సామెతలు 16 : 2 (ERVTE)
ಜನರು ತಾವು ಹೇಳಬೇಕಾದದ್ದನ್ನು ಆಲೋಚಿಸಿಕೊಂಡರೂ ನಾಲಿಗೆಗೆ ತಕ್ಕ ಮಾತುಗಳನ್ನು ಕೊಡುವವನು ಯೆಹೋವನೇ.
సామెతలు 16 : 3 (ERVTE)
ಜನರು ತಮ್ಮ ಕಾರ್ಯಗಳೆಲ್ಲಾ ಸರಿಯೆಂದು ಆಲೋಚಿಸಿಕೊಂಡರೂ ಅವುಗಳ ಉದ್ದೇಶಕ್ಕನುಸಾರವಾಗಿ ತೀರ್ಪು ಕೊಡುವವನು ಯೆಹೋವನೇ.
సామెతలు 16 : 4 (ERVTE)
ನಿಮ್ಮ ಕಾರ್ಯಗಳನ್ನು ಯೆಹೋವನಿಗೆ ವಹಿಸಿರಿ; ಆಗ ನಿಮ್ಮ ಯೋಜನೆಗಳೆಲ್ಲಾ ಸಫಲವಾಗುವವು.
సామెతలు 16 : 5 (ERVTE)
ಯೆಹೋವನು ಪ್ರತಿಯೊಂದನ್ನು ತನ್ನ ಉದ್ದೇಶಕ್ಕನುಸಾರವಾಗಿ ಮಾಡಿದ್ದಾನೆ. ಆತನು ಕೆಡುಕನನ್ನೂ ನಾಶನದ ದಿನಕ್ಕಾಗಿ ಇಟ್ಟಿದ್ದಾನೆ.
సామెతలు 16 : 6 (ERVTE)
ಗರ್ವಿಷ್ಠರು ಯೆಹೋವನಿಗೆ ಅಸಹ್ಯ. ಆ ಗರ್ವಿಷ್ಠರಿಗೆ ಯೆಹೋವನ ದಂಡನೆ ಖಂಡಿತ.
సామెతలు 16 : 7 (ERVTE)
ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ.
సామెతలు 16 : 8 (ERVTE)
ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.
సామెతలు 16 : 9 (ERVTE)
ಅನ್ಯಾಯದಿಂದ ಹೆಚ್ಚು ಸಂಪಾದಿಸುವುದಕ್ಕಿಂತ ನ್ಯಾಯವಾಗಿ ಸ್ವಲ್ಪ ಸಂಪಾದಿಸುವುದೇ ಉತ್ತಮ.
సామెతలు 16 : 10 (ERVTE)
ಒಬ್ಬನು ಅನೇಕ ಯೋಜನೆಗಳನ್ನು ಮಾಡಿಕೊಂಡರೂ ಭವಿಷ್ಯತ್ತನ್ನು ನಿರ್ಧರಿಸುವವನು ಯೆಹೋವನೇ.
సామెతలు 16 : 11 (ERVTE)
ರಾಜನ ಮಾತು ದೇವರಿಂದ ಬಂದ ಸಂದೇಶದಂತಿದೆ. ಅವನ ತೀರ್ಮಾನ ಯಾವಾಗಲೂ ನ್ಯಾಯವಾಗಿರಬೇಕು.
సామెతలు 16 : 12 (ERVTE)
ಎಲ್ಲಾ ನ್ಯಾಯವಾದ ಅಳತೆಮಾಪಕಗಳು ಮತ್ತು ತಕ್ಕಡಿಗಳು ಯೆಹೋವನಿಗೆ ಇಷ್ಟ. ನ್ಯಾಯವಾದ ಒಪ್ಪಂದವು ಆತನಿಗೆ ಇಷ್ಟ.
సామెతలు 16 : 13 (ERVTE)
ರಾಜನು ಕೆಟ್ಟದ್ದನ್ನು ಸಹಿಸಲಾರನು; ಯಾಕೆಂದರೆ ಒಳ್ಳೆಯದರಿಂದಲೇ ಅವನ ರಾಜ್ಯಕ್ಕೆ ಬಲ.
సామెతలు 16 : 14 (ERVTE)
ರಾಜರಿಗೆ ಸತ್ಯವನ್ನು ಕೇಳಲು ಇಷ್ಟ, ಸುಳ್ಳಾಡದ ಜನರೂ ಇಷ್ಟ.
సామెతలు 16 : 15 (ERVTE)
ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು.
సామెతలు 16 : 16 (ERVTE)
ರಾಜನು ಸಂತೋಷದಿಂದಿರುವಾಗ ಎಲ್ಲರ ಜೀವನವು ಉತ್ತಮವಾಗಿರುವುದು. ರಾಜನು ನಿನ್ನನ್ನು ಮೆಚ್ಚಿಕೊಂಡರೆ, ಅದು ನಿನ್ನ ಪಾಲಿಗೆ ಮೋಡದಿಂದ ಸುರಿಯುವ ಮುಂಗಾರು ಮಳೆಯಂತಿರುವುದು.
సామెతలు 16 : 17 (ERVTE)
ಜ್ಞಾನ ಸಂಪಾದನೆಯು ಬಂಗಾರ ಸಂಪಾದನೆಗಿಂತಲೂ ಶ್ರೇಷ್ಠ. ವಿವೇಕ ಸಂಪಾದನೆಯು ಬೆಳ್ಳಿ ಸಂಪಾದನೆಗಿಂತಲೂ ಉತ್ತಮ.
సామెతలు 16 : 18 (ERVTE)
ನೀತಿವಂತರ ಜೀವಿತವು ದುಷ್ಟತನದಿಂದ ದೂರವಾಗಿರುವುದು. ತನ್ನ ಜೀವಿತದ ಬಗ್ಗೆ ಎಚ್ಚರಿಕೆಯುಳ್ಳವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವನು.
సామెతలు 16 : 19 (ERVTE)
ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.
సామెతలు 16 : 20 (ERVTE)
ಗರ್ವಿಷ್ಠರೊಡನೆ ಐಶ್ವರ್ಯವನ್ನು ಹಂಚಿಕೊಳ್ಳುವದಕ್ಕಿಂತ ದೀನರಾಗಿದ್ದು ಬಡಜನರೊಡನೆ ವಾಸಿಸುವುದೇ ಉತ್ತಮ.
సామెతలు 16 : 21 (ERVTE)
ಉಪದೇಶವನ್ನು ಗಮನವಿಟ್ಟು ಕೇಳುವವನು ಅದರ ಲಾಭ ಹೊಂದುವನು; ಯೆಹೋವನಲ್ಲಿ ಭರವಸೆ ಇಡುವವನು ಆಶೀರ್ವಾದ ಹೊಂದುವನು.
సామెతలు 16 : 22 (ERVTE)
ಜ್ಞಾನಿಯನ್ನು ಅವನ ಜ್ಞಾನದಿಂದಲೇ ಜನರು ಗುರುತಿಸುವರು. ಎಚ್ಚರಿಕೆಯಿಂದ ಮಾತಾಡುವವನು ಒಡಂಬಡಿಸುವನು.
సామెతలు 16 : 23 (ERVTE)
ವಿವೇಕವು ವಿವೇಕಿಗಳಿಗೆ ನಿಜಜೀವವನ್ನು ಕೊಡುತ್ತದೆ. ಆದರೆ ಮೂಢರು ತಮ್ಮ ಮೂಢತನದಿಂದಲೇ ದಂಡಿಸಲ್ಪಡುವರು.
సామెతలు 16 : 24 (ERVTE)
ಜ್ಞಾನಿಯ ಹೃದಯವು ಅವನ ಬಾಯಿಗೆ ಮಾರ್ಗದರ್ಶನ. ಅವನ ಮಾತುಗಳು ಒಳ್ಳೆಯದಾಗಿವೆ; ಕೇಳಲು ಯೋಗ್ಯವಾಗಿವೆ.
సామెతలు 16 : 25 (ERVTE)
ಸವಿನುಡಿಗಳು ಜೇನಿನಂತಿವೆ. ಅವು ಸ್ವೀಕಾರಕ್ಕೆ ಸುಲಭ; ಆರೋಗ್ಯಕ್ಕೆ ಉಪಯುಕ್ತ.
సామెతలు 16 : 26 (ERVTE)
ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ಮಾರ್ಗವಿದೆ; ಆದರೆ ಅದರ ಅಂತ್ಯವು ಮರಣ.
సామెతలు 16 : 27 (ERVTE)
ಕೆಲಸಗಾರನನ್ನು ಅವನ ಹೊಟ್ಟೆಯೇ ದುಡಿಮೆಯಲ್ಲಿ ತೊಡಗಿಸುತ್ತದೆ. ಅವನ ಹಸಿವೇ ಊಟಕ್ಕಾಗಿ ಅವನನ್ನು ದುಡಿಸುತ್ತದೆ.
సామెతలు 16 : 28 (ERVTE)
ನೀಚನು ಕೆಟ್ಟಕಾರ್ಯಗಳನ್ನು ಆಲೋಚಿಸಿಕೊಳ್ಳುವನು. ಅವನ ಮಾತುಗಳು ಬೆಂಕಿಯಂತೆ ನಾಶಕರ.
సామెతలు 16 : 29 (ERVTE)
ಕೆಡುಕನು ಜಗಳ ಎಬ್ಬಿಸುವನು; ಗಾಳಿಸುದ್ದಿಯನ್ನು ಹಬ್ಬಿಸುವವನು ಆಪ್ತಸ್ನೇಹಿತರಲ್ಲಿ ಒಡಕು ಉಂಟುಮಾಡುವನು.
సామెతలు 16 : 30 (ERVTE)
ಕೆಡುಕನು ತನ್ನ ಸ್ನೇಹಿತರನ್ನೇ ಮೋಸಗೊಳಿಸಿ ನಾಶನಕ್ಕೆ ನಡೆಸುವನು.
సామెతలు 16 : 31 (ERVTE)
ಕಣ್ಣುಮಿಟುಕಿಸಿ ನಗುವವನು ತಪ್ಪಾದ ಹಾಗೂ ಕೆಟ್ಟಕಾರ್ಯವೆಸಗಲು ಯೋಜಿಸುತ್ತಿರುವನು.
సామెతలు 16 : 32 (ERVTE)
ಒಳ್ಳೆಯವರಿಗೆ ಅವರ ನರೆಕೂದಲೇ ವೈಭವದ ಕಿರೀಟ.
సామెతలు 16 : 33 (ERVTE)
ಶೂರನಾಗಿರುವುದಕ್ಕಿಂತ ತಾಳ್ಮೆಯಿಂದಿರುವುದೇ ಶ್ರೇಷ್ಠ; ಪಟ್ಟಣವನ್ನು ವಶಪಡಿಸಿಕೊಳ್ಳುವುದಕ್ಕಿಂತ ನಿಮ್ಮ ಕೋಪವನ್ನು ಸ್ವಾಧೀನದಲ್ಲಿಟ್ಟುಕೊಳ್ಳವುದೇ ಉತ್ತಮ. ಜನರು ಚೀಟುಹಾಕಿ ನಿರ್ಧಾರ ಮಾಡಿದರೂ ಆ ನಿರ್ಧಾರಗಳು ಬರುವುದು ಯೆಹೋವನಿಂದಲೇ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33