సామెతలు 6 : 1 (ERVTE)
{#1ಜಾಮೀನಿನ ಅಪಾಯ } ನನ್ನ ಮಗನೇ, ಮತ್ತೊಬ್ಬನ ಸಾಲಕ್ಕೆ ನೀನು ಜಾಮೀನಾಗಬೇಡ. ಅವನು ಸಾಲ ತೀರಿಸಲಾಗದಿದ್ದರೆ ನಾನು ತೀರಿಸುತ್ತೇನೆ ಎಂದು ಪ್ರಮಾಣ ಮಾಡಿರುವೆಯಾ?
సామెతలు 6 : 2 (ERVTE)
ಮಾಡಿದ್ದರೆ, ಸಿಕ್ಕಿಕೊಂಡಿರುವೆ! ನಿನ್ನ ಸ್ವಂತ ಮಾತೇ ನಿನ್ನನ್ನು ಬಲೆಗೆ ಸಿಕ್ಕಿಸಿದೆ!
సామెతలు 6 : 3 (ERVTE)
ನೀನು ಅವನ ಅಧಿಕಾರದ ಅಧೀನದಲ್ಲಿರುವೆ. ಆದ್ದರಿಂದ ಅವನ ಬಳಿಗೆ ಹೋಗಿ ನಿನ್ನನ್ನು ಸಾಲದಿಂದ ಬಿಡುಗಡೆ ಮಾಡುವಂತೆ ಬೇಡಿಕೋ.
సామెతలు 6 : 4 (ERVTE)
ವಿಶ್ರಮಿಸಲು ಹಾಗೂ ನಿದ್ರಿಸಲು ಕಾಯಬೇಡ.
సామెతలు 6 : 5 (ERVTE)
ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆ ಆ ಸಾಲದ ಬಂಧನದಿಂದ ತಪ್ಪಿಸಿಕೊ. ಬಲೆಯಿಂದ ತಪ್ಪಿಸಿಕೊಂಡು ಹಾರುವ ಪಕ್ಷಿಯಂತೆ ನಿನ್ನನ್ನು ಬಿಡುಗಡೆ ಮಾಡಿಕೋ.
సామెతలు 6 : 6 (ERVTE)
{#1ಸೋಮಾರಿತನದ ಅಪಾಯ } ಸೋಮಾರಿಯೇ, ನೀನು ಇರುವೆಯಂತೆ ಚುರುಕಾಗಿರಬೇಕು. ಇರುವೆಯನ್ನು ನೋಡಿ ಕಲಿತುಕೊ.
సామెతలు 6 : 7 (ERVTE)
ಇರುವೆಗೆ ರಾಜನಿಲ್ಲ, ಅಧಿಕಾರಿಯಿಲ್ಲ, ನಾಯಕನಿಲ್ಲ,
సామెతలు 6 : 8 (ERVTE)
ಆದರೆ ಸುಗ್ಗಿಕಾಲದಲ್ಲಿ ತನಗೆ ಬೇಕಾದ ಆಹಾರವನ್ನೆಲ್ಲ ಅದು ಕೂಡಿಸಿಟ್ಟುಕೊಳ್ಳುವುದು. ಆದ್ದರಿಂದ ಚಳಿಗಾಲದಲ್ಲಿ ಅದಕ್ಕೆ ಬೇಕಾದಷ್ಟು ಆಹಾರ ಇರುವುದು.
సామెతలు 6 : 9 (ERVTE)
ಸೋಮಾರಿಯೇ, ಇನ್ನೆಷ್ಟುಕಾಲ ಮಲಗಿಕೊಂಡಿರುವೆ? ನಿನ್ನ ವಿಶ್ರಾಂತಿಯಿಂದ ಯಾವಾಗ ಎದ್ದೇಳುವೆ?
సామెతలు 6 : 10 (ERVTE)
ಸೋಮಾರಿಯು, “ಸ್ವಲ್ಪ ನಿದ್ರೆ, ಸ್ವಲ್ಪ ವಿಶ್ರಾಂತಿ” ಅನ್ನುವನು.
సామెతలు 6 : 11 (ERVTE)
ಆದರೆ ಅವನು ನಿದ್ರಿಸುತ್ತಲೇ ಇರುವನು; ಬಡವನಾಗುತ್ತಲೇ ಹೋಗುವನು. ಅವನ ಸ್ಥಿತಿಯು ದರೋಡೆಕೋರರು ಬಂದು ಇದ್ದದ್ದನ್ನೆಲ್ಲಾ ದೋಚಿಕೊಂಡು ಹೋದಂತಾಗಿರುವುದು.
సామెతలు 6 : 12 (ERVTE)
{#1ದುಷ್ಟನು } ಕೆಡುಕನೂ ನೀಚನೂ ಆಗಿರುವವನು ಸುಳ್ಳಾಡುತ್ತಾ ಅಡ್ಡಾಡುತ್ತಾನೆ.
సామెతలు 6 : 13 (ERVTE)
ಅವನು ಜನರನ್ನು ಮೋಸಗೊಳಿಸಲು ತನ್ನ ಕಾಲುಗಳಿಂದಲೂ ಕೈಬೆರಳುಗಳಿಂದಲೂ ಸನ್ನೆಮಾಡುತ್ತಾನೆ.
సామెతలు 6 : 14 (ERVTE)
ಅವನು ಕೆಡುಕ. ಎಲ್ಲಾ ಸಮಯಗಳಲ್ಲಿ ಅವನು ಕೆಡುಕನ್ನೇ ಆಲೋಚಿಸುತ್ತಾನೆ; ಎಲ್ಲೆಲ್ಲೂ ತೊಂದರೆ ಮಾಡುತ್ತಾನೆ.
సామెతలు 6 : 15 (ERVTE)
ಆದರೆ ಅವನಿಗೆ ಆಪತ್ತು ಇದ್ದಕ್ಕಿದ್ದಂತೆ ಬರುವುದು. ಅವನು ನಾಶವಾಗುವನು! ಅವನಿಗೆ ಸಹಾಯಮಾಡಲು ಯಾರೂ ಇರುವುದಿಲ್ಲ!
సామెతలు 6 : 16 (ERVTE)
{#1ಯೆಹೋವನು ದ್ವೇಷಿಸುವ ಏಳು ವಸ್ತುಗಳು } ಯೆಹೋವನು ಈ ಆರು ವಸ್ತುಗಳನ್ನು ದ್ವೇಷಿಸುತ್ತಾನೆ, ಇಲ್ಲ, ಏಳು ವಸ್ತುಗಳನ್ನು ದ್ವೇಷಿಸುತ್ತಾನೆ:
సామెతలు 6 : 17 (ERVTE)
ಗರ್ವದ ಕಣ್ಣು, ಸುಳ್ಳಾಡುವ ನಾಲಿಗೆ, ನಿರಪರಾಧಿಗಳನ್ನು ಕೊಲ್ಲುವ ಕೈ.
సామెతలు 6 : 18 (ERVTE)
ದುರಾಲೋಚನೆ ಮಾಡುವ ಹೃದಯ, ಕೇಡುಮಾಡಲು ಓಡುವ ಕಾಲು.
సామెతలు 6 : 19 (ERVTE)
ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಬಿತ್ತುವ ವ್ಯಕ್ತಿ.
సామెతలు 6 : 20 (ERVTE)
{#1ವ್ಯಭಿಚಾರದ ಕುರಿತು ಎಚ್ಚರಿಕೆ } ನನ್ನ ಮಗನೇ, ನಿನ್ನ ತಂದೆಯ ಆಜ್ಞೆಗಳನ್ನು ಜ್ಞಾಪಕಮಾಡಿಕೋ. ನಿನ್ನ ತಾಯಿಯ ಉಪದೇಶಗಳನ್ನು ಮರೆಯಬೇಡ.
సామెతలు 6 : 21 (ERVTE)
ಯಾವಾಗಲೂ ಅವರ ಮಾತುಗಳನ್ನು ಜ್ಞಾಪಕಮಾಡಿಕೊ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಇಟ್ಟುಕೊ.
సామెతలు 6 : 22 (ERVTE)
ನೀನು ಹೋಗುವಲ್ಲೆಲ್ಲಾ ಅವರ ಉಪದೇಶಗಳು ನಿನ್ನನ್ನು ನಡೆಸುತ್ತವೆ. ನೀನು ಮಲಗಿರುವಾಗಲೂ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಡನೆ ಮಾತಾಡಿ ನಿನಗೆ ಮಾರ್ಗದರ್ಶನ ನೀಡುತ್ತವೆ.
సామెతలు 6 : 23 (ERVTE)
ನಿನ್ನ ತಂದೆತಾಯಿಗಳ ಆಜ್ಞೆಗಳು ಮತ್ತು ಉಪದೇಶಗಳು ನಿನಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿವೆ. ಅವು ನಿನ್ನನ್ನು ಸರಿಪಡಿಸಿ ಜೀವಮಾರ್ಗದಲ್ಲಿ ನಡೆಯಲು ಸಹಾಯಮಾಡುತ್ತವೆ.
సామెతలు 6 : 24 (ERVTE)
ಅವು ನಿನ್ನನ್ನು ಕೆಟ್ಟ ಹೆಂಗಸಿನ ಬಳಿಗೆ ಹೋಗದಂತೆ ತಡೆಯುತ್ತವೆ; ಗಂಡನನ್ನು ಬಿಟ್ಟಂಥ ಹೆಂಗಸಿನ ನಯವಾದ ನುಡಿಗಳಿಂದ ತಪ್ಪಿಸಿ ಕಾಪಾಡುತ್ತವೆ.
సామెతలు 6 : 25 (ERVTE)
ಆಕೆಯ ಸೌಂದರ್ಯವನ್ನು ಕಂಡು ಹೃದಯದಲ್ಲಿ ಆಸೆಪಡಬೇಡ. ಆಕೆಯ ಕಣ್ಣುಗಳು ನಿನ್ನನ್ನು ವಶಮಾಡಿಕೊಳ್ಳಲು ಬಿಡಬೇಡ.
సామెతలు 6 : 26 (ERVTE)
ಸೂಳೆಯು ಒಂದು ರೊಟ್ಟಿಗೇ ಬರಬಹುದು; ಆದರೆ ಬೇರೊಬ್ಬನ ಹೆಂಡತಿಗೆ ನಿನ್ನ ಜೀವವನ್ನೇ ಕಳೆದುಕೊಳ್ಳಬೇಕಾಗುವುದು.
సామెతలు 6 : 27 (ERVTE)
ಮಡಿಲಲ್ಲಿ ಬೆಂಕಿಯನ್ನಿಟ್ಟುಕೊಂಡರೆ ಬಟ್ಟೆ ಸುಡುವುದಿಲ್ಲವೇ?
సామెతలు 6 : 28 (ERVTE)
ಉರಿಯುವ ಕೆಂಡದ ಮೇಲೆ ನಡೆದರೆ ಪಾದಗಳು ಸುಟ್ಟುಹೋಗುವುದಿಲ್ಲವೇ?
సామెతలు 6 : 29 (ERVTE)
ಬೇರೊಬ್ಬನ ಹೆಂಡತಿಯೊಡನೆ ಮಲಗಿಕೊಳ್ಳುವವನಿಗೆ ಇದೇ ರೀತಿಯಾಗುವುದು. ಅವನು ದಂಡನೆ ಅನುಭವಿಸುವನು.
సామెతలు 6 : 30 (ERVTE)
(30-31)ಹಸಿವೆಗೊಂಡಿರುವವನು ಕದ್ದುತಿಂದರೂ ತಿನ್ನಬಹುದು. ಅವನು ಸಿಕ್ಕಿಕೊಂಡರೆ ತಾನು ಕದ್ದದ್ದಕ್ಕಿಂತ ಏಳರಷ್ಟು ಹೆಚ್ಚಾಗಿ ಕೊಡಬೇಕು. ಒಂದುವೇಳೆ ಅವನು ತನ್ನಲ್ಲಿರುವ ಪ್ರತಿಯೊಂದನ್ನೂ ಕೊಡಬೇಕಾಗಬಹುದು! ಆದರೆ ಬೇರೆಯವರು ಅವನನ್ನು ಅರ್ಥಮಾಡಿಕೊಳ್ಳುತ್ತಾರೆ; ಅವನ ಬಗ್ಗೆ ಅವರಿಗಿರುವ ಗೌರವವು ಕಳೆದು ಹೋಗುವುದಿಲ್ಲ.
సామెతలు 6 : 31 (ERVTE)
సామెతలు 6 : 32 (ERVTE)
ಆದರೆ ವ್ಯಭಿಚಾರ ಮಾಡುವವನು ಮೂರ್ಖನಾಗಿದ್ದಾನೆ. ಅದನ್ನು ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುತ್ತಾನೆ.
సామెతలు 6 : 33 (ERVTE)
ಅವನಿಗೆ ಹೊಡೆತಬೀಳುವುದು; ಅವಮಾನವಾಗುವುದು. ಆ ನಾಚಿಕೆಯು ಅವನನ್ನು ಬಿಟ್ಟುಹೋಗುವುದೇ ಇಲ್ಲ.
సామెతలు 6 : 34 (ERVTE)
ಆಕೆಯ ಗಂಡನು ಮತ್ಸರದಿಂದ ಬಹು ಕೋಪಗೊಳ್ಳುವನು; ಕರುಣೆತೋರದೆ ಅವನ ಮೇಲೆ ಸೇಡುತೀರಿಸಿಕೊಳ್ಳುವನು.
సామెతలు 6 : 35 (ERVTE)
ಏನೇ ಕೊಟ್ಟರೂ, ಎಷ್ಟೇ ಹಣ ಕೊಟ್ಟರೂ ಅವನ ಕೋಪವನ್ನು ತಡೆಯಲಾಗುವುದಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35