కీర్తనల గ్రంథము 129 : 1 (ERVTE)
*ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು.
కీర్తనల గ్రంథము 129 : 2 (ERVTE)
ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಆದರೆ ಅವರೆಂದೂ ಗೆಲ್ಲಲಿಲ್ಲ.
కీర్తనల గ్రంథము 129 : 3 (ERVTE)
ನನ್ನ ಬೆನ್ನಿನ ಮೇಲೆ ಹೊಡೆದು ಹೊಲವನ್ನು ಉಳುವಂತೆ ಗಾಯ ಮಾಡಿದರು.
కీర్తనల గ్రంథము 129 : 4 (ERVTE)
ಆದರೆ ನೀತಿಸ್ವರೂಪನಾದ ಯೆಹೋವನು ಹಗ್ಗಗಳನ್ನು ಕತ್ತರಿಸಿ ಆ ದುಷ್ಟರಿಂದ ನನ್ನನ್ನು ಬಿಡುಗಡೆ ಮಾಡಿದನು.
కీర్తనల గ్రంథము 129 : 5 (ERVTE)
ಚೀಯೋನನ್ನು ದ್ವೇಷಿಸಿದ ಜನರು ಸೋತುಹೋದರು. ಅವರು ಹೋರಾಟವನ್ನು ನಿಲ್ಲಿಸಿ ಓಡಿಹೋದರು.
కీర్తనల గ్రంథము 129 : 6 (ERVTE)
ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದರು. ಅದು ಬೆಳೆಯುವುದಕ್ಕಿಂತ ಮೊದಲೇ ಒಣಗಿಹೋಗುವುದು.
కీర్తనల గ్రంథము 129 : 7 (ERVTE)
ಅದನ್ನು ಕೊಯ್ಯುವವನ ಹಿಡಿಯೂ ತುಂಬುವುದಿಲ್ಲ ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.
కీర్తనల గ్రంథము 129 : 8 (ERVTE)
ಅವರ ಸಮೀಪದಲ್ಲಿ ನಡೆದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ” ಎಂದು ಹೇಳುವುದಿಲ್ಲ. “ಯೆಹೋವನ ಹೆಸರಿನಲ್ಲಿ ನಿಮಗೆ ಆಶೀರ್ವಾದವಾಗಲಿ” ಎಂದು ಜನರು ಅವರನ್ನು ಆಶೀರ್ವದಿಸುವುದಿಲ್ಲ.

1 2 3 4 5 6 7 8