సామెతలు 24 : 1 (ERVTE)
— 19 — ಕೆಡುಕರ ವಿಷಯದಲ್ಲಿ ಹೊಟ್ಟೆಕಿಚ್ಚುಪಡಬೇಡ; ಅವರೊಂದಿಗಿರಲು ಅಪೇಕ್ಷಿಸಬೇಡ.
సామెతలు 24 : 2 (ERVTE)
ಅವರು ಕೇಡು ಮಾಡಲು ತಮ್ಮ ಹೃದಯಗಳಲ್ಲಿ ಆಲೋಚಿಸಿಕೊಳ್ಳುವರು; ಅವರು ಕೇಡನ್ನೇ ಕುರಿತು ಮಾತಾಡುವರು.
సామెతలు 24 : 3 (ERVTE)
— 20 — ಒಳ್ಳೆಯ ಮನೆಯು ಜ್ಞಾನದ ಮೇಲೂ ವಿವೇಕದ ಮೇಲೂ ಕಟ್ಟಲ್ಪಟ್ಟಿರುವುದು.
సామెతలు 24 : 4 (ERVTE)
ಅದರ ಕೋಣೆಗಳು ಅಮೂಲ್ಯವಾದ ಭಂಡಾರಗಳಿಂದ ತುಂಬಿರುವುದು ಜ್ಞಾನದಿಂದಲೇ.
సామెతలు 24 : 5 (ERVTE)
— 21 — ಜ್ಞಾನವು ಮನುಷ್ಯನನ್ನು ಬಲಿಷ್ಠನನ್ನಾಗಿ ಮಾಡುವುದು. ವಿವೇಕವು ಮನುಷ್ಯನಿಗೆ ಬಲವನ್ನು ಕೊಡುತ್ತದೆ.
సామెతలు 24 : 6 (ERVTE)
ಯುದ್ಧವನ್ನು ಆರಂಭಿಸುವ ಮೊದಲೇ ಎಚ್ಚರಿಕೆಯಿಂದ ಆಲೋಚಿಸು. ಜಯವನ್ನು ಗಳಿಸಬೇಕಾದರೆ ನಿನಗೆ ಅನೇಕ ಒಳ್ಳೆಯ ಆಲೋಚನೆಗಾರರು ಅಗತ್ಯ.
సామెతలు 24 : 7 (ERVTE)
— 22 —
సామెతలు 24 : 8 (ERVTE)
ಮೂಢರು ಜ್ಞಾನವನ್ನು ಅರ್ಥಮಾಡಿಕೊಳ್ಳಲಾರರು; ಮುಖ್ಯವಾದ ವಿಷಯಗಳನ್ನು ಚರ್ಚಿಸುವಾಗ ಮೂಢನು ಏನೂ ಹೇಳಲಾರ. — 23 — ಕೇಡುಮಾಡುವವನನ್ನು ಜನರು “ಕೆಡುಕ” ಎಂದು ಕರೆಯುವರು.
సామెతలు 24 : 9 (ERVTE)
ಮೂಢನ ಆಲೋಚನೆಗಳೆಲ್ಲಾ ಪಾಪಮಯ. ದುರಾಭಿಮಾನಿಯು ಜನರಿಗೆ ಅಸಹ್ಯ.
సామెతలు 24 : 10 (ERVTE)
— 24 —
సామెతలు 24 : 11 (ERVTE)
ಕಷ್ಟದ ಸಮಯಗಳಲ್ಲಿ ನೀನು ಬಲಹೀನನಾಗಿದ್ದರೆ, ನೀನು ನಿಜವಾಗಿಯೂ ಬಲಹೀನ. — 25 — ಜನರು ಯಾರನ್ನಾದರೂ ಕೊಲ್ಲಬೇಕೆಂದಿದ್ದರೆ, ಅವನನ್ನು ಉಳಿಸಲು ಪ್ರಯತ್ನಿಸು.
సామెతలు 24 : 12 (ERVTE)
“ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು.
సామెతలు 24 : 13 (ERVTE)
— 26 — ನನ್ನ ಮಗನೇ, ಜೇನುತುಪ್ಪವನ್ನು ತಿನ್ನು, ಅದು ಒಳ್ಳೆಯದು. ಜೇನುಗೂಡಿನ ಜೇನುತುಪ್ಪ ಸಿಹಿ.
సామెతలు 24 : 14 (ERVTE)
ಅದೇರೀತಿ ಜ್ಞಾನವು ನಿನ್ನ ಆತ್ಮಕ್ಕೆ ಒಳ್ಳೆಯದು. ನೀನು ಅದನ್ನು ಕಂಡುಕೊಂಡರೆ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆ ಎಂದಿಗೂ ಕೊನೆಗೊಳ್ಳುವುದಿಲ್ಲ.
సామెతలు 24 : 15 (ERVTE)
— 27 — ಒಳ್ಳೆಯವನಿಂದ ಕದ್ದುಕೊಳ್ಳುವ ಅಥವಾ ಅವನ ಮನೆಯನ್ನೇ ತೆಗೆದುಕೊಳ್ಳುವ ಕಳ್ಳನಂತೆ ಇರಬೇಡ.
సామెతలు 24 : 16 (ERVTE)
ಒಳ್ಳೆಯವನು ಏಳುಸಲ ಬಿದ್ದರೂ ಅವನು ಮತ್ತೆ ಎದ್ದುನಿಲ್ಲುವನು. ಆದರೆ ಕೆಡುಕರು ಒಂದೇ ಆಪತ್ತಿನಿಂದ ಶಾಶ್ವತವಾಗಿ ಸೋತುಹೋಗುವರು.
సామెతలు 24 : 17 (ERVTE)
— 28 — ನಿನ್ನ ವೈರಿ ತೊಂದರೆಯಲ್ಲಿರುವಾಗ ಸಂತೋಷಪಡಬೇಡ; ಅವನು ಬೀಳುವಾಗಲೂ ಸಂತೋಷಪಡಬೇಡ.
సామెతలు 24 : 18 (ERVTE)
ಇಲ್ಲವಾದರೆ, ಯೆಹೋವನು ನಿನ್ನ ಮೇಲೆ ಕೋಪಗೊಂಡು ನಿನ್ನ ವೈರಿಯನ್ನು ದಂಡಿಸದೆ ಹೋಗಬಹುದು.
సామెతలు 24 : 19 (ERVTE)
— 29 — ಕೆಡುಕರ ಬಗ್ಗೆ ಅತಿಯಾಗಿ ಬೇಸರಗೊಳ್ಳಬೇಡ, ಅವರ ಮೇಲೆ ಹೊಟ್ಟೆಕಿಚ್ಚುಪಡಬೇಡ.
సామెతలు 24 : 20 (ERVTE)
ಆ ಕೆಡುಕರಿಗೆ ನಿರೀಕ್ಷೆಯಿಲ್ಲ. ಅವರ ಬೆಳಕು ಕತ್ತಲೆಯಾಗುವುದು.
సామెతలు 24 : 21 (ERVTE)
— 30 — ಮಗನೇ, ಯೆಹೋವನನ್ನೂ ರಾಜನನ್ನೂ ಗೌರವಿಸು. ಅವರನ್ನು ವಿರೋಧಿಸುವವರ ಜೊತೆ ಸೇರಬೇಡ.
సామెతలు 24 : 22 (ERVTE)
ಯಾಕೆಂದರೆ ಅವರು ಬೇಗನೆ ನಾಶವಾಗುವರು. ದೇವರು ಮತ್ತು ರಾಜನು ತಮ್ಮ ವೈರಿಗಳಿಗೆ ಎಷ್ಟು ಕೇಡುಮಾಡಬಲ್ಲರೆಂಬುದು ನಿನಗೆ ತಿಳಿಯದು.
సామెతలు 24 : 23 (ERVTE)
{#1ಮತ್ತಷ್ಟು ಜ್ಞಾನೋಕ್ತಿಗಳು } ಇವು ಸಹ ಜ್ಞಾನಿಗಳ ಮಾತುಗಳು: ನ್ಯಾಯಾಧಿಪತಿ ನ್ಯಾಯವಂತನಾಗಿರಬೇಕು. ಅವನು ಕೇವಲ ಪರಿಚಯದ ನಿಮಿತ್ತ ಯಾರಿಗೂ ಸಹಾಯ ಮಾಡಕೂಡದು.
సామెతలు 24 : 24 (ERVTE)
ನ್ಯಾಯಾಧೀಶನು ಅಪರಾಧಿಗೆ, “ನೀನು ನಿರಪರಾಧಿ” ಎಂದು ಹೇಳಿದರೆ, ಜನರು ನ್ಯಾಯಾಧೀಶನನ್ನು ಶಪಿಸುವರು; ಜನಾಂಗಗಳು ಅವನನ್ನು ಖಂಡಿಸುವವು.
సామెతలు 24 : 25 (ERVTE)
ಆದರೆ ನ್ಯಾಯಾಧೀಶನು ಅಪರಾಧಿಯನ್ನು ದಂಡಿಸಿದರೆ, ಜನರೆಲ್ಲರೂ ಅವನನ್ನು ಮೆಚ್ಚಿಕೊಳ್ಳುವರು; ಅವನಿಗೆ ಮಹಾ ಆಶೀರ್ವಾದ ದೊರೆಯುವುದು.
సామెతలు 24 : 26 (ERVTE)
సామెతలు 24 : 27 (ERVTE)
ಯಥಾರ್ಥವಾದ ಉತ್ತರ ಜನರೆಲ್ಲರನ್ನು ಸಂತೋಷಗೊಳಿಸುವುದು; ಅದು ತುಟಿಯ ಮೇಲಿನ ಮುದ್ದಿನಂತಿದೆ.
సామెతలు 24 : 28 (ERVTE)
ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೋ ಎಂಬುದನ್ನು ಖಾತರಿಪಡಿಸಿಕೊ.
సామెతలు 24 : 29 (ERVTE)
ಬೇರೊಬ್ಬನ ವಿರೋಧವಾಗಿ ಸಕಾರಣವಿಲ್ಲದೆ ಸಾಕ್ಷಿ ಹೇಳಬೇಡ, ಸುಳ್ಳನ್ನೂ ಹೇಳಬೇಡ.
సామెతలు 24 : 30 (ERVTE)
“ಅವನು ನನಗೆ ಕೇಡುಮಾಡಿದನು. ಆದ್ದರಿಂದ ನಾನೂ ಅವನಿಗೆ ಕೇಡುಮಾಡುವೆ. ಅವನು ಮಾಡಿದ ಕೇಡುಗಳಿಗಾಗಿ ಸೇಡು ತೀರಿಸಿಕೊಳ್ಳುವೆ” ಎಂದು ಹೇಳಬೇಡ. ಸೋಮಾರಿಯ ಹೊಲದ ಸಮೀಪದಲ್ಲೂ ಅಜ್ಞಾನಿಯ ದ್ರಾಕ್ಷಿತೋಟದ ಬಳಿಯಲ್ಲೂ ನಡೆದುಹೋದೆನು.
సామెతలు 24 : 31 (ERVTE)
ಆ ಹೊಲಗಳಲ್ಲಿ ಮುಳ್ಳುಗಿಡಗಳೂ ಉಪಯೋಗವಿಲ್ಲದ ಸಸಿಗಳೂ ಬೆಳೆಯುತ್ತಿದ್ದವು. ಹೊಲಗಳ ಸುತ್ತಲೂ ಇದ್ದ ಗೋಡೆ ಒಡೆದುಹೋಗಿತ್ತು; ಕುಸಿದು ಬೀಳುತ್ತಿತ್ತು.
సామెతలు 24 : 32 (ERVTE)
ಅದನ್ನು ನೋಡಿ, ಆಲೋಚಿಸಿದೆ; ಒಂದು ಪಾಠವನ್ನು ಕಲಿತುಕೊಂಡೆ;
సామెతలు 24 : 33 (ERVTE)
ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ವಿಶ್ರಾಂತಿ, ಇನ್ನು ಸ್ವಲ್ಪ ಕೈಮುದುರಿಕೊಳ್ಳುವೆ, ಮಧ್ಯಾಹ್ನ ಇನ್ನು ಸ್ವಲ್ಪ ನಿದ್ರೆ ಮಾಡುವೆ ಎನ್ನುವೆಯಾ?
సామెతలు 24 : 34 (ERVTE)
ಇವು ನಿನ್ನನ್ನು ಬೇಗನೆ ಬಡವನನ್ನಾಗಿ ಮಾಡಿ ಬರಿದು ಮಾಡುತ್ತದೆ; ಇದ್ದಕ್ಕಿದ್ದಂತೆ ಬಂದು ಎಲ್ಲವನ್ನು ದೋಚಿಕೊಂಡು ಹೋಗುವ ಕಳ್ಳನಂತಿವೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34