సామెతలు 31 : 1 (ERVTE)
{#1ಮಸ್ಸಾದ ಲೆಮೂವೇಲನ ಜ್ಞಾನೋಕ್ತಿಗಳಿವು }
సామెతలు 31 : 2 (ERVTE)
ಇವು ರಾಜನಾದ ಲೆಮೂವೇಲನ ಜ್ಞಾನದ ನುಡಿಗಳು. ಅವನ ತಾಯಿಯು ಅವನಿಗೆ ಇವುಗಳನ್ನು ಉಪದೇಶಿಸಿದ್ದಳು. ನೀನು ನನ್ನ ಮಗನು: ನನ್ನ ಪ್ರಿಯ ಮಗನು: ನಾನು ಪ್ರಾರ್ಥಿಸಿ ಪಡೆದುಕೊಂಡ ಮಗನು ನೀನೇ.
సామెతలు 31 : 3 (ERVTE)
ನಿನ್ನ ಶಕ್ತಿಯನ್ನು ಹೆಂಗಸರಲ್ಲಿ ವ್ಯರ್ಥಮಾಡಿಕೊಳ್ಳಬೇಡ. ರಾಜನನ್ನು ನಾಶಮಾಡುವವರು ಹೆಂಗಸರುಗಳೇ. ನಿನ್ನನ್ನು ಅವರಲ್ಲಿ ಹಾಳುಮಾಡಿಕೊಳ್ಳಬೇಡ.
సామెతలు 31 : 4 (ERVTE)
ಲೆಮೂವೇಲನೇ, ರಾಜರುಗಳು ಮದ್ಯವನ್ನು ಕುಡಿಯುವುದು ಒಳ್ಳೆಯದಲ್ಲ. ಮದ್ಯಪಾನ ಆಳುವವರಿಗೆ ಒಳ್ಳೆಯದಲ್ಲ.
సామెతలు 31 : 5 (ERVTE)
ಅವರು ಅತಿಯಾಗಿ ಕುಡಿದು ಕಟ್ಟಳೆಗಳನ್ನು ಮರೆತು ಬಡವರ ಹಕ್ಕುಗಳನ್ನೆಲ್ಲ ರದ್ದುಮಾಡುವರು.
సామెతలు 31 : 6 (ERVTE)
ಸಾಯುವವರಿಗೆ ಮದ್ಯವನ್ನು ಕೊಡು. ವ್ಯಥೆಯಲ್ಲಿರುವವರಿಗೆ ಮದ್ಯವನ್ನು ಕೊಡು.
సామెతలు 31 : 7 (ERVTE)
ಆಗ ಅವರು ಕುಡಿದು, ತಮ್ಮ ಬಡತನವನ್ನು ಮರೆತುಬಿಡುವರು, ಅವರು ಕುಡಿದು ತಮ್ಮ ಕಷ್ಟಗಳನ್ನೆಲ್ಲಾ ಮರೆತುಬಿಡುವರು.
సామెతలు 31 : 8 (ERVTE)
ತಮಗೋಸ್ಕರ ಮಾತಾಡಲಾರದ ಜನರಿಗೋಸ್ಕರ ಮಾತಾಡು. ಕಷ್ಟದಲ್ಲಿರುವ ಜನರೆಲ್ಲರ ಹಕ್ಕುಗಳಿಗಾಗಿ ಮಾತಾಡು.
సామెతలు 31 : 9 (ERVTE)
ಸತ್ಯವಾದವುಗಳ ಪರವಾಗಿ ನಿಂತುಕೋ. ಜನರಿಗೆಲ್ಲಾ ನ್ಯಾಯವಾದ ತೀರ್ಪನ್ನು ಮಾಡು. ಬಡಜನರ ಮತ್ತು ಕೊರತೆಯಲ್ಲಿರುವವರ ಹಕ್ಕುಗಳನ್ನು ಕಾಪಾಡು.
సామెతలు 31 : 10 (ERVTE)
{#1ಯೋಗ್ಯಳಾದ ಹೆಂಡತಿ } ಒಳ್ಳೆಯ ಹೆಂಡತಿಯನ್ನು ಪಡೆದುಕೊಳ್ಳುವುದು ತುಂಬಾ ಕಷ್ಟ. ಆಭರಣಕ್ಕಿಂತಲೂ ಹೆಚ್ಚು ಬೆಲೆಬಾಳುವಳು.
సామెతలు 31 : 11 (ERVTE)
ಗಂಡನ ನಂಬಿಕೆಗೆ ಆಕೆ ಪಾತ್ರಳು. ಗಂಡ ಬಡವನಾಗುವುದೇ ಇಲ್ಲ.
సామెతలు 31 : 12 (ERVTE)
ಒಳ್ಳೆಯ ಹೆಂಡತಿ ತನ್ನ ಗಂಡನಿಗೆ ತನ್ನ ಜೀವಮಾನವೆಲ್ಲಾ ಒಳ್ಳೆಯದನ್ನು ಮಾಡುವಳು. ಅವನಿಗೆಂದಿಗೂ ತೊಂದರೆ ಮಾಡುವುದಿಲ್ಲ.
సామెతలు 31 : 13 (ERVTE)
ಅವಳು ಬಟ್ಟೆ ತಯಾರಿಸಲು ಉಣ್ಣೆಯನ್ನು ಸೆಣಬಿನ ನಾರನ್ನು ಯಾವಾಗಲೂ ಶೇಖರಿಸುವಳು.
సామెతలు 31 : 14 (ERVTE)
ವ್ಯಾಪಾರದ ಹಡಗುಗಳಂತೆ ದೂರದಿಂದ ಬೇಕಾದ ಆಹಾರವನ್ನು ದೂರದಿಂದ ಮನೆಗೆ ತರುವಳು.
సామెతలు 31 : 15 (ERVTE)
ಇನ್ನೂ ಕತ್ತಲಿರುವಾಗಲೇ ಆಕೆ ಎದ್ದೇಳುವಳು. ತನ್ನ ಕುಟುಂಬದವರಿಗೂ ತನ್ನ ಸೇವಕಿಯರಿಗೂ ಊಟ ಕೊಡುವಳು.
సామెతలు 31 : 16 (ERVTE)
ಆಕೆ ಜಮೀನನ್ನು ಕೊಂಡುಕೊಳ್ಳುವಳು; ಗಳಿಸಿದ ಹಣವನ್ನು ದ್ರಾಕ್ಷಿತೋಟಕ್ಕೆ ಉಪಯೋಗಿಸುವಳು.
సామెతలు 31 : 17 (ERVTE)
ಆಕೆ ತುಂಬ ಕಷ್ಟಪಟ್ಟು ಕೆಲಸಮಾಡುವಳು. ಬಲವಾಗಿದ್ದಾಳೆ; ತನ್ನ ಕೆಲಸಗಳನ್ನೆಲ್ಲಾ ಮಾಡಲು ಶಕ್ತಳಾಗಿದ್ದಾಳೆ.
సామెతలు 31 : 18 (ERVTE)
ಆಕೆ ತಾನು ತಯಾರಿಸಿದ ವಸ್ತುಗಳನ್ನು ಒಳ್ಳೆಯ ಲಾಭಕ್ಕೆ ಮಾರುವಳು. ಬಹುಹೊತ್ತಿನವರೆಗೂ ಆಕೆ ಕೆಲಸ ಮಾಡುವಳು.
సామెతలు 31 : 19 (ERVTE)
ಆಕೆ ತಾನೇ ದಾರವನ್ನು ತಯಾರಿಸುವಳು; ಬಟ್ಟೆಯನ್ನು ನೇಯುವಳು.
సామెతలు 31 : 20 (ERVTE)
ಆಕೆ ಯಾವಾಗಲೂ ಬಡವರಿಗೆ ಕೊಡುವಳು; ಕೊರತೆಯಲ್ಲಿರುವ ಜನರಿಗೆ ಸಹಾಯ ಮಾಡುವಳು.
సామెతలు 31 : 21 (ERVTE)
ಹಿಮ ಸುರಿಯುವಾಗ, ಆಕೆ ತನ್ನ ಕುಟುಂಬದ ಬಗ್ಗೆ ಚಿಂತಿಸಬೇಕಿಲ್ಲ;
సామెతలు 31 : 22 (ERVTE)
ಆಕೆ ಅವರೆಲ್ಲರಿಗೆ ಬೆಚ್ಚಗಿರುವ ಬಟ್ಟೆಗಳನ್ನು ಕೊಟ್ಟಿದ್ದಾಳೆ. ಆಕೆ ಹೊದಿಕೆಗಳನ್ನು ತಯಾರಿಸುವಳು. ಆಕೆಯು ಶ್ರೇಷ್ಠವಾದ ನಾರಗಸೆಯ ದಾರದಿಂದ ಮಾಡಿದ ಬಟ್ಟೆಗಳನ್ನು ಧರಿಸಿಕೊಳ್ಳುವಳು.
సామెతలు 31 : 23 (ERVTE)
ಜನರು ಆಕೆಯ ಗಂಡನನ್ನು ಗೌರವಿಸುವರು. ಅವನು ದೇಶದ ಹಿರಿಯರುಗಳಲ್ಲಿ ಒಬ್ಬನಾಗಿರುವನು.
సామెతలు 31 : 24 (ERVTE)
ಆಕೆ ಒಳ್ಳೆಯ ವ್ಯಾಪಾರ ಮಾಡುವಳು; ಉಡುಪುಗಳನ್ನೂ ನಡುಪಟ್ಟಿಗಳನ್ನೂ ತಯಾರಿಸಿ ಮಾರುವಳು.
సామెతలు 31 : 25 (ERVTE)
ಆಕೆಯು ಶಕ್ತಿಯನ್ನೂ ಗಾಂಭೀರ್ಯವನ್ನೂ ಪ್ರದರ್ಶಿಸುವಳು; ಹರ್ಷದಿಂದ ಭವಿಷ್ಯತ್ತನ್ನು ಎದುರುನೋಡುವಳು.
సామెతలు 31 : 26 (ERVTE)
ಆಕೆಯು ಜ್ಞಾನದಿಂದ ಮಾತಾಡುವಳು; ಪ್ರೀತಿಯಿಂದ ಸದುಪದೇಶ ಮಾಡುವಳು.
సామెతలు 31 : 27 (ERVTE)
ಆಕೆಯು ಚಟುವಟಿಕೆಯಿಂದಿದ್ದು ಗೃಹಕಾರ್ಯಗಳನ್ನೆಲ್ಲಾ ನೋಡಿಕೊಳ್ಳುವಳು.
సామెతలు 31 : 28 (ERVTE)
ಮಕ್ಕಳು ಎದ್ದುನಿಂತು ಆಕೆಯನ್ನು ಅಭಿನಂದಿಸುವರು. ಗಂಡನು ಅವಳನ್ನು ಹೊಗಳುವನು.
సామెతలు 31 : 29 (ERVTE)
“ಅನೇಕ ಹೆಂಗಸರು ಮೆಚ್ಚಿಕೆಗೆ ಪಾತ್ರವಾದ ಕಾರ್ಯಗಳನ್ನು ಮಾಡಿದ್ದಾರೆ. ಆದರೆ ನೀನು ಅವರೆಲ್ಲರಿಗಿಂತಲೂ ಅತ್ಯುತ್ತಮಳು” ಎಂದು ಆಕೆಯ ಗಂಡನು ಹೊಗಳುವನು.
సామెతలు 31 : 30 (ERVTE)
ಲಾವಣ್ಯ ನಿನ್ನನ್ನು ಮೋಸಗೊಳಿಸಬಲ್ಲದು; ಸೌಂದರ್ಯ ತಾತ್ಕಾಲಿಕವಾದದ್ದು. ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳ ಹೆಂಗಸೇ, ಹೊಗಳಿಕೆಗೆ ಪಾತ್ರಳು.
సామెతలు 31 : 31 (ERVTE)
ಆಕೆ ತನಗೆ ಯೋಗ್ಯವಾದ ಪ್ರತಿಫಲವನ್ನು ಹೊಂದಬೇಕು. ಆಕೆಯ ಕಾರ್ಯಗಳಿಗಾಗಿ ಜನರೆಲ್ಲರೂ ಆಕೆಯನ್ನು ಬಹಿರಂಗವಾಗಿ ಸನ್ಮಾನಿಸಬೇಕು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31