కీర్తనల గ్రంథము 102 : 1 (ERVTE)
*ಹಿಂಸೆ ಸಂಕಟಗಳಲ್ಲಿರುವವನ ಪ್ರಾರ್ಥನೆ. *ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ಸಹಾಯಕ್ಕಾಗಿ ನಾನಿಡುವ ಮೊರೆಯನ್ನು ಲಾಲಿಸು.
కీర్తనల గ్రంథము 102 : 2 (ERVTE)
ಯೆಹೋವನೇ, ನಾನು ಆಪತ್ತುಗಳಲ್ಲಿರುವಾಗ ನನಗೆ ವಿಮುಖನಾಗಬೇಡ, ನನಗೆ ಕಿವಿಗೊಡು. ಸಹಾಯಕ್ಕಾಗಿ ಮೊರೆಯಿಡುವಾಗ ಬೇಗನೆ ಸದುತ್ತರವನ್ನು ದಯಪಾಲಿಸು.
కీర్తనల గ్రంథము 102 : 3 (ERVTE)
ನನ್ನ ಜೀವಮಾನವು ಹೊಗೆಯಂತೆ ಕಣ್ಮರೆಯಾಗುತ್ತಿದೆ. ನನ್ನ ಎಲುಬುಗಳು ಬೆಂಕಿಯಂತೆ ಸುಟ್ಟುಹೋಗುತ್ತಿವೆ.
కీర్తనల గ్రంథము 102 : 4 (ERVTE)
ನಾನು ನಿರ್ಬಲನಾಗಿ ಒಣಗಿಹೋಗುತ್ತಿರುವ ಹುಲ್ಲಿನಂತಿದ್ದೇನೆ. ನಾನು ಊಟವನ್ನೂ ಮರೆತುಬಿಡುವೆನು.
కీర్తనల గ్రంథము 102 : 5 (ERVTE)
ದೀರ್ಘ ದುಃಖದಿಂದಾಗಿ ನನ್ನ ಎಲುಬುಗಳು ಚರ್ಮಕ್ಕೆ ಅಂಟಿಕೊಂಡಿವೆ.
కీర్తనల గ్రంథము 102 : 6 (ERVTE)
ಅರಣ್ಯದಲ್ಲಿರುವ ಗೂಬೆಯಂತೆ ಒಬ್ಬಂಟಿಗನಾಗಿದ್ದೇನೆ. ಪಾಳುಬಿದ್ದ ಕಟ್ಟಡಗಳಲ್ಲಿರುವ ಗೂಬೆಯಂತೆ ನಾನು ಒಬ್ಬಂಟಿಗನಾಗಿದ್ದೇನೆ.
కీర్తనల గ్రంథము 102 : 7 (ERVTE)
ನನಗೆ ನಿದ್ರೆಯೂ ಬಾರದು. ಮೇಲ್ಛಾವಣಿಗೆಯ ಮೇಲಿರುವ ಏಕಾಂಗಿಯಾದ ಪಕ್ಷಿಯಂತೆ ನಾನಿದ್ದೇನೆ.
కీర్తనల గ్రంథము 102 : 8 (ERVTE)
ನನ್ನ ವೈರಿಗಳು ನನಗೆ ಅವಮಾನ ಮಾಡುತ್ತಲೇ ಇರುವರು. ಅವರು ನನ್ನನ್ನು ದೃಷ್ಟಾಂತಮಾಡಿ ಶಪಿಸುವರು.
కీర్తనల గ్రంథము 102 : 9 (ERVTE)
ನನ್ನ ದುಃಖವೇ ನನಗೆ ಆಹಾರವಾಯಿತು. ಕಣ್ಣೀರು ನನ್ನ ಪಾನೀಯದೊಳಗೆ ತೊಟ್ಟಿಕ್ಕುತ್ತಿದೆ.
కీర్తనల గ్రంథము 102 : 10 (ERVTE)
ನೀನು ನನ್ನ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ನೀನು ನನ್ನನ್ನು ಮೇಲೆತ್ತಿ ಎಸೆದುಬಿಟ್ಟೆಯಲ್ಲಾ!
కీర్తనల గ్రంథము 102 : 11 (ERVTE)
ನನ್ನ ಜೀವಮಾನವು ಸಂಜೆಯ ನೆರಳಿನಂತೆ ಕೊನೆಗೊಂಡಿದೆ. ನಾನು ಒಣಗಿ ಸಾಯುತ್ತಿರುವ ಹುಲ್ಲಿನಂತಿದ್ದೇನೆ.
కీర్తనల గ్రంథము 102 : 12 (ERVTE)
ಯೆಹೋವನೇ, ನೀನಾದರೋ ಎಂದೆಂದಿಗೂ ಜೀವಿಸುವೆ! ನಿನ್ನ ಹೆಸರು ಶಾಶ್ವತವಾದದ್ದು!
కీర్తనల గ్రంథము 102 : 13 (ERVTE)
ನೀನು ಎದ್ದು ಚೀಯೋನನ್ನು ಸಂತೈಸುವೆ. ನೀನು ಚೀಯೋನಿಗೆ ದಯೆತೋರುವ ಕಾಲ ಬರುತ್ತಿದೆ.
కీర్తనల గ్రంథము 102 : 14 (ERVTE)
ನಿನ್ನ ಸೇವಕರು ಆಕೆಯ (ಜೆರುಸಲೇಮಿನ) ಕಲ್ಲುಗಳನ್ನು ಪ್ರೀತಿಸುವರು. ಅವರು ಆ ಪಟ್ಟಣದ ಧೂಳನ್ನು ಇಷ್ಟಪಡುವರು!
కీర్తనల గ్రంథము 102 : 15 (ERVTE)
ಜನರು ಯೆಹೋವನ ಹೆಸರನ್ನು ಆರಾಧಿಸುತ್ತಾರೆ. ದೇವರೇ, ಭೂರಾಜರುಗಳೆಲ್ಲಾ ನಿನ್ನನ್ನು ಸನ್ಮಾನಿಸುವರು.
కీర్తనల గ్రంథము 102 : 16 (ERVTE)
ಯಾಕೆಂದರೆ, ಯೆಹೋವನು ಚೀಯೋನನ್ನು ಮತ್ತೆ ಕಟ್ಟುವನು. ಜನಾಂಗಗಳು ಆಕೆಯ (ಜೆರುಸಲೇಮಿನ) ವೈಭವವನ್ನು ಮತ್ತೆ ನೋಡುವರು.
కీర్తనల గ్రంథము 102 : 17 (ERVTE)
ಆತನು ನಿರ್ಗತಿಕರ ಪ್ರಾರ್ಥನೆಗಳಿಗೆ ಉತ್ತರ ಕೊಡುವನು. ಅವರ ಮೊರೆಗಳನ್ನು ಆತನು ತಿರಸ್ಕರಿಸುವುದಿಲ್ಲ.
కీర్తనల గ్రంథము 102 : 18 (ERVTE)
ಮುಂದಿನ ತಲೆಮಾರುಗಳವರಿಗಾಗಿ ಇವುಗಳನ್ನು ಬರೆದಿಡಿ. ಮುಂದಿನ ಕಾಲದಲ್ಲಿ ಅವರು ಯೆಹೋವನನ್ನು ಸ್ತುತಿಸುತ್ತಾರೆ.
కీర్తనల గ్రంథము 102 : 19 (ERVTE)
ಯೆಹೋವನು ಉನ್ನತದಲ್ಲಿರುವ ತನ್ನ ಪರಿಶುದ್ಧ ಸ್ಥಳದಿಂದ ಕೆಳಗೆ ನೋಡುತ್ತಾನೆ. ಆತನು ಪರಲೋಕದಿಂದ ಭೂಮಿಯನ್ನು ನೋಡುತ್ತಾನೆ.
కీర్తనల గ్రంథము 102 : 20 (ERVTE)
ಆತನು ಸೆರೆಯಾಳುಗಳ ಪ್ರಾರ್ಥನೆಗಳನ್ನು ಕೇಳುತ್ತಾನೆ. ಮರಣದಂಡನೆಗೆ ಒಳಗಾದವರನ್ನು ಆತನು ಬಿಡಿಸುತ್ತಾನೆ.
కీర్తనల గ్రంథము 102 : 21 (ERVTE)
ಆಗ ಚೀಯೋನಿನಲ್ಲಿರುವ ಜನರು ಯೆಹೋವನ ಕುರಿತು ಪ್ರಕಟಿಸುವರು: ಅವರು ಆತನ ಹೆಸರನ್ನು ಜೆರುಸಲೇಮಿನಲ್ಲಿ ಸ್ತುತಿಸುವರು.
కీర్తనల గ్రంథము 102 : 22 (ERVTE)
ಜನಾಂಗಗಳು ಒಟ್ಟುಗೂಡಿ ಬರುವವು. ರಾಜ್ಯಗಳು ಯೆಹೋವನ ಸೇವೆಮಾಡಲು ಬರುವವು.
కీర్తనల గ్రంథము 102 : 23 (ERVTE)
ನನ್ನ ಬಲವು ಕುಂದಿಹೋಯಿತು. ನನ್ನ ಆಯುಷ್ಕಾಲವು ಕಡಿಮೆಯಾಯಿತು.
కీర్తనల గ్రంథము 102 : 24 (ERVTE)
ಆದ್ದರಿಂದ ನಾನು ಇಂತೆಂದೆನು: “ಯೌವನಸ್ಥನಾಗಿರುವಾಗಲೇ ನನ್ನನ್ನು ಸಾಯಿಸಬೇಡ. ದೇವರೇ, ನೀನು ಶಾಶ್ವತವಾಗಿ ಜೀವಿಸುವೆ!
కీర్తనల గ్రంథము 102 : 25 (ERVTE)
ಬಹುಕಾಲದ ಹಿಂದೆ, ನೀನು ಪ್ರಪಂಚವನ್ನು ಸೃಷ್ಟಿಮಾಡಿದೆ. ನೀನು ಆಕಾಶವನ್ನು ನಿನ್ನ ಕೈಗಳಿಂದ ನಿರ್ಮಿಸಿದೆ!
కీర్తనల గ్రంథము 102 : 26 (ERVTE)
ಲೋಕವೂ ಆಕಾಶವೂ ಕೊನೆಗೊಳುತ್ತವೆ. ನೀನಾದರೊ ಶಾಶ್ವತವಾಗಿರುವೆ! ಅವು ಬಟ್ಟೆಗಳಂತೆ ಹಳೆಯದಾಗುತ್ತವೆ. ನೀನು ಅವುಗಳನ್ನು ಉಡುಪುಗಳಂತೆ ಬದಲಾಯಿಸುವೆ. ಅವುಗಳೆಲ್ಲಾ ಬದಲಾಗುತ್ತವೆ.
కీర్తనల గ్రంథము 102 : 27 (ERVTE)
ದೇವರೇ, ನೀನಾದರೋ ಎಂದಿಗೂ ಬದಲಾಗುವುದಿಲ್ಲ. ನೀನು ಎಂದೆಂದಿಗೂ ಜೀವಿಸುವೆ!
కీర్తనల గ్రంథము 102 : 28 (ERVTE)
ನಾವು ನಿನ್ನ ಸೇವಕರಾಗಿದ್ದೇವೆ. ಇಲ್ಲಿ ನಮ್ಮ ಮಕ್ಕಳು ವಾಸವಾಗಿರುತ್ತಾರೆ; ಅವರ ಸಂತತಿಗಳವರೂ ನಿನ್ನನ್ನು ಆರಾಧಿಸಲು ಇಲ್ಲಿರುತ್ತಾರೆ.”
❮
❯