కీర్తనల గ్రంథము 20 : 1 (ERVTE)
*ರಚನೆಗಾರ: ದಾವೀದ. *ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಮೊರೆಯನ್ನು ಕೇಳಲಿ. ಯಾಕೋಬನ ದೇವರು ನಿನ್ನ ಹೆಸರನ್ನು ಪ್ರಖ್ಯಾತಿಪಡಿಸಲಿ.
కీర్తనల గ్రంథము 20 : 2 (ERVTE)
ಆತನು ತನ್ನ ಪವಿತ್ರ ಸ್ಥಳದಿಂದ ನಿನಗೆ ಸಹಾಯಮಾಡಲಿ. ಚೀಯೋನಿನಿಂದ ನಿನಗೆ ಆಧಾರ ನೀಡಲಿ.
కీర్తనల గ్రంథము 20 : 3 (ERVTE)
ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ. ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ.
కీర్తనల గ్రంథము 20 : 4 (ERVTE)
ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ. ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ.
కీర్తనల గ్రంథము 20 : 5 (ERVTE)
ದೇವರು ನಿನಗೆ ಸಹಾಯಮಾಡುವಾಗ ಹರ್ಷಿಸುವೆವು. ಆತನ ಹೆಸರನ್ನು ಕೊಂಡಾಡೋಣ. ಯೆಹೋವನು ನಿನ್ನ ಕೋರಿಕೆಗಳನ್ನೆಲ್ಲ ನೆರವೇರಿಸಲಿ.
కీర్తనల గ్రంథము 20 : 6 (ERVTE)
ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.
కీర్తనల గ్రంథము 20 : 7 (ERVTE)
ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು. ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸವಿಡುವರು. ನಾವಾದರೋ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು.
కీర్తనల గ్రంథము 20 : 8 (ERVTE)
ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೊ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!
కీర్తనల గ్రంథము 20 : 9 (ERVTE)
ಯಾಕೆಂದರೆ ಯೆಹೋವನು ತಾನು ಅಭಿಷೇಕಿಸಿದ ರಾಜನನ್ನು ರಕ್ಷಿಸಿದನು! ನಾವು ಸಹಾಯಕ್ಕಾಗಿ ಮೊರೆಯಿಟ್ಟಾಗ ಆತನು ಸದುತ್ತರವನ್ನು ದಯಪಾಲಿಸಿದನು.
❮
❯