కీర్తనల గ్రంథము 148 : 1 (ERVTE)
ಯೆಹೋವನಿಗೆ ಸ್ತೋತ್ರವಾಗಲಿ! ಮೇಲೋಕದಲ್ಲಿರುವ ದೇವದೂತರೇ, ಆಕಾಶಮಂಡಲದಿಂದ ಯೆಹೋವನನ್ನು ಸ್ತುತಿಸಿರಿ!
కీర్తనల గ్రంథము 148 : 2 (ERVTE)
ಎಲ್ಲಾ ದೂತರುಗಳೇ, ಆತನಿಗೆ ಸ್ತೋತ್ರಮಾಡಿರಿ! ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ!
కీర్తనల గ్రంథము 148 : 3 (ERVTE)
ಸೂರ್ಯಚಂದ್ರರೇ, ಆತನನ್ನು ಸ್ತುತಿಸಿರಿ! ಆಕಾಶದಲ್ಲಿರುವ ನಕ್ಷತ್ರಗಳೇ, ಬೆಳಕುಗಳೇ, ಆತನನ್ನು ಸ್ತುತಿಸಿರಿ! ಆತನಿಗೆ ಸ್ತೋತ್ರಮಾಡಿರಿ! ಆತನ ಸರ್ವಸೈನ್ಯಗಳೇ ಆತನನ್ನು ಸ್ತುತಿಸಿರಿ!
కీర్తనల గ్రంథము 148 : 4 (ERVTE)
ಉನ್ನತೋನ್ನತವಾದ ಆಕಾಶವೇ, ಆತನನ್ನು ಸ್ತುತಿಸು! ಆಕಾಶದ ಮೇಲಿರುವ ನೀರುಗಳೇ ಆತನನ್ನು ಸ್ತುತಿಸಿರಿ!
కీర్తనల గ్రంథము 148 : 5 (ERVTE)
ಅವು ಯೆಹೋವನ ಹೆಸರನ್ನು ಸ್ತುತಿಸಲಿ. ಆತನು ಆಜ್ಞಾಪಿಸಲು ಅವುಗಳೆಲ್ಲಾ ಸೃಷ್ಟಿಯಾದವು!
కీర్తనల గ్రంథము 148 : 6 (ERVTE)
ಇವುಗಳೆಲ್ಲಾ ಶಾಶ್ವತವಾಗಿರುವಂತೆ ಆತನು ಮಾಡಿದನು. ಎಂದಿಗೂ ಕೊನೆಗೊಳ್ಳದ ನಿಯಮಗಳನ್ನು ಆತನು ಮಾಡಿದನು.
కీర్తనల గ్రంథము 148 : 7 (ERVTE)
ಭೂಮಿಯ ಮೇಲಿರುವ ಸಮಸ್ತವೇ, ಯೆಹೋವನಿಗೆ ಸ್ತೋತ್ರಮಾಡಿರಿ! ಮಹಾಸಮುದ್ರ ಪ್ರಾಣಿಗಳೇ, ಆತನನ್ನು ಸ್ತುತಿಸಿರಿ!
కీర్తనల గ్రంథము 148 : 8 (ERVTE)
ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.
కీర్తనల గ్రంథము 148 : 9 (ERVTE)
ಆತನು ಬೆಟ್ಟಗಳನ್ನೂ ಗುಡ್ಡಗಳನ್ನೂ ಹಣ್ಣಿನ ಮರಗಳನ್ನೂ ದೇವದಾರು ಮರಗಳನ್ನೂ ಸೃಷ್ಟಿಮಾಡಿದನು.
కీర్తనల గ్రంథము 148 : 10 (ERVTE)
ಆತನು ಎಲ್ಲಾ ಕಾಡುಪ್ರಾಣಿಗಳನ್ನೂ ಪಶುಗಳನ್ನೂ ಕ್ರಿಮಿಕೀಟಗಳನ್ನೂ ಪಕ್ಷಿಗಳನ್ನೂ ಸೃಷ್ಟಿಮಾಡಿದನು.
కీర్తనల గ్రంథము 148 : 11 (ERVTE)
ಆತನು ಭೂಮಿಯ ಮೇಲೆ ರಾಜರುಗಳನ್ನೂ ಜನಾಂಗಗಳನ್ನೂ ನಾಯಕರುಗಳನ್ನೂ ನ್ಯಾಯಾಧಿಪತಿಗಳನ್ನೂ ಸೃಷ್ಟಿಮಾಡಿದನು.
కీర్తనల గ్రంథము 148 : 12 (ERVTE)
ಆತನು ಪ್ರಾಯಸ್ಥರಾದ ಸ್ತ್ರೀಪುರುಷರನ್ನೂ ವೃದ್ಧರನ್ನೂ ಯೌವನಸ್ಥರನ್ನೂ ಸೃಷ್ಟಿಸಿದನು.
కీర్తనల గ్రంథము 148 : 13 (ERVTE)
ಯೆಹೋವನ ಹೆಸರನ್ನು ಕೊಂಡಾಡಿರಿ! ಆತನ ಹೆಸರನ್ನು ಶಾಶ್ವತವಾಗಿ ಸನ್ಮಾನಿಸಿರಿ! ಭೂಮ್ಯಾಕಾಶಗಳಲ್ಲಿರುವ ಸಮಸ್ತವೇ, ಆತನನ್ನು ಸ್ತುತಿಸು!
కీర్తనల గ్రంథము 148 : 14 (ERVTE)
ಆತನು ತನ್ನ ಜನರನ್ನು ಬಲಿಷ್ಠರನ್ನಾಗಿ ಮಾಡುತ್ತಾನೆ. ಆತನ ಭಕ್ತರನ್ನು ಜನರು ಹೊಗಳುವರು. ಜನರು ಇಸ್ರೇಲರನ್ನು ಹೊಗಳುವರು. ಆತನು ಹೋರಾಡುತ್ತಿರುವುದು ಅವರಿಗಾಗಿಯೇ. ಯೆಹೋವನಿಗೆ ಸ್ತೋತ್ರವಾಗಲಿ!

1 2 3 4 5 6 7 8 9 10 11 12 13 14