కీర్తనల గ్రంథము 138 : 1 (ERVTE)
*ಸ್ತುತಿಗೀತೆ. ರಚನೆಗಾರ: ದಾವೀದ. *ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು.
కీర్తనల గ్రంథము 138 : 2 (ERVTE)
ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.
కీర్తనల గ్రంథము 138 : 3 (ERVTE)
ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.
కీర్తనల గ్రంథము 138 : 4 (ERVTE)
ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿಗಳನ್ನು ಕೇಳಿ ನಿನ್ನನ್ನು ಕೊಂಡಾಡಬೇಕೆಂಬುದು ನನ್ನ ಅಪೇಕ್ಷೆ.
కీర్తనల గ్రంథము 138 : 5 (ERVTE)
ಅವರೆಲ್ಲರೂ ಯೆಹೋವನ ಮಾರ್ಗವನ್ನು ಹಾಡಿ ಕೊಂಡಾಡುವರು; ಯಾಕೆಂದರೆ ಯೆಹೋವನ ಮಹಿಮೆಯು ಮಹತ್ವವಾದದ್ದು.
కీర్తనల గ్రంథము 138 : 6 (ERVTE)
ಯೆಹೋವನೇ ಮಹೋನ್ನತನು. ಆದರೂ ಆತನು ದೀನರಿಗೋಸ್ಕರ ಚಿಂತಿಸುವನು. ಗರ್ವಿಷ್ಠರ ಕಾರ್ಯಗಳು ಆತನಿಗೆ ಗೊತ್ತಿವೆ. ಆದರೆ ಆತನು ಅವರಿಗೆ ದೂರವಾಗಿಯೇ ಇರುತ್ತಾನೆ.
కీర్తనల గ్రంథము 138 : 7 (ERVTE)
ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.
కీర్తనల గ్రంథము 138 : 8 (ERVTE)
ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!
❮
❯