కీర్తనల గ్రంథము 147 : 1 (ERVTE)
ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು. ನಮ್ಮ ದೇವರನ್ನು ಸಂಕೀರ್ತಿಸಿರಿ. ಆತನನ್ನು ಸ್ತುತಿಸುವುದು ಒಳ್ಳೆಯದೂ ಸಂತೋಷಕರವೂ ಆಗಿದೆ.
కీర్తనల గ్రంథము 147 : 2 (ERVTE)
ಯೆಹೋವನು ಜೆರುಸಲೇಮನ್ನು ಕಟ್ಟಿದನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದ ಇಸ್ರೇಲರನ್ನು ಆತನು ಹಿಂದಕ್ಕೆ ಕರೆತಂದನು.
కీర్తనల గ్రంథము 147 : 3 (ERVTE)
ಅವರ ಒಡೆದ ಹೃದಯಗಳನ್ನು ಆತನು ವಾಸಿಮಾಡುವನು; ಅವರ ಗಾಯಗಳನ್ನು ಕಟ್ಟುವನು.
కీర్తనల గ్రంథము 147 : 4 (ERVTE)
ಆತನು ನಕ್ಷತ್ರಗಳನ್ನು ಎಣಿಸುವನು. ಆತನಿಗೆ ಪ್ರತಿಯೊಂದು ನಕ್ಷತ್ರದ ಹೆಸರು ತಿಳಿದಿದೆ.
కీర్తనల గ్రంథము 147 : 5 (ERVTE)
ನಮ್ಮ ಒಡೆಯನು ಬಹು ದೊಡ್ಡವನೂ ಪರಾಕ್ರಮಿಯೂ ಆಗಿದ್ದಾನೆ. ಆತನ ಜ್ಞಾನವು ಅಪರಿಮಿತವಾಗಿದೆ.
కీర్తనల గ్రంథము 147 : 6 (ERVTE)
ಯೆಹೋವನು ದೀನರಿಗೆ ಆಧಾರವಾಗಿದ್ದಾನೆ. ದುಷ್ಟರನ್ನಾದರೋ ನಾಚಿಕೆಗೆ ಗುರಿಪಡಿಸುವನು.
కీర్తనల గ్రంథము 147 : 7 (ERVTE)
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ನಮ್ಮ ದೇವರನ್ನು ಹಾರ್ಪ್‌ವಾದ್ಯಗಳೊಂದಿಗೆ ಸ್ತುತಿಸಿರಿ.
కీర్తనల గ్రంథము 147 : 8 (ERVTE)
ಆತನು ಆಕಾಶವನ್ನು ಮೋಡಗಳಿಂದ ತುಂಬಿಸುವನು; ಭೂಮಿಗಾಗಿ ಮಳೆಯನ್ನು ಸುರಿಸುವನು; ಬೆಟ್ಟಗಳ ಮೇಲೆ ಹುಲ್ಲನ್ನು ಬೆಳೆಯಮಾಡುವನು.
కీర్తనల గ్రంథము 147 : 9 (ERVTE)
ದೇವರು ಪ್ರಾಣಿಗಳಿಗೂ ಪಕ್ಷಿಯ ಮರಿಗಳಿಗೂ ಆಹಾರ ಕೊಡುವನು.
కీర్తనల గ్రంథము 147 : 10 (ERVTE)
ಯುದ್ಧದ ಕದುರೆಗಳಾಗಲಿ ಶಕ್ತಿಯುತರಾದ ಸೈನಿಕರಾಗಲಿ ಆತನನ್ನು ಮೆಚ್ಚಿಸಲಾರವು.
కీర్తనల గ్రంథము 147 : 11 (ERVTE)
ಯೆಹೋವನು ತನ್ನನ್ನು ಆರಾಧಿಸುವ ಜನರಲ್ಲೇ ಸಂತೋಷಪಡುವನು. ಆತನು ತನ್ನ ಶಾಶ್ವತ ಪ್ರೀತಿಯಲ್ಲಿ ಭರವಸವಿಟ್ಟಿರುವವರನ್ನು ಮೆಚ್ಚಿಕೊಳ್ಳುವನು.
కీర్తనల గ్రంథము 147 : 12 (ERVTE)
ಜೆರುಸಲೇಮೇ, ಯೆಹೋವನನ್ನು ಸ್ತುತಿಸು! ಚೀಯೋನೇ, ನಿನ್ನ ದೇವರನ್ನು ಸ್ತುತಿಸು!
కీర్తనల గ్రంథము 147 : 13 (ERVTE)
ಜೆರುಸಲೇಮೇ, ದೇವರು ನಿನ್ನ ಬಾಗಿಲುಗಳ ಸರಳುಗಳನ್ನು ಬಲಪಡಿಸುವನು; ನಿನ್ನ ನಗರದಲ್ಲಿರುವ ಜನರನ್ನು ಆಶೀರ್ವದಿಸುವನು.
కీర్తనల గ్రంథము 147 : 14 (ERVTE)
ಆತನು ನಿಮ್ಮ ದೇಶದಲ್ಲಿ ಶಾಂತಿಯನ್ನು ನೆಲೆಗೊಳಿಸಿದನು. ನಿಮ್ಮನ್ನು ಶ್ರೇಷ್ಠವಾದ ಗೋಧಿಯಿಂದ ತೃಪ್ತಿಪಡಿಸಿದನು.
కీర్తనల గ్రంథము 147 : 15 (ERVTE)
ಆತನು ಭೂಮಿಗೆ ಆಜ್ಞಾಪಿಸಲು ಅದು ಕೂಡಲೆ ವಿಧೇಯವಾಗುತ್ತದೆ.
కీర్తనల గ్రంథము 147 : 16 (ERVTE)
ನೆಲವು ಉಣ್ಣೆಯಂತೆ ಬಿಳುಪಾಗುವವರೆಗೆ ಆತನು ಮಂಜನ್ನು ಬೀಳಿಸುವನು; ಹಿಮವನ್ನು ಗಾಳಿಯ ಮೂಲಕ ಧೂಳಿನಂತೆ ಹರಡುವನು.
కీర్తనల గ్రంథము 147 : 17 (ERVTE)
ಆತನು ಆಕಾಶದಿಂದ ಕಲ್ಲುಗಳಂತಿರುವ ಆಲಿಕಲ್ಲನ್ನು ಸುರಿಸುವನು; ಯಾವನೂ ಚಳಿಯಲ್ಲಿ ಹೊರಗಡೆ ಇರಲಾರನು.
కీర్తనల గ్రంథము 147 : 18 (ERVTE)
ಆತನು ಮತ್ತೊಂದು ಆಜ್ಞೆಯನ್ನು ಹೊರಡಿಸುವನು; ಆಗ ಬಿಸಿಗಾಳಿಯು ಮತ್ತೆ ಬೀಸುವುದು; ಮಂಜು ಕರಗಿಹೋಗುವುದು. ನೀರು ಹರಿಯತೊಡಗುವುದು.
కీర్తనల గ్రంథము 147 : 19 (ERVTE)
ಆತನು ಯಾಕೋಬಿಗೆ ತನ್ನ ಆಜ್ಞೆಗಳನ್ನು ಕೊಟ್ಟನು. ಇಸ್ರೇಲಿಗೆ ತನ್ನ ಕಟ್ಟಳೆಗಳನ್ನೂ ನಿಯಮಗಳನ್ನೂ ಕೊಟ್ಟನು.
కీర్తనల గ్రంథము 147 : 20 (ERVTE)
ಆತನು ಬೇರೆ ಯಾವ ಜನಾಂಗದವರಿಗೂ ಹೀಗೆ ಮಾಡಲಿಲ್ಲ. ಆತನು ಅನ್ಯಜನಾಂಗಗಳವರಿಗೆ ತನ್ನ ಕಟ್ಟಳೆಗಳನ್ನು ಉಪದೇಶಿಸಲಿಲ್ಲ. ಯೆಹೋವನಿಗೆ ಸ್ತೋತ್ರವಾಗಲಿ!

1 2 3 4 5 6 7 8 9 10 11 12 13 14 15 16 17 18 19 20