కీర్తనల గ్రంథము 2 : 1 (ERVTE)
ಅನ್ಯಜನಾಂಗಗಳು ಕೋಪಗೊಂಡಿರುವುದೇಕೆ? ಅವರು ಮೂರ್ಖತನದ ಸಂಚುಗಳನ್ನು ಮಾಡುತ್ತಿರುವುದೇಕೆ?
కీర్తనల గ్రంథము 2 : 2 (ERVTE)
ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.
కీర్తనల గ్రంథము 2 : 3 (ERVTE)
“ದೇವರಿಗೂ ಆತನು ಅಭಿಷೇಕಿಸಿದ ರಾಜನಿಗೂ ವಿರೋಧವಾಗಿ ದಂಗೆ ಎದ್ದು ಸ್ವತಂತ್ರರಾಗೋಣ” ಎಂದು ಅವರು ಮಾತಾಡಿಕೊಳ್ಳುತ್ತಿದ್ದಾರೆ.
కీర్తనల గ్రంథము 2 : 4 (ERVTE)
ಆದರೆ ಒಡೆಯನೂ ಪರಲೋಕದ ರಾಜನೂ ಅವರನ್ನು ನೋಡಿ ನಗುವನು; ಆತನು ಅವರನ್ನು ಪರಿಹಾಸ್ಯಮಾಡುವನು.
కీర్తనల గ్రంథము 2 : 5 (ERVTE)
(5-6)“ಇವನನ್ನು ರಾಜನನ್ನಾಗಿ ಅಭಿಷೇಕಿಸಿದವನು ನಾನೇ. ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ಆಳುವವನು ಇವನೇ” ಎಂದು ಅವರಿಗೆ ಕೋಪದಿಂದ ಉತ್ತರಿಸುವನು. ಆಗ ಅವರೆಲ್ಲರೂ ಭಯಗೊಳ್ಳುವರು.
కీర్తనల గ్రంథము 2 : 6 (ERVTE)
కీర్తనల గ్రంథము 2 : 7 (ERVTE)
ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.
కీర్తనల గ్రంథము 2 : 8 (ERVTE)
ನೀನು ಕೇಳಿಕೊಂಡರೆ ಅನ್ಯಜನಾಂಗಗಳನ್ನು ನಿನಗೆ ಅಧೀನಪಡಿಸುವೆನು. ಭೂಮಿಯ ಮೇಲಿರುವ ಜನರೆಲ್ಲರೂ ನಿನ್ನವರಾಗುವರು!
కీర్తనల గ్రంథము 2 : 9 (ERVTE)
ಕಬ್ಬಿಣದ ಗದೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರುಮಾಡುವಂತೆ ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು.
కీర్తనల గ్రంథము 2 : 10 (ERVTE)
ಆದ್ದರಿಂದ ರಾಜರುಗಳೇ, ವಿವೇಕಿಗಳಾಗಿರಿ. ಅಧಿಪತಿಗಳೇ, ಬುದ್ಧಿಮಾತುಗಳಿಗೆ ಕಿವಿಗೊಡಿರಿ.
కీర్తనల గ్రంథము 2 : 11 (ERVTE)
ಯೆಹೋವನಿಗೆ ಭಯಭಕ್ತಿಯಿಂದ ವಿಧೇಯರಾಗಿರಿ, ನಡುಗುತ್ತಾ ಉಲ್ಲಾಸಪಡಿರಿ.
కీర్తనల గ్రంథము 2 : 12 (ERVTE)
ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!

1 2 3 4 5 6 7 8 9 10 11 12