సామెతలు 30 : 1 (ERVTE)
{#1ಯಾಕೆಯ ಮಾಗನಾದ ಅಗೂರನ ಜ್ಞಾನೋಕ್ತಿಗಳು }
సామెతలు 30 : 2 (ERVTE)
ಮಾಸ್ಸಾದ ಯಾಕೆ ಎಂಬವನ ಮಗನಾದ ಅಗೂರನ ನುಡಿಗಳಿವು. ಇಥಿಯೇಲನಿಗೂ ಉಕ್ಕಾಲನಿಗೂ ಇವನು ನೀಡಿದ ಸಂದೇಶವಿದು: ನಾನು ಬೇರೆಯವರಿಗಿಂತ ದಡ್ಡನಾಗಿರುವೆ. ಸರ್ವಸಾಮಾನ್ಯವಾದ ಬುದ್ಧಿಯೂ ನನಗಿಲ್ಲ.
సామెతలు 30 : 3 (ERVTE)
ನಾನು ಜ್ಞಾನವನ್ನು ಕಲಿತವನಲ್ಲ; ಪರಿಶುದ್ಧನಾದ ದೇವರ ಬಗ್ಗೆಯೂ ಗೊತ್ತಿಲ್ಲ.
సామెతలు 30 : 4 (ERVTE)
ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ?
సామెతలు 30 : 5 (ERVTE)
ದೇವರು ಹೇಳುವ ಪ್ರತಿಯೊಂದು ಮಾತೂ ನಂಬಿಕೆಗೆ ಯೋಗ್ಯವಾಗಿದೆ. ತನ್ನ ಬಳಿಗೆ ಬರುವ ಜನರಿಗೆ ದೇವರು ಆಶ್ರಯದುರ್ಗವಾಗಿದ್ದಾನೆ.
సామెతలు 30 : 6 (ERVTE)
ಆದ್ದರಿಂದ ದೇವರು ಹೇಳುವ ಸಂಗತಿಗಳಿಗೆ ಏನನ್ನೂ ಸೇರಿಸಬೇಡ. ನೀನು ಬದಲಾಯಿಸಿದರೆ, ಆತನು ನಿನ್ನನ್ನು ಶಿಕ್ಷಿಸುವನು ಮತ್ತು ನಿನ್ನನ್ನು ಸುಳ್ಳುಗಾರನೆಂದು ರುಜುವಾತು ಮಾಡುವನು.
సామెతలు 30 : 7 (ERVTE)
ಯೆಹೋವನೇ, ನಾನು ಸಾಯುವ ಮೊದಲು ನೀನು ನನಗೋಸ್ಕರ ಎರಡು ಕಾರ್ಯಗಳನ್ನು ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುವೆ.
సామెతలు 30 : 8 (ERVTE)
ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.
సామెతలు 30 : 9 (ERVTE)
ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.
సామెతలు 30 : 10 (ERVTE)
సామెతలు 30 : 11 (ERVTE)
ಸೇವಕನ ಬಗ್ಗೆ ಯಜಮಾನನಿಗೆ ಚಾಡಿ ಹೇಳಬೇಡ. ನೀನು ಹೇಳಿದರೆ, ಅವನು ನಿನ್ನನ್ನು ಶಪಿಸುವನು; ಆ ಶಾಪದಿಂದ ನೀನು ಸಂಕಟಪಡುವೆ.
సామెతలు 30 : 12 (ERVTE)
ಕೆಲವರು ತಮ್ಮ ತಂದೆಗಳನ್ನು ಶಪಿಸುವರು. ತಮ್ಮ ತಾಯಂದಿರನ್ನು ಆಶೀರ್ವದಿಸುವುದಿಲ್ಲ.
సామెతలు 30 : 13 (ERVTE)
ಕೆಲವರು ತಮ್ಮನ್ನು ಶುದ್ಧರೆಂದು ಯೋಚಿಸುವರು. ಆದರೆ ಅವರು ತಮ್ಮ ಹೊಲಸಿನಿಂದ ಶುದ್ಧೀಕರಿಸಲ್ಪಟ್ಟಿಲ್ಲ.
సామెతలు 30 : 14 (ERVTE)
ಕೆಲವರು ಬಹಳ ದುರಾಭಿಮಾನಿಗಳಾಗಿದ್ದಾರೆ. ತಾವು ಬೇರೆಯವರಿಗಿಂತ ಎಷ್ಟೋ ಉತ್ತಮರೆಂಬುದು ಅವರ ಭಾವನೆ.
సామెతలు 30 : 15 (ERVTE)
ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು. ಕೆಲವರು ರಕ್ತ ಕುಡಿಯುವ ಜಿಗಣೆಗಳಂತಿದ್ದಾರೆ. ಅವರು, “ನನಗೆ ಕೊಡು, ನನಗೆ ಕೊಡು, ನನಗೆ ಕೊಡು” ಎಂದು ಹೇಳುತ್ತಾರೆ. ಎಂದಿಗೂ ತೃಪ್ತಿಯಾಗದ ಮೂರು ಸಂಗತಿಗಳಿವೆ. ನಿಜವಾಗಿಯೂ ನಾಲ್ಕು ಸಂಗತಿಗಳು ಎಂದಿಗೂ ಸಾಕು ಎನ್ನವು:
సామెతలు 30 : 16 (ERVTE)
ಮರಣದ ಸ್ಥಳ, ಮಕ್ಕಳಿಲ್ಲದ ಹೆಂಗಸು, ಸತತವಾಗಿ ನೀರಿನ ಅಗತ್ಯವಿರುವ ಭೂಮಿ ಮತ್ತು ಆರದ ಬೆಂಕಿ!
సామెతలు 30 : 17 (ERVTE)
సామెతలు 30 : 18 (ERVTE)
ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ. ನನಗೆ ಅರ್ಥಮಾಡಿಕೊಳ್ಳಲು ಕಷ್ಟವಾದ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ನಾನು ಅರ್ಥಮಾಡಿಕೊಳ್ಳಲಾರೆ:
సామెతలు 30 : 19 (ERVTE)
ಆಕಾಶದಲ್ಲಿ ಹಾರುವ ಹದ್ದಿನ ರೀತಿ, ಬಂಡೆಯ ಮೇಲೆ ಹರಿದಾಡುವ ಹಾವು, ಸಮುದ್ರದ ಮೇಲೆ ಸಂಚರಿಸುವ ಹಡಗು ಮತ್ತು ಹೆಂಗಸನ್ನು ಪ್ರೇಮಿಸುತ್ತಿರುವ ಗಂಡಸು.
సామెతలు 30 : 20 (ERVTE)
సామెతలు 30 : 21 (ERVTE)
ವ್ಯಭಿಚಾರಿಣಿಯ ನಡತೆಯು ಇದೇ. ಆಕೆ ಊಟ ಮಾಡುವಳು, ಬಾಯಿ ಒರಸಿಕೊಳ್ಳುವಳು ಮತ್ತು ತಾನು ಯಾವ ತಪ್ಪನ್ನೂ ಮಾಡಿಲ್ಲವೆಂದು ಹೇಳುವಳು. ಭೂಮಿಯ ಮೇಲೆ ಕೇಡುಮಾಡುವ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ಭೂಮಿಯು ತಾಳಲಾಗದು:
సామెతలు 30 : 22 (ERVTE)
ರಾಜನಾದ ಸೇವಕ, ತನಗೆ ಅಗತ್ಯವಿರುವ ಪ್ರತಿಯೊಂದನ್ನು ಪಡೆದಿರುವ ಮೂಢ,
సామెతలు 30 : 23 (ERVTE)
ಪ್ರೀತಿಯನ್ನು ಕಂಡಿಲ್ಲದಿದ್ದರೂ ಮದುವೆಯಾಗುವ ಸ್ತ್ರೀ ಮತ್ತು ತನ್ನ ಯಜಮಾನಿಯ ಸ್ಥಾನವನ್ನು ಕಸಿದುಕೊಳ್ಳುವ ಸೇವಕಿ.
సామెతలు 30 : 24 (ERVTE)
ಭೂಮಿಯ ಮೇಲೆ ನಾಲ್ಕು ಪ್ರಾಣಿಗಳಿವೆ. ಆದರೆ ಈ ಪ್ರಾಣಿಗಳು ತುಂಬ ವಿವೇಕವುಳ್ಳವುಗಳಾಗಿವೆ.
సామెతలు 30 : 25 (ERVTE)
ಇರುವೆಗಳು ಸಣ್ಣಗಿವೆ ಮತ್ತು ಬಲಹೀನವಾಗಿವೆ. ಆದರೆ ಅವು ಸುಗ್ಗೀಕಾಲದಲ್ಲಿ ತಮ್ಮ ಆಹಾರವನ್ನು ಕೂಡಿಸಿಟ್ಟುಕೊಳ್ಳುತ್ತವೆ.
సామెతలు 30 : 26 (ERVTE)
ಬೆಟ್ಟದ ಮೊಲ ಬಲಿಷ್ಠವಾದ ಪ್ರಾಣಿಯಾಗಿಲ್ಲದಿದ್ದರೂ ಅವು ಬಂಡೆಗಳಲ್ಲಿ ತಮಗೆ ಮನೆಗಳನ್ನು ಮಾಡಿಕೊಳ್ಳಬಲ್ಲವು.
సామెతలు 30 : 27 (ERVTE)
ಮಿಡತೆಗಳಿಗೆ ರಾಜನಿಲ್ಲದಿದ್ದರೂ ಅವು ಗುಂಪುಗುಂಪಾಗಿ ಹೋಗುತ್ತವೆ.
సామెతలు 30 : 28 (ERVTE)
ಹಲ್ಲಿಗಳನ್ನು ನಿಮ್ಮ ಕೈಗಳಲ್ಲಿ ಹಿಡಿದುಕೊಳ್ಳಬಹುದು. ಅವು ಅಷ್ಟು ಸಣ್ಣವು. ಆದರೆ ಅವು ರಾಜನ ಮನೆಗಳಲ್ಲಿಯೂ ವಾಸಿಸುತ್ತವೆ.
సామెతలు 30 : 29 (ERVTE)
ಮೂರು ಪ್ರಾಣಿಗಳಿವೆ: ಅವು ನಡೆಯುವಾಗ ಗಂಭೀರತೆಯು ಎದ್ದುಕಾಣುತ್ತದೆ. ನಿಜವಾಗಿಯೂ ನಾಲ್ಕು ಇವೆ:
సామెతలు 30 : 30 (ERVTE)
ಸಿಂಹವು ಎಲ್ಲಾ ಪ್ರಾಣಿಗಳಲ್ಲಿ ಅತಿ ಬಲಿಷ್ಠವಾದದ್ದು; ಅದು ಯಾವುದಕ್ಕೂ ಭಯಪಡುವುದಿಲ್ಲ.
సామెతలు 30 : 31 (ERVTE)
ಬಹು ಹೆಮ್ಮೆಯಿಂದ ನಡೆಯುವ ಬೇಟೆನಾಯಿ; ಹೋತ ಮತ್ತು ತನ್ನ ಜನರ ನಡುವೆ ಇರುವ ರಾಜ.
సామెతలు 30 : 32 (ERVTE)
సామెతలు 30 : 33 (ERVTE)
ನೀನು ನಿನ್ನನ್ನು ಹೆಚ್ಚಿಸಿಕೊಂಡು ಮೂಢನಾಗಿದ್ದರೆ, ಕೆಡುಕನ್ನು ಆಲೋಚಿಸುತ್ತಿದ್ದರೆ, ಸ್ವಲ್ಪ ಯೋಚಿಸು. ಹಾಲನ್ನು ಕರೆಯುವವನು ಬೆಣ್ಣೆಮಾಡುವನು. ಮತ್ತೊಬ್ಬನ ಮೂಗನ್ನು ಹೊಡೆದರೆ ರಕ್ತ ಬರುವುದು. ಅಂತೆಯೇ, ನೀನು ಜನರನ್ನು ಕೋಪಗೊಳಿಸಿದರೆ, ಜಗಳವನ್ನು ಎಬ್ಬಿಸುವೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33