కీర్తనల గ్రంథము 120 : 1 (ERVTE)
*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು.
కీర్తనల గ్రంథము 120 : 2 (ERVTE)
ಯೆಹೋವನೇ, ಸುಳ್ಳಾಡುವವರಿಂದಲೂ ವಂಚಕರಿಂದಲೂ ನನ್ನನ್ನು ರಕ್ಷಿಸು.
కీర్తనల గ్రంథము 120 : 3 (ERVTE)
ಸುಳ್ಳುಗಾರರೇ, ನಿಮಗೆ ದೇವರಿಂದ ಬರುವ ದಂಡನೆಯನ್ನು ಬಲ್ಲಿರಾ? ನಿಮಗೆ ಯಾವ ಶಿಕ್ಷೆಯನ್ನು ಒದಗಿಸಬೇಕು?
కీర్తనల గ్రంథము 120 : 4 (ERVTE)
ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದಂಡಿಸುವನು.
కీర్తనల గ్రంథము 120 : 5 (ERVTE)
ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ[* ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ ಈ ಸ್ಥಳಗಳ ಜನರು ಪ್ರಖ್ಯಾತ ಹೋರಾಟಗಾರರು. ] ವಾಸಿಸುವಂತಿರುವುದು.
కీర్తనల గ్రంథము 120 : 6 (ERVTE)
ಶಾಂತಿದ್ವೇಷಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ.
కీర్తనల గ్రంథము 120 : 7 (ERVTE)
ಶಾಂತಿ ನೆಲೆಸಿರಲಿ ಎಂದು ನಾನು ಹೇಳಿದರೂ ಅವರು ಯುದ್ಧವನ್ನೇ ಇಷ್ಟಪಡುತ್ತಾರೆ.

1 2 3 4 5 6 7