సామెతలు 22 : 2 (ERVTE)
ಬಹು ಧನಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಬೆಳ್ಳಿಬಂಗಾರಗಳಿಗಿಂತಲೂ ಸನ್ಮಾನಿತರಾಗಿರುವುದೇ ಅಮೂಲ್ಯ.
సామెతలు 22 : 3 (ERVTE)
ಐಶ್ವರ್ಯವಂತರಿಗೂ ಬಡವರಿಗೂ ಯಾವ ವ್ಯತ್ಯಾಸವಿಲ್ಲ. ಯಾಕೆಂದರೆ ಎಲ್ಲರನ್ನು ನಿರ್ಮಿಸಿದಾತನು ಯೆಹೋವನೇ.
సామెతలు 22 : 4 (ERVTE)
ಜ್ಞಾನಿಗಳು ಕೇಡನ್ನು ಕಂಡು ದೂರವಾಗುತ್ತಾರೆ. ಮೂಢರಾದರೋ ನೇರವಾಗಿ ಹೋಗಿ ಆಪತ್ತಿಗೀಡಾಗುವರು.
సామెతలు 22 : 5 (ERVTE)
ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದು ದೀನತೆಯಿಂದಿರು; ಆಗ ನೀನು ಐಶ್ವರ್ಯ, ಸನ್ಮಾನ ಮತ್ತು ನಿಜಜೀವವನ್ನು ಹೊಂದಿಕೊಳ್ಳುವೆ.
సామెతలు 22 : 6 (ERVTE)
ವಕ್ರಬುದ್ಧಿಯುಳ್ಳವರು ಅನೇಕ ಆಪತ್ತುಗಳಿಗೆ ಸಿಕ್ಕಿಕ್ಕೊಂಡಿದ್ದಾರೆ. ಆದರೆ ತನ್ನ ಆತ್ಮದ ಬಗ್ಗೆ ಚಿಂತಿಸುವವನು ಆ ಆಪತ್ತುಗಳಿಂದ ದೂರವಿರುವನು.
సామెతలు 22 : 7 (ERVTE)
ಮಗನಿಗೆ ಬಾಲ್ಯದಲ್ಲಿಯೇ ಒಳ್ಳೆಯ ಮಾರ್ಗವನ್ನು ಉಪದೇಶಿಸು. ಅವನು ಬೆಳೆದು ದೊಡ್ಡವನಾದಾಗ ಅದೇ ರೀತಿಯಲ್ಲಿ ಜೀವಿಸುವನು.
సామెతలు 22 : 8 (ERVTE)
ಬಡವನು ಐಶ್ವರ್ಯವಂತನಿಗೆ ಗುಲಾಮನಾಗಿದ್ದಾನೆ. ಸಾಲ ತೆಗೆದುಕೊಳ್ಳುವವನು ಸಾಲಕೊಡುವವನಿಗೆ ಸೇವಕನಾಗಿದ್ದಾನೆ.
సామెతలు 22 : 9 (ERVTE)
ಕೇಡನ್ನು ಬಿತ್ತುವವನು ಕೇಡನ್ನು ಕೊಯ್ಯುವನು. ಅವನ ದುಷ್ಟಶಕ್ತಿಯು ನಾಶವಾಗುವುದು.
సామెతలు 22 : 10 (ERVTE)
ಉದಾರಿಯು ತನ್ನ ಆಹಾರವನ್ನು ಬಡವರೊಂದಿಗೆ ಹಂಚಿಕೊಳ್ಳುವುದರಿಂದ ಆಶೀರ್ವಾದ ಹೊಂದುವನು.
సామెతలు 22 : 11 (ERVTE)
ದುರಾಭಿಮಾನಿಯನ್ನು ಬಲವಂತವಾಗಿ ಹೊರಗಟ್ಟಿ. ಆಗ ಜಗಳವಾಗಲಿ ವಾದಗಳಾಗಲಿ ಅವಮಾನಗಳಾಗಲಿ ಇರುವುದಿಲ್ಲ.
సామెతలు 22 : 12 (ERVTE)
ನೀನು ಶುದ್ಧಹೃದಯವನ್ನೂ ಸವಿಮಾತುಗಳನ್ನೂ ಪ್ರೀತಿಸಿದರೆ ರಾಜನು ನಿನಗೆ ಸ್ನೇಹಿತನಾಗುವನು.
సామెతలు 22 : 13 (ERVTE)
ಯೆಹೋವನು ಜ್ಞಾನಿಗಳ ಮೇಲೆ ಲಕ್ಷ್ಯವಿಟ್ಟು ಕಾಪಾಡುವನು; ವಂಚಕರ ಮಾತುಗಳನ್ನಾದರೋ ನಾಶಪಡಿಸುವನು.
సామెతలు 22 : 14 (ERVTE)
“ನಾನು ಕೆಲಸಕ್ಕೆ ಹೋಗಲಾರೆ. ಹೊರಗಡೆ ಸಿಂಹವಿದೆ. ಅದು ನನ್ನನ್ನು ಕೊಲ್ಲುತ್ತದೆ” ಎನ್ನುತ್ತಾನೆ ಸೋಮಾರಿ.
సామెతలు 22 : 15 (ERVTE)
ಕಾಮುಕಿಯ ಬಾಯಿ ಆಳವಾದ ಗುಂಡಿಯಂತಿದೆ. ಯೆಹೋವನಿಂದ ಶಪಿಸಲ್ಪಟ್ಟವರು ಆ ಗುಂಡಿಯೊಳಗೆ ಬೀಳುವರು.
సామెతలు 22 : 16 (ERVTE)
ಮಕ್ಕಳು ಮೂಢಕಾರ್ಯಗಳನ್ನು ಮಾಡುವರು. ನೀವು ಅವರನ್ನು ಶಿಕ್ಷಿಸಿದರೆ, ಅವುಗಳನ್ನು ಮಾಡಬಾರದೆಂದು ಅವರಿಗೆ ಗೊತ್ತಾಗುವುದು.
సామెతలు 22 : 17 (ERVTE)
ಐಶ್ವರ್ಯವಂತರಾಗಲು ಬಡವರನ್ನು ಹಿಂಸಿಸುವವರಿಗೂ ಐಶ್ವರ್ಯವಂತರಿಗೆ ಉಡುಗೊರೆಗಳನ್ನು ಕೊಡುವವರಿಗೂ ಕೊರತೆಯೇ ಗತಿ. {#1ಮೂವತ್ತು ಜ್ಞಾನೋಕ್ತಿಗಳು } ನನ್ನ ಉಪದೇಶಗಳಿಗೆ ಕಿವಿಗೊಡು. ಜ್ಞಾನಿಗಳ ಉಪದೇಶವನ್ನೇ ನಾನು ನಿನಗೆ ಉಪದೇಶಿಸುವೆನು. ಈ ಉಪದೇಶಗಳಿಂದ ಕಲಿತುಕೊ.
సామెతలు 22 : 18 (ERVTE)
ನೀನು ಈ ಉಪದೇಶಗಳನ್ನು ಜ್ಞಾಪಕದಲ್ಲಿಟ್ಟುಕೊಂಡರೆ ನಿನಗೆ ಒಳ್ಳೆಯದಾಗುವುದು. ನೀನು ಈ ಉಪದೇಶಗಳನ್ನು ಹೇಳಬಲ್ಲವನಾದರೆ ನಿನಗೆ ಅನುಕೂಲವಾಗುವುದು.
సామెతలు 22 : 19 (ERVTE)
ಆ ಜ್ಞಾನೋಕ್ತಿಗಳನ್ನು ನಾನೀಗ ಉಪದೇಶಿಸುವೆನು, ನೀನು ಯೆಹೋವನಲ್ಲಿ ಭರವಸೆ ಇಡಬೇಕೆಂಬುದೇ ನನ್ನ ಅಪೇಕ್ಷೆ.
సామెతలు 22 : 20 (ERVTE)
ನಾನು ನಿನಗೋಸ್ಕರ ಮೂವತ್ತು ನುಡಿಗಳನ್ನು ಬರೆದಿರುವೆ. ಇವು ಬುದ್ಧಿವಾದದ ಮತ್ತು ವಿವೇಕದ ನುಡಿಗಳಾಗಿವೆ.
సామెతలు 22 : 21 (ERVTE)
ಈ ನುಡಿಗಳು ನಿನಗೆ ಸತ್ಯವನ್ನೂ ಮುಖ್ಯವಾದವುಗಳನ್ನೂ ಉಪದೇಶಿಸುತ್ತವೆ. ಆಗ ನೀನು ನಿನ್ನನ್ನು ಕಳುಹಿಸಿದವನಿಗೆ ಒಳ್ಳೆಯ ಉತ್ತರಗಳನ್ನು ಕೊಡಬಲ್ಲವನಾಗುವೆ.[* ಈ ನುಡಿಗಳು … ಕೊಡಬಲ್ಲವನಾಗುವೆ ಅಥವಾ, “ಉಪದೇಶದ ಜ್ಞಾನನುಡಿಗಳನ್ನು ನಾನು ಮೊದಲು ನಿಮಗೆ ಬರೆಯಲಿಲ್ಲವೇ? 21 ಸತ್ಯವಾದ ಮತ್ತು ಮುಖ್ಯವಾದ ಸಂಗತಿಗಳನ್ನು ನಿಮಗೆ ಉಪದೇಶಿಸುವುದಕ್ಕಾಗಿಯೇ ಅವುಗಳನ್ನು ಬರೆದೆನು. ನಿಮ್ಮನ್ನು ಕಳುಹಿಸುವವನಿಗೆ ನೀವು ವಿಶ್ವಾಸನೀಯವಾದ ವರದಿಯನ್ನು ಕೊಡಬೇಕೆಂಬುದೇ ನನ್ನ ಉದ್ದೇಶವಾಗಿತ್ತು. ]
సామెతలు 22 : 22 (ERVTE)
— 1 — ಅಸಹಾಯಕರಾದ ಬಡವರಿಂದ ಕದ್ದುಕೊಳ್ಳಬೇಡ; ನ್ಯಾಯಾಲಯದಲ್ಲಿ ಅವರಿಗೆ ಅನ್ಯಾಯಮಾಡಬೇಡ.
సామెతలు 22 : 23 (ERVTE)
ಯಾಕೆಂದರೆ ಯೆಹೋವನು ಅವರ ಪರವಾಗಿ ವಾದಿಸುವನು; ಅವರನ್ನು ದರೋಡೆ ಮಾಡಬೇಕೆಂದಿರುವವರ ಪ್ರಾಣಗಳನ್ನು ತೆಗೆದುಹಾಕುವನು.
సామెతలు 22 : 24 (ERVTE)
— 2 — ಮುಂಗೋಪಿಯ ಸ್ನೇಹಿತನಾಗಿರಬೇಡ. ತಟ್ಟನೆ ಸಿಟ್ಟುಗೊಳ್ಳುವವನ ಸಮೀಪಕ್ಕೆ ಹೋಗಬೇಡ.
సామెతలు 22 : 25 (ERVTE)
ಇಲ್ಲವಾದರೆ, ನೀನೂ ಅವನಂತಾಗುವೆ. ಆಗ ಅವನಿಗಿರುವ ತೊಂದರೆಗಳು ನಿನಗೂ ಬರುತ್ತವೆ.
సామెతలు 22 : 26 (ERVTE)
— 3 — ಬೇರೊಬ್ಬನ ಸಾಲಗಳಿಗೆ ಜಾಮೀನಾಗಬೇಡ.
సామెతలు 22 : 27 (ERVTE)
ನೀನು ಅವನ ಸಾಲವನ್ನು ತೀರಿಸಲಾಗದಿದ್ದರೆ, ನಿನ್ನಲ್ಲಿರುವ ಪ್ರತಿಯೊಂದನ್ನು ಕಳೆದುಕೊಳ್ಳುವೆ. ನಿನ್ನ ಹಾಸಿಗೆಯನ್ನು ನೀನೇಕೆ ಕಳೆದುಕೊಳ್ಳಬೇಕು.
సామెతలు 22 : 29 (ERVTE)
ಬಹುಕಾಲದ ಹಿಂದೆ ನಿನ್ನ ಪೂರ್ವಿಕರು ಜಮೀನಿಗೆ ಹಾಕಿದ ಮೇರೆಗಲ್ಲನ್ನು ಎಂದಿಗೂ ಜರುಗಿಸಬೇಡ. — 5 — ಚತುರ ಕೆಲಸಗಾರನು ರಾಜರ ಸೇವೆಗೆ ಯೋಗ್ಯನಾಗಿದ್ದಾನೆ. ಅವನು ಸಾಮಾನ್ಯರ ಸೇವೆ ಮಾಡಬೇಕಿಲ್ಲ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29