సామెతలు 23 : 1 (ERVTE)
— 6 — ಅಧಿಪತಿಯೊಂದಿಗೆ ಕುಳಿತುಕೊಂಡು ಊಟಮಾಡುವಾಗ, ನೀನು ಯಾರೊಂದಿಗಿರುವೆ ಎಂಬುದನ್ನು ಜ್ಞಾಪಿಸಿಕೊ.
సామెతలు 23 : 2 (ERVTE)
ನೀನು ತುಂಬ ಹಸಿವೆಗೊಂಡಿದ್ದರೂ ಅತಿಯಾಗಿ ತಿನ್ನಬೇಡ.
సామెతలు 23 : 3 (ERVTE)
ಅವನು ಬಡಿಸುವ ಒಳ್ಳೆಯ ಆಹಾರವನ್ನು ಅತಿಯಾಗಿ ತಿನ್ನಬೇಡ. ಅದು ನಿನ್ನನ್ನು ಮೋಸಗೊಳಿಸುವ ಆಹಾರ.
సామెతలు 23 : 4 (ERVTE)
— 7 — ಐಶ್ವರ್ಯವಂತನಾಗಬೇಕೆಂಬ ಪ್ರಯತ್ನದಲ್ಲಿ ನಿನ್ನ ಆರೋಗ್ಯವನ್ನು ಕಳೆದುಕೊಳ್ಳಬೇಡ. ನೀನು ಜ್ಞಾನಿಯಾಗಿದ್ದರೆ ತಾಳ್ಮೆಯಿಂದಿರುವೆ.
సామెతలు 23 : 5 (ERVTE)
ಪಕ್ಷಿಯಂತೆ ಹಾರಿಹೋಗುತ್ತದೋ ಎಂಬಂತೆ ಹಣವು ಬಹುಬೇಗನೆ ಇಲ್ಲವಾಗುವುದು.
సామెతలు 23 : 6 (ERVTE)
— 8 — ಸ್ವಾರ್ಥಿಯೊಂದಿಗೆ ಊಟಮಾಡಬೇಡ. ಅವನು ಇಷ್ಟಪಡುವ ಮೃಷ್ಠಾನ್ನದಿಂದ ದೂರವಿರು.
సామెతలు 23 : 7 (ERVTE)
ಅವನು ವೆಚ್ಚದ ಬಗ್ಗೆ ಯೋಚಿಸುವಂಥವನು. ಅವನು ನಿನಗೆ, “ತಿನ್ನು, ಕುಡಿ” ಎಂದು ಹೇಳಿದರೂ ಅವನ ಉದ್ದೇಶವೇ ಬೇರೆ.
సామెతలు 23 : 8 (ERVTE)
ನೀನು ಅವನ ಆಹಾರವನ್ನು ತಿಂದರೆ ವಾಂತಿಮಾಡುವೆ; ಆಗ ನಿನ್ನ ಸವಿಮಾತುಗಳೆಲ್ಲಾ ವ್ಯರ್ಥವಾಗುವುದು.
సామెతలు 23 : 10 (ERVTE)
ಮೂಢನಿಗೆ ಉಪದೇಶಿಸಲು ಪ್ರಯತ್ನಿಸಬೇಡ. ಅವನು ನಿನ್ನ ಜ್ಞಾನದ ಮಾತುಗಳನ್ನು ಗೇಲಿಮಾಡುವನು. — 10 — ಜಮೀನಿನ ಮೇರೆಯನ್ನು ಎಂದಿಗೂ ಒತ್ತಬೇಡ. ಅನಾಥರಿಗೆ ಸೇರಿದ ಭೂಮಿಯನ್ನು ಎಂದಿಗೂ ಕಸಿದುಕೊಳ್ಳಬೇಡ.
సామెతలు 23 : 11 (ERVTE)
ಇಲ್ಲವಾದರೆ ಯೆಹೋವನು ನಿನಗೆ ವಿರೋಧವಾಗುವನು; ಯೆಹೋವನು ಬಲಿಷ್ಠನೂ ಅನಾಥರ ಪರವಾಗಿ ವಾದಿಸುವವನೂ ಆಗಿದ್ದಾನೆ.
సామెతలు 23 : 13 (ERVTE)
ನಿನ್ನ ಉಪದೇಶಕರಿಗೆ ಕಿವಿಗೊಟ್ಟು ನಿನ್ನಿಂದ ಸಾಧ್ಯವಾದಷ್ಟು ಕಲಿತುಕೊ. — 12 — ಅಗತ್ಯವೆನಿಸಿದರೆ ಮಗನನ್ನು ಬಾಲ್ಯದಲ್ಲಿಯೇ ದಂಡಿಸು. ನಿನ್ನ ಹೊಡೆತದಿಂದ ಅವನೇನೂ ಸಾಯುವುದಿಲ್ಲ.
సామెతలు 23 : 14 (ERVTE)
ನಿನ್ನ ಹೊಡೆತವು ಅವನ ಜೀವವನ್ನು ಕಾಪಾಡಬಲ್ಲದು.
సామెతలు 23 : 15 (ERVTE)
— 13 — ನನ್ನ ಮಗನೇ, ನೀನು ಜ್ಞಾನಿಯಾಗಿದ್ದರೆ, ನನಗೆ ಬಹು ಸಂತೋಷ.
సామెతలు 23 : 16 (ERVTE)
ನೀನು ಒಳ್ಳೆಯದನ್ನೇ ಹೇಳುವುದನ್ನು ಕೇಳುವಾಗ ನನ್ನ ಹೃದಯಕ್ಕೆ ಸಂತೋಷವಾಗುವುದು.
సామెతలు 23 : 17 (ERVTE)
— 14 — ಕೆಡುಕರ ಬಗ್ಗೆ ಹೊಟ್ಟೆಕಿಚ್ಚುಪಡಬೇಡ. ಆದರೆ ಯೆಹೋವನಲ್ಲಿ ಭಯಭಕ್ತಿಯಿಂದಿರಲು ನಿನ್ನಿಂದಾದಷ್ಟು ಪ್ರಯತ್ನಿಸು.
సామెతలు 23 : 18 (ERVTE)
ಆಗ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆಯು ನಿರರ್ಥಕವಾಗದು.
సామెతలు 23 : 19 (ERVTE)
— 15 — ನನ್ನ ಮಗನೇ, ಕಿವಿಗೊಟ್ಟು ಕೇಳಿ ಜ್ಞಾನಿಯಾಗಿರು. ಯಾವಾಗಲೂ ಎಚ್ಚರಿಕೆಯಿಂದಿದ್ದು ನೀತಿಮಾರ್ಗದಲ್ಲಿ ಜೀವಿಸು.
సామెతలు 23 : 20 (ERVTE)
ಕುಡುಕರ ಮತ್ತು ಹೊಟ್ಟೆಬಾಕರ ಸ್ನೇಹಿತನಾಗಿರಬೇಡ.
సామెతలు 23 : 21 (ERVTE)
ಕುಡುಕರೂ ಹೊಟ್ಟೆಬಾಕರೂ ಬಡವರಾಗುವರು. ತಿಂದು ಕುಡಿದು ನಿದ್ರಿಸುವುದೇ ಅವರ ಕಾರ್ಯಗಳು. ಅವರು ಬಹು ಬೇಗನೆ ಬಡವರಾಗುವರು.
సామెతలు 23 : 22 (ERVTE)
— 16 — ನಿನ್ನ ತಂದೆಗೆ ಕಿವಿಗೊಡು. ಯಾಕೆಂದರೆ ನೀನು ಅವನ ಮಗನು. ಅವನು ನಿನ್ನ ತಂದೆ. ನಿನ್ನ ತಾಯಿ ವೃದ್ಧಳಾಗಿರುವಾಗಲೂ ಆಕೆಯನ್ನು ಗೌರವಿಸು.
సామెతలు 23 : 23 (ERVTE)
ಸತ್ಯವನ್ನು ಕೊಂಡುಕೊ; ಅದನ್ನು ಮಾರಬೇಡ. ಜ್ಞಾನ, ಸುಶಿಕ್ಷೆ ಮತ್ತು ವಿವೇಕವನ್ನು ಕೊಂಡುಕೊ. ಇವು ಖರೀದಿಗೆ ಯೋಗ್ಯವಾದವುಗಳೂ ಮಾರಲಾಗದಷ್ಟು ಅಮೂಲ್ಯವಾದವುಗಳೂ ಆಗಿವೆ.
సామెతలు 23 : 24 (ERVTE)
ಒಳ್ಳೆಯವನ ತಂದೆಗೆ ಬಹು ಸಂತೋಷ. ಜ್ಞಾನಿಯಾದ ಮಗನಿಂದ ಆನಂದ.
సామెతలు 23 : 25 (ERVTE)
ನಿನ್ನ ತಂದೆತಾಯಿಗಳು ನಿನ್ನೊಂದಿಗೆ ಸಂತೋಷದಿಂದಿರಲಿ; ನಿನ್ನ ತಾಯಿಯು ಆನಂದಿಸಲಿ.
సామెతలు 23 : 26 (ERVTE)
— 17 — ನನ್ನ ಮಗನೇ, ನನ್ನ ಉಪದೇಶವನ್ನು ಗಮನವಿಟ್ಟು ಕೇಳು. ನನ್ನ ಜೀವಿತವು ನಿನಗೆ ಮಾದರಿಯಾಗಿರಲಿ.
సామెతలు 23 : 27 (ERVTE)
ಸೂಳೆಯರು ಮತ್ತು ಕೆಟ್ಟಹೆಂಗಸರು ಬಲೆಯಂತಿದ್ದಾರೆ; ಮೇಲೇರಿ ಬರಲಾಗದ ಆಳವಾದ ಬಾವಿಯಂತಿದ್ದಾರೆ.
సామెతలు 23 : 28 (ERVTE)
ಕೆಟ್ಟಹೆಂಗಸು ಕಳ್ಳನಂತೆ ನಿನಗಾಗಿ ಕಾದಿರುವಳು. ಅನೇಕ ಗಂಡಸರ ಪಾಪಕ್ಕೆ ಅವಳೇ ಕಾರಣ.
సామెతలు 23 : 29 (ERVTE)
— 18 — ಯಾರಿಗೆ ಆಪತ್ತಿದೆ? ಯಾರಿಗೆ ಯಾತನೆಯಿದೆ? ಯಾರಿಗೆ ಜಗಳಗಳಿವೆ? ಯಾರಿಗೆ ಉದ್ವೇಗವಿದೆ? ಯಾರಿಗೆ ನಿಷ್ಕಾರಣವಾದ ಬಾಸುಂಡೆಗಳಿವೆ? ಯಾರಿಗೆ ಕೆಂಪೇರಿದ ಕಣ್ಣುಗಳಿವೆ?
సామెతలు 23 : 30 (ERVTE)
ಮದ್ಯವನ್ನು ಅತಿಯಾಗಿ ಕುಡಿಯುವವರಿಗೆ ಮತ್ತು ಮಿಶ್ರಣಗೊಂಡ ನಾನಾಬಗೆಯ ಮದ್ಯಗಳನ್ನು ಕುಡಿಯುವವರಿಗೆ!
సామెతలు 23 : 31 (ERVTE)
ಆದ್ದರಿಂದ ಮದ್ಯದ ಬಗ್ಗೆ ಎಚ್ಚರಿಕೆಯಾಗಿರು. ಅದು ಅಂದವಾಗಿದ್ದು ಕೆಂಪಗೆ ಥಳಥಳಿಸುತ್ತದೆ. ನೀನು ಅದನ್ನು ಕುಡಿದಾಗ, ನಯವಾಗಿ ಇಳಿದುಹೋಗುತ್ತದೆ.
సామెతలు 23 : 32 (ERVTE)
ಆದರೆ ಕೊನೆಯಲ್ಲಿ ಅದು ವಿಷದ ಹಲ್ಲುಳ್ಳ ಹಾವಿನಂತೆ ಕಚ್ಚುವುದು.
సామెతలు 23 : 33 (ERVTE)
ಮದ್ಯವು ನಿನಗೆ ವಿಚಿತ್ರವಾದವುಗಳನ್ನು ಕಾಣಮಾಡುತ್ತದೆ. ನಿನ್ನ ಮನಸ್ಸನ್ನು ಗಲಿಬಿಲಿ ಮಾಡುತ್ತದೆ.
సామెతలు 23 : 34 (ERVTE)
ನೀನು ಮಲಗಿಕೊಂಡಾಗ ಸಮುದ್ರದ ಅಲ್ಲೋಲಕಲ್ಲೋಲ ಅಲೆಗಳ ಮೇಲಿರುವಂತೆಯೂ ಹಡಗಿನ ಮೇಲೆ ಮಲಗಿಕೊಂಡಿರುವಂತೆಯೂ ನಿನಗನ್ನಿಸುವುದು.
సామెతలు 23 : 35 (ERVTE)
“ಅವರು ನನಗೆ ಬಡಿದರೂ ಗೊತ್ತಾಗಲಿಲ್ಲ; ಅವರು ನನಗೆ ಹೊಡೆದರೂ ನನಗೆ ಬಡಿದರೂ ಅರಿವಾಗಲಿಲ್ಲ. ಈಗ ನಾನು ಎಚ್ಚರಗೊಳ್ಳಲಾರೆ. ನನಗೆ ಮತ್ತಷ್ಟು ದ್ರಾಕ್ಷಾರಸಬೇಕು” ಎಂದು ನೀನು ಹೇಳುವೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35