కీర్తనల గ్రంథము 122 : 1 (ERVTE)
*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ದಾವೀದ. *“ಯೆಹೋವನ ಆಲಯಕ್ಕೆ ಹೋಗೋಣ” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು.
కీర్తనల గ్రంథము 122 : 2 (ERVTE)
ನಾವು ಜೆರುಸಲೇಮಿನ ಬಾಗಿಲುಗಳ ಬಳಿಯಲ್ಲಿ ನಿಂತಿದ್ದೇವೆ.
కీర్తనల గ్రంథము 122 : 3 (ERVTE)
ಇದು ಹೊಸ ಜೆರುಸಲೇಮ್! ಈ ಪಟ್ಟಣವು ಏಕೀಕರಣಗೊಂಡ ನಗರದಂತೆ ಮತ್ತೆ ಕಟ್ಟಲ್ಪಟ್ಟಿದೆ.
కీర్తనల గ్రంథము 122 : 4 (ERVTE)
ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು.
కీర్తనల గ్రంథము 122 : 5 (ERVTE)
ದಾವೀದನ ಕುಟುಂಬದ ರಾಜರುಗಳು ಜನರಿಗೆ ನ್ಯಾಯತೀರ್ಪು ನೀಡಲು ತಮ್ಮ ಸಿಂಹಾಸನಗಳನ್ನು ಅಲ್ಲಿ ಸ್ಥಾಪಿಸಿದರು.
కీర్తనల గ్రంథము 122 : 6 (ERVTE)
ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ: “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ.
కీర్తనల గ్రంథము 122 : 7 (ERVTE)
ನಿನ್ನ ಕೋಟೆಗಳೊಳಗೆ ಶಾಂತಿ ನೆಲಸಿರಲಿ ನಿನ್ನ ಮಹಾ ಕಟ್ಟಡಗಳಲ್ಲಿ ಸುರಕ್ಷತೆಯಿರಲಿ.”
కీర్తనల గ్రంథము 122 : 8 (ERVTE)
ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು.
కీర్తనల గ్రంథము 122 : 9 (ERVTE)
ನಮ್ಮ ದೇವರಾದ ಯೆಹೋವನ ಆಲಯಕ್ಕೋಸ್ಕರ ಈ ಪಟ್ಟಣಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸುವೆನು.
❮
❯