸವಾಗಿರುವ ನೀವು ಕಾರ್ಗತ್ತಲೆಯಲ್ಲಿ ಪ್ರಕಾಶಿಸುವ ನಕ್ಷತ್ರಮಂಡಲದಂತಿದ್ದೀರಿ.
ఫిలిప్పీయులకు 2 : 16 (ERVTE)
ಜೀವದಾಯಕವಾದ ವಾಕ್ಯವನ್ನು ನೀವು ಆ ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು.
ఫిలిప్పీయులకు 2 : 17 (ERVTE)
ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.
ఫిలిప్పీయులకు 2 : 18 (ERVTE)
ಹಾಗೆಯೇ ನೀವು ಸಹ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಿಸಿರಿ.
ఫిలిప్పీయులకు 2 : 19 (ERVTE)
{#1ತಿಮೊಥೆ ಮತ್ತು ಎಪಫ್ರೊದೀತರ ಸುದ್ದಿ } ನಿಮ್ಮ ಬಳಿಗೆ ತಿಮೊಥೆಯನನ್ನು ಆದಷ್ಟು ಬೇಗನೆ ಕಳುಹಿಸಿಕೊಡಲು ಪ್ರಭುವಾದ ಯೇಸುವಿನಲ್ಲಿ ನಿರೀಕ್ಷಿಸುತ್ತಿದ್ದೇನೆ. ಅವನ ಮೂಲಕ ನಿಮ್ಮ ಯೋಗಕ್ಷೇವುವನ್ನು ತಿಳಿದುಕೊಳ್ಳುವುದರಿಂದ ನನಗೆ ಪ್ರೋತ್ಸಾಹವಾಗಬಹುದು.
ఫిలిప్పీయులకు 2 : 20 (ERVTE)
ಅವನಂತೆ ನಿಮ್ಮ ವಿಷಯದಲ್ಲಿ ನಿಜವಾಗಿಯೂ ಚಿಂತಿಸುವವರು ನನ್ನ ಬಳಿ ಯಾರೂ ಇಲ್ಲ.
ఫిలిప్పీయులకు 2 : 21 (ERVTE)
ಉಳಿದವರು ಕೇವಲ ತಮ್ಮ ಬಗ್ಗೆ ಚಿಂತಿಸುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಸೇವೆಯ ಬಗ್ಗೆ ಚಿಂತಿಸುವುದಿಲ್ಲ.
ఫిలిప్పీయులకు 2 : 22 (ERVTE)
ತಿಮೊಥೆಯನು ಎಂಥವನೆಂಬುದು ನಿಮಗೆ ಗೊತ್ತಿದೆ. ಮಗನು ತನ್ನ ತಂದೆಯೊಡನೆ ಸೇವೆ ಮಾಡುವಂತೆ ಅವನು ಸುವಾರ್ತೆಯನ್ನು ತಿಳಿಸುವುದರಲ್ಲಿ ನನ್ನೊಂದಿಗೆ ಸೇವೆ ಮಾಡಿದನು.
ఫిలిప్పీయులకు 2 : 23 (ERVTE)
ನನ್ನ ಬಗ್ಗೆ ನಡೆಯುತ್ತಿರುವ ವಿಚಾರಣೆಯ ಫಲಿತಾಂಶವು ತಿಳಿದಕೂಡಲೇ ಅವನನ್ನು ನಿಮ್ಮ ಬಳಿಗೆ ಕಳುಹಿಸುತ್ತೇನೆ.
ఫిలిప్పీయులకు 2 : 24 (ERVTE)
ಅಲ್ಲದೆ ಪ್ರಭುವಿನ ಸಹಾಯದಿಂದ ನಿಮ್ಮ ಬಳಿಗೆ ಅದಷ್ಟು ಬೇಗನೆ ಬರುತ್ತೇನೆ ಎಂಬ ಭರವಸೆ ನನಗಿದೆ.
ఫిలిప్పీయులకు 2 : 25 (ERVTE)
ಎಪಫ್ರೊದೀತನು ಕ್ರಿಸ್ತನಲ್ಲಿ ನನ್ನ ಸಹೋದರನಾಗಿದ್ದಾನೆ. ಕ್ರಿಸ್ತನ ಸೈನ್ಯದಲ್ಲಿ ಅವನು ನನ್ನೊಂದಿಗೆ ಕೆಲಸ ಮಾಡುತ್ತಿದ್ದಾನೆ ಮತ್ತು ಸೇವೆ ಮಾಡುತ್ತಿದ್ದಾನೆ. ನನಗೆ ಸಹಾಯಬೇಕಿದ್ದಾಗ, ನೀವು ಅವನನ್ನು ನನ್ನ ಬಳಿಗೆ ಕಳುಹಿಸಿಕೊಟ್ಟಿರಿ. ಈಗ ನಾನು ಅವನನ್ನು ನಿಮ್ಮ ಬಳಿಗೆ ಮತ್ತೆ ಕಳುಹಿಸಬೇಕೆಂದಿದ್ದೇನೆ.
ఫిలిప్పీయులకు 2 : 26 (ERVTE)
ಏಕೆಂದರೆ ಅವನು ನಿಮ್ಮೆಲ್ಲರನ್ನು ನೋಡಲು ಬಹು ತವಕಪಡುತ್ತಿದ್ದಾನೆ. ತಾನು ಅಸ್ವಸ್ಥನಾಗಿದ್ದದ್ದು ನಿಮಗೆ ತಿಳಿದದ್ದರಿಂದ ಅವನಿಗೆ ಚಿಂತೆಯಾಗಿದೆ.
ఫిలిప్పీయులకు 2 : 27 (ERVTE)
ಅವನು ಅನಾರೋಗ್ಯದಿಂದ ಸಾಯುವ ಸ್ಥಿತಿಯಲ್ಲಿದ್ದನು. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನ್ನನ್ನು ಸಹ ಕರುಣಿಸಿದನು.
ఫిలిప్పీయులకు 2 : 28 (ERVTE)
ಆದ್ದರಿಂದ ಅವನನ್ನು ನಿಮ್ಮ ಬಳಿಗೆ ಕಳುಹಿಸಿಕೊಡಲು ನಾನು ಬಹಳ ತವಕಪಡುತ್ತಿದ್ದೇನೆ. ನೀವು ಅವನನ್ನು ನೋಡಿದಾಗ ಸಂತೋಷಪಡುತ್ತೀರಿ ಮತ್ತು ನಿಮ್ಮ ವಿಷಯದಲ್ಲಿ ನನಗಿರುವ ಚಿಂತೆಯು ಕೊನೆಗೊಳ್ಳುತ್ತದೆ.
ఫిలిప్పీయులకు 2 : 29 (ERVTE)
ಮಹಾ ಆನಂದದಿಂದ ಪ್ರಭುವಿನಲ್ಲಿ ಅವನನ್ನು ಸ್ವಾಗತಿಸಿರಿ. ಎಪಫ್ರೊದೀತನಂಥ ಜನರನ್ನು ಗೌರವಿಸಿರಿ.
ఫిలిప్పీయులకు 2 : 30 (ERVTE)
ಅವನು ಕ್ರಿಸ್ತನ ಕೆಲಸಕ್ಕಾಗಿ ಬಹುಮಟ್ಟಿಗೆ ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ಅವನಿಗೆ ಮಾನ್ಯತೆ ದೊರೆಯಬೇಕು. ನನಗೆ ಸಹಾಯಮಾಡಲು ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಈಡುಮಾಡಿಕೊಂಡನು. ಈ ರೀತಿಯ ಸಹಾಯ ಮಾಡಲು ನಿಮಗೆ ಸಾಧ್ಯವಾಗಲಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30