కీర్తనల గ్రంథము 14 : 1 (ERVTE)
*ರಚನೆಗಾರ: ದಾವೀದ. *ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.
కీర్తనల గ్రంథము 14 : 2 (ERVTE)
ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.
కీర్తనల గ్రంథము 14 : 3 (ERVTE)
ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ. ಎಲ್ಲರೂ ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
కీర్తనల గ్రంథము 14 : 4 (ERVTE)
ಅವರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.
కీర్తనల గ్రంథము 14 : 5 (ERVTE)
(5-6)ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ. ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ. ಆದರೆ ದೇವರು ನೀತಿವಂತರೊಂದಿಗಿದ್ದಾನೆ. ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು.
కీర్తనల గ్రంథము 14 : 6 (ERVTE)
కీర్తనల గ్రంథము 14 : 7 (ERVTE)
ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.
❮
❯