కీర్తనల గ్రంథము 15 : 1 (ERVTE)
*ರಚನೆಗಾರ: ದಾವೀದ. *ಯೆಹೋವನೇ, ನಿನ್ನ ಪವಿತ್ರ ಗುಡಾರದಲ್ಲಿ ಎಂಥವನು ವಾಸಿಸಬಲ್ಲನು? ನಿನ್ನ ಪವಿತ್ರ ಪರ್ವತದ ಮೇಲೆ ಎಂಥವನು ನೆಲಸಬಲ್ಲನು?
కీర్తనల గ్రంథము 15 : 2 (ERVTE)
ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು.
కీర్తనల గ్రంథము 15 : 3 (ERVTE)
ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು.
కీర్తనల గ్రంథము 15 : 4 (ERVTE)
ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು.
కీర్తనల గ్రంథము 15 : 5 (ERVTE)
ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.[* ಹೀಗೆ … ಸಮೀಪವಾಗಿಯೇ ಇರುತ್ತಾನೆ ಅಕ್ಷರಶಃ, “ಅವನು ಎಂದಿಗೂ ಕದಲುವುದಿಲ್ಲ.” ]
❮
❯