సామెతలు 15 : 2 (ERVTE)
ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು.
సామెతలు 15 : 3 (ERVTE)
ಜ್ಞಾನಿಯ ಮಾತನ್ನು ಜನರು ಕೇಳಬಯಸುತ್ತಾರೆ. ಮೂಢನು ಕೇವಲ ಮೂರ್ಖತನವನ್ನೇ ಮಾತಾಡುವನು.
సామెతలు 15 : 4 (ERVTE)
ಯೆಹೋವನ ದೃಷ್ಟಿಗೆ ಪ್ರತಿಯೊಂದೂ ಕಾಣುತ್ತದೆ. ಆತನು ಕೆಡುಕರನ್ನೂ ಒಳ್ಳೆಯವರನ್ನೂ ಗಮನಿಸುತ್ತಿದ್ದಾನೆ.
సామెతలు 15 : 5 (ERVTE)
ಹಿತನುಡಿಗಳು ಜೀವವುಳ್ಳ ಮರದಂತಿವೆ. ಸುಳ್ಳು ಮಾತುಗಳು ಮನುಷ್ಯನ ಆತ್ಮವನ್ನು ಜಜ್ಜಿಹಾಕುತ್ತವೆ.
సామెతలు 15 : 6 (ERVTE)
ಮೂರ್ಖನು ತಂದೆಯ ಬುದ್ಧಿಮಾತನ್ನು ತಿರಸ್ಕರಿಸುವನು. ಬುದ್ಧಿಮಾತನ್ನು ಸ್ವೀಕರಿಸಿಕೊಳ್ಳುವವನು ಜ್ಞಾನಿಯಾಗುತ್ತಾನೆ.
సామెతలు 15 : 7 (ERVTE)
ಒಳ್ಳೆಯವರ ಮನೆಗಳಲ್ಲಿ ಬಹಳ ಐಶ್ವರ್ಯವಿರುತ್ತದೆ. ಕೆಡುಕರ ಸಂಪಾದನೆಯಾದರೋ ಆಪತ್ತನ್ನು ಬರಮಾಡುತ್ತದೆ.
సామెతలు 15 : 8 (ERVTE)
ಜ್ಞಾನಿಯ ಮಾತುಗಳು ತಿಳುವಳಿಕೆಯನ್ನು ಹರಡುತ್ತವೆ. ಮೂಢರ ಮಾತುಗಳು ಕೇಳಲು ಯೋಗ್ಯವಲ್ಲ.
సామెతలు 15 : 9 (ERVTE)
ಕೆಡುಕರ ಕಾಣಿಕೆಯನ್ನು ಯೆಹೋವನು ದ್ವೇಷಿಸುವನು; ಒಳ್ಳೆಯವರ ಪ್ರಾರ್ಥನೆಯನ್ನು ಸಂತೋಷದಿಂದ ಕೇಳುವನು.
సామెతలు 15 : 10 (ERVTE)
ದುಷ್ಟರ ಜೀವಿತವು ಯೆಹೋವನಿಗೆ ಅಸಹ್ಯ. ಒಳ್ಳೆಯದನ್ನು ಮಾಡಲಿಚ್ಛಿಸುವವರು ಯೆಹೋವನಿಗೆ ಪ್ರಿಯ.
సామెతలు 15 : 11 (ERVTE)
ನೀತಿಮಾರ್ಗವನ್ನು ತೊರೆದವರಿಗೆ ಮಹಾದಂಡನೆಯಾಗುವುದು; ಶಿಕ್ಷಣ, ಗದರಿಕೆಯನ್ನು ದ್ವೇಷಿಸುವವನು ನಾಶವಾಗುವನು.
సామెతలు 15 : 12 (ERVTE)
ಮೃತ್ಯುಲೋಕದಲ್ಲಿ ನಡೆಯುತ್ತಿರುವುದು ಯೆಹೋವನಿಗೆ ತಿಳಿದಿದೆ. ಜನರ ಹೃದಯಗಳಲ್ಲಿರುವ ಆಲೋಚನೆಗಳು ಸಹ ಆತನಿಗೆ ಗೊತ್ತಿವೆ.
సామెతలు 15 : 13 (ERVTE)
ಮೂಢನು ತನ್ನ ತಪ್ಪನ್ನು ಬೇರೆಯವರಿಂದ ಕೇಳಲು ಇಷ್ಟಪಡನು. ಮೂಢನು ಉಪದೇಶಕ್ಕಾಗಿ ಜ್ಞಾನಿಗಳ ಬಳಿಗೆ ಹೋಗುವುದಿಲ್ಲ.
సామెతలు 15 : 14 (ERVTE)
ಸಂತೋಷವಾಗಿರುವವನ ಮುಖದಲ್ಲಿ ಆನಂದ ಎದ್ದುಕಾಣುವುದು. ದುಃಖಗೊಂಡಿರುವವನ ಆತ್ಮದಲ್ಲಿ ವ್ಯಥೆ ಎದ್ದುಕಾಣುವುದು.
సామెతలు 15 : 15 (ERVTE)
ವಿವೇಕಿಯು ಮತ್ತಷ್ಟು ತಿಳುವಳಿಕೆಯನ್ನು ಪಡೆದುಕೊಳ್ಳಲು ಪ್ರಯತ್ನಿಸುವನು. ಮೂಢನು ಮತ್ತಷ್ಟು ಮೂಢತನವನ್ನು ಬಯಸುತ್ತಾನೆ.
సామెతలు 15 : 16 (ERVTE)
ಬಡಜನರ ದಿನಗಳೆಲ್ಲಾ ದುಃಖಕರ. ಸಂತೋಷದ ಹೃದಯದಲ್ಲಿ ಸದಾ ಔತಣ.
సామెతలు 15 : 17 (ERVTE)
ಬಹಳ ಐಶ್ವರ್ಯವನ್ನು ಹೊಂದಿದ್ದು ಸಮಾಧಾನವಿಲ್ಲದೆ ಇರುವುದಕ್ಕಿಂತ ಸ್ವಲ್ಪ ಐಶ್ವರ್ಯವನ್ನು ಹೊಂದಿದ್ದು ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಮೇಲು.
సామెతలు 15 : 18 (ERVTE)
ದ್ವೇಷವಿರುವಲ್ಲಿ ಹೆಚ್ಚಾಗಿ ತಿನ್ನುವುದಕ್ಕಿಂತಲೂ ಪ್ರೀತಿಯಿರುವಲ್ಲಿ ಸ್ವಲ್ಪ ತಿನ್ನುವುದೇ ಉತ್ತಮ.
సామెతలు 15 : 19 (ERVTE)
ಮುಂಗೋಪಿಯು ಜಗಳವನ್ನು ಎಬ್ಬಿಸುವನು. ತಾಳ್ಮೆಯುಳ್ಳವನು ಶಾಂತಿ ಸ್ಥಾಪಿಸುವನು.
సామెతలు 15 : 20 (ERVTE)
ಸೋಮಾರಿಗೆ ಎಲ್ಲೆಲ್ಲೂ ತೊಂದರೆ, ಯಥಾರ್ಥವಂತರಿಗೆ ಜೀವನ ಸರಾಗ.
సామెతలు 15 : 21 (ERVTE)
ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದರೋ ತನ್ನ ತಾಯಿಯನ್ನು ಕಡೆಗಣಿಸುವನು.
సామెతలు 15 : 22 (ERVTE)
ಮೂಢನಿಗೆ ಮೂಢತನದಲ್ಲಿ ಸಂತೋಷ. ಜ್ಞಾನಿಯು ಎಚ್ಚರಿಕೆಯಿಂದಿದ್ದು ಒಳ್ಳೆಯದನ್ನು ಮಾಡುವನು.
సామెతలు 15 : 23 (ERVTE)
ಆಲೋಚನೆಯಿಲ್ಲದ ಯೋಜನೆಗಳು ವಿಫಲವಾಗುತ್ತವೆ. ಆಲೋಚಿಸಿ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ.
సామెతలు 15 : 24 (ERVTE)
ಸಮರ್ಪಕವಾದ ಉತ್ತರ ಸಂತೋಷವನ್ನು ಉಂಟುಮಾಡುವುದು; ತಕ್ಕ ಸಮಯದಲ್ಲಿ ಸಮಯೋಚಿತವಾದ ಮಾತು ಅತ್ಯುತ್ತಮ.
సామెతలు 15 : 25 (ERVTE)
ಜ್ಞಾನಿಯ ಕಾರ್ಯಗಳು ಅವನನ್ನು ಯಶಸ್ಸಿಗೆ ನಡೆಸುತ್ತವೆ; ಅವು ಅವನನ್ನು ಮರಣದ ಹಾದಿಯಿಂದ ತಪ್ಪಿಸುತ್ತವೆ.
సామెతలు 15 : 26 (ERVTE)
ಅಹಂಕಾರಿಗಳ ಆಸ್ತಿಯನ್ನು ಯೆಹೋವನು ನಾಶಗೊಳಿಸುತ್ತಾನೆ; ಆದರೆ ವಿಧವೆಯರ ಆಸ್ತಿಯನ್ನು ಕಾಪಾಡುವನು.
సామెతలు 15 : 27 (ERVTE)
ಯೆಹೋವನು ದುರಾಲೋಚನೆಗಳನ್ನು ದ್ವೇಷಿಸುವನು; ಕನಿಕರದ ಮಾತುಗಳಲ್ಲಾದರೋ ಸಂತೋಷಪಡುವನು.
సామెతలు 15 : 28 (ERVTE)
ದುರಾಶೆಪಡುವವನು ತನ್ನ ಕುಟುಂಬಕ್ಕೆ ಆಪತ್ತನ್ನು ಬರಮಾಡಿಕೊಳ್ಳುವನು. ಲಂಚ ತೆಗೆದುಕೊಳ್ಳದವನಿಗೆ ಯಾವ ಸಮಸ್ಯೆಯೂ ಇರುವುದಿಲ್ಲ.
సామెతలు 15 : 29 (ERVTE)
ಒಳ್ಳೆಯವರು ಎಚ್ಚರಿಕೆಯಿಂದ ಯೋಚಿಸಿ ಉತ್ತರ ಕೊಡುವರು. ದುಷ್ಟರಾದರೋ ಯೋಚಿಸದೆ ಮಾತಾಡುವರು; ಅದರಿಂದ ಜನರಿಗೆ ಕೇವಲ ತೊಂದರೆಯಷ್ಟೇ.
సామెతలు 15 : 30 (ERVTE)
ಯೆಹೋವನು ದುಷ್ಟರಿಗೆ ಬಹುದೂರ. ಶಿಷ್ಟರ ಪ್ರಾರ್ಥನೆಯನ್ನಾದರೋ ಆತನು ಯಾವಾಗಲೂ ಕೇಳುತ್ತಾನೆ.
సామెతలు 15 : 31 (ERVTE)
ನಗುಮುಖವು ಜನರನ್ನು ಸಂತೋಷಗೊಳಿಸುವುದು; ಒಳ್ಳೆಯ ಸುದ್ದಿಯಿಂದ ಜನರ ಆರೋಗ್ಯ ಹೆಚ್ಚುವುದು.
సామెతలు 15 : 32 (ERVTE)
ತನ್ನ ತಪ್ಪನ್ನು ಎಚ್ಚರಿಕೆಯಿಂದ ಕೇಳುವವನು ಬಹು ಜ್ಞಾನಿ.
సామెతలు 15 : 33 (ERVTE)
ಶಿಕ್ಷೆಯನ್ನು ಒಪ್ಪದವನು ತನಗೇ ಕೇಡುಮಾಡಿಕೊಳ್ಳುತ್ತಾನೆ. ಗದರಿಕೆಯನ್ನು ಕೇಳುವವನು ತಿಳುವಳಿಕೆಯನ್ನು ಪಡೆದುಕೊಳ್ಳುವನು. ಯೆಹೋವನಲ್ಲಿ ಭಯಭಕ್ತಿಯುಳ್ಳವನು ಜ್ಞಾನಿಯಾಗುತ್ತಿದ್ದಾನೆ. ಸನ್ಮಾನ ಹೊಂದಬೇಕೆನ್ನುವವನು ಮೊದಲು ದೀನನಾಗಿರಬೇಕು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33