ఫిలిప్పీయులకు 3 : 1 (ERVTE)
{#1ಕ್ರಿಸ್ತನೇ ಎಲ್ಲಕ್ಕಿಂತಲೂ ಮುಖ್ಯ }
ఫిలిప్పీయులకు 3 : 2 (ERVTE)
ನನ್ನ ಸಹೋದರ ಸಹೋದರಿಯರೇ, ಪ್ರಭುವಿನಲ್ಲಿ ಸಂತೋಷವಾಗಿರಿ. ನಾನು ಮೊದಲು ಬರೆದದ್ದನ್ನೇ ಮತ್ತೆ ಬರೆಯಲು ನನಗೆ ಬೇಸರವೇನೂ ಇಲ್ಲ; ಏಕೆಂದರೆ ಅದು ನಿಮ್ಮನ್ನು ಮತ್ತಷ್ಟು ಸಂರಕ್ಷಿಸುತ್ತದೆ. ಕೇಡುಮಾಡುವಂಥ ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ಅವರು ನಾಯಿಗಳಂತಿದ್ದಾರೆ. ಸುನ್ನತಿ ಎಂದು ಹೇಳಿಕೊಂಡು ಅಂಗಚ್ಛೇದನೆ ಮಾಡುವವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.
ఫిలిప్పీయులకు 3 : 3 (ERVTE)
ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ.[* ನಾವಾದರೋ … ಆರಾಧಿಸುವವರಾಗಿದ್ದೇವೆ ಅಂದರೆ, ದೇವರನ್ನು ಆತ್ಮದಿಂದ ಆರಾಧಿಸುವುದು. ] ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.
ఫిలిప్పీయులకు 3 : 4 (ERVTE)
ನಾನು ನನ್ನ ಮೇಲೆ ಭರವಸೆ ಇಡಬಲ್ಲವನಾಗಿದ್ದರೂ ಇಡುವುದಿಲ್ಲ. ತನ್ನ ಮೇಲೆ ಭರವಸೆ ಇಡಲು ತನಗೆ ಆಧಾರವಿರುವುದಾಗಿ ಯಾವನಾದರೂ ಯೋಚಿಸಿದರೆ, ನನ್ನ ಮೇಲೆ ಭರವಸೆ ಇಡಲು ನನಗೆ ಅದಕ್ಕಿಂತಲೂ ಹೆಚ್ಚಿನ ಆಧಾರವಿದೆ.
ఫిలిప్పీయులకు 3 : 5 (ERVTE)
ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು. ನಾನು ಇಸ್ರೇಲ್ ವಂಶದವನು ಮತ್ತು ಬೆನ್ಯಾಮೀನನ ಕುಲದವನು. ನಾನು ಇಬ್ರಿಯನು ಮತ್ತು ನನ್ನ ತಂದೆತಾಯಿಗಳು ಸಹ ಇಬ್ರಿಯರು. ನಾನು ಮೋಶೆಯ ಧರ್ಮಶಾಸ್ತ್ರವನ್ನು ಮುಖ್ಯವಾದದ್ದೆಂದು ಪರಿಗಣಿಸಿ ಫರಿಸಾಯನಾದೆನು;
ఫిలిప్పీయులకు 3 : 6 (ERVTE)
ಯೆಹೂದ್ಯ ಧರ್ಮದಲ್ಲಿ ಬಹಳ ಆಸಕ್ತಿಯುಳ್ಳವನಾಗಿದ್ದು ಕ್ರೈಸ್ತಸಭೆಯನ್ನು (ವಿಶ್ವಾಸಿಗಳನ್ನು) ಹಿಂಸಿಸಿದೆನು. ಮೋಶೆಯ ಧರ್ಮಶಾಸ್ತ್ರಕ್ಕೆ ಯಾವಾಗಲೂ ವಿಧೇಯನಾಗಿದ್ದುದರಿಂದ ಯಾರೂ ನನ್ನ ವಿಷಯದಲ್ಲಿ ತಪ್ಪನ್ನು ಕಂಡುಹಿಡಿಯಲಾಗಲಿಲ್ಲ.
ఫిలిప్పీయులకు 3 : 7 (ERVTE)
ಒಂದು ಕಾಲದಲ್ಲಿ ಇವುಗಳೆಲ್ಲ ನನಗೆ ಮುಖ್ಯವಾಗಿದ್ದವು. ಆದರೆ ಈಗ ಅವುಗಳೆಲ್ಲ ಕ್ರಿಸ್ತನ ದೆಸೆಯಿಂದ ನಿಷ್ಪ್ರಯೋಜಕವಾಗಿವೆ.
ఫిలిప్పీయులకు 3 : 8 (ERVTE)
ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೋ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ.
ఫిలిప్పీయులకు 3 : 9 (ERVTE)
ನಾನು ಕ್ರಿಸ್ತನನ್ನು ಹೊಂದಿಕೊಳ್ಳಲು ಮತ್ತು ಕ್ರಿಸ್ತನಲ್ಲಿರಲು ಇದು ನನಗೆ ಅವಕಾಶ ಮಾಡಿಕೊಡುತ್ತದೆ. ನಾನು ಕ್ರಿಸ್ತನ ಮೂಲಕ ನೀತಿವಂತನಾಗಿದ್ದೇನೆ. ಈ ನೀತಿಯು, ಧರ್ಮಶಾಸ್ತ್ರವನ್ನು ಅನುಸರಿಸಿದ ಮಾತ್ರಕ್ಕೆ ದೊರೆಯುವುದಿಲ್ಲ. ಇದು ನಂಬಿಕೆಯ ಮೂಲಕ ದೇವರಿಂದ ಬರುತ್ತದೆ. ಕ್ರಿಸ್ತನಲ್ಲಿ ನನಗಿರುವ ನಂಬಿಕೆಯ ಮೂಲಕ ದೇವರು ನನ್ನನ್ನು ನೀತಿವಂತನನ್ನಾಗಿ ಮಾಡಿದನು.
ఫిలిప్పీయులకు 3 : 10 (ERVTE)
ಕ್ರಿಸ್ತನನ್ನೂ ಪುನರುತ್ಥಾನದ ಶಕ್ತಿಯನ್ನೂ ತಿಳಿದುಕೊಂಡು ಆತನ ಸಂಕಟದಲ್ಲಿ ಪಾಲುಗಾರನಾಗಿ ಆತನ ಮರಣದಲ್ಲಿ ಆತನಂತಾಗಬೇಕೆಂಬುದೇ ನನ್ನ ಅಪೇಕ್ಷೆ.
ఫిలిప్పీయులకు 3 : 11 (ERVTE)
ಹೀಗಾದರೆ, ನಾನು ಸತ್ತವರೊಳಗಿಂದ ಎಬ್ಬಿಸಲ್ಪಡುತ್ತೇನೆ ಎಂಬ ನಿರೀಕ್ಷೆ ನನಗಿದೆ.
ఫిలిప్పీయులకు 3 : 12 (ERVTE)
{#1ಗುರಿಮುಟ್ಟಲು ಪ್ರಯತ್ನ } ಈಗಾಗಲೇ ನಾನು ಇದೆಲ್ಲವನ್ನು ಸಾಧಿಸಿ ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ಹೇಳುತ್ತಿಲ್ಲ. ನಾನು ಆ ಗುರಿಯನ್ನು ಇನ್ನೂ ಮುಟ್ಟಿಲ್ಲ. ಆದರೆ ಆ ಗುರಿಯನ್ನು ಮುಟ್ಟಿ ಅದನ್ನು ನನ್ನದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಇದು ಕ್ರಿಸ್ತನ ಅಪೇಕ್ಷೆ. ಆದಕಾರಣವೇ, ಕ್ರಿಸ್ತನು ನನ್ನನ್ನು ತನ್ನವನನ್ನಾಗಿ ಮಾಡಿಕೊಂಡನು.
ఫిలిప్పీయులకు 3 : 13 (ERVTE)
ಸಹೋದರ ಸಹೋದರಿಯರೇ, ನಾನಿನ್ನೂ ಆ ಗುರಿಯನ್ನು ಮುಟ್ಟಿಲ್ಲವೆಂಬುದು ನನಗೆ ಗೊತ್ತಿದೆ. ಆದರೆ ನಾನು ಯಾವಾಗಲೂ ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ನನ್ನ ಮುಂದಿರುವ ಗುರಿಯನ್ನು ಮುಟ್ಟಲು ನನ್ನಿಂದಾದಷ್ಟರ ಮಟ್ಟಿಗೆ ಓಡುತ್ತಿದ್ದೇನೆ.
ఫిలిప్పీయులకు 3 : 14 (ERVTE)
ದೇವರು ನಮ್ಮನ್ನು ಕ್ರಿಸ್ತನ ಮೂಲಕ ಮೇಲೋಕದ ಜೀವಿತಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
ఫిలిప్పీయులకు 3 : 15 (ERVTE)
ಆತ್ಮಿಕತೆಯಲ್ಲಿ ಪರಿಪೂರ್ಣವಾದ ಮಟ್ಟಕ್ಕೆ ಬಂದಿರುವ ನಾವೆಲ್ಲರೂ ಇದೇ ರೀತಿ ಯೋಚಿಸಬೇಕು. ನೀವು ಈ ಸಂಗತಿಗಳಲ್ಲಿ ಯಾವುದನ್ನಾದರೂ ಒಪ್ಪಿಕೊಳ್ಳದಿದ್ದರೆ ದೇವರೇ ನಿಮಗೆ ಅದನ್ನು ಸ್ಪಷ್ಟಪಡಿಸುವನು.
ఫిలిప్పీయులకు 3 : 16 (ERVTE)
ಆದರೆ ನಾವು ಈಗಾಗಲೇ ಹೊಂದಿರುವ ಸತ್ಯವನ್ನು ಅನುಸರಿಸುತ್ತಾ ನಡೆಯೋಣ.
ఫిలిప్పీయులకు 3 : 17 (ERVTE)
ಸಹೋದರ ಸಹೋದರಿಯರೇ, ನೀವೆಲ್ಲರೂ ನನ್ನಂತೆ ಜೀವಿಸಲು ಪ್ರಯತ್ನಿಸಿ. ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ಜೀವಿಸುವವರನ್ನು ಅನುಸರಿಸಿರಿ.
ఫిలిప్పీయులకు 3 : 18 (ERVTE)
ಅನೇಕರು ಕ್ರಿಸ್ತನ ಶಿಲುಬೆಗೆ ವೈರಿಗಳೊ ಎಂಬಂತೆ ಜೀವಿಸುತ್ತಾರೆ. ಅವರ ಬಗ್ಗೆ ನಾನು ನಿಮಗೆ ಅನೇಕ ಸಲ ತಿಳಿಸಿದ್ದೇನೆ. ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.
ఫిలిప్పీయులకు 3 : 19 (ERVTE)
ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.
ఫిలిప్పీయులకు 3 : 20 (ERVTE)
ನಾವಾದರೋ ಪರಲೋಕ ಸಂಸ್ಥಾನದವರು. ನಮ್ಮ ರಕ್ಷಕನು ಅಲ್ಲಿಂದಲೇ ಬರುವುದನ್ನು ನಾವು ಎದುರುನೋಡುತ್ತಿದ್ದೇವೆ. ಪ್ರಭುವಾದ ಯೇಸು ಕ್ರಿಸ್ತನೇ ನಮ್ಮ ರಕ್ಷಕನು.
ఫిలిప్పీయులకు 3 : 21 (ERVTE)
ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.

1 2 3 4 5 6 7 8 9 10 11 12 13 14 15 16 17 18 19 20 21