కీర్తనల గ్రంథము 123 : 1 (ERVTE)
*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ, ನಿನ್ನ ಕಡೆಗೆ ಕಣ್ಣೆತ್ತಿ ನೋಡುತ್ತಾ ಪ್ರಾರ್ಥಿಸುವೆನು.
కీర్తనల గ్రంథము 123 : 2 (ERVTE)
ಸೇವಕರು ತಮಗೆ ಬೇಕಾದವುಗಳಿಗಾಗಿ ತಮ್ಮ ಯಜಮಾನರನ್ನು ಅವಲಂಬಿಸಿಕೊಳ್ಳುವರು; ಸೇವಕಿಯರು ತಮ್ಮ ಯಜಮಾನಿಯರನ್ನು ಅವಲಂಬಿಸಿಕೊಳ್ಳುವರು. ಅಂತೆಯೇ, ನಾವು ನಮ್ಮ ದೇವರಾದ ಯೆಹೋವನನ್ನು ಅವಲಂಬಿಸಿಕೊಳ್ಳುವೆವು. ಆತನ ಕರುಣೆಯನ್ನೇ ನಿರೀಕ್ಷಿಸುವೆವು.
కీర్తనల గ్రంథము 123 : 3 (ERVTE)
ಯೆಹೋವನೇ, ನಮಗೆ ಕರುಣೆತೋರು, ಬಹುಕಾಲದಿಂದ ನಾವು ಅವಮಾನಿತರಾಗಿದ್ದೇವೆ.
కీర్తనల గ్రంథము 123 : 4 (ERVTE)
ಗರ್ವಿಷ್ಠರೂ ಮೊಂಡರೂ ನಮ್ಮನ್ನು ಸಾಕಷ್ಟು ಗೇಲಿ ಮಾಡಿದ್ದಾರೆ.
❮
❯