కీర్తనల గ్రంథము 27 : 1 (ERVTE)
*ರಚನೆಗಾರ: ದಾವೀದ. *ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!
కీర్తనల గ్రంథము 27 : 2 (ERVTE)
ದುಷ್ಟರು ನನ್ನನ್ನು ಕೊಲ್ಲಲು ಆಕ್ರಮಣಮಾಡುವಾಗ ತಾವೇ ಮುಗ್ಗರಿಸಿ ಬೀಳುವರು.
కీర్తనల గ్రంథము 27 : 3 (ERVTE)
ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ. ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ. ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.
కీర్తనల గ్రంథము 27 : 4 (ERVTE)
ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲಿ ವಾಸಿಸುತ್ತಾ ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರುನೋಡುತ್ತಿದ್ದೇನೆ.
కీర్తనల గ్రంథము 27 : 5 (ERVTE)
ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು.
కీర్తనల గ్రంథము 27 : 6 (ERVTE)
ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.
కీర్తనల గ్రంథము 27 : 7 (ERVTE)
ಯೆಹೋವನೇ, ನನ್ನ ಸ್ವರವನ್ನು ಕೇಳಿ ನನಗೆ ಉತ್ತರಿಸು. ನನ್ನನ್ನು ಕರುಣಿಸು.
కీర్తనల గ్రంథము 27 : 8 (ERVTE)
ಯೆಹೋವನೇ, ನಾನು ನಿನ್ನೊಂದಿಗೆ ಹೃದಯಪೂರ್ವಕವಾಗಿ ಮಾತನಾಡಬೇಕೆಂದಿದ್ದೇನೆ. ದೇವರೇ, ನಾನು ನಿನ್ನ ಸನ್ನಿಧಿಗೆ ಬರುತ್ತೇನೆ.
కీర్తనల గ్రంథము 27 : 9 (ERVTE)
ಯೆಹೋವನೇ, ನನಗೆ ವಿಮುಖನಾಗಬೇಡ: ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ. ನನ್ನ ದೇವರೇ, ನನ್ನ ರಕ್ಷಕನು ನೀನೇ. ನನ್ನನ್ನು ಕೈ ಬಿಡಬೇಡ! ತೊರೆದುಬಿಡಬೇಡ!
కీర్తనల గ్రంథము 27 : 10 (ERVTE)
ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.
కీర్తనల గ్రంథము 27 : 11 (ERVTE)
ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.
కీర్తనల గ్రంథము 27 : 12 (ERVTE)
ವೈರಿಗಳು ನನ್ನ ಮೇಲೆ ಆಕ್ರಮಣ ಮಾಡಿದ್ದಾರೆ. ನನಗೆ ಕೇಡಾಗಲೆಂದು ಸುಳ್ಳುಗಳನ್ನು ಹೇಳಿದ್ದಾರೆ. ಯೆಹೋವನೇ, ಇಂಥ ವೈರಿಗಳ ಕೈಗೆ ನನ್ನನ್ನು ಕೊಡಬೇಡ.
కీర్తనల గ్రంథము 27 : 13 (ERVTE)
ಯೆಹೋವನ ಒಳ್ಳೆಯತನವನ್ನು ನಾನು ಸಾಯುವುದಕ್ಕಿಂತ ಮುಂಚೆ[* ನಾನು ಸಾಯುವುದಕ್ಕಿಂತ ಮುಂಚೆ ಅಕ್ಷರಶಃ “ಜೀವಿಸುವವರ ನಾಡಿನಲಿ.” ] ನೋಡುತ್ತೇನೆ ಎಂಬ ದೃಢನಂಬಿಕೆ ನನ್ನಲ್ಲಿದೆ.
కీర్తనల గ్రంథము 27 : 14 (ERVTE)
ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ! ಬಲವಾಗಿಯೂ ಧೈರ್ಯವಾಗಿಯೂ ಇರಿ! ಯೆಹೋವನ ಸಹಾಯಕ್ಕಾಗಿ ಕಾದುಕೊಂಡಿರಿ!
❮
❯
1
2
3
4
5
6
7
8
9
10
11
12
13
14