సామెతలు 25 : 1 (ERVTE)
{#1ಸೊಲೊಮೋನನಿಂದ ಮತ್ತಷ್ಟು ಜ್ಞಾನೋಕ್ತಿಗಳು }
సామెతలు 25 : 2 (ERVTE)
ಇವು ಸಹ ಸೊಲೊಮೋನನು ಹೇಳಿದ ಜ್ಞಾನೋಕ್ತಿಗಳು. ಈ ನುಡಿಗಳನ್ನು ಯೆಹೂದದ ರಾಜನಾಗಿದ್ದ ಹಿಜ್ಕೀಯನ ಸೇವಕರು ನಕಲು ಮಾಡಿದರು:
సామెతలు 25 : 3 (ERVTE)
ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡುಹಿಡಿಯುವುದರಿಂದ ರಾಜನಿಗೆ ಸನ್ಮಾನ.
సామెతలు 25 : 4 (ERVTE)
ಆಕಾಶದ ಎತ್ತರವನ್ನಾಗಲಿ ಭೂಮಿಯ ಆಳವನ್ನಾಗಲಿ ಅಳೆಯಲು ಯಾರಿಗೆ ಸಾಧ್ಯ? ಅಂತೆಯೇ ರಾಜರುಗಳ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾರರು. ನೀನು ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿ ಶುದ್ಧಗೊಳಿಸಿದರೆ, ಅಕ್ಕಸಾಲಿಗನು ಅದರಿಂದ ಸುಂದರವಾದ ವಸ್ತುಗಳನ್ನು ಮಾಡಬಲ್ಲನು.
సామెతలు 25 : 5 (ERVTE)
ಅಂತೆಯೇ, ರಾಜನಿಂದ ಕೆಟ್ಟ ಆಲೋಚನೆಗಾರರನ್ನು ತೆಗೆದುಹಾಕಿದರೆ, ಒಳ್ಳೆಯತನವು ಅವನ ಆಡಳಿತವನ್ನು ಭದ್ರಗೊಳಿಸುತ್ತದೆ.
సామెతలు 25 : 6 (ERVTE)
ರಾಜನ ಮುಂದೆ ಜಂಬಕೊಚ್ಚಿಕೊಳ್ಳಬೇಡ. ಪ್ರಮುಖರ ಸ್ಥಳದಲ್ಲಿ ನಿಂತುಕೊಳ್ಳಬೇಡ.
సామెతలు 25 : 7 (ERVTE)
ಗಣ್ಯರ ಮುಂದೆ ಅವಮಾನಿತನಾಗುವುದಕ್ಕಿಂತ, “ಮೇಲಕ್ಕೆ ಬಾ” ಎಂದು ಹೇಳಿಸಿಕೊಳ್ಳುವುದೇ ಉತ್ತಮ.
సామెతలు 25 : 8 (ERVTE)
సామెతలు 25 : 9 (ERVTE)
ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು. ನೀನು ನಿನ್ನ ನೆರೆಯವನೊಂದಿಗೆ ವಾಗ್ವಾದ ಮಾಡಿದ್ದರೆ, ಗುಟ್ಟಾದ ವಿಷಯಗಳನ್ನು ಬೇರೊಬ್ಬನಿಗೆ ಪ್ರಕಟಿಸಬೇಡ.
సామెతలు 25 : 10 (ERVTE)
ಇಲ್ಲವಾದರೆ ಅದನ್ನು ಕೇಳಿದವರೆಲ್ಲರೂ ನಿನ್ನನ್ನು ಖಂಡಿಸುವರು; ಆ ಕೆಟ್ಟ ಹೆಸರು ನಿನ್ನನ್ನೆಂದಿಗೂ ಬಿಟ್ಟುಹೋಗದು.
సామెతలు 25 : 11 (ERVTE)
ನೀನು ಸರಿಸಮಯದಲ್ಲಿ ಒಳ್ಳೆಯದನ್ನು ಹೇಳಿದರೆ, ಅದು ಬೆಳ್ಳಿಯ ತಟ್ಟೆಯಲ್ಲಿರುವ ಚಿನ್ನದ ಸೇಬಿನಂತಿರುವುದು.
సామెతలు 25 : 12 (ERVTE)
ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ.
సామెతలు 25 : 13 (ERVTE)
సామెతలు 25 : 14 (ERVTE)
ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು.
సామెతలు 25 : 15 (ERVTE)
ದಾನ ಮಾಡುವುದಾಗಿ ಹೇಳಿಯೂ ಮಾಡದವರು ಮಳೆಯನ್ನು ತಾರದ ಮೋಡಗಳಂತೆಯೂ ಗಾಳಿಯಂತೆಯೂ ಇರುವರು.
సామెతలు 25 : 16 (ERVTE)
ತಾಳ್ಮೆಯು ಅಧಿಪತಿಯನ್ನು ಸಹ ಮನವೊಪ್ಪಿಸುವುದು. ನಯವಾದ ಮಾತಿಗೆ ಬಹುಬಲ. ಜೇನುತುಪ್ಪ ಒಳ್ಳೆಯದು. ಆದರೆ ಅತಿಯಾಗಿ ತಿನ್ನಬೇಡ. ಇಲ್ಲವಾದರೆ, ಕಾಯಿಲೆಬೀಳುವೆ.
సామెతలు 25 : 17 (ERVTE)
ಅಂತೆಯೇ, ನಿನ್ನ ನೆರೆಯವನ ಮನೆಗೆ ಪದೇಪದೇ ಹೋಗಬೇಡ. ನೀನು ಹೋದರೆ, ಅವನು ನಿನ್ನ ಮೇಲೆ ಬೇಸರಗೊಳ್ಳುವನು.
సామెతలు 25 : 18 (ERVTE)
ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಅಪಾಯಕಾರಿ. ಅವನು ದೊಣ್ಣೆಯಂತೆಯೂ ಕತ್ತಿಯಂತೆಯೂ ಚೂಪಾದ ಬಾಣದಂತೆಯೂ ಇದ್ದಾನೆ.
సామెతలు 25 : 19 (ERVTE)
ಕಷ್ಟಕಾಲಗಳಲ್ಲಿ ಅಪನಂಬಿಗಸ್ತನನ್ನು ಆಶ್ರಯಿಸಿಕೊಳ್ಳುವುದು ಮುರುಕು ಹಲ್ಲಿನಿಂದ ತಿನ್ನವಂತೆಯೂ ಕುಂಟುಕಾಲಿನಿಂದ ನಡೆಯುವಂತೆಯೂ ಇದೆ.
సామెతలు 25 : 20 (ERVTE)
సామెతలు 25 : 21 (ERVTE)
ವ್ಯಸನದಿಂದಿರುವವನಿಗೆ ಸಂತಸದ ಗೀತೆಗಳನ್ನು ಹಾಡಿದರೆ ಚಳಿಯಲ್ಲಿರುವವನ ಬಟ್ಟೆಯನ್ನು ತೆಗೆದುಹಾಕಿದಂತೆಯೂ ಗಾಯದ ಮೇಲೆ ಹುಳಿರಸವನ್ನು ಸುರಿದಂತೆಯೂ ಇರುವುದು. ನಿನ್ನ ವೈರಿ ಹಸಿವೆಗೊಂಡಿದ್ದರೆ, ಅವನಿಗೆ ಊಟಕೊಡು. ನಿನ್ನ ವೈರಿ ಬಾಯಾರಿದ್ದರೆ, ಅವನಿಗೆ ನೀರು ಕೊಡು.
సామెతలు 25 : 22 (ERVTE)
ಆಗ, ಉರಿಯುವ ಕೆಂಡಗಳನ್ನು ಅವನ ತಲೆಯ ಮೇಲೆ ಇಟ್ಟಂತಾಗುವುದು. ಯೋಹೋವನು ನಿನಗೆ ಅದರ ಪ್ರತಿಫಲವನ್ನು ಕೊಡುವನು.
సామెతలు 25 : 23 (ERVTE)
సామెతలు 25 : 24 (ERVTE)
ಉತ್ತರದಿಕ್ಕಿನಿಂದ ಬೀಸುವ ಗಾಳಿ ಮಳೆಯನ್ನು ತರುವುದು. ಅಂತೆಯೇ ಚಾಡಿಮಾತು ಕೋಪಕ್ಕೆ ಕಾರಣ.
సామెతలు 25 : 25 (ERVTE)
ವಾದಿಸುವ ಹೆಂಡತಿಯೊಡನೆ ಮನೆಯಲ್ಲಿ ಇರುವುದಕ್ಕಿಂತ ಮೇಲ್ಛಾವಣಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಮೇಲು.
సామెతలు 25 : 26 (ERVTE)
ಬಹುದೂರದ ಒಳ್ಳೆಯ ಸುದ್ದಿಯು ಬಾಯಾರಿದವನಿಗೆ ಕೊಟ್ಟ ತಣ್ಣನೆ ನೀರಿನಂತಿರುವುದು.
సామెతలు 25 : 27 (ERVTE)
ದುಷ್ಟನು ಒಳ್ಳೆಯವನಿಗೆ ಆಪತ್ತನ್ನು ಬರಮಾಡಿದರೆ, ಅದು ಚಿಲುಮೆಗೆ ಮಣ್ಣುಹಾಕಿದಂತೆಯೂ ಒರತೆಯನ್ನು ಹೊಲಸು ಮಾಡಿದಂತೆಯೂ ಇದೆ.
సామెతలు 25 : 28 (ERVTE)
ಜೇನುತುಪ್ಪವನ್ನು ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಅಂತೆಯೇ, ನಿನಗೋಸ್ಕರ ಅತಿಯಾಗಿ ಸನ್ಮಾನವನ್ನು ಬಯಸಬೇಡ. ತನ್ನನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾರದವನು ಕೋಟೆ ಬಿದ್ದುಹೋದ ಪಟ್ಟಣದಂತಿರುವನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28