కీర్తనల గ్రంథము 127 : 1 (ERVTE)
*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ಸೊಲೋಮೋನ. *ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ. ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.
కీర్తనల గ్రంథము 127 : 2 (ERVTE)
ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕೆಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.
కీర్తనల గ్రంథము 127 : 3 (ERVTE)
ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ.
కీర్తనల గ్రంథము 127 : 4 (ERVTE)
ಯೌವನಸ್ಥನ ಗಂಡುಮಕ್ಕಳು ಸೈನಿಕನ ಬತ್ತಳಿಕೆಯಲ್ಲಿರುವ ಬಾಣಗಳಂತಿದ್ದಾರೆ.
కీర్తనల గ్రంథము 127 : 5 (ERVTE)
ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.
❮
❯