కీర్తనల గ్రంథము 1 : 1 (ERVTE)
*(ಕೀರ್ತನೆಗಳು 1-41) *ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.
కీర్తనల గ్రంథము 1 : 2 (ERVTE)
ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ ಅದನ್ನೇ ಹಗಲಿರುಳು ಧ್ಯಾನಿಸುವನು.
కీర్తనల గ్రంథము 1 : 3 (ERVTE)
ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.
కీర్తనల గ్రంథము 1 : 4 (ERVTE)
ದುಷ್ಟರಾದರೋ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು.
కీర్తనల గ్రంథము 1 : 5 (ERVTE)
ನ್ಯಾಯತೀರ್ಪಿನ ಕಾಲ ಬಂದಾಗ ದುಷ್ಟರಿಗೆ ಅಪರಾಧಿಗಳೆಂದು ತೀರ್ಪಾಗುವುದು. ಪಾಪಿಗಳಿಗೆ ನೀತಿವಂತರ ಮಧ್ಯದಲ್ಲಿ ಸ್ಥಳವಿರುವುದಿಲ್ಲ.
కీర్తనల గ్రంథము 1 : 6 (ERVTE)
ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೊ ನಾಶಪಡಿಸುವನು.
❮
❯