కీర్తనల గ్రంథము 101 : 1 (ERVTE)
*ರಚನೆಗಾರ: ದಾವೀದ. *ಆತನ ಪ್ರೀತಿಯನ್ನೂ ನೀತಿಯನ್ನೂ ಹಾಡಿಹರಸುವೆನು. ಯೆಹೋವನೇ, ನಿನಗೆ ಗಾಯನ ಮಾಡುವೆನು.
కీర్తనల గ్రంథము 101 : 2 (ERVTE)
ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. ನೀನು ನನ್ನ ಬಳಿಗೆ ಬರುವುದು ಯಾವಾಗ?
కీర్తనల గ్రంథము 101 : 3 (ERVTE)
ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ. ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ. ನಾನು ಅವರಂತೆ ಮಾಡುವುದಿಲ್ಲ!
కీర్తనల గ్రంథము 101 : 4 (ERVTE)
ನಾನು ನಿನಗೆ ಯಥಾರ್ಥನಾಗಿರುವೆನು; ದುಷ್ಕೃತ್ಯಗಳನ್ನು ಮಾಡುವುದಿಲ್ಲ.
కీర్తనల గ్రంథము 101 : 5 (ERVTE)
ನೆರೆಯವನ ಕುರಿತು ಗುಟ್ಟಾಗಿ ಚಾಡಿ ಹೇಳುವವನನ್ನು ನಾನು ತಡೆಯುವೆನು. ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ ನಾನು ಅವರಿಗೆ ಅವಕಾಶ ಕೊಡುವುದಿಲ್ಲ.
కీర్తనల గ్రంథము 101 : 6 (ERVTE)
ನಂಬಿಗಸ್ತರಿಗಾಗಿ ದೇಶದಲ್ಲೆಲ್ಲಾ ಹುಡುಕಿ ನೋಡುತ್ತೇನೆ. ನನ್ನ ಸೇವೆಗೆ ಅವರನ್ನೇ ನೇಮಿಸಿಕೊಳ್ಳುವೆನು. ಪರಿಶುದ್ಧರು ಮಾತ್ರ ನನ್ನ ಸೇವಕರಾಗಿರಲು ಸಾಧ್ಯ.
కీర్తనల గ్రంథము 101 : 7 (ERVTE)
ನನ್ನ ಮನೆಯಲ್ಲಿ ವಾಸಿಸುವ ಸುಳ್ಳುಗಾರರಿಗೆ ಅವಕಾಶ ಕೊಡುವುದಿಲ್ಲ. ನನ್ನ ಸಮೀಪದಲ್ಲಿ ಇರುವುದಕ್ಕೂ ನಾನು ಅವರಿಗೆ ಆಸ್ಪದ ಕೊಡುವುದಿಲ್ಲ.
కీర్తనల గ్రంథము 101 : 8 (ERVTE)
ಈ ದೇಶದಲ್ಲಿರುವ ದುಷ್ಟರನ್ನು ನಾನು ನಾಶಮಾಡುತ್ತೇನೆ. ಯೆಹೋವನ ಪಟ್ಟಣದಿಂದ ಕೆಡುಕರನ್ನು ಓಡಿಸುತ್ತೇನೆ.
❮
❯