కీర్తనల గ్రంథము 16 : 1 (ERVTE)
*ರಚನೆಗಾರ: ದಾವೀದ. *ದೇವರೇ, ನನ್ನನ್ನು ಕಾಪಾಡು. ಯಾಕೆಂದರೆ ನಾನು ನಿನ್ನನ್ನೇ ಆಶ್ರಯಿಸಿಕೊಂಡಿರುವೆ.
కీర్తనల గ్రంథము 16 : 2 (ERVTE)
ನಾನು ಯೆಹೋವನಿಗೆ, “ನೀನೇ ನನ್ನ ಒಡೆಯನು. ನನ್ನಲ್ಲಿರುವ ಒಳ್ಳೆಯದನ್ನೆಲ್ಲ ದಯಪಾಲಿಸಿದಾತನು ನೀನೇ” ಎಂದು ಹೇಳಿದೆನು.
కీర్తనల గ్రంథము 16 : 3 (ERVTE)
ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.
కీర్తనల గ్రంథము 16 : 4 (ERVTE)
ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ, ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ.
కీర్తనల గ్రంథము 16 : 5 (ERVTE)
ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ. ನನಗೆ ಆಧಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ.
కీర్తనల గ్రంథము 16 : 6 (ERVTE)
ನನ್ನ ಪಾಲು[* ಪಾಲು ಅಥವಾ “ಭೂಮಿಯ ಭಾಗ.” ] ರಮಣೀಯವಾಗಿದೆ. ನನ್ನ ಸ್ವಾಸ್ತ್ಯವು [† ಸ್ವಾಸ್ತ್ಯ ಇದರ ಅರ್ಥ: ಪ್ರತಿಯೊಂದು ಯೆಹೂದ್ಯ ಕುಟುಂಬವು ದೇವರಿಂದ ಸ್ವೀಕರಿಸಿದ ಭೂಮಿ. ] ಬಹು ಸುಂದರವಾಗಿದೆ.
కీర్తనల గ్రంథము 16 : 7 (ERVTE)
ನನ್ನ ಆಲೋಚನಾಕರ್ತನಾದ ಯೆಹೋವನನ್ನು ಕೊಂಡಾಡುವೆನು; ರಾತ್ರಿಯಲ್ಲಿಯೂ, ಆತನು ತನ್ನ ಆಲೋಚನೆಗಳನ್ನು ನನ್ನ ಅಂತರಾತ್ಮದಲ್ಲಿ ಬೇರೂರಿಸುವನು.
కీర్తనల గ్రంథము 16 : 8 (ERVTE)
ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ.
కీర్తనల గ్రంథము 16 : 9 (ERVTE)
ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ. ನನ್ನ ದೇಹವೂ ಸುರಕ್ಷಿತವಾಗಿರುವುದು.
కీర్తనల గ్రంథము 16 : 10 (ERVTE)
ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.
కీర్తనల గ్రంథము 16 : 11 (ERVTE)
ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.

1 2 3 4 5 6 7 8 9 10 11