సామెతలు 8 : 1 (ERVTE)
{#1ಜ್ಞಾನ — ಒಳ್ಳೆಯ ಸ್ತ್ರೀ } ಕೇಳಿ! ಜ್ಞಾನವೆಂಬಾಕೆಯೂ ವಿವೇಕವೆಂಬಾಕೆಯೂ “ಕಿವಿಗೊಡಿರಿ” ಎಂದು ನಿಮ್ಮನ್ನು ಕೂಗಿ ಕರೆಯುತ್ತಿದ್ದಾಳೆ.
సామెతలు 8 : 2 (ERVTE)
ರಸ್ತೆಗಳ ಚೌಕಗಳ ಬಳಿಯಿರುವ ಗುಡ್ಡದ ಮೇಲ್ಭಾಗದಲ್ಲಿ ಆಕೆಯು ನಿಂತುಕೊಂಡಿದ್ದಾಳೆ.
సామెతలు 8 : 3 (ERVTE)
ಪಟ್ಟಣದ ಹೆಬ್ಬಾಗಿಲುಗಳ ಬಳಿಯಿಂದಲೂ ತೆರೆದ ಬಾಗಿಲುಗಳ ಬಳಿಯಿಂದಲೂ ಕರೆಯುತ್ತಿದ್ದಾಳೆ.
సామెతలు 8 : 4 (ERVTE)
“ಮನುಷ್ಯರೇ, ನಿಮ್ಮನ್ನೇ ಕರೆಯುತ್ತೇನೆ; ಎಲ್ಲಾ ಜನರನ್ನು ಕರೆಯುತ್ತೇನೆ.
సామెతలు 8 : 5 (ERVTE)
ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ; ಜ್ಞಾನಹೀನರೇ ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.
సామెతలు 8 : 6 (ERVTE)
ಕೇಳಿರಿ! ಶ್ರೇಷ್ಠವಾದವುಗಳನ್ನೂ ಯಥಾರ್ಥವಾದುವುಗಳನ್ನೂ ನಿಮಗೆ ತಿಳಿಸುವೆನು.
సామెతలు 8 : 7 (ERVTE)
ನನ್ನ ಮಾತುಗಳು ಸತ್ಯ. ನನ್ನ ತುಟಿಗಳಿಗೆ ದುಷ್ಟತನ ಅಸಹ್ಯ.
సామెతలు 8 : 8 (ERVTE)
ನನ್ನ ಮಾತುಗಳು ನೀತಿಯ ಮಾತುಗಳಾಗಿವೆ. ನನ್ನ ಮಾತುಗಳಲ್ಲಿ ತಪ್ಪಾಗಲಿ ಕಪಟವಾಗಲಿ ಇಲ್ಲವೇ ಇಲ್ಲ.
సామెతలు 8 : 9 (ERVTE)
ತಿಳುವಳಿಕೆಯುಳ್ಳವನಿಗೆ ನನ್ನ ಮಾತುಗಳು ಸ್ಪಷ್ಟವಾಗಿವೆ; ವಿವೇಕಿಗೆ ಯಥಾರ್ಥವಾಗಿವೆ.
సామెతలు 8 : 10 (ERVTE)
ನನ್ನ ಉಪದೇಶವನ್ನು ಬೆಳ್ಳಿಗಿಂತಲೂ ನನ್ನ ಜ್ಞಾನೋಪದೇಶವನ್ನು ಶುದ್ಧ ಬಂಗಾರಕ್ಕಿಂತಲೂ ಉತ್ತಮವೆಂದು ಸ್ವೀಕರಿಸಿಕೊಳ್ಳಿ.
సామెతలు 8 : 11 (ERVTE)
ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಮನುಷ್ಯನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.”
సామెతలు 8 : 12 (ERVTE)
{#1ಜ್ಞಾನವು ಮಾಡುವುದೇನು } “ನಾನೇ ಜ್ಞಾನ. ನಾನು ಒಳ್ಳೆಯ ನ್ಯಾಯತೀರ್ಪಿನೊಡನೆ ವಾಸಿಸುವೆ. ನಾನು ವಿವೇಕದೊಡನೆಯೂ ಒಳ್ಳೆಯ ಆಲೋಚನೆಯೊಡನೆಯೂ ಇರುವೆನು.
సామెతలు 8 : 13 (ERVTE)
ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.
సామెతలు 8 : 14 (ERVTE)
ಒಳ್ಳೆಯ ಆಲೋಚನೆಗಳೂ ಒಳ್ಳೆಯ ತೀರ್ಪುಗಳೂ ನನ್ನವೇ. ವಿವೇಕವೂ ಸಾಮರ್ಥ್ಯವೂ ನನ್ನಲ್ಲಿವೆ.
సామెతలు 8 : 15 (ERVTE)
ನನ್ನ ಸಹಾಯದಿಂದ ರಾಜರುಗಳು ರಾಜ್ಯವಾಳುವರು; ಅಧಿಪತಿಗಳು ನ್ಯಾಯವಾದ ಕಾನೂನುಗಳನ್ನು ಮಾಡುವರು.
సామెతలు 8 : 16 (ERVTE)
ನನ್ನ ಸಹಾಯದಿಂದ ಅಧಿಪತಿಗಳು ಆಡಳಿತ ಮಾಡುವರು; ನಾಯಕರು ದೊರೆತನ ಮಾಡುವರು.
సామెతలు 8 : 17 (ERVTE)
ನನ್ನನ್ನು ಪ್ರೀತಿಸುವವರನ್ನು ನಾನೂ ಪ್ರೀತಿಸುವೆನು; ಬಹಳವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
సామెతలు 8 : 18 (ERVTE)
ನನ್ನಲ್ಲಿಯೂ ಸಹ ಕೊಡಲು ಐಶ್ವರ್ಯವಿದೆ ಮತ್ತು ಘನತೆಯಿದೆ. ನಾನು ಶಾಶ್ವತವಾದ ಐಶ್ವರ್ಯವನ್ನೂ ಯಶಸ್ಸನ್ನೂ ಕೊಡುವೆನು.
సామెతలు 8 : 19 (ERVTE)
ನಾನು ಕೊಡುವಂಥವುಗಳು ಬಂಗಾರಕ್ಕಿಂತಲೂ ಶ್ರೇಷ್ಠ. ನನ್ನ ಉಡುಗೊರೆಗಳು ಅಪ್ಪಟ ಬೆಳ್ಳಿಗಿಂತಲೂ ಉತ್ತಮ.
సామెతలు 8 : 20 (ERVTE)
ನಾನು ನೀತಿಮಾರ್ಗದಲ್ಲಿಯೂ ನ್ಯಾಯಮಾರ್ಗದಲ್ಲಿಯೂ ನಡೆಯುತ್ತೇನೆ.
సామెతలు 8 : 21 (ERVTE)
ನನ್ನನ್ನು ಪ್ರೀತಿಸುವವರಿಗೆ ನಾನು ಐಶ್ವರ್ಯವನ್ನು ಕೊಡುವೆನು. ಹೌದು, ಅವರ ಉಗ್ರಾಣಗಳನ್ನು ತುಂಬಿಸುವೆನು.
సామెతలు 8 : 22 (ERVTE)
“ಯೆಹೋವನು ‘ಜ್ಞಾನ’ವೆಂಬ ನನ್ನನ್ನು ತನ್ನ ಸೃಷ್ಟಿ ಕ್ರಮದಲ್ಲಿ ಮೊದಲು ನಿರ್ಮಿಸಿದನು.
సామెతలు 8 : 23 (ERVTE)
ನಾನು ಆದಿಯಲ್ಲಿ ನಿರ್ಮಾಣಗೊಂಡೆನು. ಪ್ರಪಂಚವು ಆರಂಭವಾಗುವುದಕ್ಕಿಂತ ಮೊದಲೇ ನಾನು ನಿರ್ಮಿತನಾದೆನು.
సామెతలు 8 : 24 (ERVTE)
ನಾನು ಸಾಗರಗಳಿಗಿಂತ ಮೊದಲೇ ಜನಿಸಿದೆನು; ಬುಗ್ಗೆಗಳ ನೀರು ಉಂಟಾಗುವುದಕ್ಕಿಂತ ಮೊದಲೇ ಜನಿಸಿದೆನು.
సామెతలు 8 : 25 (ERVTE)
ನಾನು ಪರ್ವತಗಳಿಗಿಂತ ಮೊದಲೇ ಜನಿಸಿದೆನು; ಬೆಟ್ಟಗಳಿಗಿಂತ ಮೊದಲೇ ಹುಟ್ಟಿದೆನು.
సామెతలు 8 : 26 (ERVTE)
ಯೆಹೋವನು ಭೂಮಿಯನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಜ್ಞಾನವೆಂಬ ನಾನು ಹುಟ್ಟಿದೆನು. ನಾನು ಬಯಲುಗಳಿಗಿಂತ ಮೊದಲೇ ಹುಟ್ಟಿದೆನು. ಆತನು ಭೂಮಿಯ ಮೊದಲನೆ ಧೂಳಿನ ಕಣವನ್ನು ಉಂಟುಮಾಡುವುದಕ್ಕಿಂತ ಮೊದಲೇ ನಾನು ಹುಟ್ಟಿದೆನು.
సామెతలు 8 : 27 (ERVTE)
ಯೆಹೋವನು ಆಕಾಶವನ್ನು ಸೃಷ್ಟಿಸಿದ ಸಮಯದಲ್ಲಿ ಜ್ಞಾನವೆಂಬ ನಾನು ಅಲ್ಲಿದ್ದೆನು. ಆತನು ಸಾಗರದ ಎಲ್ಲೆಗಳನ್ನು ಗೊತ್ತುಪಡಿಸಿದಾಗ ಜ್ಞಾನವೆಂಬ ನಾನು ಅಲ್ಲಿದ್ದೆನು.
సామెతలు 8 : 28 (ERVTE)
ಆತನು ಆಕಾಶದಲ್ಲಿ ಮೋಡಗಳನ್ನೂ ಸಾಗರಗಳಲ್ಲಿ ನೀರನ್ನೂ ನೆಲೆಗೊಳಿಸಿದಾಗ ನಾನು ಅಲ್ಲಿದ್ದೆನು.
సామెతలు 8 : 29 (ERVTE)
ಆತನು ಸಮುದ್ರಗಳ ನೀರಿಗೆ ಎಲ್ಲೆಕಟ್ಟನ್ನು ಹಾಕಿದಾಗಲೂ ಭೂಮಿಗೆ ಅಸ್ತಿವಾರಗಳನ್ನು ಹಾಕಿದಾಗಲೂ ನಾನು ಅಲ್ಲಿದ್ದೆನು.
సామెతలు 8 : 30 (ERVTE)
ನಾನು ಆತನ ಪಕ್ಕದಲ್ಲಿ ನಿಪುಣ ಕೆಲಸಗಾರನಂತಿದ್ದೆನು. ನಾನು ಪ್ರತಿದಿನವೂ ಸಂತೋಷಪಡುತ್ತಾ ಆತನ ಸನ್ನಿಧಿಯಲ್ಲಿ ಯಾವಾಗಲೂ ಉಲ್ಲಾಸಿಸುತ್ತಿದ್ದೆನು.
సామెతలు 8 : 31 (ERVTE)
ಆತನು ಸೃಷ್ಟಿಸಿದ ಭೂಲೋಕದ ವಿಷಯದಲ್ಲಿ ಉಲ್ಲಾಸಿಸುತ್ತಾ ಮಾನವ ಸಂತಾನದ ವಿಷಯದಲ್ಲಿ ಹರ್ಷಿಸುತ್ತಾ ಇದ್ದೆನು.
సామెతలు 8 : 32 (ERVTE)
“ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ! ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರಾಗಿದ್ದಾರೆ.
సామెతలు 8 : 33 (ERVTE)
ನನ್ನ ಉಪದೇಶಗಳನ್ನು ಕೇಳಿ ಜ್ಞಾನವಂತರಾಗಿರಿ. ಕಿವಿಗೊಡದಿರಬೇಡಿ!
సామెతలు 8 : 34 (ERVTE)
ನನಗೆ ಕಿವಿಗೊಡುವವನು ಧನ್ಯನಾಗಿದ್ದಾನೆ. ಅವನು ಪ್ರತಿದಿನ ನನ್ನ ಮನೆಬಾಗಿಲುಗಳ ಬಳಿಯಲ್ಲೂ ನನ್ನ ಬಾಗಿಲಿನ ನಿಲುವುಗಳ ಬಳಿಯಲ್ಲೂ ಕಾದುಕೊಂಡಿರುತ್ತಾನೆ.
సామెతలు 8 : 35 (ERVTE)
ನನ್ನನ್ನು ಕಂಡುಕೊಂಡಂಥವನು ಜೀವವನ್ನು ಕಂಡುಕೊಳ್ಳುತ್ತಾನೆ. ಅವನಿಗೆ ಯೆಹೋವನ ಕೃಪೆಯು ದೊರೆಯುತ್ತದೆ.
సామెతలు 8 : 36 (ERVTE)
ಆದರೆ ನನ್ನನ್ನು ಕಂಡುಕೊಳ್ಳಲಾರದವನು ತನಗೇ ಕೇಡುಮಾಡಿಕೊಳ್ಳುವನು. ನನ್ನನ್ನು ದ್ವೇಷಿಸುವ ಜನರೆಲ್ಲರೂ ಮರಣವನ್ನು ಪ್ರೀತಿಸುವರು.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36